ರಾಜ್ಯ
ಮನರೇಗಾ ಉಳಿಸಲು ಜ.26 ನಂತರ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಪಾದಯಾತ್ರೆ: ಡಿಕೆ ಶಿವಕುಮಾರ್
ಮಂಗಳೂರು: “ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ರೂ. ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಿದೆ. ಹೀಗಾಗಿ ಮನರೇಗಾ ಉಳಿಸಿ ಅಭಿಯಾನವನ್ನು ಜ.26ರಿಂದ ಆರಂಭಿಸಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.
ಸಿದ್ದರಾಮಯ್ಯ ಲೀಸ್ಟ್ ಬೆಸ್ಟ್ ಸಿಎಂ: ಹೆಚ್.ಡಿ.ಕುಮಾರಸ್ವಾಮಿ ಲೇವಡಿ
ಸಿದ್ದರಾಮಯ್ಯ ರಾಜ್ಯದ ಅತ್ಯಂತ ಲೀಸ್ಟ್ ಬೆಸ್ಟ್ ಸಿಎಂ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಬಿಜೆಪಿ-ಜೆಡಿಎಸ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಂತ್ರಿಯಾಗಿ ದೇವರಾಸು ಅರಸು ದಾಖಲೆ ಮುರಿದ ಬಗ್ಗೆ ಅವರು ಈ ರೀತಿ
ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಕೆ: ಸಚಿವ ಕೆಜೆ ಜಾರ್ಜ್
ಬೆಂಗಳೂರು: ಮುಂಬರುವ ಬೇಸಿಗೆಯಲ್ಲಿ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಸರಬರಾಜಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್‌ಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ
ಮಲಯಾಳಂ ಭಾಷಾ ಮಸೂದೆ ಅಂಗೀಕರಿಸದಿರಲು ಕೇರಳ ಸಿಎಂಗೆ ಸಿದ್ದರಾಮಯ್ಯ ಪತ್ರ
ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆ ಕಡ್ಡಾಯ ಕಲಿಕೆಗೆ ಮಲಯಾಳಂ ಭಾಷಾ ಮಸೂದೆ ಜಾರಿಗೊಳಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇರಳ ಸಿಎಂಗೆ ಪತ್ರ ಬರೆದಿದ್ದಾರೆ. ಶುಕ್ರವಾರ ಕೇರಳ ಸಿಎಂಗೆ ಬರೆದ ಪತ್ರದ ಸಂಪೂರ್ಣ ವಿವರ ಇಲ್ಲಿದೆ ಆತ್ಮೀಯ ಪಿಣರಾಯಿ ವಿಜಯನ್ ಅವರೇ, ಪರಸ್ಪರ ಗೌರವ,
ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ: ಸಿಎಂ ಸಿದ್ಧರಾಮಯ್ಯ
ವಿಜಯಪುರ: ಜಿಲ್ಲೆಯ ಜನರ ಒತ್ತಾಸೆಯಂತೆ ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಹಾಗೂ ವಿಜಯಪುರ ನಗರದಲ್ಲಿ 160 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಭರವಸೆ ನೀಡಿದರು. ವಿಜಯಪುರ ನಗರ ಕೇಂದ್ರ
ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಸಿಗದ ಸಹಕಾರ: ಡಿಕೆ ಶಿವಕುಮಾರ್
ವಿಜಯಪುರ: “ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ. ಈ ಯೋಜನೆಗೆ ಅಧಿಸೂಚನೆ ಹೊರಡಿಸುತ್ತಿಲ್ಲ. ನೆರೆ ರಾಜ್ಯಗಳು ದಾವೆಗಳ ಮೂಲಕ ಯೋಜನೆ ಜಾರಿಗೆ ಅಡಚಣೆ ಉಂಟು ಮಾಡುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು. ವಿಜಯಪುರದಲ್ಲಿ ವಿವಿಧ ಅಭಿವೃದ್ಧಿ
19 ಮಸೂದೆಗಳಿಗೆ ಅಂಕಿತ: 2 ಮಸೂದೆಗೆ ಸ್ಪಷ್ಟನೆ ಕೇಳಿದ ರಾಜ್ಯಪಾಲರು
ರಾಜ್ಯ ಸರ್ಕಾರ ಕಳಿಸಿದ್ದ 22 ಮಸೂದೆಗಳ ಪೈಕಿ 19ಕ್ಕೆ ರಾಜ್ಯಪಾಲರು ಅಂಕಿತ ಹಾಕಿರುವ ರಾಜ್ಯಪಾಲರು ದ್ವೇಷ ಭಾಷಣ ಮಸೂದೆ ಸೇರಿದಂತೆ 2 ಮಸೂದೆಗಳಿಗೆ ಸ್ಪಷ್ಟನೆ ಕೇಳಿ ವಾಪಸ್ ಕಳುಹಿಸಿದ್ದಾರೆ. ಶುಕ್ರವಾರ (ಜ.9) ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು ಮಾಧ್ಯಮ ಪ್ರಕಟಣೆ ಹೊರಡಿಸಿ, ಮಾಹಿತಿ
ಮನರೇಗಾ ಬಗ್ಗೆ ಸಚಿವ ಪ್ರಹ್ಲಾದ್ ಜೋಷಿ ಸಾರ್ವಜನಿಕ ಚರ್ಚೆಗೆ ಬರಲಿ: ಡಿಸಿಎಂ
“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ ಮೂಡಿಸಬಹುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸವಾಲೆಸೆದರು.
ಕನ್ನಡ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆ ಕಡ್ಡಾಯ ಮಸೂದೆ ವಾಪಸ್ ಪಡೆಯಿರಿ: ಪಿಣರಾಯಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ
ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಹೇಳಲು ವಿಷಾದಿಸುವೆ. ಮಸೂದೆ ವಾಪಸ್ ಪಡೆಯಿರಿ ಎಂದು ಮುಖ್ಯಮಂತ್ರಿ
ರಾಜ್ಯದ ಕೆರೆಗಳ ಒಟ್ಟು ಸಂಖ್ಯೆ ಅಂತಿಮಗೊಳಿಸಿ 30% ಕ್ಕಿಂತ ಕಡಿಮೆ ನೀರಿರುವ ಕೆರೆಗಳ ಪಟ್ಟಿ ನೀಡಿ: ಸಚಿವ ಭೋಸರಾಜು
ರಾಜ್ಯದಲ್ಲಿರುವ ಒಟ್ಟು ಜಲಮೂಲಗಳ ನಿಖರವಾದ ಸಂಖ್ಯೆಯನ್ನು ಅಂತಿಮಗೊಳಿಸಿ, ಇಲಾಖಾವಾರು ವರ್ಗೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸಣ್ಣ ನೀರಾವರಿ ಇಲಾಖೆಯ




