Wednesday, August 12, 2026
Menu

ಮೀಸಲಾತಿ ಭಿಕ್ಷೆಯಲ್ಲ, ಅದು ಶೋಷಿತರ ಹಕ್ಕು: ಸಾಮಾಜಿಕ ನ್ಯಾಯ ದಿನಾಚರಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಪ್ರತಿಯೊಬ್ಬರಿಗೂ ಕೂಡ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ಸಿಗಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಪ್ರತಿಪಾದಿಸಿದರು. ಇಂದು ಅವರು ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಆಶ್ರಯದಲ್ಲಿ ಆಯೋಜಿಸಿದ್ದ ಸಾಮಾಜಿಕ ನ್ಯಾಯ ದಿನಾಚರಣೆ ಮತ್ತು ಮಂಡಲ್ ವರದಿ ಜಾರಿಯ 36ನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ, ಬಳಿಕ ಮಾತನಾಡಿದರು, ರವಿವರ್ಮ ಕುಮಾರ್‌ ಅವರು

ಹೆಸರಘಟ್ಟದಲ್ಲಿ ಭಾರತದ ಮೊದಲ ಕ್ವಾಂಟಮ್ ಸಿಟಿ: ಸಿಎಂ ಡಿಕೆ ಶಿವಕುಮಾರ್

ಕರ್ನಾಟಕ ಕ್ವಾಂಟಮ್ ಮಿಷನ್ ಬೆಂಬಲದೊಂದಿಗೆ ಬೆಂಗಳೂರು ಈಗಾಗಲೇ ನವೋದ್ಯಮ ಮತ್ತು ಜಾಗತಿಕ ತಂತ್ರಜ್ಞಾನ ಕಂಪನಿಗಳ ಬೆಳವಣಿಗೆಗೆ ಪೂರಕ ಪರಿಸರ ವ್ಯವಸ್ಥೆಯನ್ನು ಹೊಂದಿದ್ದು, ಹೆಸರಘಟ್ಟದಲ್ಲಿ ಭಾರತದ ಮೊದಲ ‘ಕ್ವಾಂಟಮ್ ಸಿಟಿ’ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಸೈನ್ಸ್

ಆ.14 ರಂದು ವಿಧಾನ ಪರಿಷತ್‌ ನೂತನ ಉಪಸಭಾಪತಿ, ಸಭಾಪತಿ ಆಯ್ಕೆ: ಮುಖ್ಯಮಂತ್ರಿ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜಿನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಬದಲಿ ವ್ಯವಸ್ಥೆ ಆಗುವವರೆಗೂ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ

ವಿಧಾನಪರಿಷತ್‌ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ

ಕರ್ನಾಟಕ ವಿಧಾನಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜೀನಾಮೆ ನೀಡುವಂತೆ ಹೊರಟ್ಟಿ ಅವರಿಗೆ ಹೇಳಿದ್ದರು. ಅದರಂತೆ ಈಗ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೊದಲು ಮುಂಗಾರು ಅಧಿವೇಶನ ಆರಂಭವಾದ ಬಳಿಕ ಅಂದರೆ ಆಗಸ್ಟ್ 14

ವರ್ಕ್ ಫ್ರಂ ಹೋಂ ಆಮಿಷವೊಡ್ಡಿ ಕೋಟ್ಯಾಂತರ ರೂ. ವಂಚಿಸಿದ ದಂಪತಿ ಅರೆಸ್ಟ್‌

ವರ್ಕ್ ಫ್ರಂ ಹೋಂ ಉದ್ಯೋಗದ ಆಮಿಷ ಒಡ್ಡಿ ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ವಂಚಿಸಿದ್ದ ದಂಪತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಿರಣ್‌ ಮತ್ತು ಆತನ ಪತ್ನಿ ಆರತಿ ಬಂಧಿತ ವಂಚಕರು. ಇವರು ‘ಕಾಳಿಕಾ ದೇವಿ ಎಂಟರ್‌ಪ್ರೈಸಸ್’ ಎಂಬ ನಕಲಿ

ತುರ್ತು ಸೇವೆಗೆ 450 ಹೊಸ ಅಂಬುಲೆನ್ಸ್, 3,500 ಹುದ್ದೆಗಳ ಭರ್ತಿಗೂ ಅನುಮತಿ: ಸಚಿವ ಖಾದರ್

ರಾಜ್ಯದ 60 ರಿಂದ 70 ವರ್ಷದ ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ರಕ್ಷಣೆ ಒದಗಿಸುವ ಉದ್ದೇಶದಿಂದ ‘ಸಂಧ್ಯಾ ಕಿರಣ’ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಸಚಿವ ಯು.ಟಿ. ಖಾದರ್  ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ತುರ್ತು ವೈದ್ಯಕೀಯ ಸೇವೆ ಬಲಪಡಿಸುವ

ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ: ಸಿಎಂ 

ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿಯ 3 ಉದ್ಯಾನ ನಿರ್ಮಾಣ ಮಾಡಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಲಾಲ್ ಬಾಗ್ ನಲ್ಲಿ ‘ಗಂಗ ಸಾಮ್ರಾಜ್ಯ ವೈಭವ’ ಪರಿಕಲ್ಪನೆಯಲ್ಲಿ ಆಯೋಜಿಸಲಾಗಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ  ಚಾಲನೆ ನೀಡಿ,

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘಕ್ಕೆ ಜಾಗ ನೀಡಲು ಬದ್ಧ: ಸಿಎಂ ಡಿಕೆ ಶಿವಕುಮಾರ್

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗೆ ಜಾಗ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಿಧಾನಸೌಧ ಸುತ್ತಮುತ್ತ ಜಾಗ ಹುಡುಕಬೇಕು, ಹೊರ ಭಾಗದಲ್ಲಾದರೆ ದೊಡ್ಡ ಜಾಗ ನೀಡಲು ಸಿದ್ಧ” ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಅಖಿಲ ಕರ್ನಾಟಕ ರಾಜ್ಯ

ಬಿಡದಿ ಟೌನ್‌ಶಿಪ್‌ ವಿರುದ್ಧ ಸದನದಲ್ಲಿ ಬಿಜೆಪಿ-ಜೆಡಿಎಸ್‌ ಒಂದಾಗಿ ಹೋರಾಟ: ಆರ್‌ ಅಶೋಕ

ರಿಯಲ್‌ ಎಸ್ಟೇಟ್‌ ಮಾಫಿಯಾಗಾಗಿ ನಡೆಯುತ್ತಿರುವ ಬಿಡದಿ ಟೌನ್‌ಶಿಪ್‌ ಯೋಜನೆಯ ವಿರುದ್ಧ ಬಿಜೆಪಿ-ಜೆಡಿಎಸ್‌ ಒಂದಾಗಿ ಹೋರಾಟ ನಡೆಸಲಿದೆ. ಸದನದ ಒಳಗೆ ಹಾಗೂ ಹೊರಗೆ ಒಟ್ಟಾಗಿ ಹೋರಾಟ ನಡೆಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ವಿರೋಧ

ಮೈಸೂರು ಮಹಿಳೆಯ ಮಂತ್ರದಂಡಕ್ಕೆ ಮರುಳಾಗಿ 31 ಲಕ್ಷ ರೂ. ಕಳಕೊಂಡ ಉದ್ಯಮಿ

ಪತ್ರಿಕೆಯೊಂದರಲ್ಲಿ “ನನ್ನ ಬಳಿ ಮಂತ್ರದಂಡ ಇದೆ, ನಿಮ್ಮನ್ನು ಕೋಟ್ಯಾಧಿಪತಿ ಮಾಡುತ್ತೇನೆ” ಎಂದು ಮೈಸೂರಿನ ಮಹಿಳೆ ನೀಡಿದ್ದ ಜಾಹೀರಾತು ನಂಬಿ ಆಸೆಗೆ ಬಿದ್ದ ಮಂಗಳೂರಿನ ಸುಶಿಕ್ಷಿತ ಉದ್ಯಮಿ 31 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮಂಗಳೂರಿನ ಕೃಷಿಕ ಹಾಗೂ ಸೆರಾಮಿಕ್ಸ್ ಕಂಪನಿ ಉದ್ಯೋಗಿ ಸೂರಜ್