Menu

ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಶಿವಮೊಗ್ಗದ ಉದ್ಯಮಿ ಬಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಉದ್ಯಮಿ ಬಲಿಯಾಗಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತ ಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್ ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಜೊತೆ ಪ್ರವಾಸಕ್ಕೆ ಹೋಗಿದ್ದರು. ಏ.19 ರಂದು ಶಿವಮೊಗ್ಗದಿಂದ ಕಾಶ್ಮೀರ ಪ್ರವಾಸಕ್ಕೆ ಮಂಜುನಾಥ್ ಕುಟುಂಬಸ್ಥರು ತೆರಳಿದ್ದರು. ದಾಳಿಯಲ್ಲಿ ಸ್ಥಳದಲ್ಲೇ ಮಂಜುನಾಥ್ ರಾವ್

ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲ ಎಂದು ಹೇಳಲು ಬಿಜೆಪಿಗೆ ನೈತಿಕ ಹಕ್ಕಿಲ್ಲ: ಸಿಎಂ  ಸಿದ್ದರಾಮಯ್ಯ

ಮಂಡ್ಯ: ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ  ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ನೀಡಿದ ವರದಿ ಸರಿಯಿಲ್ಲವೆಂದು ಹೇಳಲು ಬಿಜೆಪಿಯವರಿಗೆ ನೈತಿಕ ಹಕ್ಕಿಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಡ್ಯ ಜಿಲ್ಲೆಯ ನಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮೀಕ್ಷೆ

ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅನುಮಾನ ಬಗೆಹರಿಸುವ ಶಕ್ತಿ ಸರ್ಕಾರಕ್ಕಿದೆ: ಡಿಕೆ ಸುರೇಶ್

ಬೆಂಗಳೂರು: ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅನುಮಾನಗಳನ್ನು ಬಗೆಹರಿಸುವ ದೊಡ್ಡ ಜವಾಬ್ದಾರಿ ಸರ್ಕಾರದ ಮುಂದಿದೆ. ಈ ಅನುಮಾನಗಳಿಗೆ ತೆರೆ ಎಳೆಯುವ ಶಕ್ತಿ ಸರ್ಕಾರಕ್ಕಿದೆ. ಮಾನ್ಯ ಮುಖ್ಯಮಂತ್ರಿಗಳು ಹಾಗೂ ಅವರ ಸಚಿವ ಸಂಪುಟ ಸುದೀರ್ಘವಾಗಿ ಚರ್ಚಿಸಿ ಈ ಕೆಲಸ ಮಾಡಲಿದ್ದಾರೆ” ಎಂದು ಮಾಜಿ

ಮಾಡಬಾರದ್ದನೆಲ್ಲಾ ಮಾಡಿ ದೇವರ ಪೂಜೆ ಮಾಡಿದರೆ ಪಾಪಕರ್ಮ ಹೋಗುತ್ತಾ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:  ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ

ಹೈಕೋರ್ಟ್‌ ಜಡ್ಜ್‌ಗಳ ವರ್ಗಾವಣೆ ವಿರೋಧಿಸಿ ವಕೀಲರ ಪ್ರತಿಭಟನೆ

ಕರ್ನಾಟಕ ಹೈಕೋರ್ಟ್​ನ ನಾಲ್ವರು ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಿರುವ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಬೆಂಗಳೂರು ವಕೀಲರ ಸಂಘದ ಸದಸ್ಯರು ಹೈಕೋರ್ಟ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಹೈಕೋರ್ಟ್‌ನ ಗೋಲ್ಡನ್ ಗೇಟ್ ಮುಂಭಾಗ ಪ್ರತಿಭಟನೆ ನಡೆಸಿದ ವಕೀಲರು, ನ್ಯಾಯಮೂರ್ತಿಗಳನ್ನು

ಕನ್ನಡಿಗನ ಮೇಲೆ ವಿಂಗ್ ಕಮಾಂಡರ್ ಹಲ್ಲೆ: ಸೂಕ್ತ ಕಾನೂನು ಕ್ರಮಕ್ಕೆ ಸಿಎಂ ಆದೇಶ

ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ

ವಿಧಾನಸೌಧ ಪ್ರವೇಶಕ್ಕೆ 150 ರೂ. ದುಬಾರಿಯೆಂದು ಸ್ಪೀಕರ್‌ ಖಾದರ್‌ ಆಕ್ಷೇಪ

ವಿಧಾನಸೌಧ ಪ್ರವೇಶಕ್ಕೆ ಸಾರ್ವಜನಿಕರಿಗೆ ಶುಲ್ಕ ನಿಗದಿ ಮಾಡಲು ಸರ್ಕಾರ ನಿರ್ಧರಿಸಿದ್ದಂತೆ ಪ್ರವಾಸೋದ್ಯಮ ಇಲಾಖೆ ವಿಧಾನಸೌಧಕ್ಕೆ ಗೈಡೆಡ್ ಟೂರ್​ಗೆ ಪ್ರತಿ ವ್ಯಕ್ತಿಗೆ ತಲಾ 150 ರೂ. ನಿಗದಿ ಪಡಿಸುವ ಪ್ರಸ್ತಾವನೆಯನ್ನು ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದೆ. ಇಷ್ಟು ದುಬಾರಿ ಪ್ರವೇಶ ಶುಲ್ಕಕ್ಕೆ ಸ್ಪೀಕರ್ ಯು.ಟಿ.

ರಸ್ತೆ ಅಪಘಾತದಲ್ಲಿ ಮೃತರ ವಯಸ್ಕ ಮಕ್ಕಳಿಗೆ ಪರಿಹಾರ ನಿರಾಕರಣೆ ಸಲ್ಲದು: ಹೈಕೋರ್ಟ್‌

ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಮಾತ್ರವಲ್ಲದೆ ವಯಸ್ಕ ಮಕ್ಕಳು ಕೂಡ ಪರಿಹಾರಕ್ಕೆ ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್‌ ಆದೇಶ ಪ್ರಕಟಿಸಿದೆ. ವಯಸ್ಕರೆಂಬ ಕಾರಣ ನೀಡಿ ಮೃತರ ಮಕ್ಕಳಿಗೆ ಪರಿಹಾರ ನೀಡುವುದಕ್ಕೆ ನಿರಾಕರಿಸಿದ್ದ ನ್ಯಾಯಾಧಿಕರಣದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ

ಪಿಂಚಣಿದಾರರ ಲೈಫ್‌ ಸರ್ಟಿಫಿಕೇಟ್‌ಗೆ ಕೆಪಿಟಿಸಿಎಲ್‌ನಿಂದ ತಂತ್ರಾಂಶ

ಬೆಂಗಳೂರು: ಪಿಂಚಣಿ ಪಡೆಯಲು ಅವಶ್ಯವಿರುವ ‘ಜೀವನ ಪ್ರಮಾಣ ಪತ್ರ’ ಪರಿಶೀಲನೆ ಮತ್ತು ಪ್ರಮಾಣೀಕರಿಸುವ ತಂತ್ರಾಂಶವನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬಿಡುಗಡೆ ಮಾಡಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಸರಳ ಕಾರ್ಯಕ್ರಮದಲ್ಲಿ ನಿಗಮದ

‘ಜನಿವಾರ’ ಪ್ರಕರಣಕ್ಕೆ ಕೇಂದ್ರದ ಪರೀಕ್ಷಾ ಪ್ರಾಧಿಕಾರಗಳ ನೀತಿ ಕಾರಣ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಜನಿವಾರ ಪ್ರಕರಣದಂತಹ ಘಟನೆ ನಡೆಯಲು ಕೇಂದ್ರ ಸರಕಾರದ ಪರೀಕ್ಷಾ ಪ್ರಾಧಿಕಾರಗಳ ನೀತಿಗಳು ಕಾರಣ. ಹೀಗಾಗಿ, ಇಂತಹ ನೀತಿಗಳ ಸಡಿಲಿಕೆಗೆ ಕೇಂದ್ರಕ್ಕೆ ಮನವಿ ಮಾಡಿಕೊಳ್ಳಬೇಕು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸಲಹೆ ನೀಡಿದ್ದಾರೆ. ಉನ್ನತ ಶಿಕ್ಷಣ ಸಚಿವರಿಗೆ