Menu

ಕಾಂಬೊಡಿಯಾದಲ್ಲಿ ವಿಷ್ಣುವಿನ ಪ್ರತಿಮೆ ನೆಲಸಮ: ಭಾರತ ಖಂಡನೆ

ಕಾಂಬೊಡಿಯಾದಲ್ಲಿ ಸರ್ಕಾರದಿಂದ ನಿರ್ಮಾಣವಾಗಿದ್ದ 30 ಅಡಿ ಎತ್ತರದ ಹಿಂದೂ ದೇವರ ಪ್ರತಿಮೆಯನ್ನು ಬುಲ್ಡೋಜರ್ ನಿಂದ ನೆಲಸಮಗೊಳಿಸಲಾಗಿದೆ. ಥಾಯ್ಲೆಂಡ್​ ಮತ್ತು ಕಾಂಬೋಡಿಯಾ ನಡುವಿನ ಹಲವು ದಶಕಗಳ ಗಡಿ ವಿವಾದದ ಹಿನ್ನೆಲೆಯಲ್ಲಿ ಥಾಯ್ಲೆಂಡ್ ಸೇನೆ 30 ಅಡಿ ಎತ್ತರದ ವಿಷ್ಣುವಿನ ಪ್ರತಿಮೆಯನ್ನು ನೆಲಸಮಗೊಳಿಸಿದೆ. ವಿಷ್ಣು ಮೂರ್ತಿಯನ್ನು ಥಾಯ್ಲೆಂಡ್​ ಸೇನೆ ಬುಲ್ಡೋಜರ್​ ಬಳಸಿ ಹೊಡೆದು ಹಾಕಿದೆ ಎಂದು ಕಾಂಬೋಡಿಯಾ ಸರ್ಕಾರ ಆರೋಪಿಸಿದ್ದು, ಭಾರತ, ಆಗ್ನೇಯ ಏಷ್ಯಾದ ರಾಷ್ಟ್ರಗಳು ಈ ಕೃತ್ಯವನ್ನು ಖಂಡಿಸಿದೆ. ಪ್ರಸ್ತುತ ಕಾಂಬೋಡಿಯಾದ

ನಾನು ಕೇವಲ ವೇದಿಕೇಲಿ ಕೂತು ಭಾಷಣ ಮಾಡಿಲ್ಲ, ಪಕ್ಷದ ಎಲ್ಲ ಕೆಲಸ ಮಾಡಿದ್ದೇನೆ: ಡಿಕೆ ಶಿವಕುಮಾರ್

“ನಾನು ಕೇವಲ ವೇದಿಕೆಯಲ್ಲಿ ಕುಳಿತು, ಭಾಷಣ ಮಾಡಿಕೊಂಡು ಹೋಗಿಲ್ಲ. ಪಕ್ಷದಲ್ಲಿ ಎಲ್ಲಾ ಕೆಲಸ ಮಾಡಿದ್ದೇನೆ (ಐ ಹ್ಯಾವ್ ಡನ್ ಎವೆರಿ ವರ್ಕ್ ಇನ್ ದ ಪಾರ್ಟಿ), ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು

ಡಿಸೆಂಬರ್ 28ರಂದು ಜನರಾಜ್ಯೋತ್ಸವ ಸಂಭ್ರಮ

ಎಲ್ಲಾ ಕನ್ನಡಪರ ಸಂಘಟನೆಗಳು, ಚಳವಳಿಗಾರರು, ಸಾಹಿತ್ಯ-ಸಾಂಸ್ಕೃತಿಕ ವೇದಿಕೆಗಳು ಹಾಗೂ ಯುವ ಹೋರಾಟಗಾರರು ಕನ್ನಡದ ನೆಲ, ಜಲ, ರಾಜ್ಯಭಾಷೆ ಕನ್ನಡದ ಗೌರವಕ್ಕಾಗಿ ನಡೆದಿರುವ ಸಂಕೇತವಾಗಿ ಮೊದಲ ಬಾರಿಗೆ ಜನರಾಜ್ಯೋತ್ಸವ ಆಚರಿಸಲು ಸಿದ್ಧತೆ ನಡೆಸಿದ್ದಾರೆ. ಡಿಸೆಂಬರ್ 28 ರಂದು ಜನರಾಜ್ಯೋತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

ಯಾವಾಗ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಬಿವೈ ವಿಜಯೇಂದ್ರ ವಿಶ್ವಾಸ

ಬೆಂಗಳೂರು: ಅಟಲ್‍ಜೀ ಹೆಸರಿನ ಉಚ್ಚಾರಣೆಯೇ ನಮಗೆ ರೋಮಾಂಚನವನ್ನುಂಟು ಮಾಡುತ್ತದೆ. ಆ ಹೆಸರು ಪ್ರೇರಣೆ, ಉತ್ಸಾಹ ತುಂಬುತ್ತದೆ. ಅಂಥ ಶ್ರೇಷ್ಠ ವ್ಯಕ್ತಿತ್ವ ಅವರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮಾಜಿ ಪ್ರಧಾನಮಂತ್ರಿ, ಭಾರತ ರತ್ನ ದಿ. ಅಟಲ್ ಬಿಹಾರಿ

ರಾಜ್ಯದ ಬ್ಯಾಂಕ್‌ಗಳಲ್ಲಿ ಕ್ಲೇಮ್‌ ಆಗದೆ ಉಳಿದಿರುವ ಹಣ 3,400 ಕೋಟಿ ರೂ.

ಕರ್ನಾಟಕದ ಬ್ಯಾಂಕ್‌ಗಳಲ್ಲಿ ಹತ್ತಕ್ಕೂ ಹೆಚ್ಚು ವರ್ಷಗಳಿಂದ 3,400 ಕೋಟಿ ರೂ. ಕ್ಲೇಮ್ ಆಗದೆ ಉಳಿದಿದೆ ಎಂದು ಆರ್​ಬಿಐ ಬೆಂಗಳೂರು ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನಲ್ಲಿ ನಡೆದ ಜಿಲ್ಲಾ ಸಮಾಲೋಚನ ಸಮಿತಿ (ಡಿಸಿಸಿ) ಮತ್ತು

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ- CBC ಕಚೇರಿ ಸ್ಥಗಿತ ಬೇಡ: ಕೇಂದ್ರಕ್ಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪತ್ರ

ನವದೆಹಲಿ: ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ (ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ -CBC) ಕಚೇರಿಯನ್ನು ಸ್ಥಗಿತಗೊಳಿಸುವ ಕ್ರಮ ಕೈಗೊಳ್ಳಬಾರದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ

ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ಅಪಘಾತ ವಿಮೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ

ಜಮೀರ್‌ ಆಪ್ತನ 14.38 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ ಲೋಕಾಯುಕ್ತ

ವಸತಿ ಸಚಿವ ಜಮೀರ್‌ ಅಹಮ್ಮದ್‌ ಅವರ ಆಪ್ತ ಕಾರ್ಯದರ್ಶಿ, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ವಿಭಾಗದ ನಿರ್ದೇಶಕ ಸರ್ಫ್ರಾಜ್‌ ಖಾನ್‌ ಕಚೇರಿ, ಮನೆಗಳು, ರೆಸಾರ್ಟ್‌ಗಳಿಗೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು 14.38 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ.

ಆಡಳಿತದಲ್ಲಿ ಪಾರದರ್ಶಕತೆಯೊಂದಿಗೆ ಭೂ ಪರಿವರ್ತನೆ ನಿಯಮ ಸರಳೀಕರಣ

ಆಡಳಿತದಲ್ಲಿ ಸರಳೀಕರಣ ಪಾರದರ್ಶಕತೆ ಜಾರಿಗೊಳಿಸುವ ಮುಖಾಂತರ ಆಡಳಿತದಲ್ಲಿ ಗಣನೀಯ ಸುಧಾರಣೆ ತರುವ ಉದ್ದೇಶದಿಂದ  ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಡಿ.23 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 95ರತಿದ್ದುಪಡಿಗೆ ಹೊರಡಿಸಲಾಗಿರುವ ಅಧಿಸೂಚನೆಯಲ್ಲಿ

ಕುಟುಂಬಗಳಿಗೆ ಹಳ್ಳಿಗಳಲ್ಲಿ ಉಳಿಯಲು ಘನತೆ, ಭದ್ರತೆ, ವಿಶ್ವಾಸ ನೀಡುವ ಭರವಸೆಯೇ “MGNREGA”

MGNREGA ಕೇವಲ ಕಲ್ಯಾಣ ಕಾರ್ಯಕ್ರಮವಲ್ಲ, ಬದಲಾಗಿ ಗ್ರಾಮೀಣ ಕುಟುಂಬಗಳಿಗೆ ತಮ್ಮ ಹಳ್ಳಿಗಳಲ್ಲಿ ಉಳಿಯಲು ಘನತೆ, ಭದ್ರತೆ ಮತ್ತು ವಿಶ್ವಾಸವನ್ನು ನೀಡುವ ಭರವಸೆ ಎಂದು ಕರ್ನಾಟಕದ ಐಟಿ, ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಪ್ರಿಯಾಂಕ್