Menu

ಚಿತ್ರದುರ್ಗದಲ್ಲಿ ಕಾರು ಲಾರಿ ಡಿಕ್ಕಿಯಾಗಿ ಐವರ ಸಾವು

ಚಿತ್ರದುರ್ಗ ತಾಲೂಕಿನ ಸಿಬಾರಾ ಗ್ರಾಮದ ಬಳಿ ಲಾರಿ-ಇನ್ನೋವಾ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಅಸು ನೀಗಿದ್ದಾರೆ.  ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸಿಬಾರ ಗ್ರಾಮದ ಹೋಟೆಲ್‌ವೊಂದರ ಬಳಿ  ಬೆಂಗಳೂರು ಮೂಲದ ಲಾರಿ ಹಾಗೂ ಕಾರು ಡಿಕ್ಕಿಯಾಗಿ ದುರಂತ ಸಂಭವಿಸಿದೆ.  ಗಾಯಗೊಂಡ ಓರ್ವನ ಸ್ಥಿತಿ ಗಂಭೀರವಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಲಾರಿಗೆ ಡಿಕ್ಕಿಯಾಗಿರುವ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು  ಸ್ಥಳಕ್ಕೆ ಆಗಮಿಸಿ

ನಮಗೆ ಶಕ್ತಿ ತುಂಬಿದ ಕಲ್ಯಾಣ ಕರ್ನಾಟಕದ ಜನರ ಋಣ ತೀರಿಸುತ್ತೇವೆ: ಡಿಸಿಎಂ 

“ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ತೀರಿಸಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಜೇವರ್ಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕದ 38

ಚಿಂತಾಮಣಿಯಲ್ಲಿ ಕಾರಿಗೆ ಬಸ್‌ ಡಿಕ್ಕಿ: ತಾಯಿ ಮಗ ಸಜೀವ ದಹನ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ಕಾರಿಗೆ ಖಾಸಗಿ ಬಸ್‌ವೊಂದು ಡಿಕ್ಕಿಯಾಗಿ ಕಾರು ಹೊತ್ತಿ ಉರಿದು ಇಬ್ಬರು ಸಜೀವ ದಹನವಾಗಿದ್ದಾರೆ. ಕಾರು ಚಾಲಕ ಧನಂಜಯ್ (34) ಹಾಗೂ ತಾಯಿ ಕಲಾವತಿ (54) ಮೃತರು. ಕಾರಿನಲ್ಲಿ 5 ಮಂದಿ ಪ್ರಯಾಣ

ಯಡ್ರಾಮಿಯಲ್ಲಿ ಶಾಲಾ ಸಮವಸ್ತ್ರ ಧರಿಸಿಕೊಂಡೇ ಬಾಲ ಪ್ರೇಮಿಗಳ ಸುಸೈಡ್‌

ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಾಗಿದ್ದ  ಪ್ರೇಮಿಗಳಿಬ್ಬರು ಶಾಲೆಯ ಸಮವಸ್ತ್ರ ಧರಿಸಿಯೇ  ನೇಣು ಬಿಗಿದುಕೊಂಡು  ಆತ್ಮಹತ್ಯೆಮಾಡಿಕೊಂಡಿದ್ದಾರೆ. ಮಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಕೆಂಚಪ್ಪ  (16) ಹಾಗೂ ಅದೇ

ಮಹಿಳಾ ಮೀಸಲು ಜಾರಿಯಾಗಲಿದೆ, ವಿಧಾನಸಭೆ, ಲೋಕಸಭೆ ಚುನಾವಣೆ ಸ್ಪರ್ಧೆಗೆ ಸಜ್ಜಾಗಿ: ಡಿ.ಕೆ.ಶಿವಕುಮಾರ್

“2028 ರ ಹೊತ್ತಿಗೆ ಮಹಿಳಾ ಮೀಸಲಾತಿ ಅಸ್ತಿತ್ವಕ್ಕೆ ಬರಬಹುದು, ಆದ ಕಾರಣ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ತಯಾರಾಗಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಯಾರೂ ತಡೆಯುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಲಬುರ್ಗಿಯಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಉದ್ಘಾಟಿಸಿ ಮಾತನಾಡಿ, ಈಗ ಪಂಚಾಯಿತಿಯಿಂದ

ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಎಲ್ಲ ವರ್ಗದವರಿಗೂ ಸಮಾನ ಹಂಚಿಕೆ: ಡಿಕೆ ಶಿವಕುಮಾರ್

ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರು 4 ಲಕ್ಷ ಕೋಟಿಗೂ ಹೆಚ್ಚಿನ ಮೊತ್ತದ ಐತಿಹಾಸಿಕ ಬಜೆಟ್ ಮಂಡನೆ ಮಾಡಿದ್ದಾರೆ. ಎಲ್ಲ ವರ್ಗದ ಜನರಿಗೂ ಸಮತೋಲನವಾಗಿ ಅನುದಾನ ಕೊಟ್ಟಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಕಲಬುರಗಿಯಲ್ಲಿ ಶಿವಕುಮಾರ್  ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶನಿವಾರ ಮಾತನಾಡಿ,

ಸಿದ್ದರಾಮಯ್ಯ-ಡಿಕೆಶಿ ಒಗ್ಗಟ್ಟಾಗಿದ್ದರೆ ಎಲ್ಲವೂ ಸಾಧ್ಯ: ಮಲ್ಲಿಕಾರ್ಜುನ ಖರ್ಗೆ

ಜೇವರ್ಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಒಗ್ಗಟ್ಟಾಗಿದ್ದರೆ ಎಲ್ಲವೂ ಸಾಧ್ಯವಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಹಾಗೂರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಶನಿವಾರ ನಡೆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲ್ಯಾಣ

ಒಂದು ದೇಶ ಒಂದು ಚುನಾವಣೆ’ಯಿಂದ ರಾಷ್ಟ್ರಾಭಿವೃದ್ಧಿಗೆ ನೆರವು: ವೆಂಕಯ್ಯ ನಾಯ್ಡು

ಬೆಂಗಳೂರು: ಭಾರತದಾದ್ಯಂತ ಒಂದೇ ಹಂತದಲ್ಲಿ ಚುನಾವಣೆ ನಡೆದರೆ ಹಣಕಾಸಿನ ವೆಚ್ಚ ಕಡಿಮೆಯಾಗಲಿದೆ. ಇದು ರಾಷ್ಟ್ರದ ಅಭಿವೃದ್ಧಿಗೂ ಪೂರಕವಾಗಲಿದೆ ಎಂದು ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. ನಗರದ ಎಫ್‍ಕೆಸಿಸಿಐ ಸಭಾಂಗಣದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಶುಕ್ರವಾರ ಆಯೋಜಿಸಿದ್ದ ‘ಒಂದು

ಕೊಪ್ಪಳದಲ್ಲಿ ಇಸ್ರೇಲ್‌ ಪ್ರವಾಸಿ, ಸ್ಥಳೀಯ ಮಹಿಳೆ ಮೇಲೆ ಗ್ಯಾಂಗ್‌ರೇಪ್‌

ಕೊಪ್ಪಳದಲ್ಲಿ ಇಸ್ರೇಲ್‌ ದೇಶದ ಮಹಿಳೆ ಮತ್ತು ಸ್ಥಳೀಯ ಹೋಮ್‌ ಸ್ಟೇ ಮಾಲೀಕ ಮಹಿಳೆಯ ಮೇಲೆ ಕೆಲವು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸಂತ್ರಸ್ತೆಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಗಂಗಾವತಿ ತಾಲೂಕಿನ

ಎತ್ತಿನಹೊಳೆ: ಮಾ.18 ರಂದು ಡಿ.ಕೆ.ಶಿವಕುಮಾರ್‌ ದೆಹಲಿಗೆ

“ಇದೇ ಮಾ.18 ರಂದು ಎತ್ತಿನಹೊಳೆ ಕಾಮಗಾರಿ ಸಲುವಾಗಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ದೆಹಲಿಗೆ ತೆರಳುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದ್ದಾರೆ. ಅರಣ್ಯ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಭೆ  ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ