ರಾಜ್ಯ
ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೈದು ನದಿಗೆಸೆದಳು
ರಾಯಬಾಗ ತಾಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರಿಯಕರನ ಜೊತೆಗೆ ಸೇರಿಕೊಂಡು ಪತ್ನಿ ಕೊಲೆ ಮಾಡಿ ಕೃಷ್ಣಾ ನದಿಗೆ ಎಸೆದಿದ್ದಾಳೆ. ಬಸ್ತವಾಡ ಗ್ರಾಮದ ಅಪ್ಪಾಸಾಬ ಕೊಲೆಯಾ ಗಿದ್ದು, ಆರೋಪಿ ಪತ್ನಿ ಸಿದ್ದವ್ವ ಓಲೇಕಾರ್ ಮತ್ತು ಆಕೆಯ ಪ್ರಿಯಕರ ಗಣಪತಿ ಕಾಂಬಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಜ.5ರಂದು ಸುಗಂಧಾದೇವಿ ದರ್ಶನಕ್ಕೆ ಎಂದು ಅಪ್ಪಾಸಾಬ ಅವರನ್ನು ಕರೆದುಕೊಂಡು ಬಂದು ಕೃಷ್ಣಾ ನದಿ ದಂಡೆ ಮೇಲೆ ಸ್ನಾನ ಮಾಡುವಾಗ ಪತ್ನಿ ಸಿದ್ದವ್ವ ಮತ್ತು
ಪೊಲೀಸ್ ಠಾಣೆ ಮುಂದೆ ತಂದೆಯ ಶವವಿಟ್ಟು ಇನ್ಸ್ಪೆಕ್ಟರ್ ಪ್ರತಿಭಟನೆ
ಬೆಳಗಾವಿಯ ರಾಯಬಾಗ ತಾಲೂಕಿನ ಹಾರೂಗೇರಿಯಲ್ಲಿ ಪೊಲೀಸ್ ಠಾಣೆಯ ಎದರು ತಂದೆಯ ಶವವಿಟ್ಟು ಇನ್ಸ್ಪೆಕ್ಟರ್ ಪ್ರತಿಭಟನೆ ನಡೆಸಿದ್ದಾರೆ. ದೇವದುರ್ಗ ಠಾಣೆಯ ಇನ್ಸ್ಪೆಕ್ಟರ್ ಅಶೋಕ ಸದಲಗಿಯವರು ಹಾರೂಗೇರಿ ಠಾಣೆ ಪಿಎಸ್ಐ ಮಾಳಪ್ಪ ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಇನ್ಸ್ಪೆಕ್ಟರ್ ಅಶೋಕ ಸದಲಗಿ ತಂದೆ
ಸಚಿವ ಚೆಲುವರಾಯಸ್ವಾಮಿ ವಿರುದ್ಧ ಹರಿಹಾಯ್ದ ಆರ್. ಅಶೋಕ್
ಮಾಧ್ಯಮಗಳ ಮುಂದೆ ಬಾಯಿಗೆ ಬದಂತೆ ಬಡಬಡಾಯಿಸುವುದು ಬಿಟ್ಟು ತಮ್ಮ ಖಾತೆ ನಿರ್ವಹಣೆ ಬಗ್ಗೆ ಸ್ವಲ್ಪ ಗಮನ ಕೊಡಿ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ. ತಮ್ಮ ಖಾತೆ ಯಾವುದು ಎಂದು ತಮಗೆ ನೆನಪಿದೆಯೇ ಚಲುವರಾಯಸ್ವಾಮಿ ಅವರೇ?
ದೇಗುಲದ ಕಳಸಾರೋಹಣದಲ್ಲಿ ಕ್ರೇನ್ ಬಕೆಟ್ ಮುರಿದು ಒಬ್ಬನ ಸಾವು
ದೇವಾಲಯದ ಕಳಸಾರೋಹಣ ನಡೆಯುವಾಗ ದಿಢೀರ್ ಕ್ರೇನ್ ಬಕೆಟ್ ಕಟ್ ಆಗಿ ಬಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹಾನಗಲ್ ತಾಲೂಕಿನ ಶೇಷಗಿರಿ ಗ್ರಾಮದಲ್ಲಿ ಸಂಭವಿಸಿದೆ. ಕ್ರೇನ್ ಬಕೆಟ್ ಮೇಲಿನಿಂದ ಬಿದ್ದು ಸ್ಥಳದಲ್ಲೇ ಮಂಜು ಪಾಟೀಲ(42) ಮೃತಪಟ್ಟವರು. ಘಟನೆಯಲ್ಲಿ ಮಂಜು ಬಡಿಗೇರ್
ಯುವಕರ ಅಸಹಜ ಸಾವು: ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ
ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಯುವ ಸಮುದಾಯದ ಹಠಾತ್ ಸಾವು ಪ್ರಕರಣಗಳ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸಿಎಂ ಸಿದ್ದರಾಮಯ್ಯ ಶುಕ್ರವಾರ ಎಕ್ಸ್ ನಲ್ಲಿ ಟ್ವೀಟ್ ಮಾಡಿ ಈ ಮಾಹಿತಿ ಹಂಚಿಕೊಂಡಿದ್ದು, ಕೊವಿಡ್ ಅಥವಾ ಕೊವಿಡ್ ಲಸಿಕೆಯ
ಕುಂಭಮೇಳದಿಂದ ಹಿಂತಿರುಗುತ್ತಿದ್ದ ಬೆಳಗಾವಿಯ ನಾಲ್ವರು ಅಪಘಾತದಲ್ಲಿ ದುರ್ಮರಣ
ಉತ್ತರ ಪ್ರದೇಶದ ಕುಂಭಮೇಳದಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದಾಗ ಮಧ್ಯಪ್ರದೇಶದ ಇಂದೋರ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ಇಂದೋರ್ ನಲ್ಲಿ ಶುಕ್ರವಾರ ಬೆಳಗ್ಗೆ ದ್ವಿಚಕ್ರ ವಾಹನ, ಖಾಸಗಿ ಮಿನಿ ಬಸ್ ಮತ್ತು ಟ್ರೇಲರ್ ಟ್ರಕ್
ಸಿಎಂ ವಿರುದ್ದದ ರಾಜಕೀಯ ಷಡ್ಯಂತ್ರಕ್ಕೆ ಸೋಲು: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು: ಮೂಡಾ ಎಂಬ ಸುಳ್ಳು ಪ್ರಕರಣವನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯನವರ ಹೆಸರಿಗೆ ಮಸಿ ಬಳಿಯುವ ಹಾಗೂ ಜನಪರ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ವಿರೋಧ ಪಕ್ಷಗಳ ರಾಜಕೀಯ ಷಡ್ಯಂತ್ರಕ್ಕೆ ಸೋಲಾಗಿದೆ. ಲೋಕಾಯುಕ್ತ ಸಂಸ್ಥೆ ಕಾನೂನು ಬದ್ದವಾಗಿ ತನಿಖೆ ನಡೆಸಲಿದ್ದು ಸದ್ಯದಲ್ಲೇ ಸತ್ಯ
ಮೈಕ್ರೊ ಫೈನಾನ್ಸ್ ಗೆ ಕಡಿವಾಣ ಹಾಕುವ ಸುಗ್ರಿವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲ!
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಯನ್ನು ತಡೆಗಟ್ಟುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ. ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ
ದೇಶ, ಧರ್ಮ ಯಾವುದೇ ಆದರೂ ಮಾನವೀಯತೆ ಮುಖ್ಯ: ಡಿಕೆ ಶಿವಕುಮಾರ್
ಬೆಂಗಳೂರು: ದೇಶ, ಧರ್ಮ ಯಾವುದೇ ಆಗಿರಲಿ ಮಾನವೀಯತೆ ಮುಖ್ಯ. ಸರಪಳಿ ಕಟ್ಟಿ ನಡೆಸಿಕೊಳ್ಳುವುದು ಸರಿಯಲ್ಲ. ಇದು ಖಂಡನೀಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕನಕಪುರದಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಕ್ರಮವಾಗಿ ನೆಲೆಸಿದ್ದಾರೆ ಎಂದು ಕೆಲವು ಭಾರತೀಯರನ್ನು ಅಮೆರಿಕ ಸರ್ಕಾರ ಕೈ
ಬಿಎಸ್‌ವೈಗೆ ನಿರೀಕ್ಷಣಾ ಜಾಮೀನು, ಪೋಕ್ಸೋ ಪ್ರಕರಣ ರದ್ದು ಇಲ್ಲ: ಹೈಕೋರ್ಟ್
ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿ ಪ್ರಕರಣ ರದ್ದು ಮಾಡಲು ನಿರಾಕರಿಸಿದೆ. ಇದರಿಂದ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ ಅಷ್ಟೇ. ಆದ್ರೆ ಕಷ್ಟ ತಪ್ಪಿಲ್ಲ.




