ರಾಜ್ಯ
ನಟ ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ ವಿಚಾರಣೆ ಏ.22ಕ್ಕೆ ಸುಪ್ರೀಂ ಮುಂದೂಡಿಕೆ
ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೆಲ ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ರಾಜ್ಯ ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಏಪ್ರಿಲ್ 22ಕ್ಕೆ ಮುಂದೂಡಿದೆ. ನಟ ದರ್ಶನ್ ಸೇರಿದಂತೆ ಏಳು ಮಂದಿ ಕೊಲೆ ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಯು ಸುಪ್ರೀಂಕೋರ್ಟ್ನಲ್ಲಿ ನಡೆಯಿತು. ರಾಜ್ಯದ ಪರವಾಗಿ ವಕೀಲ ಸಿದ್ಧಾರ್ಥ್ ಲೂಥ್ರಾ ಅವರು ಅರ್ಜಿಯ ಉಲ್ಲೇಖ ಮಾಡಿದರು. ಬಳಿಕ ನ್ಯಾಯಮೂರ್ತಿಗಳು ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದರು.
ನಟಿ ರನ್ಯಾ ರಾವ್ ಗೆ ವಿಚ್ಛೇದನ ಕೋರಿ ಪತಿ ಜತಿನ್ ಕೋರ್ಟ್ ಗೆ ಅರ್ಜಿ
ಬೆಂಗಳೂರು:ಅಕ್ರಮ ಚಿನ್ನ ಸಾಗಾಣೆ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಡಿಜಿಪಿ ಮಲಮಗಳು ನಟಿ ರನ್ಯಾ ರಾವ್ ರಿಂದ ವಿಚ್ಛೇದನ ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಸಲು ಪತಿ ಜತಿನ್ ಹುಕ್ಕೇರಿ ಮುಂದಾಗಿದ್ದಾರೆ. ಮದುವೆಯಾದಾಗಿನಿಂದ ರನ್ಯಾ ಜೊತೆಗೆ ಒಂದಲ್ಲ ಒಂದು ತೊಂದರೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಆಕೆಯಿಂದ
ಏ.9 ಅಥವಾ 10ರವರೆಗೆ ಕಾಲುವೆಗೆ ನೀರು: ಸಚಿವ ಶಿವರಾಜ್ ತಂಗಡಗಿ
ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ನಿಂತ ಬೆಳೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಏ.9 ಅಥವಾ 10ರ ತನಕ ಕಾಲುವೆಗೆ ಮೂರು ಸಾವಿರ ಕ್ಯೂಸೆಕ್ಸ್ ನಂತೆ ನೀರು ಹರಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ
ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: 416 ಕೋಟಿ ರೂ. ದಾಖಲೆಯ ನಿವ್ವಳ ಲಾಭ
ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54 ಕೋಟಿ ಹೆಚ್ವು. ಬೃಹತ್ ಮತ್ತು ಮಧ್ಯಮ
ಡಿಕೆಶಿಗೆ ಮುಖ್ಯಮಂತ್ರಿ ಸ್ಥಾನ ನೀಡಿ: ಹೆಚ್.ವಿಶ್ವನಾಥ್ ಒತ್ತಾಯ
ಮೈಸೂರು: ಸಿದ್ದರಾಮಯ್ಯ ಮೂಲ ಕಾಂಗ್ರೆಸಿಗ ಅಲ್ಲ. ಡಿ.ಕೆ.ಶಿವಕುಮಾರ್ ಅವರು ಮೂಲ ಕಾಂಗ್ರೆಸ್. ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಹಾಗಾಗಿ ಡಿ.ಕೆ.ಶಿವಕುಮಾರ್ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು,
ಶಾಸಕರ ಅಮಾನತನ್ನು ಕೂಡಲೇ ಹಿಂದಕ್ಕೆ ಪಡೆಯಲು ಬಿಜೆಪಿ ಆಗ್ರಹ
ಸ್ಪೀಕರ್ ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಶಾಸಕರ ಅಮಾನತು ಮತದಾರರಿಗೆ ಮಾಡಿದ ಅವಮಾನ. 18 ಶಾಸಕರ ಅಮಾನತನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು. ಅಮಾನತು ಹಿಂಪಡೆಯುವವರೆಗೆ ಬಿಜೆಪಿಯ ಶಾಸಕರು ಕಮಿಟಿ ಮೀಟಿಂಗ್‍ನಲ್ಲಿ
ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರು ಪೂರೈಕೆಗೆ ಆದ್ಯತೆ: ಡಿಸಿಎಂ
ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲ
ಬಿಜೆಪಿಯವರು ರೈತ ವಿರೋಧಿಗಳೆಂದು ಡಿ.ಕೆ. ಶಿವಕುಮಾರ್ ಆಕ್ರೋಶ
“ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದು, ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ದರ ಏರಿಕೆ
ರಾಜ್ಯದ ಅಭಿವೃದ್ಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತ್ರ ದೊಡ್ಡದು: ಸಿಎಂ ಸಿದ್ದರಾಮಯ್ಯ
ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ
ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ: ಎಚ್ಚರಿಕೆ ನಿಜವಾಯ್ತು ಎಂದ ಆರ್. ಅಶೋಕ್
ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ ಕಾದಿದೆ ಎಂದು ಬಜೆಟ್ ಅಧಿವೇಶನದಲ್ಲಿ ನಾನು ನೀಡಿದ್ದ ಎಚ್ಚರಿಕೆ ಈಗ ಅಕ್ಷರಶಃ ನಿಜವಾಗುತ್ತಿದೆ. ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳವನ್ನ, ಬೆಲೆ ಏರಿಕೆಯನ್ನ ಘೋಷಣೆ ಮಾಡದೆ ಕನ್ನಡಿಗರ ಕಿವಿಗೆ ಹೂವಿಟ್ಟ ಸಿಎಂ ಸಿದ್ದರಾಮಯ್ಯ ಅವರು ಈಗ




