Menu

ಮಾರ್ಚ್ 4ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಮಾರ್ಚ್ 3ರಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 4ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ. ಮಾರ್ಚ್ ೩ರಿಂದ ವಿಧಾನಸಭಾ ಅಧಿವೇಶನ ಆರಂಭಾಗಲಿದ್ದು, ಮಾರ್ಚ್ 7ರಂದು ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ದಾಖಲೆಯ 14ನೇ ಬಾರಿಗೆ ಬೆಜೆಟ್ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನದ ವೇಳೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಲು ರಣತಂತ್ರ ರೂಪಿಸಲು ಕಾಂಗ್ರೆಸ್ ಪಕ್ಷದ ಶಾಸಕರನ್ನು ಸಿದ್ಧಗೊಳಿಸಲು ಶಾಸಕಾಂಗ ಪಕ್ಷದ ಸಭೆ

ಚಿಕ್ಕಬಳ್ಳಾಪುರ ನಂತರ ಬಳ್ಳಾರಿಯಲ್ಲಿ ಹಕ್ಕಿಜ್ವರ ಪತ್ತೆ; ರಾಯಚೂರಿನಲ್ಲಿ ಅಲರ್ಟ್!

ಚಿಕ್ಕಬಳ್ಳಾಪುರದಲ್ಲಿ ಕಾಣಿಸಿಕೊಂಡ ಹಕ್ಕಿಜ್ವರ ಇದೀಗ ಬಳ್ಳಾರಿಯಲ್ಲೂ ಕಾಣಿಸಿಕೊಂಡಿದೆ. ಇದರಿಂದ ಹಕ್ಕಿಜ್ವರ ಒಂದರ ನಂತರ ಮತ್ತೊಂದು ಎಂಬಂತೆ ವಿವಿಧ ಜಿಲ್ಲೆಗಳಿಗೆ ಹರಡುವ ಭೀತಿ ಎದುರಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ವರದಹಳ್ಳಿ ಗ್ರಾಮದ ಎರಡು ಮನೆಗಳಲ್ಲಿ ಸಂತೆಯಿಂದ ತಂದು ಸಾಕಿದ್ದ 16 ಕೋಳಿಗಳಲ್ಲಿ ಹಕ್ಕಿಜ್ವರ ಇರುವುದು

ಚಾಮರಾಜನಗರದಲ್ಲಿ ಭೀಕರ ಅಪಘಾತ: ಮಾದಪ್ಪನ 5 ಭಕ್ತರ ದುರ್ಮರಣ

ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಮಾದಪ್ಪ ಭಕ್ತರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಸಮೀಪ ಶನಿವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಡಿಕ್ಕಿ ರಭಸಕ್ಕೆ

ರಾಜ್ಯಗಳ ತೆರಿಗೆ ಪಾಲು ಶೇ.40ಕ್ಕೆ ಕಡಿತ: ಸಿಎಂ ಸಿದ್ದರಾಮಯ್ಯ ಹೋರಾಟದ ಎಚ್ಚರಿಕೆ

ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲನ್ನು ಇನ್ನಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಕರ್ನಾಟಕ ವಿರೋಧಿ ಮಾತ್ರವಲ್ಲ ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರುವ ಸಂವಿಧಾನಕ್ಕೆ ಕೂಡಾ ವಿರುದ್ಧವಾಗಿದೆ. ರಾಜ್ಯದ ತೆರಿಗೆ ಪಾಲನ್ನು ಶೇ. 41ರಿಂದ 40ಕ್ಕೆ ಇಳಿಸಲು ಶಿಫಾರಸು ಮಾಡುವಂತೆ

ಟ್ಯಾಟೊದಿಂದ ಎಚ್ ಐವಿ, ಚರ್ಮರೋಗ: ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

ಇಡ್ಲಿ ಬೇಯಿಸುವಾಗ ಪ್ಲಾಸ್ಟಿಕ್ ಬಳಕೆಯಿಂದ ಕ್ಯಾನ್ಸರ್ ಮತ್ತು ಟ್ಯಾಟೊ ಹಾಕಿಸಿಕೊಳ್ಳುವುದರಿಂದ ಎಚ್ ಐವಿ, ಚರ್ಮರೋಗ ಮುಂತಾದ ಮಾರಕ ಕಾಯಿಲೆಗಳು ಬರುವ ಅಪಾಯವಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡ್ಲಿ ಬೇಯಿಸುವಾಗ ಪ್ಲಾಸ್ಟಿಕ್

ಬೇಸಿಗೆಯಲ್ಲಿ ಲೋಡ್‌ ಶೆಡ್ಡಿಂಗ್‌ ಇಲ್ಲ: ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು: ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಎಸ್ಕಾಂಗಳ ಅಧ್ಯಕ್ಷರು ಸೇರಿದಂತೆ ಇಂಧನ ಇಲಾಖೆ

ಮಾ.22ರಂದು ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಘೋಷಣೆ

ಗಡಿ ಭಾಗದಲ್ಲಿ ಮರಾಠಿ ಭಾಷಿಗರ ಪುಂಡಾಟಿಕೆ ಖಂಡಿಸಿ ಕನ್ನಡಿಗರ ಸ್ವಾಭಿಮಾನಕ್ಕಾಗಿ ಮಾರ್ಚ್ 22ರಂದು ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಕನ್ನಡ ಪರ ಸಂಘಟನೆಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ

ರಾಜ್ಯದಲ್ಲಿ ಎಫ್.ಪಿ.ಒ ಗಳಿಂದ ರೂ.1073 ಕೋಟಿಗಳ ವಹಿವಾಟು: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳಲ್ಲಿ ವಿವಿಧ ಅನುಷ್ಠಾನ ಇಲಾಖೆ, ಸಂಸ್ಥೆಗಳಿಂದ 1472 ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗಿದ್ದು, ಒಟ್ಟು 8.26 ಲಕ್ಷ ರೈತ ಷೇರುದಾರರನ್ನು ಸಂಘಟಿಸಲಾಗಿದೆ. ಆ ಮೂಲಕ ಒಟ್ಟಾರೆ 1073 ಕೋಟಿ ರೂ. ವಹಿವಾಟು ನಡೆಸಲಾಗಿದೆ ಎಂದು ಕೃಷಿ ಸಚಿವ

ಫೋಕ್ಸೊ ಪ್ರಕರಣದಲ್ಲಿ ವಿಚಾರಣೆಗೆ ಖುದ್ದು ಹಾಜರಾಗಲು ಬಿಎಸ್ ಯಡಿಯೂರಪ್ಪಗೆ ಕೋರ್ಟ್ ಆದೇಶ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಖುದ್ದು ಹಾಜರಾಗುವಂತೆ ಬೆಂಗಳೂರಿನ ೧ನೇ ತ್ವರಿತ ನ್ಯಾಯಾಲಯ ಆದೇಶ ನೀಡಿದೆ. ಈ ಮೂಲಕ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ಕುರಿತು ಪೊಲೀಸರು

ಸೆಕ್ಸ್‌ ನಿರಾಕರಿಸಿದ ಮಹಿಳೆ, ಮಗುವನ್ನು ಕೊಂದಾತನಿಗೆ ಜೀವಾವಧಿ ಶಿಕ್ಷೆ

ಹೊಸಪೇಟೆ ಮೂಲದ ಪ್ರಶಾಂತ್ ಎಂಬಾತ ಲೈಂಗಿಕ ಸಂಪರ್ಕಕ್ಕೆ ಸಹಕರಿಸದಿದ್ದಕ್ಕೆ ಚಾಕುವಿನಿಂದ ಚುಚ್ಚಿ ಮಹಿಳೆಯನ್ನು ಸಾಯಿಸಿ, ನಾಲ್ಕು ವರ್ಷದ ಮಗುವನ್ನು ಕೊಂದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಗೆ ಗುರಿಯಾಗಿದ್ದಾನೆ. ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್‌ ನ್ಯಾಯಾಲಯ ಅಪರಾಧಿಗೆ