Menu

ಭೂ ಒತ್ತುವರಿ ಪ್ರಕರಣದಲ್ಲಿ  ಕೇಂದ್ರ ಸಚಿವ ಹೆಚ್‌ಡಿಕೆ ಸದ್ಯ ನಿರಾಳ  

ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು ಸಂಬಂಧ ತಹಶೀಲ್ದಾರ್ ನೀಡಿದ ನೋಟಿಸ್​ ವಿರುದ್ಧ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರಿಗೆ ಹೈಕೋರ್ಟ್​​ ತಾತ್ಕಾಲಿಕ ರಿಲೀಫ್ ನೀಡಿದೆ. ಈ ಬಗ್ಗೆ ದಾಖಲೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಎಎಜಿ ಕಿರಣ್ ರೋಣ್ ಮನವಿ ಮಾಡಿದರು.  ಮಾರ್ಚ್ 27ರವರೆಗೂ ಬಲವಂತದ ಕ್ರಮ ಕೈಗೊಳ್ಳುವುದಿಲ್ಲವೆಂದು ಹೇಳಿಕೆ ದಾಖಲಿಸಿಕೊಂಡು ಕೋರ್ಟ್‌ ವಿಚಾರಣೆಯನ್ನು ಮಾರ್ಚ್​​ 27ಕ್ಕೆ ನಿಗದಿಪಡಿಸಿದೆ. 6 ಎಕರೆ ಒತ್ತುವರಿ ಸಂಬಂಧ ನೋಟಿಸ್ ಪ್ರಶ್ನಿಸಿ

ನಿವೃತ್ತ ಜಸ್ಟಿಸ್‌ ನಾಗಮೋಹನ್ ದಾಸ್ ವರದಿ ಬಳಿಕ ಸಿಎಂ ಜತೆ ಒಳಮೀಸಲು ಚರ್ಚಿಸಿ ಕ್ರಮ

ಒಳಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಒಂದು ವಾರದಲ್ಲಿ ನೀಡಲಿರುವ ಮಧ್ಯಂತರ ವರದಿ ಬಳಿಕ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ. ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಉಳಿಸಿ ಬೆಳೆಸಿಕೊಂಡು ಹೋಗಬೇಕು: ಡಿಕೆ ಶಿವಕುಮಾರ್

ಆಯುರ್ವೇದ ಚಿಕಿತ್ಸಾ ಪದ್ಧತಿ ಸುಮಾರು 5 ಸಾವಿರ ವರ್ಷಗಳ ಇತಿಹಾಸವಿದ್ದು, ಇದು ನಮ್ಮ ಮೂಲ. ಆಯುರ್ವೇದ ನಮ್ಮ ಆಸ್ತಿಯಾಗಿದ್ದು ಇದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾ ವಿಶ್ವವಿದ್ಯಾಲಯದ ಪುರುಷ ವಿದ್ಯಾರ್ಥಿನಿಲಯದ

ರಾಜ್ಯ ಇತಿಹಾಸದಲ್ಲೇ 18 ಸಾವಿರ ಮೆ.ವ್ಯಾ. ದಾಖಲೆ ಪ್ರಮಾಣದ ವಿದ್ಯುತ್ ಬೇಡಿಕೆ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಗರಿಷ್ಠ ಬೇಡಿಕೆ ಅವಧಿ (ಪೀಕ್ ಅವರ್ ಡಿಮಾಂಡ್) ಯಲ್ಲಿ 18 ಸಾವಿರ ಮೆಗಾವ್ಯಾಟ್ ದಾಟಿದೆ. ಏಪ್ರಿಲ್ ತಿಂಗಳಲ್ಲಿ 18,500 ಮೆಗಾವ್ಯಾಟ್ ತಲುಪುವ ಸಾಧ್ಯತೆ ಇದೆ. ಸೋಮವಾರ ಜಂಟಿ

ಹಾಲು ಮಾರಾಟ ದರ ಹೆಚ್ಚಳ: ಕೆಎಂಎಫ್ ಮನವಿ ಸಿಎಂ ತಿರಸ್ಕಾರ

ಬೆಂಗಳೂರು: ನೌಕರರ ವೇತನ ಹೆಚ್ಚಳ ಸಾಗಾಣಿಕೆ ವೆಚ್ಚ ಮತ್ತು ಹಾಲು ಉತ್ಪಾದಕರಿಗೆ ನೀಡುತ್ತಿರುವ ಹೆಚ್ಚುವರಿ ದರಕ್ಕೆ ಅನುಗುಣವಾಗಿ ಹಾಲು ಮಾರಾಟ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೆಎಂಎಫ್ ಮಾಡಿರುವ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ. ಪ್ರತಿ ಲೀಟರ್ ಹಾಲು, ಮಾರಾಟ

ಜಿಎಸ್ ಎಂಎ ಮಂಡಳಿ ಅಧ್ಯಕ್ಷರಾಗಿ ಗೋಪಾಲ್ ವಿಠ್ಠಲ್ ನೇಮಕ

ಸುನಿಲ್ ಭಾರ್ತಿ ಮಿತ್ತಲ್ ನಂತರ ಪ್ರತಿಷ್ಠಿತ ಟೆಲಿಕಾಂ ಉದ್ಯಮ ಸಂಸ್ಥೆಯ ಅಧ್ಯಕ್ಷತೆ ವಹಿಸಲಿರುವ 2ನೇ ಭಾರತೀಯ ಗೋಪಾಲ್ ವಿಠ್ಠಲ್ ಜಾಗತಿಕ ಟೆಲಿಕಾಂ ಉದ್ಯಮದಲ್ಲಿ ಏರ್ಟೆಲ್ನ ನಿರ್ಣಾಯಕ ಪಾತ್ರವನ್ನು ಈ ನೇಮಕಾತಿಯು ಎತ್ತಿ ತೋರಿಸುತ್ತದೆ. ಬೆಂಗಳೂರು, ಮಾರ್ಚ್ 24: GSMA ನಿರ್ದೇಶಕರ ಮಂಡಳಿಯು

ಮಂತ್ರಾಲಯಕ್ಕೆ  3.39 ಕೋಟಿ ನಗದು 1.280 ಕೆಜಿ ಬೆಳ್ಳಿ ಕಾಣಿಕೆ: ಭಕ್ತರಿಂದ ಎಣಿಕೆ ಫೋಟೊ ವೈರಲ್!

ರಾಯಚೂರು: ಭಕ್ತರ ಕಲ್ಪವೃಕ್ಷ‌ ಮಂತ್ರಾಲಯದ ತುಂಗಾತೀರದಲ್ಲಿ ನೆಲೆಸಿರುವ ಶ್ರೀ ರಾಘವೇಂದ್ರ ಸ್ವಾಮಿಯ ಮಠಕ್ಕೆ ಕೋಟ್ಯಂತರ ರೂ ಕಾಣಿಕೆ ಹರಿದು ಬಂದಿದೆ. ಈ ತಿಂಗಳಲ್ಲಿ ರಾಯರ ಉತ್ಸವದ ಹಿನ್ನೆಲೆಯಲ್ಲಿ ಮಠಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದು, ಕಾಣಿಕೆಯಾಗಿ ಕೋಟಿಗಟ್ಟಲೆ ಹಣ ಮತ್ತು

ಮುಸ್ಲಿಮರಿಗೆ 4% ಗುತ್ತಿಗೆ ಮೀಸಲು ಸಾಮಾಜಿಕ ನ್ಯಾಯ: ಹೆಚ್‌ಡಿಕೆ

ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ನಿಲುವು ಸ್ಪಷ್ಟಪಡಿಸಿರುವ ಜೆಡಿಎಸ್ ಪಕ್ಷವು  ಬಿಜೆಪಿ-ಜೆಡಿಎಸ್  ಮೈತ್ರಿ ನಡುವೆ ಮೀಸಲಾತಿ ಬೆಂಕಿ ಹಚ್ಚಲು ಹೊರಟಿದ್ದವರನ್ನು ಕಕ್ಕಾಬಿಕ್ಕಿಯಾಗಿಸಿದೆ. ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಈ ಬಗ್ಗೆ ಮಾಧ್ಯಮ ಹೇಳಿಕೆ

ಬಿಜೆಪಿಯಿಂದ ಅಪಪ್ರಚಾರ, ನನ್ನ ಹೇಳಿಕೆ ತಿರುಚಿರುವವರ ವಿರುದ್ಧ ಕಾನೂನು ಹೋರಾಟ: ಡಿ.ಕೆ.ಶಿವಕುಮಾರ್

“ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುವೆ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ

ಸುಪ್ರೀಂ ತಲುಪಿದ ಕರ್ನಾಟಕದ ಹನಿ ಟ್ರ್ಯಾಪಿಂಗ್

ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಹನಿ ಟ್ರ್ಯಾಪಿಂಗ್ ಪ್ರಕರಣದ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಅರ್ಜಿದಾರರು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎದುರು ಮನವಿ ಮಾಡಿದ್ದಾರೆ. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್​ ಸಮ್ಮತಿಸಿದ್ದು,