Sunday, September 27, 2026
Menu

ತುರ್ತು ಸೇವೆಗೆ 450 ಹೊಸ ಅಂಬುಲೆನ್ಸ್, 3,500 ಹುದ್ದೆಗಳ ಭರ್ತಿಗೂ ಅನುಮತಿ: ಸಚಿವ ಖಾದರ್

ರಾಜ್ಯದ 60 ರಿಂದ 70 ವರ್ಷದ ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ರಕ್ಷಣೆ ಒದಗಿಸುವ ಉದ್ದೇಶದಿಂದ ‘ಸಂಧ್ಯಾ ಕಿರಣ’ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಸಚಿವ ಯು.ಟಿ. ಖಾದರ್  ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ತುರ್ತು ವೈದ್ಯಕೀಯ ಸೇವೆ ಬಲಪಡಿಸುವ ನಿಟ್ಟಿನಲ್ಲಿ ಹೊಸ ಅಂಬುಲೆನ್ಸ್‌ಗಳ ಸೇರ್ಪಡೆಗೂ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ 450 ಹೊಸ ಅಂಬುಲೆನ್ಸ್‌ಗಳನ್ನು ಒದಗಿಸಲಾಗಿದ್ದು, ಶೀಘ್ರದಲ್ಲೇ ಹೊಸ ವಾಹನಗಳು ಸೇವೆಗೆ ಬರಲಿವೆ. ಇದರಿಂದ ರಾಜ್ಯದಲ್ಲಿ 750ಕ್ಕೂ ಹೆಚ್ಚು

ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ: ಸಿಎಂ 

ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿಯ 3 ಉದ್ಯಾನ ನಿರ್ಮಾಣ ಮಾಡಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಲಾಲ್ ಬಾಗ್ ನಲ್ಲಿ ‘ಗಂಗ ಸಾಮ್ರಾಜ್ಯ ವೈಭವ’ ಪರಿಕಲ್ಪನೆಯಲ್ಲಿ ಆಯೋಜಿಸಲಾಗಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ  ಚಾಲನೆ ನೀಡಿ,

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘಕ್ಕೆ ಜಾಗ ನೀಡಲು ಬದ್ಧ: ಸಿಎಂ ಡಿಕೆ ಶಿವಕುಮಾರ್

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗೆ ಜಾಗ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಿಧಾನಸೌಧ ಸುತ್ತಮುತ್ತ ಜಾಗ ಹುಡುಕಬೇಕು, ಹೊರ ಭಾಗದಲ್ಲಾದರೆ ದೊಡ್ಡ ಜಾಗ ನೀಡಲು ಸಿದ್ಧ” ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಅಖಿಲ ಕರ್ನಾಟಕ ರಾಜ್ಯ

ಬಿಡದಿ ಟೌನ್‌ಶಿಪ್‌ ವಿರುದ್ಧ ಸದನದಲ್ಲಿ ಬಿಜೆಪಿ-ಜೆಡಿಎಸ್‌ ಒಂದಾಗಿ ಹೋರಾಟ: ಆರ್‌ ಅಶೋಕ

ರಿಯಲ್‌ ಎಸ್ಟೇಟ್‌ ಮಾಫಿಯಾಗಾಗಿ ನಡೆಯುತ್ತಿರುವ ಬಿಡದಿ ಟೌನ್‌ಶಿಪ್‌ ಯೋಜನೆಯ ವಿರುದ್ಧ ಬಿಜೆಪಿ-ಜೆಡಿಎಸ್‌ ಒಂದಾಗಿ ಹೋರಾಟ ನಡೆಸಲಿದೆ. ಸದನದ ಒಳಗೆ ಹಾಗೂ ಹೊರಗೆ ಒಟ್ಟಾಗಿ ಹೋರಾಟ ನಡೆಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ವಿರೋಧ

ಮೈಸೂರು ಮಹಿಳೆಯ ಮಂತ್ರದಂಡಕ್ಕೆ ಮರುಳಾಗಿ 31 ಲಕ್ಷ ರೂ. ಕಳಕೊಂಡ ಉದ್ಯಮಿ

ಪತ್ರಿಕೆಯೊಂದರಲ್ಲಿ “ನನ್ನ ಬಳಿ ಮಂತ್ರದಂಡ ಇದೆ, ನಿಮ್ಮನ್ನು ಕೋಟ್ಯಾಧಿಪತಿ ಮಾಡುತ್ತೇನೆ” ಎಂದು ಮೈಸೂರಿನ ಮಹಿಳೆ ನೀಡಿದ್ದ ಜಾಹೀರಾತು ನಂಬಿ ಆಸೆಗೆ ಬಿದ್ದ ಮಂಗಳೂರಿನ ಸುಶಿಕ್ಷಿತ ಉದ್ಯಮಿ 31 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮಂಗಳೂರಿನ ಕೃಷಿಕ ಹಾಗೂ ಸೆರಾಮಿಕ್ಸ್ ಕಂಪನಿ ಉದ್ಯೋಗಿ ಸೂರಜ್

ಆಡಳಿತ, ಕೌಶಲ್ಯಾಭಿವೃದ್ಧಿ ಮತ್ತು ಡೀಪ್ ಟೆಕ್: ಕರ್ನಾಟಕ ಮತ್ತು ಆಂಥ್ರೋಪಿಕ್ ಸಂಸ್ಥೆಗಳ ನಡುವೆ ಎಐ ಸಹಭಾಗಿತ್ವ

ಆಡಳಿತ, ಉನ್ನತ ಶಿಕ್ಷಣ, ಆರೋಗ್ಯ ರಕ್ಷಣೆ, ಸಂಶೋಧನೆ ಹಾಗೂ ರಾಜ್ಯದ ಸ್ಟಾರ್ಟ್‌ಅಪ್ ಪರಿಸರ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯ (ಎಐ) ಬಳಕೆ ಹೆಚ್ಚಿಸಲು ಸುದೀರ್ಘ ಸಹಭಾಗಿತ್ವ ಸಾಧಿಸುವ ಕುರಿತು ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್  ‘ಆಂಥ್ರೋಪಿಕ್’ ಸಂಸ್ಥೆಯ ನಿಯೋಗದೊಂದಿಗೆ ಚರ್ಚೆ ನಡೆಸಿದರು. ಕರ್ನಾಟಕದಲ್ಲಿ

ನುಡಿದಂತೆ ನಡೆಯುವ ನಿಮ್ಮ ಸರ್ಕಾರವನ್ನು ಕಾಪಾಡಿಕೊಳ್ಳಿ: ಅರ್ಚಕರಿಗೆ ಸಿಎಂ ಕರೆ

ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಬೇರೆ ಯಾವ ಸರ್ಕಾರಗಳು ಮಾಡದ ಕೆಲಸ ಮಾಡಿ ನಿಮ್ಮ ಹೃದಯ ಗೆದ್ದಿದ್ದೇವೆ. ನೀವುಗಳು ನಿಮ್ಮ ಮನೆ, ದೇವಾಲಯಗಳನ್ನು ಕಾಪಾಡಿಕೊಳ್ಳುವಂತೆ ನಿಮ್ಮ ಸರ್ಕಾರವನ್ನು ಕಾಪಾಡಿಕೊಳ್ಳಿ ಎಂದು ಸಿಎಂ ಡಿಕೆ ಶಿವಕುಮಾರ್ ಅರ್ಚಕರಿಗೆ ಕರೆ ನೀಡಿದರು. ಕರ್ನಾಟಕ ರಾಜ್ಯ

ಕೆಎಎಸ್ ಪರೀಕ್ಷೆಯಲ್ಲಿ ಅಕ್ರಮ ಆರೋಪ: 25 ಮಾರ್ಕ್ಸ್‌ಗೆ ಒಂದೂವರೆ ಕೋಟಿ ರೂ. ಬೇಡಿಕೆ

ಕೆಎಎಸ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದಾಗಿ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದೆ, 25 ಮಾರ್ಕ್ಸ್‌ಗೆ ಒಂದೂವರೆ ಕೋಟಿ ಹಣಕ್ಕೆ ಡಿಮ್ಯಾಂಡ್ ಮಾಡಿರುವುದಾಗಿ ಆರೋಪ ಕೇಳಿ ಬಂದಿದೆ. ಕೆಎಎಸ್ 384 ಹುದ್ದೆಗೆ ಹಣ ನೀಡಿರುವ ಅಭ್ಯರ್ಥಿ ಹೆಸರು ಸಮೇತ ಕಾಂತಕುಮಾರ್ ಎಂಬವರು ದೂರು ದಾಖಲಿಸಿದ್ದಾರೆ.

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿಕೆ ಶಿವಕುಮಾರ್

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ. ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಈ ಹಿಂದೆ ನಡೆದ ದಬ್ಬಾಳಿಕೆಗೆ ನಾವು ಅವಕಾಶ ನೀಡುವುದಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಬೆಂಗಳೂರಿನ ಕಾಟನ್ ಪೇಟೆಯಲ್ಲಿರುವ ಹಜ್ರತ್ ತವಕ್ಕಲ್ ಮಸ್ತಾನ್ ದರ್ಗಾದಲ್ಲಿ  ನಡೆದ

ಕೃಷಿ ಅಧಿಕಾರಿಗಳ ನೇಮಕ ಗೊಂದಲ ಬಗೆಹರಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ 

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಲಾದ ನಿಯಮಗಳ ತಿದ್ದುಪಡಿಯಿಂದಾಗಿ ಕೃಷಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಕಾನೂನಾತ್ಮಕವಾಗಿ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಸಿಎಂ ಡಿಕೆ ಶಿವಕುಮಾರ್ ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.