ರಾಜ್ಯ
ಏರ್ ಶೋಗೆ ಬರುವವರಿಗೆ ಬಿಎಂಟಿಸಿ ಉಚಿತ ಬಸ್ ಸೇವೆ
‘ಏರೋ ಇಂಡಿಯಾ 2025’ ಏರ್ ಶೋಗೆ ಯಲಹಂಕ ವಾಯುನೆಲೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. 15ನೇ ಆವೃತ್ತಿಯ ಈ ಏರ್ ಶೋಗೆ ದೇಶ ವಿದೇಶಗಳಿಂದ ಲಕ್ಷಾಂತರ ಜನ ಬರಲಿದ್ದಾರೆ. ಈ ವೇಳೆ ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡುವ ಉದ್ದೇಶದಿಂದ ಯಲಹಂಕ ವಾಯುನೆಲೆಗೆ ಸ್ವಂತ ವಾಹನದಲ್ಲಿ ಬರುವವರಿಗೆ ಜಿಕೆವಿಕೆಯಲ್ಲೇ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಿಸಿ, ಅಲ್ಲಿಂದ ಬಿಎಂಟಿಸಿ ಬಸ್ ಮೂಲಕ, ಹುಣಸೆ ಮಾರನಹಳ್ಳಿ ಬಳಿ ಇರುವ ಯಲಹಂಕ ವಾಯನೆಲೆಗೆ ಉಚಿತವಾಗಿ ಕರೆದೊಯ್ಯಲು ಬಿಎಂಟಿಸಿ
ಮುಂದಿನ ದಿನಗಳಲ್ಲಿ ಎಲ್ಲಾ ಸಂಸ್ಥೆಗಳಲ್ಲೂ ಕನ್ನಡ ಬಾವುಟ ಹಾರಾಟ ಕಡ್ಡಾಯ: ಡಿಕೆಶಿ
ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆ (ಸರ್ಕಾರಿ ಹಾಗೂ ಖಾಸಗಿ) ಗಳಲ್ಲಿ ಕನ್ನಡ ಧ್ವಜಾರೋಹಣ ಕಡ್ಡಾಯ ಆದೇಶ ಹೊರಡಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ನೂತನವಾಗಿ ಪ್ರತಿಷ್ಟಾಪಿಸಿರುವ ಭುವನೇಶ್ವರಿಯ ಪ್ರತಿಮೆ ಅನಾವರಣ
ಜಿಲ್ಲಾ ಮಟ್ಟದ 8ನೇ ಜನತಾದರ್ಶನ; 200 ಅಹವಾಲು ಸ್ವೀಕರಿಸಿದ ಸಚಿವ ಸಂತೋಷ ಲಾಡ್
ಧಾರವಾಡ : ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ಜಿಲ್ಲಾ ಮಟ್ಟದ 8ನೇ ಜನತಾ ದರ್ಶನ ಕಾರ್ಯಕ್ರಮ ನಡೆಸಿದರು. ಅವರು ಇಂದು ಬೆಳಿಗ್ಗೆ 11:40 ರಿಂದ ಸಂಜೆ
ಸಿದ್ದರಾಮಯ್ಯ ಪತ್ನಿ, ಸಚಿವ ಭೈರತಿಗೆ ಬಿಗ್ ರಿಲೀಫ್: ಇಡಿ ತನಿಖೆಗೆ ಹೈಕೋರ್ಟ್ ತಡೆ
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ವಿಚಾರಣೆಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ, ಇಡಿ ನೀಡಿದ್ದ ನೋಟಿಸ್ ಪ್ರಶ್ನಿಸಿ ಸಲ್ಲಿಸಿದ್ದ
ಮುಡಾ ಪ್ರಕರಣದ ವರದಿ ಸಲ್ಲಿಸಿದ ಲೋಕಾಯುಕ್ತ: ಆದೇಶ ಕಾಯ್ದಿರಿಸಿದ ಹೈಕೋರ್ಟ್
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿವಾದದ ಕುರಿತು ಲೋಕಾಯುಕ್ತ ವರದಿ ಸಲ್ಲಿಸಿದ್ದು, ಧಾರವಾಡ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ವರದಿ ಸಲ್ಲಿಕೆಗೆ ಜನವರಿ 28ರಂದು ಗಡುವು ನೀಡಲಾಗಿದ್ದು, ಒಂದು ದಿನ ಮುಂಚಿತವಾಗಿ ಅಂದರೆ ಸೋಮವಾರ ಮೈಸೂರು ಲೋಕಾಯುಕ್ತ ಪೊಲೀಸರು ಅಂತಿಮ ವರದಿಯನ್ನು
ದೆಹಲಿಯ ಗಣರಾಜ್ಯೋತ್ಸವ- 2025: ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು ಮನವಿ
ನವದೆಹಲಿ: ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್ಲೈನ್ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಈ
ಪಿರಿಯಾಪಟ್ಟಣದಲ್ಲಿ ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವು
ಹೃದಯಾಘಾತದಿಂದ ಯುವಕರು,ಯುವತಿಯರು, ಮಕ್ಕಳ ಸಾವಿನ ಸರಣಿ ಮುಂದುವರಿಯುತ್ತಿದ್ದು, ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಇಂದು (ಸೋಮವಾರ)ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೀಪಿಕಾ ಇದ್ದಕ್ಕಿದ್ದಂತೆ
ಮುಡಾ ಹಗರಣದಲ್ಲಿ ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್‌ಗೆ ಇಡಿ ನೋಟಿಸ್
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಇಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್
ನಂಜನಗೂಡು ಮಹಿಳೆ ಆತ್ಮಹತ್ಯೆ; ಮೈಕ್ರೋ ಫೈನಾನ್ಸ್ ಕಿರುಕುಳ ಶಂಕೆ
ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ವಿಷದ ಮಾತ್ರೆಗಳನ್ನು ನುಂಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಐಐಎಫ್‌ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್‌ನಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ ಜಯಶೀಲಾ 5 ಲಕ್ಷ ಸಾಲ ಪಡೆದಿದ್ದರು.
ಮಂತ್ರಾಲಯದಲ್ಲಿ ಅಡ್ವಾನ್ಸ್ ರೂಂ ಬುಕ್ ಹೆಸರಿನಲ್ಲಿ ವಂಚನೆ ಜಾಲ
ಶ್ರೀ ಗುರು ರಾಘವೇಂದ್ರ ಸ್ವಾಮಿ ಸನ್ನಿಧಿ ಮಂತ್ರಾಲಯದಲ್ಲಿ ಅಡ್ವಾನ್ಸ್ ರೂಂ ಬುಕ್ ಮಾಡುವ ಭಕ್ತರನ್ನು ವಂಚಿಸುವ ಜಾಲವೊಂದು ಕಾರ್ಯಾಚರಿಸುತ್ತಿರುವುದು ಬಯಲಾಗಿದೆ. ಹೀಗಾಗಿ ಭಕ್ತರು ಈ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ. ರೂಂ ಬುಕ್ಕಿಂಗ್, ಪ್ರಸಾದ, ವಿವಿಧ ಸೇವೆಗಳ ಸೌಲಭ್ಯ ಒದಗಿಸುವ ಹೆಸರಲ್ಲಿ ವಂಚಕರ




