Menu

ಕುಕ್ಕೆ, ಧರ್ಮಸ್ಥಳಗಳಲ್ಲಿ ಉಚಿತ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಸರಳ ಸಾಮೂಹಿಕ ವಿವಾಹ ನಡೆಯಲಿದೆ. ವಿವಾಹವಾಗಲು ಬಯಸುವವರು ದೇವಳದ ಕಚೇರಿಯಿಂದ ಅರ್ಜಿ ಫಾರಂ ಪಡೆದು ನಿಗದಿಪಡಿಸಿದ ದಾಖಲೆಗಳೊಂದಿಗೆ ಫೆ.20ರ ಒಳಗೆ ಸಲ್ಲಿಸಬಹುದು. ಮಾ.24 ರಂದು ಬೆಳಗ್ಗೆ 11.00 ರಿಂದ 12.00ರ ವರೆಗೆ ವೃಷಭ ಲಗ್ನದಲ್ಲಿ ವಿವಾಹ ನೆರವೇರಲಿದೆ. ಫೆ.24ರಂದು ನೋಂದಾಯಿತ ವಧು-ವರರ ವಿವರಗಳನ್ನು ದೇವಳದಲ್ಲಿ ಪ್ರಕಟಿಸಲಾಗುವುದು. ಫೆ.28 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕ, ಮಾ.5ರಂದು ವಧುವರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ದೇವಳದ ಪ್ರಕಟಣೆ

ಮುಡಾ ಕೇಸ್‌ ಸಿಬಿಐಗೆ ವಹಿಸಲು ಮನವಿ: ಇಂದು ಆದೇಶ ಸಾಧ್ಯತೆ

ಸಿಎಂ ಸಿದ್ದರಾಮಯ್ಯ ಅವರನ್ನು ಇನ್ನಿಲ್ಲದಂತೆ ಕಾಡುತ್ತಿರುವ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಹಿ ಕೃಷ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ನ್ಯಾಯಾಲಯ ಇಂದು (ಬುಧವಾರ) ಮಹತ್ವದ ಆದೇಶ ಪ್ರಕಟಿಸುವ ಸಾಧ್ಯತೆ ಇದೆ. ಧಾರವಾಡ ವಿಭಾಗೀಯ ಪೀಠದಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಇಂದು

ಉದಯಕಾಲ ಸಿಇಒ ಡಿ.ಬಿ.ಬಸವರಾಜುಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ!

ಬೆಂಗಳೂರು: ಜನಪ್ರಿಯ ಉದಯಕಾಲ ದಿನಪತ್ರಿಕೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಿ.ಬಿ.ಬಸವರಾಜು ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ವಾರ್ಷಿಕ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಒಲಿದಿದೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ವಾರ್ಷಿಕ ಪ್ರಶಸ್ತಿಗಳನ್ನು ತುಮಕೂರಿನಲ್ಲಿ ಜನವರಿ

ಉಳ್ಳೂರು ಉಪವಲಯ ಅರಣ್ಯಾಧಿಕಾರಿ ಸುಂದರಮೂರ್ತಿ, ಗಸ್ತು ಅರಣ್ಯ ಪಾಲಕ ಪ್ರವೀಣ್ ಕುಮಾರ್ ಅಮಾನತು

ಶಿವಮೊಗ್ಗ: ಸಾಗುವಾನಿ ನಾಟ ಅಕ್ರಮ ಕಡಿತಲೆ, ರಕ್ಷಣೆ ಮಾಡದೇ ಕರ್ತವ್ಯ ನಿರ್ಲಕ್ಷ್ಯ, ಕಡಿತಲೆ ಮಾಡಿದ್ದ ನಾಟ ವಶಪಡಿಸಿಕೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ಉಳ್ಳೂರು ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುಂದರಮೂರ್ತಿ ಎನ್.ಜಿ ಹಾಗೂ ಪ್ರಭಾರ ಗಸ್ತು ಅರಣ್ಯ ಪಾಲಕ ಪ್ರವೀಣ್ ಕುಮಾರ್

ಕರ್ತವ್ಯನಿರತ ಯೋಧ ಬಾಗಲಕೋಟೆಯ ಚನ್ನಯ್ಯ ರೇಷ್ಮೆ ಹೃದಯಾಘಾತಕ್ಕೆ ಬಲಿ

ರಾಜಸ್ಥಾನದಲ್ಲಿ ಕರ್ತವ್ಯನಿರತರಾಗಿದ್ದ ಬಾಗಲಕೋಟೆಯ ಯೋಧ ಮಾಗೊಂಡಯ್ಯ ಚನ್ನಯ್ಯ ರೇಷ್ಮೆ (37) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ ಯೋಧ ಕರ್ತವ್ಯದಲ್ಲಿ ಇದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಳೆದ 14 ವರ್ಷದಿಂದ ಇವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬೆಳಗಾವಿ ಮರಾಠಾ ಇನ್‌ಫೆಂಟ್ರಿ

ಮದ್ಯ ಸೇವಿಸಿ ಬಟ್ಟೆ ಬಿಚ್ಚಿ ರಸ್ತೆಯಲ್ಲೇ ಶ್ರೀ ಶಾಂತಲಿಂಗ ಶಿವಾಚಾರ್ಯರ ರಂಪಾಟ

ಅಫಜಲ್ಪುರ ತಾಲೂಕಿನ ಉಡಚಾಣ ಗ್ರಾಮದ ಶ್ರೀ ಶಾಂತಲಿಂಗ ಶಿವಾಚಾರ್ಯರು ಸಾರಾಯಿ ಕುಡಿದು ರಸ್ತೆಯಲ್ಲೇ ರಂಪಾಟ ಮಾಡಿದ್ದು, ಈ ನಡವಳಿಕೆಗಳಿಗೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡಚಾಣ ಗ್ರಾಮದ ಶ್ರೀ ಶಂಕರಲಿಂಗೇಶ್ವರ ಸಂಸ್ಥಾನ ಹಿರೇಮಠದ ಮಠಾಧಿಪತಿ ಶ್ರೀ ಶಾಂತಲಿಂಗ ಶಿವಾಚಾರ್ಯರು ಇತ್ತೀಚೆಗೆ ಇಂಡಿ ತಾಲೂಕಿನ

ಜ.17ರಿಂದ ಬೆಂಗಳೂರಲ್ಲಿ ಅಮೆರಿಕ ಕಾನ್ಸುಲೇಟ್ ಕಚೇರಿ

ಬೆಂಗಳೂರಿನ ಜೆಡಬ್ಲ್ಯು ಮ್ಯಾರಿಯೇಟ್ ಹೋಟೆಲ್‌ನಲ್ಲಿ ಅಮೆರಿಕದ ಕಾನ್ಸುಲೇಟ್ ಕಚೇರಿ ಜ.17ರಂದು ಕಾರ್ಯಾರಂಭಿಸಲಿದೆ. ಇದರಿಂದ ಕನ್ನಡಿಗರು ಇನ್ನು ಮುಂದೆ ಚೆನ್ನೈ ಸೇರಿ ನೆರೆಯ ರಾಜ್ಯಗಳಿಗೆ ಹೋಗುವ ಬದಲು ಬೆಂಗಳೂರಿನಲ್ಲೇ ಅಮೆರಿಕದ ವೀಸಾ ಮತ್ತು ಅದಕ್ಕೆ ಸಂಬಂಧಿಸಿದ ಸೇವೆ ಪಡೆಯಬಹುದು. ಈ ಹೋಟೆಲ್‌ನಲ್ಲಿ ಈಗಾಗಲೇ

ಬೆಂಗಳೂರಿನಲ್ಲಿ ಆರು ವರ್ಷದ ಬಾಲಕಿಯ ಅತ್ಯಾಚಾರವೆಸಗಿ ಕೊಲೆ

ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಕೃತ್ಯ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ ಘಟನೆ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತ: ಅಪಾಯದಿಂದ ಪಾರು

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಅಪಘಾತವಾಗಿದೆ. ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಈ ದುರ್ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬದ ದಿನವಾದ

ಡ್ರಗ್ಸ್ ಕೇಸ್​ನಲ್ಲಿ ನಟಿ ರಾಗಿಣಿ ಖುಲಾಸೆ

ಡ್ರಗ್ಸ್ ಕೇಸ್​ನಲ್ಲಿ 2020ರ ಸೆಪ್ಟೆಂಬರ್​ನಲ್ಲಿ ಬಂಧಿತರಾಗಿ ಹಲವು ದಿನ ಜೈಲಿನಲ್ಲಿದ್ದು ಹೊರ ಬಂದಿರುವ ನಟಿ ರಾಗಿಣಿ ಅವರಿಗೆ ನಾಲ್ಕು ವರ್ಷಗಳ ಬಳಿಕ ರಿಲೀಫ್‌ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳ ಬಳಿಕ ಡ್ರಗ್ಸ್​ ಕೇಸ್​ನಲ್ಲಿ ರಾಗಿಣಿ ನಿರಪರಾಧಿ ಎಂಬುದು ಸಾಬೀತಾಗಿದೆ.