Menu

ಡಿಸೆಲ್ ದರ ಲೀಟರ್ ಗೆ 2 ರೂ. ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಹಾಲು, ನೀರು, ಬಸ್ ಸೇರಿದಂತೆ ಎಲ್ಲಾ ದರಗಳನ್ನು ಏರಿಸುತ್ತಿರುವ ರಾಜ್ಯ ಸರ್ಕಾರ ಇದೀಗ ಏಕಾಏಕಿ ಡೀಸೆಲ್ ಮೇಲಿನ ತೆರಿಗೆಯನ್ನು ಏರಿಕೆ ಮಾಡಿದ್ದು, ಏಪ್ರಿಲ್ 1ರಿಂದಲೇ ಲೀಟರ್ ಗೆ 2 ರೂ. ಜಾರಿಗೆ ಬರಲಿದೆ. ರಾಜ್ಯ ಸರ್ಕಾರ ಡೀಸೆಲ್​ ಮೇಲಿನ ತೆರಿಗೆಯನ್ನು ಶೇ 2.73ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಇದರಿಂದ, ಡೀಸೆಲ್ ಬೆಲೆ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಾಗಲಿದೆ. ಡೀಸೆಲ್ ಮೇಲೆ ಈ ಹಿಂದೆ

ಕಸದ ಮೇಲೆಯೂ ಸೆಸ್: ರಾಜ್ಯ ಸರ್ಕಾರದ ವಿರುದ್ಧ ಹೆಚ್‌ಡಿಕೆ ಆಕ್ರೋಶ

ರಾಜ್ಯದಲ್ಲಿ ‘ದರಬೀಜಾಸುರ’ ಸರಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ,  ಜನರ ರಕ್ತ ಹೀರುತ್ತಿದೆ ಎಂದು

ಶ್ರೀ ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಲು ಕೇಂದ್ರಕ್ಕೆ ಡಿಕೆ ಶಿವಕುಮಾರ್ ಮನವಿ

ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನ ಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ “ಭಾರತ ರತ್ನ” ಪುರಸ್ಕಾರ ನೀಡಿ ಗೌರವಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಕೇಂದ್ರ ಸಚಿವ ರಾಜನಾಥ್‌ ಸಿಂಗ್‌  ಮೂಲಕ

ದೆಹಲಿಯಲ್ಲಿ ಕರ್ನಾಟಕ ಭವನ ನೂತನ ಕಟ್ಟಡ ಉದ್ಘಾಟನೆ ನಾಳೆ

ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ನೂತನ ಕರ್ನಾಟಕ ಭವನ(ಕಾವೇರಿ)ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಉದ್ಘಾಟನಾ ಸಮಾರಂಭವು ಬುಧವಾರ ಸಂಜೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತರಿದ್ದು, ಸಚಿವ ಸತೀಶ್ ಜಾರಕಿಹೊಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಿಸಿಎಂ

ಹಾಲು, ಮೊಸರು, ಕಾಫಿ ಟೀ, ನೀರು, ವಿದ್ಯುತ್‌, ವಾಹನ ಶುಲ್ಕ ದರ ಹೆಚ್ಚಳ, ಕಸಕ್ಕೂ ಕಾಸು

ಬಸ್, ಮೆಟ್ರೋ ಟಿಕೆಟ್‌ ದರ ಹೆಚ್ಚಳದ ಬಳಿಕ ಹಾಲು, ಮೊಸರು, ವಿದ್ಯುತ್‌, ನೀರಿನ ದರ ದುಬಾರಿಯಾಗಿ ಪರಿಣಮಿಸುವ ಜೊತೆಗೆ ಕಸಕ್ಕೂ ನಾಗರಿಕರು  ಸೆಸ್ ಕಟ್ಟಬೇಕಿದೆ. ಕಸ ಸಂಗ್ರಹ ಸೆಸ್ (ಮಾಸಿಕ)ದರ ಹೀಗಿದೆ, ವಸತಿ ಕಟ್ಟಡ: 600 ಚದರಡಿವರೆಗೆ – 10 ರೂ.,

ಕೆಎಎಸ್ ಮುಖ್ಯ ಪರೀಕ್ಷೆ ಮೇ ತಿಂಗಳ ಮೊದಲ ವಾರ

ಕರ್ನಾಟಕ ಲೋಕಸೇವಾ ಆಯೋಗವು ಕಾರಣಾಂತರಗಳಿಂದ ಮುಂದೂಡಿದ್ದ ಕೆಎಎಸ್ ಮುಖ್ಯ ಪರೀಕ್ಷೆಯನ್ನು ಮೇ ತಿಂಗಳ ಮೊದಲ ವಾರದಲ್ಲಿ ನಡೆಸಲಿದೆ. ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಒಟ್ಟು 384 ಹುದ್ದೆಗಳ ಮುಖ್ಯ ಪರೀಕ್ಷೆ ಇದಾಗಿದೆ. 2023-24ನೇ ಸಾಲಿನ ಈ

ಬೀದಿ ನಾಯಿಗಳ ದಾಳಿಗೆ ಆರು ವರ್ಷದ ಬಾಲಕ ಸಾವು

ಲಿಂಗಸುಗೂರು  ಪುರಸಭೆ ವ್ಯಾಪ್ತಿಯಲ್ಲಿ ಬರುವ ಕಸಬಾಲಿಂಗಸುಗೂರು ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿಗೆ ಸಿದ್ದಪ್ಪ ಬೀರಪ್ಪ (6) ಎಂಬ ವರ್ಷದ ಮಗು ಮೃತಪಟ್ಟಿದೆ. ಬಾಲಕ  ಸಂಜೆ ಬಯಲು ಬಹಿರ್ದೆಸೆಗೆ ಹೋದಾಗ ಐದಾರು ಬೀದಿ ನಾಯಿಗಳ ಹಿಂಡು‌ ದಾಳಿ ಮಾಡಿದೆ.  ಪುರಸಭೆ ಅಧಿಕಾರಿಗಳು ಬೀದಿ

ಕಲ್ಯಾಣ ಕರ್ನಾಟಕ ರೈತರ ಜಮೀನಿಗೆ ತುಂಗಾಭದ್ರ ನೀರು

ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು

ಹುಬ್ಬಳ್ಳಿ-ಧಾರವಾಡದಲ್ಲಿ ಧಾರಾಕಾರ ಮಳೆ: ಸಿಡಿಲಿಗೆ ವ್ಯಕ್ತಿ ಬಲಿ

ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಹುಬ್ಬಳ್ಳಿ-ಧಾರವಾಡದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರವಾಡದಲ್ಲಿ ಸತತ ಒಂದು ಗಂಟೆ ಧಾರಾಕಾರವಾಗಿ ಮಳೆಯಾಗಿದ್ದು, ರೈತರ ಮೊಗದಲ್ಲಿ ನಗು ತರಿಸಿದೆ. ಮುಂಗಾರು ಬಿತ್ತನೆಗೆ ಭೂಮಿ ಸಜ್ಜು ಮಾಡಿಕೊಳ್ಳಲು ಈ ಮಳೆ ಸಹಕಾರಿಐಆಗಿದೆ. ನಾಲ್ಕು ದಿನಗಳ

“ಉದಯಕಾಲ” ಯುಗಾದಿ ವಿಶೇಷಾಂಕ ಬಿಡುಗಡೆಗೊಳಿಸಿದ ಡಿಸಿಎಂ

ಉದಯಕಾಲ ದಿನಪತ್ರಿಕೆಯ ಯುಗಾದಿ ವಿಶೇಷಾಂಕವನ್ನು ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ಸದಾಶಿವನಗರದ ನಿವಾಸದಲ್ಲಿ ಬಿಡುಗಡೆ ಮಾಡಿದರು. ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ. ಬಿ ಬಸವರಾಜು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಳೆದ ೨೭ ವರ್ಷಗಳಿಂದ ಹೊರಬರುತ್ತಿರುವ ‘ಕನ್ನಡಿಗರ ಜೀವಾಳ’ ಎನ್ನುವ