ರಾಜ್ಯ
ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುತ್ತೇವೆ: ಸಚಿವ ಕೆಎಚ್ ಮುನಿಯಪ್ಪ ಘೋಷಣೆ
ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ಹಣದ ಬದಲು ಪೂರ್ಣ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಲಿ ಅವರು, ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ ಫೆಬ್ರವರಿ ತಿಂಗಳಿನಿಂದಲೇ 5 ಕೆಜಿ ಅಕ್ಕಿ ಬದಲು ಪೂರ್ಣ 10 ಕೆಜಿ ಅಕ್ಕಿ ಪಡಿತರದಲ್ಲಿ ನೀಡಲಾಗುವುದು. ಜನವರಿ ತಿಂಗಳವರೆಗೆ ೧೭೦ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ನೀಡಲಾಗುವುದು ಎಂದರು. ಕೇಂದ್ರ ಸರ್ಕಾರ ಅಕ್ಕಿ
ವರ್ತೂರ್ ಪ್ರಕಾಶ್ ಹೆಸರಲ್ಲಿ ಶ್ವೇತಾಗೌಡ ವಂಚಿಸಿದ ಚಿನ್ನ ಬಾಗಲಗುಂಟೆಯಲ್ಲಿ
ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಶ್ವೇತಾಗೌಡ ನವರತ್ನ ಜ್ಯುವೆಲರಿ ಮಾಲೀಕರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಮುಂದುವರಿದಿದೆ, ಶ್ವೇತಾಗೌಡ ವಂಚಿಸಿ ಬಚ್ಚಿಟ್ಟಿದ್ದ 2 ಕೆ.ಜಿ 100 ಗ್ರಾಂ ಚಿನ್ನಾಭರಣ ಎಲ್ಲಿದೆ ಎಂಬ ಸುಳಿವು ಪೊಲೀಸರಿಗೆ ಸಿಕ್ಕಿದೆ. ಮಾಜಿ ಸಚಿವ
ಸಚಿವ ಜಾರ್ಜ್ ವಿರುದ್ಧ ಹರಿ ಹಾಯ್ದ ಆರ್. ಅಶೋಕ್
ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ತಿಂಗಳ ಸಂಬಳ ಅಲ್ವಲ್ಲ ಅಂತ ಹೇಳಿದ್ದೀರಲ್ಲಾ, ಇದೇನಾ ಮತದಾರರಿಗೆ ನೀವು ಕೊಡುವ ಗೌರವ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಸಚಿವ ಟಿ.ಜಾರ್ಜ್ ವಿರುದ್ಧ ಹರಿಹಾಯ್ದಿದ್ದಾರೆ. ಗೃಹಲಕ್ಷ್ಮಿ ಹಣ ಕೊಡಿ, ಅನ್ನಭಾಗ್ಯದ ಹಣ ಕೊಡಿ ಅಂತ
ನಾನಾ ಆಮಿಷವೊಡ್ಡಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ಮಾಜಿ ಪಿಡಿಒ ಬೆಂಗಳೂರು ಪೊಲೀಸ್ ಬಲೆಗೆ
ಸರ್ಕಾರಿ ಕೆಲಸ ಕೊಡಿಸುವ ಆಮಿಷ, ಚಿನ್ನದ ಉದ್ಯಮ ಹಾಗೂ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಎರಡು ಪಟ್ಟು ಲಾಭ ಮತ್ತಿತರ ಹೆಸರಿನಲ್ಲಿ ಹಣ ಪಡೆದು ಹಲವರಿಗೆ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ವಂಚಕನನ್ನು ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಪ್ ಕಾಫಿ ಬೆಲೆಯಲ್ಲಿ ಗ್ರಾಹಕರಿಗೆ 5 ರೂ. ಏರಿಕೆ ಬಿಸಿ
ಬೆಂಗಳೂರಿನಲ್ಲಿ ಇದೇ ತಿಂಗಳಿನ ಅಂತ್ಯಕ್ಕೆ ಹೋಟೆಲ್‌ಗಳಲ್ಲಿ ಕಾಫಿ ದರದಲ್ಲಿ 15% ಹೆಚ್ಚಳವಾಗಲಿದೆ. ಒಂದು ಕಪ್ ಕಾಫಿ ಬೆಲೆ 5 ರೂ. ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾಫಿ ಪುಡಿ ಬೆಲೆ ಏರಿಕೆ ಮತ್ತು ಹಾಲಿನ ದರ ಏರಿಕೆ ಕಾರಣ ಕಾಫಿ ದರ
ಕಾನೂನು ಪದವಿ ಪ್ರಶ್ನೆಪತ್ರಿಕೆ ಲೀಕ್: ಉಪಪ್ರಾಂಶುಪಾಲ ಸೇರಿ ಮೂವರು ಸೆರೆ
ಕಾನೂನು ಪದವಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕೋಲಾರದ ಬಸವ ಶ್ರೀ ಕಾನೂನು ವಿಶ್ವವಿದ್ಯಾಲಯದ ಉಪಪ್ರಾಂಶುಪಾಲ ಡಾ. ನಾಗರಾಜ್, ವರುಣ್ ಮತ್ತು ಜಗದೀಶ್ ಎಂಬವರನ್ನು ಬಂಧಿಸಿದ್ದಾರೆ. ಜನವರಿ 22ರಂದು ನಡೆಯಬೇಕಿದ್ದ ಕಾನೂನು ಪದವಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು.
ಹಕ್ಕಿ ಜ್ವರದ ಆತಂಕ: ರಾಜ್ಯದ ಗಡಿ ಭಾಗಗಳಲ್ಲಿ ಹೈ ಅಲರ್ಟ್
ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟಿದ್ದರೆ, ಆಂಧ್ರ, ತೆಲಂಗಾಣದಲ್ಲಿ ಎಚ್‌೫ಎನ್‌೧ ವೈರಸ್ ಸೋಂಕಿನಿಂದ ಕೋಳಿಗಳು ಸಾಯುತ್ತಿವೆ. ಹೀಗಾಗಿ ಕರ್ನಾಟಕದ ಗಡಿ
ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಕೊಂಬಿದೆಯೇ ಇಲ್ಲವೇ ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ: ಡಿಕೆ ಸುರೇಶ್
ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಕೊಂಬಿದೆಯೇ ಇಲ್ಲವೇ ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ ಎಂದು ಡಿ.ಕೆ ಸುರೇಶ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಕೊಂಬಿದೆಯಾ ಎಂಬ ರಾಜಣ್ಣ ಹೇಳಿಕೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಹೀಗೆ ಪ್ರತಿಕ್ರಿಯೆ ನೀಡಿದರು. ನಾಲ್ಕೈದು ಸಚಿವರು ಡಿ.ಕೆ.
ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನಕ್ಕೆ ಡಿಕೆ ಶಿವಕುಮಾರ್ ಮನವಿ
ಉದಯಪುರ (ರಾಜಸ್ಥಾನ): ಕೇಂದ್ರ ಸರಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ “2047ರಲ್ಲಿ ಭಾರತ ಜಲ ಸಮೃದ್ಧಿ ರಾಷ್ಟ್ರ” ಎಂಬ 2ನೇ ಅಖಿಲ
ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ
ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ . ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ವಿಧಾನಸೌಧದಲ್ಲಿ ಇಂದು




