ರಾಜ್ಯ
ಅವರವರ ಸಮಾಜ ರಕ್ಷಣೆ ಮಾಡಿಕೊಳ್ಳಲು ಹೊರಟಿದ್ದಾರೆ: ಡಿ.ಕೆ.ಶಿವಕುಮಾರ್
“ವೀರಶೈವ ಮಹಾಸಭಾದವರು ಅವರ ಸಮಾಜ ರಕ್ಷಣೆ ಮಾಡಿಕೊಳ್ಳಲು ಹೊರಟಿದ್ದು, ಅವರನ್ನು ನಾವು ಏಕೆ ಟೀಕೆ ಮಾಡಬೇಕು. ಪ್ರಜಾಪ್ರಭುತ್ವ, ಸಂವಿಧಾನದ ಪ್ರಕಾರವಾಗಿ ಅವರುಗಳು ತಮ್ಮ ನಿಲುವುಗಳನ್ನು ಪ್ರತಿಪಾದನೆ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಬಗ್ಗೆ ಶಾಮನೂರು ಶಿವಶಂಕರಪ್ಪ ಅವರ ಟೀಕೆ ಹಾಗೂ ವರದಿಯ ಅಧ್ಯಯನಕ್ಕೆ ವೀರಶೈವ ಮಹಾಸಭಾ ತಜ್ಞರ ಸಮಿತಿ ನೇಮಕ ಮಾಡಿರುವ ಬಗ್ಗೆ ಕೇಳಿದಾಗ, “ಮುಖ್ಯಮಂತ್ರಿಗಳು ಜಾತಿಗಣತಿ ವರದಿಯ ಬಗ್ಗೆ ಚರ್ಚೆ
ಇದು ಜಾತಿಗಣತಿಯೋ, ದ್ವೇಷಗಣತಿಯೋ: ಹೆಚ್‌ಡಿಕೆ ಪ್ರಶ್ನೆ
ಜಾತಿಗಣತಿ ವರದಿಯದ್ದು ಎನ್ನಲಾದ ಅಂಕಿ ಅಂಶಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಇದು ಜಾತಿಗಣತಿಯೋ.. ದ್ವೇಷಗಣತಿಯೋ..? ಎಂದು ಪ್ರಶ್ನೆ ಮಾಡಿದ್ದಾರೆ. ಹಿಂದೆ ಜಾತಿ ಗಣತಿ ವರದಿಯನ್ನು ವಿರೋಧಿಸಿದ್ದ ಡಿಸಿಎಂ ಡಿಕೆಶಿ ಈಗ ಯೂಟರ್ನ್ ಹೊಡೆದಿರುವ ಬಗ್ಗೆ
ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ: ಸಿಎಂ ವಿರುದ್ಧ ಆರ್. ಅಶೋಕ್ ಟೀಕೆ
ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ ಎರಚಿ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡೋ ಕುತಂತ್ರ ಈಗ ಗುಟ್ಟಾಗಿ ಏನು ಉಳಿದಿಲ್ಲ ಎಂದು
ಬೆಳಗಾವಿಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು
ಬೆಳಗಾವಿ: ಗೂಡ್ಸ್ ರೈಲು ಹಳಿ ತಪ್ಪಿದ ಘಟನೆ ಮಂಗಳವಾರ ಮುಂಜಾನೆ ನಗರದ ರೈಲು ನಿಲ್ದಾಣದ ಬಳಿ ಸಂಭವಿಸಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಬೆಳಗಾವಿ ರೈಲು ನಿಲ್ದಾಣದಿಂದ ಅರ್ಧ ಕಿಮೀ ದೂರದಲ್ಲಿ ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಗೂಡ್ಸ್ ರೈಲು ಹಳಿ
ಮುಡಾ ಅಕ್ರಮ ಲೋಕಾ ಬಿ ವರದಿ: ವಿರುದ್ಧದ ಇಡಿ ತಕರಾರು ಅರ್ಜಿ ನಾಳೆ ತೀರ್ಪು
ಬೆಂಗಳೂರು:ಮೈಸೂರಿನ ಮುಡಾ ಅಕ್ರಮ ನಿವೇಶನ ಹಂಚಿಕೆಯಲ್ಲಿ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲವೆಂದು ಲೋಕಾಯುಕ್ತ ಬಿ.ರಿಪೋರ್ಟ್ ಪ್ರಶ್ನಿಸಿ ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಲಿದೆ. ವಿಶೇಷ ಜನಪ್ರತಿನಿಧಿ ನ್ಯಾಯಾಲಯದ
ಹುಬ್ಬಳ್ಳಿ ಎನ್‌ಕೌಂಟರ್ ತನಿಖೆಗೆ ಸಚಿವ ಡಾ.ಜಿ ಪರಮೇಶ್ವರ್ ಸೂಚನೆ
ಬೆಂಗಳೂರು:ಬಾಲಕಿಯ ಮೇಲೆ ಅತ್ಯಾಚಾರ ಕೊಲೆ ಪ್ರಕರಣದ ಸಂಬಂಧ ಹುಬ್ಬಳ್ಳಿಯಲ್ಲಿ ರಿತೇಶ್ ಕುಮಾರ್ ಎನ್‌ಕೌಂಟರ್ ಸಂದರ್ಭದಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಕಾಲಿಗೆ ಗುಂಡಿಕ್ಕಿದ್ದಾರೆ ಆದರೆ ಅದು ಬೆನ್ನಿಗೆ ಬಿದ್ದಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಎನ್ ಕೌಂಟರ್ ಘಟನೆ ಸಂಬಂಧಿಸಿದಂತೆ ತಕ್ಷಣಯ
ನನ್ನ ಸೋಲಿಗೆ ಸಾರ್ವಕರ್ ಕಾರಣ ಅಂತ ಅಂಬೇಡ್ಕರ್ ಬರೆದಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು: ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ವಿಧಾನಸೌಧದಲ್ಲಿ ಸೋಮವಾರ ನಡೆದ ಸಂವಿಧಾನ
ಅಂಬೇಡ್ಕರ್ ಕನಸಿನ ಸಮಾಜ ನಿರ್ಮಿಸಲು ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಂವಿಧಾನ ಶಿಲ್ಪಿ ಡಾ:
ಯತ್ನಾಳ್ ಭಾಷಣದ ವೇಳೆ ಮಾರಕಾಸ್ತ್ರ ಹೊಂದಿದ್ದ ವ್ಯಕ್ತಿ ಬಂಧನ
ಹಿಂದೂ ಸಾಮ್ರಾಜ್ಯೋತ್ಸವ ಸಮಾರಂಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ ಭಾಷಣದ ವೇಳೆ ವ್ಯಕ್ತಿಯೊಬ್ಬ ಮಾರಕಾಸ್ತ್ರ ಹಿಡಿದು ವೇದಿಕೆ ಮೇಲೆ ಬಂದಾಗ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಭಾನುವಾರ ಶ್ರೀರಾಮನವಮಿ ನಿಮಿತ್ತ ಹಿಂದೂ ಸಾಮ್ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮಕ್ಕೆ ವಿಜಯಪುರ ಶಾಸಕ ಬಸವನಗೌಡ
ವಕೀಲೆ ಜೀವಾ ಆತ್ಮಹತ್ಯೆ ಹಿಂದೆ: ಡಿವೈಎಸ್ಪಿ ಕನಕಲಕ್ಷ್ಮೀ ಕಿರುಕುಳ ಸಾಬೀತು: 2,300 ಪುಟಗಳ ಅಂತಿಮ ವರದಿ ಸಲ್ಲಿಕೆ
ಬೆಂಗಳೂರು:ಭೋವಿ ಅಭಿವೃದ್ಧಿ ನಿಗಮದ ಅವ್ಯವಹಾರ ಸಂಬಂಧ ವಕೀಲೆ ಜೀವಾ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬಹುತೇಕ ಪೂರ್ಣಗೊಳಿಸಿರುವ ವಿಶೇಷ ತನಿಖಾ ತಂಡ(ಎಸ್ಐಟಿ)ದ ಅಧಿಕಾರಿಗಳು 2,300 ಪುಟಗಳ ಅಂತಿಮ ವರದಿಯನ್ನು ಸಿದ್ಧಪಡಿಸಿ ಹೈಕೋರ್ಟ್ಗೆ ಸಲ್ಲಿಸಿದ್ದಾರೆ. ಸಾಕ್ಷಿದಾರರ ಹೇಳಿಕೆ, ವಿಡಿಯೋ ಸಾಕ್ಷ್ಯಗಳ ಸಮೇತ ಐಪಿಎಸ್




