Menu

ರಾಜ್ಯದಿಂದ ಕೇಂದ್ರಕ್ಕೆ100 ರೂ. , ವಾಪಸ್‌ 13 ರೂ. ಮಾತ್ರ: ಆದರೂ ತುಟಿ ಬಿಚ್ಚದ ಬಿಜೆಪಿ ಸಂಸದರ ವಿರುದ್ಧ ಡಿಕೆ ಶಿವಕುಮಾರ್‌ ಆಕ್ರೋಶ

ಕರ್ನಾಟಕದವರು ಕೇಂದ್ರಕ್ಕೆ 100 ರೂಪಾಯಿ ಕೊಟ್ಟರೆ ನಮಗೆ ಮರಳಿ ಬರುತ್ತಿರುವುದು ಕೇವಲ 13 ರೂಪಾಯಿ ಮಾತ್ರ.  ಕಾಂಗ್ರೆಸ್ ಸರ್ಕಾರ ಇದ್ದಾಗ 450 ರೂ. ಇದ್ದ ಅಡುಗೆ ಸಿಲಿಂಡರ್ ಬೆಲೆ ಈಗ 1 ಸಾವಿರ ಮುಟ್ಟಿದೆ. ಇದೇ ಕೇಂದ್ರದ ಸಾಧನೆ.ಆದರೆ ಒಬ್ಬನೇ ಒಬ್ಬ ಬಿಜೆಪಿ ಸಂಸದ ಇದರ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಅವರಿಗೆ ರಾಜ್ಯದ ಬಡ ಜನರ ಬಗ್ಗೆ ಕಾಳಜಿಯಿಲ್ಲ, ಹತ್ತು ರೂಪಾಯಿ ಬಿಚ್ಚುತ್ತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ

ಯುಪಿಐ ವಿಚಾರದಲ್ಲಿ ಲಂಚ ಬೇಡಿಕೆ: ದೂರು ನೀಡಲು ವರ್ತಕರಿಗೆ ವಾಣಿಜ್ಯ ತೆರಿಗೆ ಇಲಾಖೆ ಸಲಹೆ

ಯುಪಿಐ ವಿಚಾರಕ್ಕೆ ಸಂಬಂಧಿಸಿದಂತೆ ವಾಣಿಜ್ಯ ತೆರಿಗೆ ಅಧಿಕಾರಿಗಳು ಅಥವಾ ಸಿಬ್ಬಂದಿ ಲಂಚಕ್ಕಾಗಿ ಒಂದು ವೇಳೆ ಬೇಡಿಕೆ ಇಟ್ಟರೆ ಕೂಡಲೇ ವಾಣಿಜ್ಯ ತೆರಿಗೆ ಇಲಾಖೆಯ ಗಮನಕ್ಕೆ ತರಲು ಸಹಾಯವಾಣಿ ದೂರವಾಣಿ ಸಂಖ್ಯೆ: 1800 425 6300 (ಸಮಯ ಬೆಳಿಗ್ಗೆ 8.00 ಗಂಟೆಯಿಂದ ರಾತ್ರಿ

ಆಫ್ರಿಕಾದಲ್ಲಿ ಭಾರತದ ಮೊದಲ ಸರ್ಕಾರಿ ಕೌಶಲ್ಯ ಪಾಲುದಾರಿಕೆ

ಭಾರತ-ಆಫ್ರಿಕಾ ನಡುವಿನ ಮಹತ್ವದ ಸಹಕಾರದಲ್ಲಿ ಹೆಗ್ಗುರುತು ಮೂಡಿದೆ. ಕರ್ನಾಟಕದ ಸರ್ಕಾರಿ ಸ್ವಾಮ್ಯದ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರವನ್ನು (GTTC) ನಮೀಬಿಯಾ ಈಗ ತನ್ನ ತಾಂತ್ರಿಕ ಜ್ಞಾನ ಮತ್ತು ವೃತ್ತಿಪರ ತರಬೇತಿ ಪಾಲುದಾರನಾಗಿ ಆಯ್ಕೆ ಮಾಡಿದೆ. ಆಫ್ರಿಕಾದ ನೆಲದಲ್ಲಿ ಭಾರತೀಯ ಸರ್ಕಾರಿ

ಧರ್ಮಸ್ಥಳದಲ್ಲಿ ಸಾಮೂಹಿಕ ಸಮಾಧಿ ಪ್ರಕರಣ: ತನಿಖೆಗೆ ಎಸ್‌ಐಟಿ ರಚನೆ

ಧರ್ಮಸ್ಥಳದಲ್ಲಿ ಮಹಿಳೆಯರು ಮತ್ತು ಪುರುಷರ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಪತ್ರವನ್ನು ಸರ್ಕಾರ ಪರಿಗಣಿಸುವ ಮೂಲಕ ತನಿಖೆಗಾಗಿ ಎಸ್‌ಐಟಿ ರಚಿಸಿದೆ. ಎಸ್ಐಟಿ ಸದಸ್ಯರಾಗಿ ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾರ್ ಕೂಡ ಇದ್ದಾರೆ. ಈ ವಿಶೇಷ

ತಾಂತ್ರಿಕ ಸಮಿತಿ ವರದಿ ಬಂದ ಬಳಿಕ ಅಣೆಕಟ್ಟೆಗಳ ಸುರಕ್ಷತೆಗೆ ಅಗತ್ಯ ಕಾಮಗಾರಿ: ಡಿಕೆ ಶಿವಕುಮಾರ್

ರಾಜ್ಯದ ಅಣೆಕಟ್ಟೆಗಳ ಸುರಕ್ಷತೆ ಕುರಿತು ಸರ್ಕಾರ ತಾಂತ್ರಿಕ ಸಮಿತಿ ರಚಿಸಿದ್ದು, ಈ ಸಮಿತಿ ವರದಿ ಬಂದ ನಂತರ ಅಗತ್ಯ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಕಬಿನಿ ಅಣೆಕಟ್ಟಿನ ಬಳಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿಕೆ

ಬಿಜೆಪಿಯವರದು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ, ಬಹಿರಂಗ ಚರ್ಚೆಗೆ ಬರುವುದಿಲ್ಲ: ಸಿಎಂ ಸಿದ್ದರಾಮಯ್ಯ

ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು  ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರಿನ ಸಮಾವೇಶದಲ್ಲಿ ಮುಖ್ಯಮಂತ್ರಿಗಳು

14 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ್​ ತಡೆಗೆ ಲಸಿಕೆ

ರಾಜ್ಯ ಸರ್ಕಾರವು ಗರ್ಭಕಂಠದ ಕ್ಯಾನ್ಸರ್​ ತಡೆಯಲು 14 ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಹ್ಯೂಮನ್ ಪ್ಯಾಪಿಲೋಮವೈರಸ್ ಲಸಿಕೆ ನೀಡಲು ನಿರ್ಧರಿಸಿದೆ. ಗಣಿ ಬಾಧಿತ ಮತ್ತು ಕಲ್ಯಾಣ ಕರ್ನಾಟಕದ 20 ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ವ್ಯಾಕ್ಸಿನ್ ನೀಡಲು ತೀರ್ಮಾನಿಸಿದೆ. ಗಣಿಗಾರಿಕೆಯಿಂದ ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್

ತಿಂಗಳ ಒಳಗೆ ಇ-ಕೆವೈಸಿ ಮಾಡಿಸದಿದ್ದರೆ ಪಡಿತರ ಕಾರ್ಡ್‌ ರದ್ದು: ಸಚಿವ ಮುನಿಯಪ್ಪ

ರಾಜ್ಯದ ಎಲ್ಲ ಪಡಿತರ ಚೀಟಿದಾರರು ಒಂದು ತಿಂಗಳ ಒಳಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು, ಮಾಡದಿದ್ದರೆ ಪಡಿತರ ಕಾರ್ಡ್‌ಗಳನ್ನು ರದ್ದುಗೊಳಿಸಲಾಗುವುದು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಮೈಸೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವ ಮುನಿಯಪ್ಪ, ಇ-ಕೆವೈಸಿ ಪ್ರಕ್ರಿಯೆ ತ್ವರಿತ

ಗ್ರೇಟರ್​ ಬೆಂಗಳೂರು ಪ್ರಾಧಿಕಾರದಡಿ ಐದು ಪಾಲಿಕೆ ರಚನೆ

ಗ್ರೇಟರ್​ ಬೆಂಗಳೂರು ಪ್ರಾಧಿಕಾರದಡಿ ಐದು ಪಾಲಿಕೆಗಳನ್ನು ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಪ್ರಕಟಿಸಿದ್ದು, ಸರ್ಕಾರ ಈ ಮಹಾನಗರ ಪಾಲಿಕೆಗಳ ಗಡಿಯನ್ನು ಗುರುತು ಮಾಡಿದೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯನ್ನು ಆಗಸ್ಟ್ 10ರೊಳಗೆ ಗ್ರೇಟರ್​ ಬೆಂಗಳೂರು ಪ್ರಾಧಿಕಾರ ಕೇಂದ್ರ

ರಾಜ್ಯದಲ್ಲಿ ಮುಂದುವರಿದ ಮಳೆ: ಮೂರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು,  ದಕ್ಷಿಣ ಕನ್ನಡದಲ್ಲಿ ಹಲವು ದಿನಗಳಿಂದ ವಿಪರೀತ ಮಳೆಯಾಗುತ್ತಿದ್ದು,  ಜನಜೀವನ ಹೈರಾಣಾಗಿದೆ. ಮೂರು ಜಿಲ್ಲೆಗಳಿಗೆ ರೆಡ್, ನಾಲ್ಕು ಜಿಲ್ಲೆಗಳಿಗೆ ಆರೆಂಜ್, ಉಳಿದ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ