ರಾಜ್ಯ
ಡಿ.ರೂಪಾ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ: ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್!
ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ದಾಖಲಿಸಿದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡುವ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ದೊರೆತಿದೆ. ಮಾರ್ಚ್ 12 ರವರೆಗೆ ವಿಚಾರಣೆಯನ್ನು ಮುಂದೂಡಿರುವ ಹೈಕೋರ್ಟ್, ವಿಚಾರಣಾ ಸಂದರ್ಭದಲ್ಲಿ ಇಬ್ಬರು ಮಹಿಳಾ ಅಧಿಕಾರಿಗಳ ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾ.ಮೊಹಮ್ಮದ್ ನವಾಜ್ ಸಲಹೆ ನೀಡಿದ್ದಾರೆ. ಬೆಂಗಳೂರಿನ 7 ನೇ ಎಸಿಎಂಎಂ ಕೋರ್ಟ್‌ಗೆ ರೂಪಾ ಖಾಸಗಿ ದೂರು ಸಲ್ಲಿಸಿದ್ದರು. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಕೋರ್ಟ್
ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಬದಲಾವಣೆಗೆ ಮಾರ್ಚ್ 31ರವರೆಗೆ ಗಡುವು ವಿಸ್ತರಣೆ!
ಅತಿ ಸುರಕ್ಷಿತ ವಾಹನ ನೋಂದಣಿ ಫಲಕ (HSRP) ಅಳವಡಿಸದ ವಾಹನ ಸವಾರರಿಗೆ ಮತ್ತೆ ರಿಲೀಫ್ ಸಿಕ್ಕಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಈ ಹಿಂದೆ ನೀಡಲಾಗಿದ್ದ ಗಡುವನ್ನು ಮತ್ತೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸತತ 8ನೇ
ಪುರುಷರ ನೋವಿಗೆ ಮಿಡಿದ ಕೆಎಸ್‌ಆರ್‌ಟಿಸಿ ಮೈಸೂರು ಘಟಕ
ಕೆಎಸ್‌ಆರ್‌ಟಿಸಿ ಮೈಸೂರು ಘಟಕವು ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ತನ್ನ ಸಿಬ್ಬಂದಿಗೆ ಸೂಚನೆ ನೀಡಿದೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ರಾಜ್ಯದ ಸರ್ಕಾರಿ ಬಸ್ಸುಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ನಮಗೆ ಸೀಟು ಸಿಗುತ್ತಿಲ್ಲ ಎಂದು
ಲಾರಿಗೆ ಕ್ರೂಸರ್ ಡಿಕ್ಕಿ: ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ 5 ಮಂದಿ ದುರ್ಮರಣ!
ಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದ ಒಂದೇ ಕುಟುಂಬದ 5 ಮಂದಿ ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಮಿರಾಜ್ ಪುರ್ ಜಿಲ್ಲೆಯ ರೂಪಾಪೂರದಲ್ಲಿ ಸಂಭವಿಸಿದೆ. ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿ ಕಾಶಿಗೆ ತೆರಳುತ್ತಿದ್ದಾಗ ಶುಕ್ರವಾರ ಬೆಳಿಗ್ಗೆ ಈ ದುರಂತ ಸಂಭವಿಸಿದ್ದು, ಬೀದರ್ ನಗರದ ಲಾಡಗೇರಿ
ಮಾಜಿ ಸಚಿವ ಬಿ.ನಾಗೇಂದ್ರ ಮನವಿಯ ವಿಚಾರಣೆ ಫೆ. 27ಕ್ಕೆ ಮುಂದೂಡಿಕೆ
ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಆರೋಪ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಯನ್ನು ಹೈಕೋರ್ಟ್ ಫೆಬ್ರುವರಿ 27ರವರೆಗೆ ಮುಂದೂಡಿದೆ. ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣ (ಇಸಿಐಆರ್)
ನಮ್ಮ ಹೋರಾಟ ರಾಜಕೀಯ ವಿರೋಧಿಗಳ ವಿರುದ್ಧ ಹೊರತು, ನಮ್ಮೊಳಗೆ ಅಲ್ಲ: ಡಿ.ಕೆ. ಶಿವಕುಮಾರ್
ನಾವು ನಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಹೋರಾಟ ಮಾಡಬೇಕೇ ಹೊರತು ನಮ್ಮ ನಮ್ಮಲ್ಲೇ ಹೋರಾಟ ಮಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶವನ್ನು ಶಿವಕುಮಾರ್ ಪ್ರಕಟಿಸಿ, ನೂತನ
ಒಪಿಎಸ್ ಅನುಷ್ಠಾನಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಡಿಸಿಎಂ ಭರವಸೆ
ಓಪಿಎಸ್ (ಓಲ್ಡ್ ಪೆನ್ಷನ್ ಸ್ಕೀಮ್) ಜಾರಿ ಸಂಬಂಧ ಅಂಜುಮ್ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಆ ಸಮಿತಿಯ ವರದಿಯನ್ನು ಪರಿಶೀಲಿಸಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಓಪಿಎಸ್ ಬಗ್ಗೆ ನಾವು ಭರವಸೆ ನೀಡಿದ್ದೆವು. ಅದರಂತೆ
ರೀಲ್ಸ್ ವ್ಯಸನದಿಂದ ಗಂಗಾವತಿಯಲ್ಲಿ ನದಿ ಪಾಲಾಗಿದ್ದ ವೈದ್ಯೆಯ ಶವ ಪತ್ತೆ
ಗಂಗಾವತಿ ತಾಲೂಕಿನ ಸಣಾಪೂರ ಗ್ರಾಮದಲ್ಲಿರುವ ತುಂಗಾಭದ್ರಾ ನದಿಯಲ್ಲಿ ಬುಧವಾರ ಮುಂಜಾನೆ ಕಲ್ಲುಬಂಡೆಗಳ ಮೇಲಿಂದ ನದಿಗೆ ಜಿಗಿದ ಯುವ ವೈದ್ಯೆಯ ಶವ ಪತ್ತೆಯಾಗಿದೆ. ಮೃತ ವೈದ್ಯೆಯನ್ನು ಹೈದರಾಬಾದ್‌ನ ನಾಂಪಲ್ಲಿ ಪ್ರದೇಶದ ನಿವಾಸಿ, ಎಂಬಿಬಿಎಸ್ ಪದವೀಧರೆ ಅನನ್ಯ ಮೋಹನ್ (26) ಎಂದು ಗುರುತಿಸಲಾಗಿದೆ. ಆಕೆ
315 ಕೋಟಿ ರೂ. ಹೂಡಿಕೆ, 550 ಉದ್ಯೋಗ ಸೃಷ್ಟಿ: ಸಚಿವ ಎಂಬಿ ಪಾಟೀಲ
ವೇಮಗಲ್ (ಕೋಲಾರ ಜಿಲ್ಲೆ): ಇತ್ತೀಚೆಗಷ್ಟೇ ಮುಕ್ತಾಯವಾದ ಜಿಮ್ ಇನ್ವೆಸ್ಟ್ ಕರ್ನಾಟಕ-25ರ ಒಟ್ಟಾರೆ 10.27 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯ ಭಾಗವಾಗಿದ್ದ 315 ಕೋಟಿ ರೂಪಾಯಿಗಳ ಜರ್ಮನಿ ಮೂಲದ ಕ್ರೋನ್ಸ್ ಕಂಪನಿಯ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕ ನಿರ್ಮಾಣದ ಅನುಷ್ಠಾನಕ್ಕೆ ಗುರುವಾರ ಆರಂಭಗೊಂಡಿತು.
ಮುಡಾ ಪ್ರಕರಣ: ನ್ಯಾಯಾಲಯಕ್ಕೆ 11,200 ಪುಟಗಳ ವರದಿ ಸಲ್ಲಿಸಿದ ಲೋಕಾಯುಕ್ತ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿರುವ ತನಿಖಾ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಗುರುವಾರ ಸಲ್ಲಿಸಿತು. ಮೈಸೂರು ಲೋಕಾಯುಕ್ತ ತನಿಖಾಧಿಕಾರಿ ಎಸ್ಪಿ ಉದೇಶ್ ಗುರುವಾರ ಬೆಳಗ್ಗೆ 11,200 ಪುಟಗಳ ಅಂತಿಮ ವರದಿಯ ದಾಖಲೆಗಳನ್ನು ನ್ಯಾಯಾಲಯಕ್ಕೆ




