ರಾಜ್ಯ
ಮುಡಾ ಹಗರಣ ಸಿಬಿಐಗಿಲ್ಲ: ಸಿದ್ದರಾಮಯ್ಯಗೆ ರಿಲೀಫ್ ನೀಡಿದ ಹೈಕೋರ್ಟ್
ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ಪಕ್ಷಪಾತದಿಂದ ಕೂಡಿದೆ ಎಂಬುದಕ್ಕೆ ಆಧಾರಗಳಿಲ್ಲ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಹೇಳಿದ್ದು ಪ್ರಕರಣವನ್ನು ಸಿಬಿಐಗೆ ನೀಡಲು ನಿರಾಕರಿಸಿ ಆದೇಶ ಹೊರಡಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ ಆರ್. ಅಶೋಕ್ ಸಾಂತ್ವನ
ಮೈಕ್ರೋ ಫೈನಾನ್ಸ್ ಹಾವಳಿಯಿಂದ ಕೊನ್ನಾಪುರದಲ್ಲಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸ್ಥಳಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. 2018ರಲ್ಲಿ ಉಜ್ಜೀವನ್ ಬ್ಯಾಂಕ್ ನಲ್ಲಿ ಪ್ರೇಮಾ ಎಂಬವರು 6 ಲಕ್ಷ ರೂ. ಸಾಲ ಪಡೆದಿದ್ದು,
ಕುಮಾರಸ್ವಾಮಿ ಕುಟುಂಬದ ಅತಿಕ್ರಮಿತ ಭೂಮಿ ಮರಳಿಸಲು ಕೋರ್ಟ್ ಮೊರೆ: ಎಸ್.ಆರ್. ಹೀರೇಮಠ
ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಕೇತನಾಗನಹಳ್ಳಿಯಲ್ಲಿ 71.39 ಎಕರೆ ಗೋಮಾಳ ಜಮೀನನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಸಾವಿತ್ರಮ್ಮ, ಮಂಜುನಾಥ, ಡಿ.ಸಿ.ತಮ್ಮಣ್ಣ ಹಾಗೂ ಕುಟುಂಬದವರು ಅತಿಕ್ರಮಣ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಎಸ್. ಆರ್. ಹಿರೇಮಠ ಹೇಳಿದರು ನಗರದ
ಕರ್ನಾಟಕದಲ್ಲಿ ಅತ್ಯಂತ ಭ್ರಷ್ಟ ಸರಕಾರ ಇದೆ: ರಾಜ್ಯಸಭೆಯಲ್ಲಿ ಗುಡುಗಿದ ಹೆಚ್.ಡಿ.ದೇವೇಗೌಡ
ನವದೆಹಲಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು; ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಅವರು ಮಾತನಾಡಿದರು. ಲೋಕಸಭೆಯಲ್ಲಿ ಬಿಜೆಪಿಗೆ
ಬ್ಯಾಂಕ್ ಗೆ ವಂಚನೆ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ 3 ವರ್ಷ ಶಿಕ್ಷೆ!
ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರಿಗೆ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ಗೆ ವಂಚಿಸಿದ ಪ್ರಕರಣದಲ್ಲಿ ತಲಾ 3 ವರ್ಷ ಶಿಕ್ಷೆ ಹಾಗೂ 7.75 ಲಕ್ಷ ರೂ. ದಂಡ ವಿಧಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ
ಆದಾಯಕ್ಕಿಂತ ಹೆಚ್ಚು ಆಸ್ತಿ ಜನಪ್ರತಿನಿಧಿಗಳ ವಿಚಾರಣೆ ಲೋಕಾಗೆ ನಿರ್ದೇಶನ: ಅರ್ಜಿ ವಜಾ
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಜನಪ್ರತಿನಿಧಿಗಳ ಆಸ್ತಿಗಳು ಮತ್ತು ಅದಕ್ಕೆ ಸಂಬಂಧಿಸಿದ ಮೂಲಗಳ ಕುರಿತು ಲೋಕಾಯುಕ್ತ ಸಂಸ್ಥೆಯಿಂದ ವಿಚಾರಣೆ ನಡೆಸುವುದಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರು ಹಾಗೂ ಸಂಸದರ
ಕುಮಾರಸ್ವಾಮಿ ಮೊದಲು ಮೇಕೆದಾಟಿಗೆ ಅನುಮತಿ ಕೊಡಿಸಲಿ: ಡಿಕೆ ಶಿವಕುಮಾರ್
ಬೆಂಗಳೂರು: ಮೇಕೆದಾಟು ಅಣೆಕಟ್ಟಿಗೆ ಅನುಮತಿಯನ್ನು ಒಂದೇ ದಿನದಲ್ಲಿ ಕೊಡಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರಲ್ಲ, ಮೊದಲು ಈ ಕೆಲಸವನ್ನು ಮಾಡಲಿ, ಆಮೇಲೆ ಮಾತಾಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದ
ಕನಿಷ್ಠ 6 ಲಕ್ಷ ಕ್ವಿಂಟಾಲ್ ಬೀಜೋತ್ಪಾದನೆ ಸಿದ್ದತೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸೂಚನೆ
ಬೆಂಗಳೂರು: ಕರ್ನಾಟಕ ರಾಜ್ಯದ ಬೀಜ ನಿಗಮದ ವತಿಯಿಂದ 2025-26ನೇ ಸಾಲಿಗೆ 6 ಲಕ್ಷ ಕ್ವಿಂಟಾಲ್ ಬೀಜೋತ್ಪಾದನೆ ಗುರಿ ಇರಿಸಿ ಅದರ ಸಾಧನೆಗೆ ಸಿದ್ದತೆ ನಡೆಸುವಂತೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ. ವಿಕಾಸ ಸೌಧದ ತಮ್ಮ ಕಚೇರಿಯಲ್ಲಿ ಕರ್ನಾಟಕ ರಾಜ್ಯ
ಇಷ್ಟೊಂದು ಭಿನ್ನಾಭಿಪ್ರಾಯ ಇದೆ ಅಂತ ಗೊತ್ತಿರಲಿಲ್ಲ: ವಿಜಯೇಂದ್ರ
ಪಕ್ಷಕ್ಕಾಗಿ ಹಗಲಿರುಳು ದುಡಿದು ಪಕ್ಷವನ್ನು ಕಟ್ಟಿದ ಯಡಿಯೂರಪ್ಪ ಅವರನ್ನು ತೇಜೋವಧೆ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಗುಡುಗಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು ನನ್ನ ವಿರುದ್ಧ ಬಂಡಾಯ ಘೋಷಿಸಿರುವ ಮುಖಂಡರು ಹೈಕಮಾಂಡ್ ಭೇಟಿ
ಜಾಗತಿಕ ಹೂಡಿಕೆದಾರರ ಸಮಾವೇಶ: ಗ್ರೀಸ್ ಮಾಜಿ ಪ್ರಧಾನಿ ಸೇರಿ 75 ಪ್ರಮುಖ ಸಾಧಕರು ಭಾಗಿ
ಬೆಂಗಳೂರು: ಇದೇ 11ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಶಿ ತರೂರ್, ಆನಂದ್ ಮಹೀಂದ್ರ, ಕಿರಣ್ ಮಜುಂದಾರ್ ಷಾ, ಪ್ರಶಾಂತ್ ಪ್ರಕಾಶ್, ಗ್ರೀಸ್ ಮಾಜಿ ಪ್ರಧಾನಿ ಜಾರ್ಜ್ ಪಪಾಂಡ್ರಿಯೂ, ವೋಲ್ವೊ ಸಮೂಹದ ಅಧ್ಯಕ್ಷ ಮಾರ್ಟಿನ್ ಲುಂಡ್ ಸ್ಟೆಡ್ ಸೇರಿದಂತೆ




