Wednesday, October 07, 2026
Menu

ಲೋಕಾಯುಕ್ತ ಹೆಸರಲ್ಲಿ ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದಾತ ಅರೆಸ್ಟ್‌

ಲೋಕಾಯುಕ್ತ ಡಿವೈಎಸ್​ಪಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್​ಮೇಲ್​ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸರ್ವಿಸ್‌ನಿಂದ ವಜಾಗೊಂಡ ರಿಸರ್ವ್ ಪೊಲೀಸ್ ಕಾನ್ಸ್​ಟೇಬಲ್ ಮುರುಗಪ್ಪ ಬಂಧಿತ ಆರೋಪಿ. ಬಂಧಿತ ಮುರುಗೆಪ್ಪ ವಿರುದ್ಧ ರಾಜ್ಯದ ನಾನಾ ಠಾಣೆಗಳಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆರೋಪಿಯು ಲೋಕಾಯುಕ್ತ ಹೆಸರಿನಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್​ಮೇಲ್​ ಮಾಡಿ ಹಣ ಸುಲಿಗೆ ಮಾಡುತ್ತಿದ್ದನು. ಲೋಕಾಯುಕ್ತ ಡಿವೈ ಎಸ್​ಪಿ ಬಸವರಾಜು ಆರ್. ಮಗದಮ್ ನೀಡಿದ ದೂರಿನಂತೆ ವಿಧಾನಸೌಧ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಗರುಡ ಮಾಲ್ ಬಳಿ ಶಾಸಕ ಹ್ಯಾರಿಸ್‌ ಆಪ್ತನ ಕೊಲೆ

ಬೆಂಗಳೂರಿನ ಅಶೋಕನಗರದ ಗರುಡ ಮಾಲ್ ಬಳಿ ಲೈವ್ ಬ್ಯಾಂಡ್‌ನಿಂದ ಶನಿವಾರ ರಾತ್ರಿ ಹೊರ ಬರುತ್ತಿದ್ದಾಗ ಕಾಂಗ್ರೆಸ್ ಮುಖಂಡನನ್ನು ಅಡ್ಡಗಟ್ಟಿ ಕೊಲೆ ಮಾಡಿರುವ ಘಟನೆ ನಡೆದಿದೆ. ತಡರಾತ್ರಿ 1 ಗಂಟೆಗೆ ಘಟನೆ ನಡೆದಿದ್ದು, ಆನೆಪಾಳ್ಯ ನಿವಾಸಿ ಶೇಖ್‌ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ.

ಮಹಾರಾಷ್ಟ್ರ, ಕರ್ನಾಟಕ ನಡುವೆ ಸಾರಿಗೆ ಬಸ್​ ಸ್ಥಗಿತ

ಕನ್ನಡ ಮಾತನಾಡಿ ಎಂದು ಹೇಳಿದ್ದಕ್ಕೆ ಮರಾಠಿಗರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಂಡಕ್ಟರ್​ ಮೇಲೆ ಮರಾಠಿಗರು ಬೇರೆ ಆರೋಪಗಳನ್ನು ಮಾಡಿದ ಹಿನ್ನೆಲೆ ಕಂಡಕ್ಟರ್​ ವಿರುದ್ಧ ಫೋಕ್ಸೊ ಪ್ರಕರಣ ದಾಖಲಾಗಿದೆ. ಇದರಿಂದ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು,

ಕಂಬದಹಳ್ಳಿ ಆಂಜನೇಯಬೆಟ್ಟದಲ್ಲಿ ಬಾಂಬ್‌ ಸ್ಫೋಟಕ್ಕೆ ವಿದ್ಯಾರ್ಥಿಯ ಅಂಗೈ ಛಿದ್ರ

ನಾಗಮಂಗಲ ತಾಲೂಕಿನ ಕಂಬದಹಳ್ಳಿಯ ಆಂಜನೇಯಬೆಟ್ಟದಲ್ಲಿ ನಾಡಬಾಂಬ್ ಸ್ಫೋಟದಿಂದಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಓರ್ವನ ಅಂಗೈ ಛಿದ್ರವಾಗಿದೆ. ಗಾಯಾಳು ವಿದ್ಯಾರ್ಥಿಗಳನ್ನು ಹರಿಯಂತ್ ಪಾಟೀಲ್ ಹಾಗೂ ಪಾರ್ಥ ಎಂದು ಗುರುತಿಸಲಾಗಿದೆ. ಇವರು ಜೈನ ಬಸದಿ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಆಂಜನೇಯ ಬೆಟ್ಟದ ದೇವಸ್ಥಾನದ ಸುತ್ತ

ಜನಪ್ರತಿನಿಧಿಗಳು ಎಲ್ಲಿದ್ದೀರಿ, ನಾನು ಬೆಳಗಾವಿ, ಬಾಳೇಕುಂದ್ರಿಗೆ ಬಂದೇ ಬರುತ್ತೇನೆ: ಕರವೇ ಅಧ್ಯಕ್ಷ ನಾರಾಯಣ ಗೌಡ

ನಾನು ಬೆಳಗಾವಿಗೆ ಬಂದೇ ಬರುತ್ತೇನೆ. ಬಾಳೇಕುಂದ್ರಿಗೂ ಬಂದೇ ಬರುತ್ತೇನೆ. ಬಾಳೇಕುಂದ್ರಿ ಕರ್ನಾಟಕದ ಹೆಮ್ಮೆಯ ಇಂಜಿನಿಯರ್, ನೀರಾವರಿ ತಜ್ಞ ಶಿವಪ್ಪ ಗುರುಬಸಪ್ಪ ಬಾಳೇಕುಂದ್ರಿಯವರ ಊರು‌. ಕೃಷ್ಣಾ, ಮಲಪ್ರಭ, ಘಟಪ್ರಭ ವ್ಯಾಪ್ತಿಯ ನೀರಾವರಿ ಯೋಜನೆಗಳ ರೂವಾರಿಯವರು. ಇಂಥ ಶ್ರೇಷ್ಠ ವ್ಯಕ್ತಿಗೆ ಜನ್ಮ ನೀಡಿದ ಅಪ್ಪಟ

ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಕಾರ್ಯ ವ್ಯಾಪ್ತಿ  ಜಾಗತಿಕ ವಿಸ್ತರಣೆಗೆ ಚಿಂತನೆ

ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಕಾರ್ಯ ವ್ಯಾಪ್ತಿ  ಜಾಗತಿಕವಾಗಿ ವಿಸ್ತರಣೆಯಾಗಲಿದೆ ಎಂಬ ವಿಶ್ವಾಸ ಹೊಂದಿರುವುದಾಗಿ  ಕೆ ಎಸ್ ಬಿ ಡಿ ಬಿ ಅಧ್ಯಕ್ಷ ಎಸ್ ಈ. ಸುಧೀಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಜರುಗಿದ” ಸುಸ್ಥಿರ ತಾಂತ್ರಿಕತೆ” ಅಂತರಾಷ್ಟ್ರೀಯ ಸಮಾವೇಶದಲ್ಲಿ ಮಂಡಳಿಯ

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೇ-ಕೇರ್ ಕಿಮೊಥೆರಪಿ ಕೇಂದ್ರ : ಆರೋಗ್ಯ ಸಚಿವ ದಿನೇಶ ಗುಂಡೂರಾವ್

ವಿಜಯಪುರ, : ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ-ಕೇರ್ ಕಿಮೊಥೆರಪಿಯನ್ನು ಆರಂಭಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾದ ದಿನೇಶ ಗುಂಡುರಾವ್ ಹೇಳಿದರು. ಶನಿವಾರ ನಗರದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ನಿರ್ಮಿಸಲಾದ ಕಿಮೊಥೆರಪಿ

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ ಐಆರ್ ದಾಖಲು!

ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ (Muslims) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರು ಯುವ ಕಾಂಗ್ರೆಸ್‌ ಮುಖಂಡ ಸೈಯದ್‌ ಅಬ್ರರ್ ನೀಡಿದ ದೂರಿನ

ಇಂದಿನಿಂದ ಶ್ರೀ ಗುರು ಕೊಟ್ಟೂರೇಶ್ವರ ಜಾತ್ರೆ: ಕೊಟ್ಟೂರು ಜಾತ್ರೆಯ ಇತಿಹಾಸ ನಿಮಗೆ ಗೊತ್ತೆ?

ಇದು ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ನೆಲೆವೀಡು. ಶ್ರೀಗುರು ಕೊಟ್ಟೂರೇಶ್ವರನಿಗೆ ಕೊಟ್ಟೂರು ಬಸವೇಶ್ವರ ಎಂತಲು ಕರೆಯುತ್ತಾರೆ. ಪ್ರತಿ ವರ್ಷ ಫೆಬ್ರುವರಿ ಅಥವಾ ಮಾರ್ಚ್ ತಿಂಗಳಲ್ಲಿ ರಥೋತ್ಸವ ಜರುಗುವುದು ಡಿಸೆಂಬರ್ ತಿಂಗಳಲ್ಲಿ ಲಕ್ಷ ದೀಪೊತ್ಸ್ತ್ವವ ಜರುಗುವುದು. ಈ ಸ್ವಾಮಿಯ ಹಿರೇಮಠಕ್ಕೆ ಅನೇಕ ಭಕ್ತರಿದ್ದಾರೆ.

ವಿಜಯಪುರ ಮಿನಿ ತಾರಾಲಯಕ್ಕೆ 12.88 ಕೋಟಿ, ವಸತಿ ಶಾಲೆಗಳಿಗೆ 44 ಕೋಟಿ ರೂ. ವೆಚ್ಚ: ಸಚಿವ ಎಂಬಿ ಪಾಟೀಲ

ವಿಜಯಪುರ :. ವಿಜಯಪುರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ (ಮಿನಿ ಪ್ಲಾನೆಟೇರಿಯಂ) ಹಾಗೂ ಬಬಲೇಶ್ವರ ಮತ್ತು ವಿಜಯಪುರದಲ್ಲಿ ಎರಡು ಹಾಸ್ಟೆಲ್ ಗಳ ನಿರ್ಮಾಣಕ್ಕೆ ಒಟ್ಟು 56.88 ಕೋಟಿ ವ್ಯಯಿಸಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಜಿಲ್ಲಾ