ರಾಜ್ಯ
ಐಎಂಎ ಹಗರಣ ಸಂತ್ರಸ್ತರಿಗೆ ನಿಗದಿತ ಪರಿಹಾರದ ಭರವಸೆ ನೀಡಿದ ಸಚಿವ ಕೃಷ್ಣ ಭೈರೇಗೌಡ
ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡಿರುವ ಎಲ್ಲ ಸಂತ್ರಸ್ತರಿಗೂ ರಂಜಾನ್ ಹಬ್ಬಕ್ಕೂ ಮೊದಲು ನಿಗದಿತ ಪರಿಹಾರ ಹಣ ನೀಡಲು ಸೂಕ್ತ ಕ್ರಮ ವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಸಂಬಂಧ ವಿಕಾಸಸೌಧ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಗಿದೆ. ಸಭೆಯಲ್ಲಿ ಸಚಿವರಾದ ಜಮೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ಐಎಂಎ ಹಗರಣದಿಂದ ಹಣ ಕಳೆದುಕೊಂಡ
ಕೇಣಿ ಗ್ರೀನ್ ಫೀಲ್ಡ್ ಬಂದರು ವಿರೋಧಿಸಿ ನಾಗರಿಕರ ಪ್ರತಿಭಟನೆ ತೀವ್ರ, ನಿಷೇಧಾಜ್ಞೆ ಜಾರಿ
ಕೇಣಿ ಗ್ರೀನ್ ಫೀಲ್ಡ್ ಬಂದರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳೀಯರ ವಿರೋಧ ತೀವ್ರಗೊಂಡಿದ್ದು, ಕೇಣಿ ಗ್ರಾಮದಲ್ಲಿ ಪೊಲೀಸ್ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ನಾಗರಿಕರ ವಿರೋಧದ ನಡುವೆಯೂ ಯೋಜನೆ ಜಾರಿಗೆ ರಾಜ್ಯ ಸರಕಾರ ಮುಂದಾಗಿ ಪ್ರದೇಶದ ಭೌಗೋಳಿಕ ತಾಂತ್ರಿಕ ಅಧ್ಯಯನ ಕಾಮಗಾರಿಗಾಗಿ ಗುತ್ತಿಗೆ ಕಂಪನಿ ಮುಂದಾಗಿದೆ.
ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ: ಡಿ.ಕೆ. ಶಿವಕುಮಾರ್
ತಾಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ವಹಿಸಲಾಗುವುದು. ನಾಯಕರ ಹಿಂದೆ ಗಿರಕಿ ಹೊಡೆಯುವವರನ್ನು ನೇಮಿಸಿ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ
ಬಂಗಾರಪೇಟೆಯಲ್ಲಿ ಕಾಡಾನೆ ದಾಳಿಗೆ ಬಲಿಯಾದ ಮಹಿಳೆ
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಾಕರಸನಹಳ್ಳಿ ಬಳಿ ಒಂಟಿ ಕಾಡಾನೆಯ ದಾಳಿಗೆ ಒಳಗಾಗಿ ರೈತ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಂಜುಳ (44) ಆನೆ ದಾಳಿಯಿಂದ ಮೃತಪಟ್ಟ ಮಹಿಳೆಯಾಗಿದ್ದು, ಸಾಕರಸನಹಳ್ಳಿ ಗ್ರಾಮದ ಹೊರ ವಲಯದ ತೋಟದ ಮನೆ ಬಳಿಈ ದುರಂತ ನಡೆದಿದೆ. ಘಟನೆಯಿಂದ ಸಾಕರಸನಹಳ್ಳಿ
ದಲಿತ ವಿದ್ಯಾರ್ಥಿಗಳ ಊಟದ ತಟ್ಟೆ ತೊಳೆಯಲ್ಲವೆಂದ ಸಹಾಯಕಿ ಮನೆಗೆ
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕರಕಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಲಿತ ಮಕ್ಕಳು ಬಿಸಿಯೂಟ ಮಾಡಿದ್ದ ತಟ್ಟೆಗಳನ್ನು ತೊಳೆಯಲು ನಿರಾಕರಿಸಿದ್ದ ಅಡುಗೆ ಸಹಾಯಕಿಯನ್ನು ಜಿಲ್ಲಾಡಳಿತ ಮನೆಗೆ ಕಳಿಸಿ ಪರ್ಯಾಯ ವ್ಯವಸ್ಥೆ ಮಾಡಿದೆ. ಅಡುಗೆ ಸಹಾಯಕಿಯ ಈ ಕಾರ್ಯವೈಖರಿಯಿಂದ ಮಧ್ಯಾಹ್ನದ
ಗೃಹಜ್ಯೋತಿ ಸಹಾಯಧನ ಮುಂಗಡವಾಗಿ ಎಸ್ಕಾಂಗಳಿಗೆ ಪಾವತಿಯಾಗುತ್ತದೆ: ಕೆ.ಜೆ.ಜಾರ್ಜ್
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ಎಸ್ಕಾಂಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸುತ್ತಿದ್ದು, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಬೆಳಕು ಭವನದಲ್ಲಿ ಸೋಮವಾರ ಆಯೋಜಿಸಿದ್ದ ಇಲಾಖೆಯ ಸಭೆಯ ನಂತರ ಇಂಧನ ಸಚಿವ ಕೆ.ಜೆ.ಜಾರ್ಜ್
ಬೆಳಗಾವಿ ಗಲಾಟೆ ಮುಂದುವರೆದರೆ ಕಠಿಣ ಕ್ರಮಕ್ಕೆ ಸರ್ಕಾರ ಸಿದ್ದ : ಶಿವರಾಜ್ ತಂಗಡಗಿ
ಕೋಲಾರ: ಬೆಳಗಾವಿಯಲ್ಲಿ ಗಲಾಟೆ ಮಾಡುವವರಿಗೆ ಹಲವಾರು ಬಾರಿ ಎಚ್ಚರಿಕೆ ನೀಡಿದ್ದೇವೆ. ಹೀಗೆಯೇ ಮುಂದುವರಿದರೆ ಮುಂದಿನ ಕಠಿಣ ಕ್ರಮವಹಿಸುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ ಎಚ್ಚರಿಸಿದರು. ನಗರದಲ್ಲಿ ಸೋಮವಾರ ರಾಜ್ಯಮಟ್ಟದ ಜನಪರ ಉತ್ಸವಕ್ಕೆ ಚಾಲನೆ ನೀಡಿದ
ಎಂಎಸ್ಪಿಎಲ್ ಫ್ಯಾಕ್ಟರಿ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ ಗೆ ಅಭೂತಪೂರ್ವ ಜನ ಬೆಂಬಲ
ಕೊಪ್ಪಳ: ಸರಕಾರದಲ್ಲಿ ಅತ್ಯಂತ ಪ್ರಭಾವಿಗಳಾದ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಸಂಸದ ರಾಜಶೇಖರ ಹಿಟ್ನಾಳ ನೀವ ಏನ್ ಮಾಡ್ತಿರೊ ಗೊತ್ತಿಲ್ಲ, ಆದೇಶ ತಗೊಂಡ ಕೊಪ್ಪಳಕ್ಕ ಬರ್ರಿ” ಎಂದು ಕೊಪ್ಪಳದ ಸಂಸ್ಥಾನ ಶ್ರೀ ಗವಿಮಠದ ಶ್ರೀ
ಕಂಡಕ್ಟರ್ ಮೇಲೆ ಹಲ್ಲೆ ಅತ್ಯಂತ ಖಂಡನೀಯ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ
ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
2028ರ ಚುನಾವಣೆಗೆ ಸಜ್ಜಾಗುವಂತೆ ಪರಾಜಿತ ಅಭ್ಯರ್ಥಿಗಳಿಗೆ ಡಿಕೆ ಶಿವಕುಮಾರ್ ಸೂಚನೆ
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಕ್ಷೇತ್ರಗಳ ಪೈಕಿ ಸುಮಾರು 60 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಸಾಧ್ಯತೆಗಳಿವೆ ಎಂದು ನಮ್ಮ ಆಂತರಿಕ ಸಮೀಕ್ಷೆಗಳು ವರದಿ ನೀಡಿವೆ. ಈ ಹಿನ್ನೆಲೆಯಲ್ಲಿ ಪರಾಜಿತ ಅಭ್ಯರ್ಥಿಗಳ ಕಷ್ಟ ಆಲಿಸಿ, ಮುಂದಿನ 2028ರ ಚುನಾವಣೆಗೆ ಸಜ್ಜಾಗಿ



