Menu

ದೇಶದ ಮೊದಲ ಪ್ರತ್ಯೇಕ ಸೈಬರ್ ತನಿಖಾ ಘಟಕ ರಾಜ್ಯದಲ್ಲಿ ಕಾರ್ಯಾರಂಭ

ಸೈಬರ್‌ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಗೂ ತನಿಖೆಗಾಗಿ ಪ್ರತ್ಯೇಕವಾಗಿ ಸ್ಥಾಪಿಸಿರುವ ಸೈಬರ್‌ ತನಿಖಾ ಘಟಕಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಡಿಐಜಿಯಾಗಿ ಭೂಷಣ್ ಬೊರೆಸೆ ನೇಮಕಗೊಂಡಿದ್ದು, ಐಜಿಪಿ ಹಾಗೂ ಎಸ್ಪಿ ಸೇರಿ ದಂತೆ ಅಧಿಕಾರಿ-ಸಿಬ್ಬಂದಿ ನಿಯೋಜಿಸಲು ಸರ್ಕಾರ ಮುಂದಾಗಿದೆ. ಪ್ರಣವ್ ಮೊಹಂತಿ ಅವರಿಗೆ ಘಟಕದ ಮುಖ್ಯಸ್ಥ ರಾಗಿ ಹೊಣೆಗಾರಿಕೆ ನೀಡಲಾಗಿದ್ದು, ಅಧಿಕೃತ ಆದೇಶ ಹೊರ ಬೀಳಬೇಕಿದೆ. ಸೈಬರ್‌ ಅಪರಾಧ ಕೃತ್ಯಗಗಳ ತನಿಖೆಗೆ ಪ್ರತ್ಯೇಕ ಘಟಕ ಸ್ಥಾಪಿಸುವಂತೆ ಸರ್ಕಾರಕ್ಕೆ ರಾಜ್ಯ ಪೊಲೀಸ್‌

ದ್ವಿತೀಯ ಪಿಯುಸಿ ಫಲಿತಾಂಶ: ಮೊದಲ, ಎರಡನೇ ಸ್ಥಾನ ಗಳಿಸಿದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ

2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು. 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ, ದಕ್ಷಿಣ ಕನ್ನಡ (93.57%) ಎರಡನೇ ಸ್ಥಾನ ಗಳಿಸಿವೆ. ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಯಾದಗಿರಿ (73.45%) ಕೊನೆಯ ಸ್ಥಾನದಲ್ಲಿದೆ. ರಾಜ್ಯದಲ್ಲಿ

ವಿಚಾರಣೆಗೆ ಹಾಜರಾಗದ ದರ್ಶನ್‌ ವಿರುದ್ಧ ಕೋರ್ಟ್‌ ಅಸಮಾಧಾನ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರಗೆ ಬಂದಿರುವ ನಟ ದರ್ಶನ್‌ ವಿಚಾರಣೆ ಹಾಜರಾಗದಿರುವುದಕ್ಕೆ 57ನೇ ಸಿಸಿಹೆಚ್ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ವಿಚಾರಣೆ ಸಂದರ್ಭದಲ್ಲಿ ದರ್ಶನ್‌ ಪರ ವಕೀಲರು, ದರ್ಶನ್‌ ಅವರಿಗೆ ಬೆನ್ನು ನೋವಿರುವ ಕಾರಣ

ಜನಾಕ್ರೋಶ ಯಾತ್ರೆ ಪ್ರಹಸನ: ರಾಜ್ಯ ಬಿಜೆಪಿ ನಾಯಕರಿಗೆ ಮೋದಿ ಕಪಾಳಮೋಕ್ಷ

ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರುಮಾಡಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳು ವಂತೆ ಕಪಾಳಮೋಕ್ಷ ಮಾಡಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ನೀಡಿರುವ ಸಿಎಂ, ಬೆಲೆ

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಡಿಸಿಎಂ ಸೂಚನೆ

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ ಕೈಗೊಳ್ಳಲು ಹಾಗೂ ಎಲ್ಲಾ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಡಿಸಿಎಂ ಡಿ.ಕೆ ಶಿವಕುಮಾರ್  ಸೂಚನೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ

ಬೆಟ್ಟಿಂಗ್ ಆ್ಯಪ್ ಪ್ರಮೋಟ್ ಮಾಡಿದ ಕಿರುತೆರೆ, ರೀಲ್ಸ್‌ ಸ್ಟಾರ್‌ಗಳಿಗೆ ಸಂಕಷ್ಟ

ಅನುಮತಿ ಪಡೆಯದ ಬೆಟ್ಟಿಂಗ್ ಆ್ಯಪ್ ಬಗ್ಗೆ ಪ್ರಮೋಟ್ ಮಾಡಿದ ಕಿರುತರೆ ನಟಿಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಾನ್ಯತೆ ಪಡೆಯದ ಬೆಟ್ಟಿಂಗ್ ಆ್ಯಪ್ ಗಳ ಪ್ರಮೋಟ್ ಮಾಡಿ ಕಿರುತರೆ ನಟಿಯರು ಹಾಗೂ ಸೋನು ಶ್ರೀನಿವಾಸ್ ಗೌಡ, ದೀಪಕ್ ಗೌಡ, ವರುಣ್ ಅರಾದ್ಯ, ದಚ್ಚು ಸೇರಿದಂತೆ

ಮುಡಾ ಹಗರಣದ ಲೋಕಾಯುಕ್ತ ಬಿ ರಿಪೋರ್ಟ್‌ ಸಂಬಂಧ ಇಂದು ಕೋರ್ಟ್‌ ಆದೇಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಆರೋಪವಾಗಿ ತೀವ್ರ ವಿವಾದಕ್ಕೆ ಗ್ರಾಸವಾಗಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್‌ಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ (ಇಂದು) ಆದೇಶ ನೀಡಲಿದೆ. ನಾಲ್ಕು ತಿಂಗಳು ತನಿಖೆ ನಡೆಸಿದ ಲೋಕಾಯುಕ್ತ ಸಿಎಂ

ಕೃಷ್ಣಾ -ಕಾವೇರಿ ಜಲಹಂಚಿಕೆಯಲ್ಲಿ ರಾಜ್ಯವೆಂದೂ ನೀರುಗಂಟಿಯೇ…!

ಕರ್ನಾಟಕದ ಜನತೆಯ ಪಾಲಿಗೆ ಆಲಮಟ್ಟಿ, ತುಂಗಭದ್ರಾ, ಕೆಆರ್‌ಎಸ್ ಅಣೆಕಟ್ಟುಗಳು ಕಾಮಧೇನುವಲ್ಲ, ಕಲ್ಪ ವೃಕ್ಷವೂ ಆಗಿಲ್ಲ. ಏಕೆಂದರೆ ನದಿದಂಡೆ ಮೇಲಿನ ಭಾಗದಲ್ಲಿರುವ ರಾಜ್ಯಕ್ಕೆ ಇದುವರೆಗೆ ಸಿಕ್ಕಿದ್ದು ಬೊಗಸೆ ನೀರು. ಆದರೆ ಆಂಧ್ರ ಮತ್ತು ತಮಿಳುನಾಡಿಗೆ ದೊರೆತಿದ್ದು ಹಂಡೆಯಷ್ಟು.. ಕೃಷ್ಣಾ – ಕಾವೇರಿ ನದಿ

ಬೆಲೆ ಏರಿಸಿರುವ ಕೇಂದ್ರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ: ಡಿ.ಕೆ. ಶಿವಕುಮಾರ್

ಬೆಂಗಳೂರು: “ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಎಲ್ ಪಿಜಿ ಹಾಗೂ ಇಂಧನ

ನಾಳೆ ಪಿಯು ಫಲಿತಾಂಶ ಪ್ರಕಟ ಮಧ್ಯಾಹ್ನ 1 ಗಂಟೆಯಿಂದ ವೆಬ್‌ಸೈಟ್‌ನಲ್ಲಿ ಲಭ್ಯ

ಬೆಂಗಳೂರು: ರಾಜ್ಯಾದ್ಯಂತ ಕಳೆದ ಮಾರ್ಚ್ .1ರಿಂದ 20ರವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವು ಮಂಗಳವಾರ ಪ್ರಕಟವಾಗಲಿದೆ. ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ