ರಾಜ್ಯ
ರಾಜ್ಯದಲ್ಲಿ ಕೋವಿಡ್ ಅಕ್ರಮ: ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದ ಜಸ್ಟಿಸ್ ಡಿ ಕುನ್ಹಾ ಆಯೋಗ
ರಾಜ್ಯದಲ್ಲಿ ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಹಾಗೂ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಮತ್ತು ಅವ್ಯವಹಾರಗಳ ಕುರಿತಂತೆ ತನಿಖೆ ನಡೆಸಿರುವ ನ್ಯಾ. ಜಾನ್ ಮೈಕಲ್ ಡಿ ಕುನ್ಹಾ ಆಯೋಗ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದೆ. ಬೆಳಗಾವಿ ಜಿಲ್ಲೆ ವ್ಯಾಪ್ತಿಯ ಕೋವಿಡ್ ತನಿಖೆ ಕುರಿತ 684 ಕಡತ ಹಾಗೂ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ತನಿಖೆಯ 171 ಕಡತಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್
ಕೋಗಿಲು ಅಕ್ರಮ ನಿವಾಸಿಗಳ ಪೌರತ್ವ ಎನ್‌ಐಎ ತನಿಖೆಗೆ ವಹಿಸಿ: ಆರ್ ಅಶೋಕ ಆಗ್ರಹ
ಕೋಗಿಲು ಕ್ರಾಸ್‌ನ ಫಕೀರ್ ಬಡಾವಣೆ ಕ್ರಮೇಣ ಸ್ಲೀಪರ್ ಸೆಲ್‌ಗಳ ಕೇಂದ್ರವಾಗುವ ಅಪಾಯವಿದೆ. ಆದ್ದರಿಂದ ಅಕ್ರಮ ನಿವಾಸಿಗಳ ಪೌರತ್ವವನ್ನು ಸರ್ಕಾರ ಪರಿಶೀಲಿಸಬೇಕು. ಇದನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದ್ದಾರೆ. ಕೋಗಿಲು ಕ್ರಾಸ್‌ನಲ್ಲಿ ಒತ್ತುವರಿ ತೆರವು ಮಾಡಿದ
6,322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ಸಚಿವ ಎನ್.ಎಸ್. ಭೋಸರಾಜು ಖಡಕ್ ಸೂಚನೆ
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 2025-26ನೇ ಸಾಲಿನಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ವಿಳಂಬವಿಲ್ಲದೆ ಚುರುಕುಗೊಳಿಸಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು
ಚಾಮರಾಜನಗರದಲ್ಲಿ ರಾತ್ರಿ ಕಾರ್ಯಾಚರಣೆಯಲ್ಲಿ ಗಂಡು ಹುಲಿ ಸೆರೆ
ಚಾಮರಾಜನಗರದಲ್ಲಿ ಹೆಚ್ಚಾಗಿರುವ ಹುಲಿಗಳ ಹಾವಳಿ ನಿಯಂತ್ರಣಕ್ಕೆ ನಡೆಯುತ್ತಿರುವ ಆಪರೇಷನ್ 5 ಟೈಗರ್ಸ್ ಕಾರ್ಯಾಚರಣೆಯಲ್ಲಿ ಮಂಗಳವಾರ ರಾತ್ರಿ ಒಂದು ಗಂಡು ಹುಲಿ ಸೆರೆ ಸಿಕ್ಕಿದೆ. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ತಾಯಿ ಹುಲಿಯೊಂದಿಗೆ ನಾಲ್ಕು ಮರಿ ಹುಲಿಗಳು ಬೀಡುಬಿಟ್ಟಿರುವ ಚಾಮರಾಜನಗರ ತಾಲೂಕಿನ
ಕಂದಾಯ ನ್ಯಾಯಾಲಯಗಳೂ online ವ್ಯವಸ್ಥೆ
ಕಂದಾಯ ನ್ಯಾಯಾಲಯಗಳನ್ನು ಹೇಗೆ ನಡೆಸಬೇಕು ಎಂದು ಈ ಹಿಂದೆ ಯಾವುದೇ ಸ್ಪಷ್ಟ ನಿಯಮಗಳು ಇರಲಿಲ್ಲ. ಪರಿಣಾಮ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳು ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಅನೇಕ ಆದೇಶಗಳನ್ನು ಹೊರಡಿಸಿರುವ ಉದಾಹರಣೆಗಳು ಸಾಕಷ್ಟಿವೆ. ಹೀಗಾಗಿ ಕಂದಾಯ ನ್ಯಾಯಾಲಯಗಳನ್ನು ಮೊದಲು ಜನಸ್ನೇಹಿಗೊಳಿಸಬೇಕು ಹಾಗೂ
ವಿಬಿ-ಜಿ ರಾಮ್ ಜಿ ಕಾಯ್ದೆ ಉದ್ದೇಶ MNAREGA ವಿರುದ್ಧ: ಪಿಎಂಗೆ ಸಿಎಂ ಪತ್ರ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕಾ ಮಿಶನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯು, ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ. ಮೂಲ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ
ಉದಯಕಾಲ ಸಿಇಒ ಡಿ.ಬಿ. ಬಸವರಾಜು ಅವರಿಗೆ “ಪ್ರೈಡ್ ಆಫ್ ಕರ್ನಾಟಕ” ಪ್ರದಾನ
ಕನ್ನಡ ಜನಮಾನಸದ ಪತ್ರಿಕೆ ಉದಯಕಾಲದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಿ.ಬಿ. ಬಸವರಾಜು ಅವರು ಬೆಂಗಳೂರು ಪ್ರೆಸ್ ಕ್ಲಬ್‌ನ ಪ್ರತಿಷ್ಠಿತ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ ಸ್ವೀಕರಿಸಿದರು. ಬೆಂಗಳೂರು ಪ್ರೆಸ್ ಕ್ಲಬ್ ಆವರಣದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಡಿ.ಬಿ.ಬಸವರಾಜು
ದಾರಿ ತಪ್ಪಿಸುವ ಪತ್ರಕರ್ತರಿಗೆ ತರಬೇತಿ ಅಗತ್ಯ, ಜರ್ನಲಿಸ್ಟ್‌ಸ್ ಟ್ರೈನಿಂಗ್ ಕಾಲೇಜಿಗಾಗಿ ಒಂದು ಎಕರೆ ಘೋಷಿಸಿದ ಡಿಸಿಎಂ
ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪತ್ರಕರ್ತರಿಗೆ ತರಬೇತಿ ನೀಡಲು ಕಾಲೇಜು ಆರಂಭಿಸಿ. ಹಿರಿಯ ಪತ್ರಕರ್ತರ ಅನುಭವ ಬಳಸಿಕೊಂಡು ಅವರಲ್ಲಿ ನೈತಿಕ ಮೌಲ್ಯ ಬೆಳೆಸಿ. ಸರ್ಕಾರ ಇದಕ್ಕಾಗಿ ಒಂದು ಎಕರೆ ಜಾಗ ನೀಡಲು ಸಿದ್ಧ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು
ಹುಬ್ಬಳ್ಳಿಯ ಕೆಎಂಸಿಆರ್‌ಐ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ!
ಹುಬ್ಬಳ್ಳಿಯ ಕೆಎಂಸಿಆರ್‌ಐ ಆಸ್ಪತ್ರೆ ಮೇಲೆ ಲೋಕಾಯುಕ್ತರು ಮಂಗಳವಾರ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಔಷಧಿಗಳನ್ನು ಹೊರಗೆ ಬರೆದು ಕೊಡುತ್ತಿರುವ ಬಗ್ಗೆ ದೂರುಗಳಿದ್ದವು. ವ್ಯಕ್ತಿಯೋರ್ವ ಇಂಜೆಕ್ಷನ್‌ಗಾಗಿ ಪರದಾಡಿದ್ದ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಫಣೀಂದ್ರ
ಶಾಸಕ ವೀರೇಂದ್ರ ಪಪ್ಪಿಗೆ ಕೋರ್ಟ್ ಜಾಮೀನು
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಹಾಗೂ ಬೆಟ್ಟಿಂಗ್ ದಂಧೆ ಪ್ರಕರಣದಲ್ಲಿ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಗೆ ನಗರದ ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಇಡಿ ಪ್ರಕರಣದಲ್ಲಿ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು ಮಾಡಿರುವುದರಿಂದ ಪ್ರಕರಣದಲ್ಲಿ ಜೈಲು ಸೇರಿದ ನಾಲ್ಕು ತಿಂಗಳ




