Menu

133 ಅಕ್ಕಿಮೇಲೆ ರಾಷ್ಟ್ರಗೀತೆ ಬರೆದ ಐಶ್ವರ್ಯ: ಇಂಡಿಯಾ ಬುಕ್‌ ಆಫ್ ರೆಕಾರ್ಡ್‌ ಸೇರ್ಪಡೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹುಲಿಗುಡ್ಡ ಗ್ರಾಮದ ಯುವತಿ ಐಶ್ವರ್ಯ 32 ನಿಮಿಷ 20 ಸೆಕೆಂಡ್ ಗಳಲ್ಲಿ 133 ಅಕ್ಕಿಗಳ ಮೇಲೆ ಕನ್ನಡದಲ್ಲಿ ರಾಷ್ಟ್ರಗೀತೆ ಬರೆದು ಇಂಡಿಯಾ ಬುಕ್‌ ಆಫ್ ರೆಕಾರ್ಡ್‌ಗೆ ಸೇರ್ಪಡೆಯಾಗಿ  ದಾಖಲೆ ನಿರ್ಮಾಣ ಮಾಡಿದ್ದಾರೆ. ಪಟ್ಟಣದ ಸಂಜೀವ್ ಬಿ.ಇಡಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಐಶ್ವರ್ಯ, ಐಶ್ವರ್ಯ ಕೆಲವು ತಿಂಗಳು ಹಿಂದೆ ಅವಲಕ್ಕಿ ಮೇಲೆ ರಾಷ್ಟ್ರಗೀತೆ ಬರೆದು ದಾಖಲೆ ಮಾಡಿದ್ದರು. ಅದರಿಂದ ಪ್ರೇರಿತರಾಗಿ ಅಕ್ಕಿ ಕಾಳುಗಳ ಮೇಲೆ ರಾಷ್ಟ್ರಗೀತೆ ಬರೆದು ಸಾಧನೆ

‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅಂಗೀಕಾರ

ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ವನ್ನು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಅಂಗೀಕರಿಸಲಾಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್,  20

ವಿಧಾನಸಭೆಯಲ್ಲಿ 3 ವಿಧೇಯಕ ವಿಧಾನಸಭೆ ಅಂಗೀಕಾರ

ಬೆಂಗಳೂರು:ಲೈಸೆನ್ಸ್ ಯುಕ್ತ ಗಿರವಿದಾರ ಮತ್ತು ಲೈಸೆನ್ಸ್ ರಹಿತ ಗಿರವಿದಾರರು ನೀಡುವ ದುಬಾರಿ ಬಡ್ಡಿದರಗಳ ಅನುಚಿತ ತೊಂದರೆ ಮತ್ತು ಬಲವಂತದ ವಸೂಲಾತಿ ವಿಧಾನಗಳಿಂದ ಆರ್ಥಿಕವಾಗಿ ದುರ್ಬಲ ಗುಂಪುಗಳನ್ನು ಹಾಗೂ ವ್ಯಕ್ತಿಗಳನ್ನು ರಕ್ಷಿಸುವ ಉದ್ದೇಶದ 2025ನೇ ಸಾಲಿನ ಕರ್ನಾಟಕ ಗಿರವಿದಾರರ (ತಿದ್ದುಪಡಿ ವಿಧೇಯಕ) ಸೇರಿದಂತೆ

ನ್ಯಾಯಾಲಯದಲ್ಲಿ ಕಣ್ಣೀರಿಟ್ಟ ರನ್ಯಾ ರಾವ್: 14 ದಿನ ನ್ಯಾಯಾಂಗ ಬಂಧನ

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ಗೆ ಅರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮಾರ್ಚ್

ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಉದ್ಯಮಿ ಪುತ್ರ ಅರೆಸ್ಟ್

ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಡಿಆರ್ ಐ ಅಧಿಕಾರಿಗಳು ಬೆಂಗಳೂರಿನಲ್ಲಿ ಉದ್ಯಮಿ ಪುತ್ರನನ್ನು ಬಂಧಿಸಿದ್ದಾರೆ. ರನ್ಯಾ ರಾವ್ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಸೋಮವಾರ ಬೆಳಿಗ್ಗೆಯಿಂದ ಬೆಂಗಳೂರಿನ ಪಂಚತಾರಾ ಹೋಟೆಲ್ ನ ಮಾಲೀಕನ ತಮ್ಮ ಹಾಗೂ ಉದ್ಯಮಿ ಅವರ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ನಟಿ ರನ್ಯಾ ಸ್ಮಗ್ಲಿಂಗ್ ಪ್ರಕರಣ

ಚಿನ್ನ ಕಳ್ಳಸಾಗಾಣೆ ವೇಳೆ ಸಿಕ್ಕಿಬಿದ್ದ ನಟಿ ರನ್ಯಾ ರಾವ್ ಪ್ರಕರಣ ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ಕುತೂಹಲದ ಚರ್ಚೆಗೆ ಕಾರಣವಾಯಿತು. ಸೋಮವಾರ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯ ಸುನೀಲ್ ಕುಮಾರ್ ರನ್ಯಾ ಪ್ರಕರಣವನ್ನು ಪ್ರಸ್ತಾಪಿಸಿದ್ದು, ಈ ಪ್ರಕರಣದ ಹಿಂದೆ ದೊಡ್ಡ ಹವಾಲಾ, ಮಾಫಿಯಾ

ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಸೊಗಸು ಬಹುಮಾನಕ್ಕೆ ಅರ್ಜಿ ಆಹ್ವಾನ

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ

ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪ್‌ ಮಾರಾಟ ನಿಷೇಧ

ನದಿಗಳು ಮತ್ತು ಜಲಮೂಲಗಳ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ  ರಾಜ್ಯದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಸೋಪ್, ಶಾಂಪು ಬಳಕೆ ಹೆಚ್ಚಾಗಿದ್ದು

ಚಿನ್ನಾಭರಣವಿದ್ದ ಬ್ಯಾಗ್ ಹಿಂತಿರುಗಿಸಿದ ತುಮಕೂರಿನ ಆಟೋ‌ ಚಾಲಕ

ತುಮಕೂರು‌ ನಗರದಲ್ಲಿ  ಆಟೋ‌ ಚಾಲಕರೊಬ್ಬರು ಚಿನ್ನಾಭರಣವಿದ್ದ ಬ್ಯಾಗ್ ಅನ್ನು ಪ್ರಯಾಣಿಕರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದು ಸುದ್ದಿಯಾಗಿದ್ದಾರೆ. ತುಮಕೂರಿನ ಹನುಮಂತಪುರ  ನಿವಾಸಿ ರವಿಕುಮಾರ್‌ ಅವರ ಆಟೋದಲ್ಲಿ ಪ್ರಯಾಣಿಕರು 4 ಲಕ್ಷ ಬೆಲೆ ಬಾಳುವ ಒಡವೆ ಇದ್ದ ಬ್ಯಾಗ್ ಬಿಟ್ಟು ಹೋಗಿದ್ದರು. ಅರಸೀಕೆರೆ ಮೂಲದ

ಮುಡಾಗೆ ವಾಪಸ್‌ ಮಾಡಿರೋ ಸೈಟ್‌ ಪಾರ್ವತಿ ಮತ್ತೆ ಕೇಳಲಿದ್ದಾರೆ: ಶಾಸಕ ಯತೀಂದ್ರ

ಮುಡಾದಿಂದ ಅಕ್ರಮವಾಗಿ ಸೈಟುಗಳನ್ನು ಪಡೆದ ಆರೋಪ ಕೇಳಿ ಬಂದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಬಿಎಂ ಪಾರ್ವತಿ ಸೈಟ್‌ಗಳನ್ನು ವಾಪಸ್‌ ಮಾಡಿದ್ದರು.  ಈ ಸೈಟ್‌ಗಳನ್ನು ಅವರು ಮತ್ತೆ ಕ್ಲೈಮ್ ಮಾಡಲಿದ್ದಾರೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ