ರಾಜ್ಯ
ನಟ ಡಾಲಿಗಾಗಿ ಮುಗಿ ಬಿದ್ದ ಅಭಿಮಾನಿಗಳಿಗೆ ಲಾಠಿ ರುಚಿ
ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಭಾಗವಹಿಸಲು ನಟ ಡಾಲಿ ಧನಂಜಯ ಆಗಮಿಸಿದ್ದರು. ಈ ವೇಳೆ ಧನಂಜಯ ಅವರನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದಾರೆ. ಡಾಲಿ ಜೊತೆ ಸೆಲ್ಫಿ ಬೇಕು ಎಂದು ಫ್ಯಾನ್ಸ್ ಮುಗಿ ಬಿದ್ದಿದ್ದಾರೆ, ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿ ಬೀಸಿ ಜನ ದಟ್ಟಣೆ ನಿಯಂತ್ರಿಸುವ ಪ್ರಯತ್ನ ಮಾಡಿದ್ದಾರೆ. ಭರಮಸಾಗರದಲ್ಲಿ ಫೆ. 4ರಿಂದ ಆರಂಭಗೊಂಡಿದ್ದು, 12ರವರೆಗೆ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆಯಲಿದೆ. ಪ್ರತಿ ವರ್ಷದಂತೆ ಈ ವರ್ಷವೂ
ಬಿಎಂಟಿಸಿ ಟಿಕೆಟ್ ರೋಲ್ ಕದ್ದು ತರಕಾರಿ ಅಂಗಡಿಗೆ ಮಾರಾಟ
ಬಿಎಂಟಿಸಿ ಎಲೆಕ್ಟ್ರಿಕ್ ಬಸ್ನ ಪೇಪರ್ ಟಿಕೆಟ್ ರೋಲ್ ಹಣ್ಣು ಹಾಗೂ ತರಕಾರಿ ಅಂಗಡಿಯಲ್ಲಿ ಗ್ರಾಹಕರಿಗೆ ಬಿಲ್ ಕೊಡಲು ಬಳಕೆಯಾಗುತ್ತಿದೆ. ಯಲಹಂಕದ ಅಟ್ಟೂರು ಲೇಔಟ್ನ ಎಸ್ಆರ್ಎಸ್ ತರಕಾರಿ ಹಾಗೂ ಹಣ್ಣು ವ್ಯಾಪಾರಿ ಮಳಿಗೆಯಲ್ಲಿ ಟಿಕೆಟ್ ರೋಲ್ ಉಪಯೋಗಿಸಿ ತರಕಾರಿ ಹಾಗೂ ಹಣ್ಣಿನ ರೇಟ್
ಶಿಕ್ಷಕರ ನೇಮಕದ ಬದಲು ಶಾಲೆಗಳನ್ನೇ ಮುಚ್ಚಲು ಹೊರಟ ಸರ್ಕಾರದ ವಿರುದ್ಧ ಆಕ್ರೋಶ
ಕರ್ನಾಟಕದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದೆ. ಶಿಕ್ಷಕರ ನೇಮಕ ಮಾಡಿಕೊಳ್ಳುವ ಬದಲಿಗೆ ಕಡಿಮೆ ಹಾಜರಾತಿ ನೆಪದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿದೆ ಎಂದು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿದ್ದು, ಪ್ರತಿಭಟನೆ ಮೂಲಕ
ನಿಗಮಗಳಿಗೆ 5,000 ಕೋಟಿ ರೂ. ಅನುದಾನ ನೀಡಿ, ಜನರಿಗೆ ಸಾಲ ಕೊಡಿ: ಆರ್.ಅಶೋಕ
ಕಾಂಗ್ರೆಸ್ ಸರ್ಕಾರದಿಂದಾಗಿ ಕರ್ನಾಟಕ ಸೂತಕದ ಮನೆಯಾಗಿದೆ. ಆರ್ಥಿಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಜನರು ದಾರಿ ಕಾಣದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುರ್ತಾಗಿ ನಿಗಮಗಳಿಗೆ 5,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ,
ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆಗೈದು ನಾಪತ್ತೆ ಪ್ರಕರಣ ದಾಖಲಿಸಿದಾಕೆ ಪೊಲೀಸ್ ಬಲೆಗೆ
ಚಾಮರಾಜನಗರ ತಾಲೂಕಿನ ಜನ್ನೂರು ಗ್ರಾಮದಲ್ಲಿ ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ ಮಾಡಿ ಶವವನ್ನು ಬಿಸಾಡಿ ಪತಿ ನಾಪತ್ತೆ ಎಂದು ನಾಟಕವಾಡಿರುವ ಪ್ರಕರಣವೊಂದು ಬಯಲಾಗಿದೆ. ಜನ್ನೂರು ಗ್ರಾಮದ ರಮೇಶ್ (45) ಕೊಲೆಯಾದವರು, ಪತ್ನಿ ಗೀತಾ ಹಾಗೂ ಪ್ರಿಯಕರ ಗುರುಪಾದಸ್ವಾಮಿ ಬಂಧಿತ ಆರೋಪಿಗಳು. ದಂಪತಿಗೆ
ಕರ್ನಾಟಕ ದಿವಾಳಿ ಮಾಡುವುದೇ ಕಾಂಗ್ರೆಸ್ ಸರ್ಕಾರದ ಅಜೆಂಡಾ: ಆರ್. ಅಶೋಕ್
ಕರ್ನಾಟಕವನ್ನು ಸಂಪೂರ್ಣ ದಿವಾಳಿ ಮಾಡಬೇಕೆಂಬುದೇ ಈ ಕಾಂಗ್ರೆಸ್ ಸರ್ಕಾರದ ಒನ್ ಲೈನ್ ಅಜೆಂಡಾ, ಸಾಲ ಮಾಡುವುದನ್ನೇ ಫುಲ್ ಟೈಂ ಕಾಯಕ ವನ್ನಾಗಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಪ್ರಸ್ತುತ ಕರ್ನಾಟಕದ ಒಟ್ಟು ಸಾಲವನ್ನು 6 ಲಕ್ಷ 65 ಸಾವಿರ ಕೋಟಿಗೆ ಮುಟ್ಟಿಸಿದ್ದಾರೆ. ಪ್ರತಿ ಕನ್ನಡಿಗನ
ಕರ್ನಾಟಕ ಮಾಹಿತಿ ಆಯೋಗಕ್ಕೆ ನೇಮಕ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ
ಮುಖ್ಯ ಮಾಹಿತಿ ಆಯುಕ್ತ ಸೇರಿದಂತೆ ಎಂಟು ಮಂದಿ ಆಯುಕ್ತರನ್ನು ಕರ್ನಾಟಕ ಮಾಹಿತಿ ಆಯೋಗಕ್ಕೆ ನೇಮಕ ಮಾಡಿ ಸರಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಸುಪ್ರೀಂಕೋರ್ಟ್ ಆದೇಶ ಪಾಲಿಸದೆ ಈ ನೇಮಕ ನಡೆದಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಜೆ.ಪಿ.ನಗರದ ಕೆ.ಮಲ್ಲಿಕಾರ್ಜುನರಾಜು
ಬ್ಯಾಂಕ್ ಸಹಾಯವಾಣಿ ಹೆಸರಲ್ಲಿ ಬೆಂಗಳೂರಿನ ಮಹಿಳೆಗೆ 2 ಲಕ್ಷ ರೂ. ನಾಮ
ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಯೊಬ್ಬರಿಗೆ 2 ಲಕ್ಷ ರೂ. ವಂಚಿಸಿರುವ ಪ್ರಕರಣ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ 58 ವರ್ಷದ ಮಹಿಳೆಯೊಬ್ಬರಿಗೆ ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ವಂಚಕ ಕರೆ ಮಾಡಿ, ನಿಮ್ಮ ಖಾತೆಯಿಂದ ಬೇರೆ ಖಾತೆಗೆ
ಚಿಕ್ಕಮಗಳೂರಿನಲ್ಲಿ ಹೆಚ್ಚುತ್ತಿದೆ ಮಂಗನಕಾಯಿಲೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ 7 ಜನರಲ್ಲಿ ಮಂಗನ ಕಾಯಿಲೆ ಕಾಣಸಿಕೊಂಡಿದ್ದು ಆತಂಕ ಸೃಷ್ಟಿಯಾಗಿದೆ. ಖಾಂಡ್ಯ ಹೋಬಳಿಯ ಮತ್ತಿಖಂಡ ಗ್ರಾಮದ 25 ವರ್ಷದ ಯುವಕನಲ್ಲಿ ಮೊದಲು ಈ ಕಾಯಿಲೆ ಕಾಣಿಸಿಕೊಂಡಿತ್ತು. ಈಗ ಎನ್ಆರ್ ಪುರ ಗ್ರಾಮದ ಮೇಲ್ಪಾಲ್ ಗ್ರಾಮದಲ್ಲಿ ಮೂರು ಜನರಲ್ಲಿ ಕೆಎಫ್ಡಿ ಕಾಣಿಸಿಕೊಂಡಿದ್ದು,
ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಕಲ ಸಿದ್ಧತೆ: 18 ದೇಶ ಭಾಗಿ, 10 ಲಕ್ಷ ಕೋಟಿ ರೂ. ಬಂಡವಾಳ ನಿರೀಕ್ಷೆ
ಬೆಂಗಳೂರು: ಇದೇ ತಿಂಗಳ 12ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಕಲ ಸಿದ್ಧತೆಗಳೂ ಮುಗಿದಿದ್ದು, 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯನ್ನು ರಾಜ್ಯಕ್ಕೆ ಆಕರ್ಷಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಫೆ.11ರ ಸಂಜೆಯೇ ಸಮಾವೇಶವನ್ನು ಉದ್ಘಾಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ




