ರಾಜ್ಯ
ಚಿಲ್ಲರೆ ನೆಪದಲ್ಲಿ ಬಸ್‌ನಿಂದ ಪ್ರಯಾಣಿಕರ ಇಳಿಸುವಂತಿಲ್ಲ: ಬೈರತಿ ಸುರೇಶ್
ಚಿಲ್ಲರೆ ವಿಚಾರದಲ್ಲಿ ಪ್ರಯಾಣಿಕರನ್ನು ಶೋಷಣೆ ಮಾಡಬಾರದು, ಚಿಲ್ಲರೆ ನೆಪವೊಡ್ಡಿ ಪ್ರಯಾಣಿಕರನ್ನು ಅರ್ಧ ದಾರಿಯಲ್ಲಿ ಇಳಿಸುವುದು ಅಮಾನವೀಯ, ಹೀಗಾಗಿ ಇಳಿಸುವಂತಿಲ್ಲ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಬಿಎಂಟಿಸಿ ಸೇರಿದಂತೆ ಎಲ್ಲಾ ಸಾರಿಗೆ ನಿಗಮಗಳ ನಿರ್ವಾಹಕರು ಮತ್ತು ಚಾಲಕರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ಪ್ರಯಾಣಿಕರನ್ನು ಕೆಳಗಿಳಿಸುವ ನಿರ್ವಾಹಕರ ಧೋರಣೆ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಬಿಎಂಟಿಸಿ ಬಸ್ಸಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ನನಗೂ ಇಂತಹ
ತಮಿಳುನಾಡಿಗೆ ಕಾವೇರಿ ನೀರು ಆದೇಶ: ಮೇಲ್ಮನವಿಗೆ ಸಿದ್ಧತೆಯೆಂದ ಸಿಎಂ ಡಿಕೆ ಶಿವಕುಮಾರ್
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಅಡ್ವೊಕೇಟ್ ಜನರಲ್, ಕಾನೂನು ತಜ್ಞರು ಹಾಗೂ ಅಧಿಕಾರಿಗಳ ಜೊತೆ ಸಭೆ ಮಾಡಲಾಗಿದ್ದು,
ಅತ್ಯಾಚಾರಿಗಳ ಸಮರ್ಥಿಸಿದ್ದ ಪ್ರಹ್ಲಾದ ಜೋಷಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆ ತಗ್ಗಿಸುವ ವಿಚಾರ: ಮಾಜಿ ಸಿಎಂ ಸಿದ್ದರಾಮಯ್ಯ
ಕರ್ನಾಟಕದ ಸಂಸದರೊಬ್ಬರು ದೇಶದ ಶಿಕ್ಷಣ ಸಚಿವರಾದರೆಂದು ನಾವೆಲ್ಲರೂ ಹೆಮ್ಮೆ ಪಡಬೇಕಾಗಿತ್ತು, ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯ ಅತ್ಯಾಚಾರಿಗಳನ್ನು ಸಮರ್ಥಿಸಿದ್ದ ಸಂಸದ ಪ್ರಹ್ಲಾದ ಜೋಷಿ ಅವರನ್ನು ಶಿಕ್ಷಣ ಸಚಿವನನ್ನಾಗಿ ಮಾಡಿ ಕನ್ನಡಿಗರೆಲ್ಲರೂ ತಲೆತಗ್ಗಿಸುವ ಹಾಗೆ ಮಾಡಿದ್ದಾರೆ ಎಂದು ಮಾಜಿ ಸಿಎಂ
ಚಿತ್ರದುರ್ಗ ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿ: ಆರ್ ಅಶೋಕ
ಚಿತ್ರದುರ್ಗ ಜಿಲ್ಲೆಯಲ್ಲಿ ರೈತರ ಹೊಲಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ, ಚಿತ್ರದುರ್ಗ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿ ರೈತರಿಗೆ ಪರಿಹಾರ ವಿತರಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಹಿರಿಯೂರು ತಾಲೂಕಿನ ಸೂರಗೊಂಡನಹಳ್ಳಿಯಲ್ಲಿ ಸೂರ್ಯಕಾಂತಿ
ಮಂಡ್ಯ-ಮೈಸೂರಲ್ಲಿ ಕಾವೇರಿ ಕಿಚ್ಚು: ಪ್ರತಿಭಟನೆ, ರಸ್ತೆ ತಡೆ
ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶದ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ ರೈತರು ರಸ್ತೆ ತಡೆ, ಅರೆ ಬೆತ್ತಲೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು. ಮೈಸೂರು ಜಿಲ್ಲಾ ರೈತ ಸಂಘದ ಬುಧವಾರ ಮೈಸೂರಿನ ಹಳೆ ಕೋರ್ಟ್ ಮುಂಭಾಗದಲ್ಲಿರುವ
ಕಾವೇರಿ ವಿಚಾರದಲ್ಲಿ ರಾಜ್ಯದ ಹಿತ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ: ಆರ್ ಅಶೋಕ
ಕೆಆರ್‌ಎಸ್‌ನಲ್ಲಿ ನೀರಿನ ಕೊರತೆ ಇದೆ ಎಂದು ತಿಳಿಸಿಕೊಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಆದ್ದರಿಂದಲೇ ಮರಣ ಶಾಸನದಂತಹ ಆದೇಶ ರಾಜ್ಯಕ್ಕೆ ಸಿಕ್ಕಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ
ಕರ್ನಾಟಕ ವಿಧಾನಮಂಡಲ ಅಧಿವೇಶನ ಆಗಸ್ಟ್ 13-27ರವರೆಗೆ
ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನವು ಆಗಸ್ಟ್ ೧೩ರಿಂದ ೨೭ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಅಧಿಸೂಚನೆ ಪ್ರಕಟಿಸಿದೆ. ಆಗಸ್ಟ್ 13ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್‌ಗಳ ಅಧಿವೇಶನ ಆರಂಭವಾಗಲಿದ್ದು,
ವಿದ್ಯಾರ್ಥಿಗಳ ಸುಸೈಡ್, ಅಸಹಜ ಸಾವು ಸಂಭವಿಸಿದ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ಕಡ್ಡಾಯ
ವಿದ್ಯಾರ್ಥಿಗಳ ಆತ್ಮಹತ್ಯೆ ಅಥವಾ ಯಾವುದೇ ಅಸಹಜ ಸಾವು ಸಂಭವಿಸಿದ ಕೂಡಲೇ ಸಂಬಂಧಿತ ಪೊಲೀಸ್ ಠಾಣೆಗೆ ಕಡ್ಡಾಯವಾಗಿ ಮಾಹಿತಿ ನೀಡುವಂತೆ ಸರ್ಕಾರ ಆದೇಶಿಸಿದೆ. ವಿದ್ಯಾರ್ಥಿಗಳ ಸುರಕ್ಷತೆ, ಶಿಕ್ಷಣ ಸಂಸ್ಥೆಗಳ ಹೊಣೆಗಾರಿಕೆಯನ್ನು ಬಲಪಡಿಸುವ ಕ್ರಮವಾಗಿ ಸರ್ಕಾರದ ಕರ್ನಾಟಕ ಉನ್ನತ ಶಿಕ್ಷಣ ಇಲಾಖೆಯು ಅನುದಾನಿತ ಹಾಗೂ
ರೇಣುಕಾಸ್ವಾಮಿ ಕೊಲೆ ಕೇಸ್ ಸಾಕ್ಷಿಗಳ ಬೆದರಿಸಿದ್ದವರಿಗೆ ಜಾಮೀನು
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರರಿಗೆ ಬೆದರಿಕೆ ಹಾಕಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ದರ್ಶನ್ ಗ್ಯಾಂಗ್‌ನ ಸುಹಾಸ್, ವೈಭವ್ ಮತ್ತು ಪುನೀತ್ ಎಂಬ ಮೂವರು ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಈ ಮೂವರು ಆರೋಪಿಗಳು ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ
ಮೇಕೆದಾಟುವಿಗೆ ಯಾವುದೇ ರಾಜ್ಯದ ಅನುಮತಿ ಅಗತ್ಯವಿಲ್ಲ: ಜಲಶಕ್ತಿ ಸಚಿವಾಲಯ
ಮೇಕೆದಾಟು ಜಲಾಶಯ ಯೋಜನೆಗೆ ತಮಿಳುನಾಡು, ಕೇರಳ ಅಥವಾ ಪುದುಚೇರಿಯ ಸಮ್ಮತಿ ಪಡೆಯುವ ಅಗತ್ಯವೇ ಇಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕಕ್ಕೆ ತನ್ನ ಭೂಭಾಗದಲ್ಲಿ ಜಲಾಶಯ ನಿರ್ಮಿಸುವ ಕಾನೂನುಬದ್ಧ ಹಕ್ಕು ಇದೆ ಎಂದು




