Monday, September 28, 2026
Menu

ಸಿಎಂ ಅಧ್ಯಕ್ಷತೆಯಲ್ಲಿ ರಾಜ್ಯ ಸಂಸದರ ಸಭೆ: ಪ್ರಮುಖ ಯೋಜನೆಗಳಿಗೆ ಕೇಂದ್ರದ ನೆರವು, ಅನುದಾನ ಚರ್ಚೆ

ಜಲಸಂಪನ್ಮೂಲ ಇಲಾಖೆಯನ್ನು ಹೊರತುಪಡಿಸಿ ಕೇಂದ್ರ ಸರ್ಕಾರದಿಂದ ಬಾಕಿ ಇರುವ ಪ್ರಮುಖ ಯೋಜನೆಗಳಿಗೆ ಅನುಮೋದನೆ, ಅನುದಾನಗಳು ಸೇರಿದಂತೆ ಒಟ್ಟು 13 ಅಂಶಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ್  ಕೇಂದ್ರ ಸಚಿವರು ಹಾಗೂ ರಾಜ್ಯದ ಸಂಸದರ ಜತೆ ಚರ್ಚೆ ನಡೆಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಸಿಎಂ  ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಸಂಸದರ ಜೊತೆಗಿನ ಸಭೆಯಲ್ಲಿ ಈ ಯೋಜನೆಗಳ ಅನುಮೋದನೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮನವಿ ಮಾಡಲಾಯಿತು. ರಾಜ್ಯದ ವಿವಿಧ

ಕೆಪಿಎಸ್ಸಿನಲ್ಲಿ 400 ಪಶು ವೈದ್ಯಾಧಿಕಾರಿ ಹುದ್ದೆ 800 ಕೋಟಿ ರೂ.ಗೆ ಮಾರಾಟ: ಆರ್‌ ಅಶೋಕ

ಕೆಪಿಎಸ್ಸಿನಲ್ಲಿ ೪೦೦ ಪಶು ವೈದ್ಯಾಧಿಕಾರಿ ಹುದ್ದೆ ತಲಾ ಎರಡು ಕೋಟಿ ರೂ.ಗಳಂತೆ ೮೦೦ ಕೋಟಿ ರೂ.ಗಳಿಗೆ ಮಾರಾಟ ಆಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಪಿಎಸ್‌ಸಿ ನಲ್ಲಿ 800 ಕೋಟಿ ಡೀಲ್

ಈ ವಾರ ಸಂಪುಟ ವಿಸ್ತರಣೆ ಪೂರ್ಣ, ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ: ಮುಖ್ಯಮಂತ್ರಿ

ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಿಎಂ ಡಿ ಕೆ ಶಿವಕುಮಾರ್  ಹೇಳಿದ್ದಾರೆ.  ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ  ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದಾಗ, ಸಚಿವ ಸಂಪುಟ

ಹಿರಿಯೂರಿನ 14 ಕೆರೆಗಳಿಗೆ ನೀರು ತುಂಬಿಸಲು 244 ಕೋಟಿ ರೂ. ಯೋಜನೆ: ಸಿಎಂ ಡಿಕೆ ಶಿವಕುಮಾರ್‌

ಹಿರಿಯೂರಿನ  14 ಕೆರೆಗಳಿಗೆ ನೀರು ತುಂಬಿಸಬೇಕು ಎನ್ನುವುದು  ಮಾಜಿ ಸಚಿವ ದಿವಂಗತ ಡಿ. ಸುಧಾಕರ ಅವರ  ಕನಸಾಗಿತ್ತು. ಈ ಯೋಜನೆ ಮಾಡಲು ನನ್ನ ಬಳಿ ಅವರು ಕೊನೆಯದಾಗಿ ಮಾತು ತೆಗೆದುಕೊಂಡಿದ್ದರು. ಆ ಮಾತನ್ನು ಉಳಿಸಿಕೊಳ್ಳಲು  ಸಚಿವ ಸಂಪುಟದಲ್ಲಿ 244 ಕೋಟಿ ರೂ.

ರಾಜ್ಯದಲ್ಲಿ ಬರ, ರಾಷ್ಟ್ರೀಯ ವಿಪತ್ತು ಘೋಷಿಸುವಂತೆ ಕೇಂದ್ರಕ್ಕೆ ಮನವಿ: ಡಿಸಿಎಂ ಪರಮೇಶ್ವರ್‌

ಬರದಿಂದ ರಾಜ್ಯದಲ್ಲಿ ಗಂಭೀರ ಪರಿಸ್ಥಿತಿ ಇದೆ. ರಾಷ್ತ್ರೀಯ ವಿಪತ್ತು ಎಂದು ಘೋಷಿಸಲು ಕೇಂದ್ರ ಸರ್ಕಾರವನ್ನು ಕೋರಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಹೇಳಿದರು. ಚಿತ್ರದುರ್ಗ  ನಗರದ ಹೊರ ವಲಯದ ಮುರುಘಾ ಮಠದ ಸಭಾಂಗಣದಲ್ಲಿ ವಿಭಾಗ ಮಟ್ಟದ ಸಭೆಯಲ್ಲಿ ಮಾತನಾಡಿದರು.

ಬರದಿಂದ ರೈತರ ಬದುಕಿಗೆ ತೊಂದರೆ ಆಗದಂತೆ ಕ್ರಮ ನಮ್ಮ ಹೊಣೆ: ಸಚಿವರು, ಅಧಿಕಾರಿಗಳಿಗೆ ಸಿಎಂ ಸೂಚನೆ

ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಆಗ ಎಲ್ಲಾ ಮಂತ್ರಿಗಳು ಕೈ ಜೋಡಿಸಿ ಕೆಲಸ ಮಾಡಬೇಕಾಗುತ್ತದೆ. ಒಟ್ಟಾಗಿ ಇಡೀ ರಾಜ್ಯದ ಬರ ಪರಿಸ್ಥಿತಿಯನ್ನು ಅವಲೋಕಿಸಬೇಕು. ಹಳ್ಳಿಗಳಲ್ಲಿ ರೈತರ ಬದುಕಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಇದೇ ನಮ್ಮ ಮುಂದಿರುವ ಹೊಣೆಗಾರಿಕೆ

ಕೆಪಿಎಸ್‌ಸಿ ಅಧ್ಯಕ್ಷನ ಆಯ್ಕೆ ಮಾಡಿದ ಬಿಜೆಪಿಯವರಿಂದಲೇ ವಜಾಗೊಳಿಸಲು ರಾಜ್ಯಪಾಲರಿಗೆ ಪತ್ರ: ಸಿಎಂ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದನ್ನು ಬೇಡ ಎಂದು ಹೇಳಲು ಆಗುತ್ತದೆಯೇ? ನನ್ನ ವಿರುದ್ಧ ಪ್ರತಿಭಟನೆ ಮಾಡುವವರನ್ನು ನಾನು ಬೇಡ ಎನ್ನಲು ಸಾಧ್ಯವೇ? ಮಾಧ್ಯಮದವರೂ ಪ್ರತಿಭಟನೆ ಮಾಡುತ್ತಾರೆ. ಇದನ್ನು ಬೇಡ ಎನ್ನಲು ಆಗುತ್ತದೆಯೇ? ಕೆಪಿಎಸ್‌ ಸಿ ಅಧ್ಯಕ್ಷನ ನೇಮಕ  ನಾವು ಮಾಡಿದ್ದಲ್ಲ. ಬಿಜೆಪಿಯವರೇ

ಹಾರಂಗಿ ಒಳಹರಿವು ಹೆಚ್ಚಳ: ನದಿಗೆ ನೀರು ಹರಿಸುವ ಸಾಧ್ಯತೆ

ಕೊಡಗಿನಲ್ಲಿ ಕಳೆದೊಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಕುಶಾಲನಗರದಲ್ಲಿ ಹಾರಂಗಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ಇದೆ. ಹೀಗಾಗಿ ಯಾವುದೇ ಕ್ಷಣದಲ್ಲಾದರೂ ಕಾವೇರಿ ನದಿಗೆ ನೀರು ಬಿಡುವ ಸಾಧ್ಯತೆ ಇದೆ. ಸ್ಥಳೀಯರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಲಾಶಯದಲ್ಲಿ ನೀರು ಶೀಘ್ರದಲ್ಲೇ

ಮಾಜಿ ಸಚಿವ ಸಿ.ವೀರಣ್ಣ ನಿಧನ

ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ಸಿ.ವೀರಣ್ಣ (86) ಕೊರಟಗೆರೆಯ ತಮ್ಮ ತೋಟದ ಮನೆಯಲ್ಲಿ ನಿಧನರಾಗಿದ್ದಾರೆ. ವಕೀಲರಾಗಿದ್ದ ವೀರಣ್ಣ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದು, ಸಚಿವರಾಗಿ, ಡೆಪ್ಯೂಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿ ರಾಜಕೀಯದಲ್ಲಿ ದೀರ್ಘಕಾಲ ಸಕ್ರಿಯರಾಗಿದ್ದರು. ಅವರಿಗೆ ಇಬ್ಬರು ಗಂಡು ಮಕ್ಕಳು

ವಿದ್ಯಾರ್ಥಿ ಪ್ರತಿಭಟನೆ: ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರವೆಂದ ಸಿಎಂ

ನೀಟ್‌ ಪರೀಕ್ಷಾ ಅಕ್ರಮ ಖಂಡಿಸಿ ಹಾಗೂ ಅದರ ಹೊಣೆ ಹೊತ್ತು ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ  ವಿದ್ಯಾರ್ಥಿಗಳು ಮತ್ತು ಯುವಜನರು  ಪ್ರತಿಭಟನೆ ಆರಂಭಿಸಿ ತಿಂಗಳಾದ ಬಳಿಕ ಎಚ್ಚೆತ್ತುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ  ಹಾಗೂ ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆ ಬಗ್ಗೆ