Menu

ಕೃಷ್ಣ ಮೇಲ್ದಂಡೆ 3ನೇ ಹಂತದ ಯೋಜನೆಗೆ ಅಧಿಸೂಚನೆ ಹೊರಡಿಸಲು ಕೇಂದ್ರದ ಮೇಲೆ ಒತ್ತಡ ಹಾಕಿ: ಡಿಕೆ ಶಿವಕುಮಾರ್

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತ ಅನುಷ್ಠಾನಕ್ಕೆ ಬಜೆಟ್ ಅಲ್ಲಿ ನಮ್ಮ ಸರ್ಕಾರ ಬದ್ದತೆ ತೋರಿಸಿದೆ. ಈ ಬಗ್ಗೆ ನಾನು ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಿದ್ದೇನೆ. ಬಿಜೆಪಿಯ ಸದಸ್ಯರು ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಯೋಜನೆಗೆ ಅಧಿಸೂಚನೆ ಹೊರಡಿಸಿದರೆ ಎಲ್ಲರೂ ಸೇರಿ ಯೋಜನೆ ಪೂರ್ಣಗೊಳಿಸಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಪ್ರಶ್ನೋತ್ತರ ಕಲಾಪದ ವೇಳೆ ವಿಧಾನಪರಿಷತ್ ಸದಸ್ಯ ಪಿ.ಎಚ್.ಪೂಜಾರ್  ಹಾಗೂ ಹನುಮಂತ ನಿರಾಣಿ, ಆಲಮಟ್ಟಿ

ಅನಧಿಕೃತ ಮರಳು ಸಾಗಾಟ: 7629 ಎಫ್ಐಆರ್ ದಾಖಲು 40 ಕೋಟಿ ದಂಡ

ಬೆಂಗಳೂರು:ಅನಧಿಕೃತವಾಗಿ ಮರಳು ಸಾಗಾಣಿಕೆ ತಡೆಯಲು ಕಾರ್ಯಪ್ರವೃತ್ತರಾಗಿದ್ದು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಟಾಸ್ಕ್ ಪೋರ್ಸ್ ಮರಳು ಸಮಿತಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು ಕಳೆದ ಐದು ವರ್ಷಗಳಲ್ಲಿ 47 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದರು. ವಿಧಾನಪರಿಷತ್ ನ

ನೀವು ಹೊಗಳೋ ಮೋದಿ ಎಷ್ಟು ಸಾಲ ಮಾಡಿದ್ದಾರೆ ಗೊತ್ತಾ? ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ನೀವು ಮೋದಿ ಮೋದಿ ಅಂತ ಹೊಗಳ್ತಿರಲ್ಲ, ನಿಮ್ಮ ಮೋದಿ ಎಷ್ಟು ಸಾಲ ಮಾಡಿದ್ದಾರೆ ಗೊತ್ತಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷ ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಬಜೆಟ್ ಮೇಲೆ ಗುರುವಾರ ನಡೆದ ಚರ್ಚೆಯಲ್ಲಿ ಬಜೆಟ್ ಸಾಲದ ಕುರಿತು ಪ್ರಶ್ನಿಸಿದ ಬಿಜೆಪಿ ಸದಸ್ಯರಿಗೆ

ಕೆಎಎಸ್ ಮರುಪರೀಕ್ಷೆ ಇಲ್ಲವೆಂದು ಸಿಎಂ ಸ್ಪಷ್ಟನೆ

ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿನ ಭಾಷಾಂತರಕ್ಕೆ ಸಂಬಂಧಿಸಿದ ಅಧ್ವಾನ ವಿಚಾರ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ (ಕೆಎಟಿ) ವಿಚಾರಣೆಯಲ್ಲಿದೆ. ಈ ಹಂತದಲ್ಲಿ ಮರುಪರೀಕ್ಷೆಗೆ ಸೂಚನೆ ನೀಡಲು ಆಗುವುದಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯ ಉಭಯ ಸದನಗಳಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ನಿಯಮ 69

ಮಹದೇವಪುರದಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ, ಆರು ಮಂದಿಗೆ ಗಾಯ

ಬೆಂಗಳೂರು ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮಹದೇವಪುರದ ನಾಗಪ್ಪ ರೆಡ್ಡಿ ಬ್ಲಾಕ್ ನಲ್ಲಿ ಗುರುವಾರ ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್‌ ಸ್ಫೋಟಗೊಂಡು ಮನೆಯಲ್ಲಿದ್ದ ಆರು ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಛಿದ್ರಗೊಂಡು ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿವೆ.  ನೀರು ಕಾಯಿಸಲು ಸಿಲಿಂಡರ್

ಚಾಮರಾಜಪೇಟೆಯಲ್ಲಿ  ವಿದ್ಯುತ್‌ ತಗುಲಿ ಮಹಿಳೆ ಸಾವು, ಸ್ಥಳೀಯರ ಪ್ರತಿಭಟನೆ

ಬೆಂಗಳೂರಿನ ಚಾಮರಾಜಪೇಟೆ ವ್ಯಾಪ್ತಿಯ ಆನಂದಪುರದಲ್ಲಿ ನೀರು ಹಿಡಿಯುವಾಗ ವಿದ್ಯುತ್‌ ಶಾಕ್ ಹೊಡೆದು ಮಹಿಳೆ ಮೃತಪಟ್ಟಿದ್ದಾರೆ. ಸೆಲ್ವಿ ಮೃತ ಮಹಿಳೆ. ಕೆ.ಆರ್‌. ಮಾರ್ಕೆಟ್‌ ರಸ್ತೆಯ ಈ ಪ್ರದೇಶದಲ್ಲಿ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ದೊಡ್ಡ ಪೈಪ್‌ನಲ್ಲಿ ಅಲ್ಲಲ್ಲಿ ಮೋಟಾರ್‌ ಸಂಪರ್ಕ ನೀಡಲಾಗಿದೆ.

ಕಾಮಗಾರಿಗಳಲ್ಲಿ ಭ್ರಷ್ಟಾಚಾರ: ಸಿಎಂಗೆ ವರದಿ ಸಲ್ಲಿಸಿದ ನಾಗಮೋಹನ್ ದಾಸ್ ಆಯೋಗ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ ಆರೋಪಗಳು ಹಾಗೂ ನಾರಾಯಣಪುರ ಬಲದಂಡೆ ಸೀಳು ಕಾಲುವೆಗಳ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳ ಕುರಿತು ನಿವೃತ್ತ ನ್ಯಾ. ಹೆಚ್.ಎನ್ ನಾಗಮೋಹನ್ ದಾಸ್ ಆಯೋಗವು ನಡೆಸಿದ ತನಿಖೆಯ ವರದಿಯನ್ನು ಮುಖ್ಯಮಂತ್ರಿ

ವಿಧಾನ ಪರಿಷತ್ತಿನಲ್ಲೂ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅಂಗೀಕಾರ

ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ಕ್ಕೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ದೊರೆತಿದೆ. ವಿಧಾನಸಭೆಯಲ್ಲಿ ಅಂಗೀಕೃತವಾದ ರೂಪದಲ್ಲಿರುವ ʼಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ʼ ಅನ್ನು ಬೆಂಗಳೂರು

ಜಮಖಂಡಿಯಲ್ಲಿ ಗರ್ಭದಲ್ಲೇ ಶಿಶು ಸಾವು: ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬ ಆಕ್ರೋಶ

ಬಾಗಲಕೋಟೆಯ ಜಮಖಂಡಿಯಲ್ಲಿರುವ ತಾಯಿ-ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭದಲ್ಲೇ ಶಿಶು ಮೃತಪಟ್ಟಿದ್ದು, ಇದಕ್ಕೆ ವೈದ್ಯರ ಬೇಜವಾಬ್ದಾರಿಯೇ ಕಾರಣವೆಂದು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. ಜಮಖಂಡಿಯ ಚೌಡಯ್ಯ ನಗರದ ನಿವಾಸಿ.ಶಿವಪ್ಪ ರೇವಣಸಿದ್ದಪ್ಪ ಬೋವಿ ಅವರ ಪತ್ನಿ ಇಂದ್ರಾ ಅವರ ಗರ್ಭದಲ್ಲೇ ಮಗು ಮೃತಪಟ್ಟಿದೆ. ಇಂದ್ರಾ ಅವರನ್ನು

ಸಾರಿಗೆ ನಿಗಮಗಳಿಗೆ 5 ವರ್ಷಗಳಲ್ಲಿ 5,200 ಕೋಟಿ ನಷ್ಟ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ತೈಲಬೆಲೆ ಏರಿಕೆ, ಸಿಬ್ಬಂದಿ ವೇತನ ಸೇರಿದಂತೆ ಆರ್ಥಿಕ ಸೌಲಭ್ಯ ನಿರ್ವಹಣೆಯಿಂದಾಗಿ ಕಳೆದ ಐದು ವರ್ಷಗಳಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಅಧೀನದಲ್ಲಿರುವ ನಾಲ್ಕು ಸಾರಿಗೆ ನಿಗಮಗಳಿಗೆ 5,200 ಕೋಟಿ ನಷ್ಟವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಪರಿಷತ್ ನ ಪ್ರಶ್ನೋತ್ತರ