ರಾಜ್ಯ
ಎಷ್ಟಾದರೂ ಹಣ-ಸವಲತ್ತು ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಸಿಎಂ
ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ, ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಮಂಗಳೂರಿನಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕರ್ನಾಟಕ ಕ್ರೀಡಾಕೂಟ 2025 ಉದ್ಘಾಟಿಸಿ ಮಾತನಾಡಿದರು. ಅಗತ್ಯ ವೇದಿಕೆ ಮತ್ತು ಉತ್ತಮ ಪ್ರೋತ್ಸಾಹ ಇಲ್ಲದಿದ್ದರೆ ಕ್ರೀಡಾ ಕ್ಷೇತ್ರ ಮತ್ತು ಕ್ರೀಡಾಪಟುಗಳು ಬೆಳವಣಿಗೆ ಆಗಲು ಸಾಧ್ಯವಿಲ್ಲ.
ಖರ್ಗೆ ಮಾರ್ಗದರ್ಶನದಂತೆ ನಡೆಯುತ್ತೇವೆ: ಡಿಕೆ. ಶಿವಕುಮಾರ್
ನನ್ನನ್ನೂ ಸೇರಿದಂತೆ ಎಲ್ಲರೂ ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದು, ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣ ಹಾಗೂ ಬೆಳಗಾವಿಯ ಸರ್ಕಿಟ್ ಹೌಸ್ ಬಳಿ
ಕೋಟೆಕರ್ ಉಲ್ಲಾಳ ಬ್ಯಾಂಕ್ ದರೋಡೆ: ಸಿಎಂ ಗರಂ
ಮಂಗಳೂರು: ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ ನೆರವೇರಿಸಿದ ಸಿಎಂ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಿ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನು ಮುಂದುವರೆಸಿದ್ದಾರೆ. ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ
ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಸಚಿವ ಆರ್ ಬಿ ತಿಮ್ಮಾಪೂರ
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ತಿಳಿಸಿದ್ದಾರೆ. ಅಬಕಾರಿ ಇಲಾಖೆಯ
ಅಮೆರಿಕ ವೀಸಾ ಇನ್ನು ಬೆಂಗಳೂರಲ್ಲೇ: ಕಾನ್ಸುಲೇಟ್ ಉದ್ಘಾಟನೆ
ಅಮೆರಿಕದ ವೀಸಾ ಪಡೆಯಲು ರಾಜ್ಯದ ಜನತೆ ಸೇರಿದಂತೆ ಬೆಂಗಳೂರಿಗರು ಚೆನ್ನೈ, ಹೈದರಾಬಾದ್‌ಗೆ ಹೋಗಬೇಕಿಲ್ಲ, ಬೆಂಗಳೂರಿನಲ್ಲೇ ಪಡೆಯಬಹುದು. ಬೆಂಗಳೂರಿನಲ್ಲೇ ಅಮೆರಿಕ ಕಾನ್ಸುಲೇಟ್ ಅಧಿಕೃತವಾಗಿ ಆರಂಭವಾಗಿದ್ದು ಇಂದು (ಜ.17) ಉದ್ಘಾಟನೆಗೊಂಡಿದೆ. ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್, ಭಾರತದಲ್ಲಿರುವ ಅಮರಿಕದ ರಾಯಭಾರಿ
ಸಚಿವೆ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಅವಾಚ್ಯ ಪದ ಬಳಸಿದ್ದನ್ನು ದೃಢಪಡಿಸಿದ ಸಿಐಡಿ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಸಿಐಡಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ. ರಾಜ್ಯ ಆಡಳಿತ ಮತ್ತು ಸಿಬ್ಬಂಧಿ ಸುಧಾರಣೆ ಇಲಾಖೆ ನೀಡಿದ್ದ ಸದನದ ವಿಡಿಯೋವನ್ನು ಪರೀಕ್ಷೆಗೆ
ಸತೀಶ್ ಜಾರಕಿಹೊಳಿಗೆ ಕೈ ಹೈಕಮಾಂಡ್ ನೋಟಿಸ್: ನಿರಾಕರಿಸಿದ ಸುರ್ಜೇವಾಲಾ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಂಬಂಧ ನೀಡಿರುವ ಹೇಳಿಕೆಗಳಿಗೆ ಸಂಬಂಧಿಸಿ ಸಚಿವ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್ ನೀಡಿದೆ ಎಂಬ ವಿಚಾರವನ್ನು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನಿರಾಕರಿಸಿದ್ದಾರೆ. ನೋಟಿಸ್ ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಯಾರು
ಕೆಎಎಸ್ ಎಕ್ಸಾಂ ಅವಾಂತರ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆರ್. ಅಶೋಕ್ ಆಗ್ರಹ
ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ದೋಷಪೂರಿತ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. 2023-24ನೇ ಸಾಲಿನ
ಸಾಮಾಜಿಕ ಬದ್ಧತೆಯ ಧೀಮಂತ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರಿಗೆ ಗೌರವ ಡಾಕ್ಟರೇಟ್
ಮಾಜಿ ಸಭಾಪತಿಗಳು ಮತ್ತು ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ ಅವರಿಗೆ ಶಿವಮೊಗ್ಗ ಕೆಳದಿ ಶಿವಪ್ಪ ನಾಯಕನ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ಇದು ಅತ್ಯಂತ ಅರ್ಹ, ಸೂಕ್ತ ಹಾಗೂ ಯೋಗ್ಯ ಆಯ್ಕೆ, ಇದರಿಂದ ಡಾಕ್ಟರೇಟ್




