ರಾಜ್ಯ
ಸಂವಿಧಾನಕ್ಕೆ ಮೂರು ಕಾಸಿನ ಬೆಲೆ ಇಲ್ಲದಂತೆ ಮಾಡಿದ್ದು ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ
ಸಂವಿಧಾನ ರಕ್ಷಕರೆಂದು ಹೇಳಿಕೊಳ್ಳುವ ಹಾಗೂ ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವ ಕಾಂಗ್ರೆಸ್ ಪಕ್ಷದ ಪ್ರಧಾನಿ ಇಂದಿರಾ ಗಾಂಧಿಯವರು 1975ರಲ್ಲಿ ಮಾಡಿದ್ದೇನು? ತುರ್ತು ಪರಿಸ್ಥಿತಿ ಹೇರಿ ಎರಡರಿಂದ ಎರಡೂವರೆ ವರ್ಷ ಸಂವಿಧಾನಕ್ಕೆ ಮೂರು ಕಾಸಿನ ಬೆಲೆ ಇಲ್ಲದಂತೆ ಮಾಡಿದ್ದು ಕಾಂಗ್ರೆಸ್ ಪಕ್ಷದವರು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ಷೇಪಿಸಿದ್ದಾರೆ. ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಇವತ್ತು ತಾವು ಸಂವಿಧಾನ ರಕ್ಷಿಸುವುದಾಗಿ ಭಾಷಣ ಹೊಡೆಯುತ್ತಾರೆ ಎಂದು
ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ: ಮುಖ್ಯಮಂತ್ರಿ
ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರ ವತಿಯಿಂದ ರವೀಂದ್ರ
ಹಿರಿಯ ನಟ ಉಮೇಶ್ ಅಂತಿಮ ದರ್ಶನ ಪಡೆದ ಸಿಎಂ, ಡಿಸಿಎಂ
ಸುಮಾರು 900 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಖ್ಯಾತ ಹಾಸ್ಯ ಕಲಾವಿದರಾಗಿ ಗುರುತಿಸಿಕೊಂಡಿದ್ದ ಉಮೇಶ್ ರವರ ನಿಧನ ದು:ಖ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಉಮೇಶ್ ರವರ ಪಾರ್ಥೀವ ಶರೀರವನ್ನು ದರ್ಶನ ಮಾಡಿ ಕುಟುಂಬಕ್ಕೆ ಸಾಂತ್ವನ
ಸ್ವಾಮೀಜಿ ಬೀದಿಗೆ ಇಳಿಯದಿದ್ದರೆ ದೇವೇಗೌಡರು ಸಿಎಂ ಆಗುತ್ತಿದ್ದರೇ? ಕುಮಾರಸ್ವಾಮಿ ಎಂದೂ ಒಕ್ಕಲಿಗ ಸ್ವಾಮೀಜಿ, ಜಾತಿ ಬಳಸಿಕೊಂಡಿಲ್ವಾ?
“ಕುಮಾರಸ್ವಾಮಿ ಬಹಳ ದೊಡ್ಡವರು, ಅವರು ಯಾರ ಬೆಂಬಲವನ್ನೂ ಪಡೆಯುವುದಿಲ್ಲ, ಒಕ್ಕಲಿಗರ ಮಠ, ಒಕ್ಕಲಿಗರ ಸಂಘ, ಒಕ್ಕಲಿಗ ಜಾತಿಯನ್ನು ಎಂದೂ ಉಪಯೋಗಿಸಿಕೊಂಡಿಲ್ಲ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಛೇಡಿಸಿದ್ದು, ಒಕ್ಕಲಿಗ ಮಠದ ಹಿರಿಯ ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗುತ್ತಿದ್ದರೇ ಎಂದು
ನನ್ನ, ಸಿಎಂ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಡಿಕೆ ಶಿವಕುಮಾರ್ ಪುನರುಚ್ಚಾರ
“ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ” ಡಿಸಿಎಂ ಡಿಕೆ ಶಿವಕುಮಾರ್ ಅವರು ಪುನರುಚ್ಚರಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ನಿಮ್ಮ ಹಾಗೂ ಸಿಎಂ ಉಪಹಾರ ಸಭೆ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಹೊಸ
ಬೆಂಗಳೂರಿನಲ್ಲಿ ತಾಪಮಾನ 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆ?
ಬಂಗಾಳಕೊಲ್ಲಿಯಲ್ಲಿ ಮತ್ತು ಶ್ರೀಲಂಕಾ ಕರಾವಳಿ ಭಾಗದಲ್ಲಿ ದಿತ್ವಾ ಚಂಡಮಾರುತ ಎಫೆಕ್ಟ್ ತೀವ್ರಗೊಂಡಿದ್ದು, ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ತೀವ್ರ ಏರಿಕೆಯಾಗುತ್ತಿದೆ. ಕಳೆದೊಂದು ವಾರದಿಂದ ಬೆಂಗಳೂರು ಚಳಿಗೆ ಹೈರಾಣಾಗಿದ್ದು, ಮಧ್ಯಾಹ್ನದ ಸಮಯದಲ್ಲೂ ಮೈ ನಡುಗಿಸುತ್ತಿದೆ. ಶನಿವಾರ ಮತ್ತು ಇಂದು ಬೆಂಗಳೂರಿನ ತಾಪಮಾನ ಹಠಾತ್ ಕುಸಿದು
ವಿಶೇಷಚೇತನರಿಗೆ ಪ್ರತ್ಯೇಕ ನಿಗಮ/ಮಂಡಳಿ ರಚನೆ: ಮುಖ್ಯಮಂತ್ರಿಗೆ ಸಚಿವ ಸಂತೋಷ್ ಲಾಡ್ ಪತ್ರ
ಸರ್ಕಾರದ ಸವಲತ್ತುಗಳನ್ನು ತ್ವರಿತವಾಗಿ ಮತ್ತು ನೇರವಾಗಿ ತಲುಪಿಸಲು ಸಾಧ್ಯವಾಗುವಂತೆ ವಿಶೇಷಚೇತನರಿಗಾಗಿಯೇ ಒಂದು ಪ್ರತ್ಯೇಕ ನಿಗಮ ಅಥವಾ ಮಂಡಳಿಯ ಸ್ಥಾಪನೆಯ ಅಗತ್ಯವಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿರುವ ಸಚಿವರು,
ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆಗೆ 20 ದಿನ ಅಧಿವೇಶನ ನಡೆಸಿ: ಆರ್ ಅಶೋಕ ಒತ್ತಾಯ
ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಅಧಿವೇಶನ ಸಂಬಂಧ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ
ಎಲ್ಲ ಧರ್ಮದವರು ಭೂ ವರಾಹಸ್ವಾಮಿಗೆ ಪ್ರಾರ್ಥನೆ ಸಲ್ಲಿಸುವುದು ಖುಷಿ ವಿಚಾರ: ಡಿಕೆ ಶಿವಕುಮಾರ್
ಮಂಡ್ಯ ಜಿಲ್ಲೆಯ ಅದ್ಭುತ, ಐತಿಹಾಸಿಕ ದೇವಾಲಯವಾಗಿ ಭೂ ವರಾಹ ಸ್ವಾಮಿ ಸನ್ನಿಧಿ ಪ್ರಸಿದ್ಧವಾಗಿದೆ.. ಎಲ್ಲಾ ಧರ್ಮದ ಜನ ಈ ದೇವಾಲಯಕ್ಕೆ ಬಂದು ಪ್ರಾರ್ಥನೆ ಸಲ್ಲಿಸುತ್ತಾರೆ. ಅದನ್ನು ನೋಡಿ ಖುಷಿ ಎನಿಸಿತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಭೂವರಾಹಸ್ವಾಮಿ ದೇವಾಲಯದ ಬಳಿ
ಸಿದ್ದರಾಮಯ್ಯ ಮಾತು ತಪ್ಪಿದ ಮಗ ಆಗ್ತಾರಾ: ಶ್ರೀ ರಾಮುಲು
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ ಅವರು ಬ್ರೇಕ್ ಫಾಸ್ಟ್, ಲಂಚ್, ಡಿನ್ನರ್ ಮೀಟಿಂಗ್ ಮಾಡಿಕೊಂಡು ಓಡಾಡುತ್ತಿದ್ದಾರೆ. ಜೊತೆಗೆ ಹೈಕಮಾಂಡ್ ತೀರ್ಮಾನಕ್ಕೆ ಬದ್ದ ಅಂತ ಹೇಳ್ತಾಯಿದ್ದಾರೆ. ಇದೆಲ್ಲ ರಾಜ್ಯದ ಜನರಿಗೆ ಬೇಕಾಗಿಲ್ಲ. ಅಭಿವೃದ್ಧಿ ಒಂದೇ ಬೇಕಾಗಿದೆ. ಸಿಎಂ ಸಿದ್ದರಾಮಯ್ಯ “ತಮ್ಮ ಸ್ಥಾನ




