ರಾಜ್ಯ
ಕೆಎಸ್ ಈಶ್ವರಪ್ಪಗೆ ಮತ್ತೆ ವಿದೇಶದಿಂದ ಬೆದರಿಕೆ ಕರೆ
ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಅವರಿಗೆ ಮತ್ತೆ ವಿದೇಶದಿಂದ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು ಸಲ್ಲಿಸಲು ಈಶ್ವರಪ್ಪ ನಿರ್ಧರಿಸಿದ್ದಾರೆ. ಜನವರಿ 7ರಂದು ಈಶ್ವರಪ್ಪ ಅವರಿಗೆ ವಿದೇಶದಿಂದ ಕರೆ ಬಂದಿದೆ ಎಂದು ತಿಳಿದು ಬಂದಿದೆ. ಸದ್ಯ ಪ್ರವಾಸದಲ್ಲಿರುವ ಈಶ್ವರಪ್ಪ ಶಿವಮೊಗ್ಗಕ್ಕೆ ಹಿಂತಿರುಗಿದ ಬಳಿಕ ದೂರು ನೀಡಲು ನಿರ್ಧರಿಸಿದ್ದಾರೆ. ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ವಿದೇಶದಿಂದ ಬೆದರಿಕೆ ಕರೆಗಳು ಬರುತ್ತಿರುವುದು ಇದೇ ಮೊದಲಲ್ಲ. 2020ರಲ್ಲಿ
ಮನ್ರೆಗಾ ಮರು ಜಾರಿಗೆ ಒತ್ತಾಯಿಸಲು ವಿಧಾನ ಮಂಡಲ ವಿಶೇಷ ಅಧಿವೇಶನ: ಸಿಎಂ ಸಿದ್ದರಾಮಯ್ಯ
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮರು ಜಾರಿಗೆ ಕೇಂದ್ರದ ಮೇಲೆ ಒತ್ತಡ ಹೇರಲು ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯುವುದು ಹಾಗೂ ರಾಜ್ಯಾದ್ಯಂತ ತೀವ್ರ ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ
ವಿಬಿ ಜಿ ರಾಮ್ ಜಿ ವಿರುದ್ಧ ಕಾನೂನು ಹೋರಾಟ: ರಾಜ್ಯ ಸಚಿವ ಸಂಪುಟ ನಿರ್ಧಾರ
ಬೆಂಗಳೂರು: ಮನರೇಗಾ ಕಾಯಿದೆ ರದ್ದುಪಡಿಸಿ ಅದರ ಬದಲಿಯಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಕಾಯಿದೆ ಸಿಂಧುತ್ವ ಪ್ರಶ್ನಿಸಿ ಕಾನೂನು ಹೋರಾಟ ನಡೆಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಗುರುವಾರ ನಡೆದ
ಮುಖ್ಯಮಂತ್ರಿಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್
ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗುರುವಾರ ಸಲ್ಲಿಸಿದರು. ಕ್ರೆಡಲ್ 2024-25ನೇ ಸಾಲಿನಲ್ಲಿ 257.25 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಲಾಭದ
ವಿಬಿ-ಜಿ ರಾಮ್ ಜಿ ವಿರುದ್ಧ ಹೋರಾಟಕ್ಕೆ ಯಾವ ನೈತಿಕತೆ ಇದೆ: ಕಾಂಗ್ರೆಸ್ ಗೆ ಪ್ರಲ್ಹಾದ ಜೋಶಿ ಪ್ರಶ್ನೆ
ಬೆಂಗಳೂರು: ಕಾಂಗ್ರೆಸ್ಸಿನವರು ಯಾವ ಪುರುಷಾರ್ಥಕ್ಕಾಗಿ ಮತ್ತು ಯಾವ ನೈತಿಕತೆ ಇಟ್ಟುಕೊಂಡು ವಿಬಿ-ಜಿ ರಾಮ್ ಜಿ ವಿರುದ್ಧ ಹೋರಾಟಕ್ಕೆ ಕರೆ ನೀಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸವಾಲು ಹಾಕಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ
ಬಿ ಖಾತಾ ಆಸ್ತಿ ಮಾಲೀಕರಿಗೆ ಎ ಖಾತಾದ ಭಾಗ್ಯ: ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ
ರಾಜ್ಯದ ಎಲ್ಲಾ ಬಿ ಖಾತಾ ಆಸ್ತಿಯನ್ನು ಎ ಖಾತಾ ಆಗಿ ಪರಿವರ್ತಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಮೂಲಕ ರಾಜ್ಯದ ಸುಮಾರು 10 ಲಕ್ಷಕ್ಕೂ ಅಧಿಕ ಕಟ್ಟಡ ಮಾಲೀಕರಿಗೆ ಸಿಹಿಸುದ್ದಿ ನೀಡಿದೆ. ಬೆಂಗಳೂರಿನ ವಿಕಾಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ
ಬಯಲಾಟ ಅಕಾಡೆಮಿಯಿಂದ ಪ್ರಕಟ: 10 ಜನರಿಗೆ ವಾರ್ಷಿಕ ಪ್ರಶಸ್ತಿ
ಕರ್ನಾಟಕ ಬಯಲಾಟ ಅಕಾಡೆಮಿ 2025ನೇ ಸಾಲಿನಲ್ಲಿ ಐವರಿಗೆ ಗೌರವ ಹಾಗೂ 10 ಜನರಿಗೆ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಪ್ರೊ.ಕೆ.ಆರ್. ದುರ್ಗಾದಾಸ, ಫೆಬ್ರುವರಿ ಮೊದಲ ವಾರ ಧಾರವಾಡದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಹುಬ್ಬಳ್ಳಿಯಲ್ಲಿ ಅವಮಾನಕಾರಿಯಾಗಿ ಮಹಿಳೆಯ ಬಂಧನ: ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯೆಂದ ಆರ್. ಅಶೋಕ
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ಬಟ್ಟೆ ಬಿಚ್ಚಿ ಥಳಿಸಲಾಗಿರುವ ಘಟನೆಯನ್ನು ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿರುವುದು, ಮಹಿಳೆಯರ ಘನತೆಯನ್ನು ರಕ್ಷಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ವೈಫಲ್ಯಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದ್ದಾರೆ. ಪೊಲೀಸ್
ಬಿಜೆಪಿ- ಜೆಡಿಎಸ್ ವಿಲೀನಕ್ಕೆ ಆ ಪಕ್ಷಗಳ ನಾಯಕರು ಕಾಯುತ್ತಿದ್ದಾರೆ: ಡಿಕೆ ಶಿವಕುಮಾರ್
“ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ ‘ಆಟಕ್ಕೆ ಮೂರು ಪಕ್ಷ, ಲೆಕ್ಕಕ್ಕೆ ಮಾತ್ರ ಎರಡು ಪಕ್ಷ’ ಎಂಬ
ಕುಮಾರಸ್ವಾಮಿಯಿಂದ ಕಲಿಯುವ ಅಗತ್ಯ ನನಗಿಲ್ಲ: ಡಿಸಿಎಂ ಶಿವಕುಮಾರ್
“ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವವಿದೆ. ನಾನು ಸಿಎಂ ಆಗದೇ ಇರಬಹುದು, ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ ಹೊಂದಿದ್ದೇನೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿರುಗೇಟು ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ




