ರಾಜ್ಯ
ಬೆಂಗಳೂರು ರೋಬಾಟಿಕ್ಸ್ ಅಂಡ್ ಎಐ ಇನ್ನೋವೇಷನ್ ಜೋನ್ ಆರಂಭಿಸಲು ತೀರ್ಮಾನ: ಸಿಎಂ ಡಿಕೆ ಶಿವಕುಮಾರ್
ನಾವು ಬೆಂಗಳೂರು ರೋಬೋಟಿಕ್ಸ್ ಮತ್ತು ಇನ್ನೋವೇಶನ್ ಝೋನ್ ಪ್ರಾರಂಭಿಸುತ್ತಿದ್ದೇವೆ, ಅಲ್ಲಿ ಸುಧಾರಿತ ಸಂಶೋಧನೆ, ಉತ್ಪನ್ನ ಅಭಿವೃದ್ಧಿ ಮತ್ತು ಸ್ಟಾರ್ಟ್‌ಅಪ್‌ಗಳು ಅಭಿವೃದ್ಧಿ ಹೊಂದಬಹುದು. ಜವಾಬ್ದಾರಿಯುತ ಮೂಲಸೌಕರ್ಯವಿಲ್ಲದೆ ಈ ಯಾವುದೇ ಡಿಜಿಟಲ್ ಬೆಳವಣಿಗೆಯು ಸುಸ್ಥಿರವಾಗಿರಲು ಸಾಧ್ಯವಿಲ್ಲ. ಅದಕ್ಕಾಗಿಯೇ ನಾವು ಭೂಮಿ, ವಿದ್ಯುತ್, ನೀರು, ಸಂಪರ್ಕ ಮತ್ತು ನವೀಕರಿಸಬಹುದಾದ ಇಂಧನದ ಮೇಲೆ ಗಮನ ಹರಿಸುವ ‘ಸುಸ್ಥಿರ ಡೇಟಾ ಸೆಂಟರ್ ನೀತಿ 2026-31’ ಪರಿಚಯಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಖಾಸಗಿ ಹೊಟೇಲ್
KPCC ಅಂದರೆ ಕೊತ್ವಾಲ್ ಪ್ರದೇಶ ಕಾಂಗ್ರೆಸ್ ಕಮಿಟಿ: ಆರ್ ಅಶೋಕ
ಬಿಜೆಪಿ ಶಾಸಕರ ಮೇಲಿನ ಮೊಟ್ಟೆ ಎಸೆತ ಹಾಗೂ ಹಲ್ಲೆ ಪ್ರಕರಣದ ತನಿಖೆಯಲ್ಲಿ ಸತ್ಯಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್‌ನ ಗೂಂಡಾ ಸಂಸ್ಕೃತಿ ಮತ್ತೊಮ್ಮೆ ಬಯಲಾಗಿದೆ. ಸಿಎಂ @DKShivakumar ಅವರೇ, KPCC ಎಂದರೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಅಲ್ಲ, ಅದು ‘ಕೊತ್ವಾಲ್ ಪ್ರದೇಶ ಕಾಂಗ್ರೆಸ್ ಕಮಿಟಿ’
ಕೇಂದ್ರದಿಂದ ಭರವಸೆ: ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್
ನೀಟ್ ಅಕ್ರಮದ ತನಿಖೆ, ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಳೆದ 26 ದಿನಗಳಿಂದ ಉಪವಾಸ ನಿರತರಾಗಿ ಪ್ರತಿಭಟನೆ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಕೇಂದ್ರವು ನೀಡಿದ ಭರವಸೆಗಳ ಹಿನ್ನೆಲೆ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ. ವಾಂಗ್ಚುಕ್ ಬೆಂಬಲಿಸಿ ಜಂತರ್ ಮಂತರ್‌ನಲ್ಲಿ ಕಾಕ್ರೋಚ್
ಜಿರಳೆ ಪಾರ್ಟಿ ಜೊತೆ ರಾಹುಲ್ ಗಾಂಧಿ ಮ್ಯಾಚ್ ಫಿಕ್ಸಿಂಗ್: ಆರ್ ಅಶೋಕ
ನೀಟ್ ಅಕ್ರಮದ ಕುರಿತು ಲೋಕಸಭೆಯಲ್ಲಿ ಮಾತಾಡಬೇಕಾದ ರಾಹುಲ್ ಗಾಂಧಿ ಪಲಾಯನ ಮಾಡಿ ಕಾಕ್ರೋಚ್ ಜನತಾ ಪಾರ್ಟಿಯ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ. ಆ ಪಾರ್ಟಿಯವರು ಸಂಧಾನಕ್ಕೆ ಬರುತ್ತಿಲ್ಲ, ರಾಹುಲ್ ಗಾಂಧಿ ಅಧಿವೇಶನಕ್ಕೆ ಬರುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು.
ಆರ್ಟ್ ಆಫ್ ಲಿವಿಂಗ್ ವಿರುದ್ಧ ಭೂಕಬಳಿಕೆ ಆರೋಪ ತನಿಖೆಗೆ ಎಸ್‌ಐಟಿ
ದಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಬೆಂಗಳೂರಿನ ಕಗ್ಗಲಿಪುರ ಬಳಿ ನೂರಾರು ಎಕರೆ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದೆ ಎಂಬ ಆರೋಪದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದಲ್ಲಿ 11 ಸದಸ್ಯರಿದ್ದು, ಗುತ್ತಿಗೆ
ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿಪಕ್ಷ ನಾಯಕರ ಬಂಧನ: ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ
ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ಹಾಗೂ ಇತರ ವಿರೋಧ ಪಕ್ಷದ ನಾಯಕರನ್ನು ಬಂಧಿಸಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಕ್ರೂರ ದಾಳಿಯನ್ನು ವಿರೋಧಿಸಿ ಪ್ರಧಾನಮಂತ್ರಿಯವರ ನಿವಾಸದ ಸಮೀಪ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರನ್ನು
ಸಚಿವ ಸಂಪುಟ ವಿಸ್ತರಣೆ: ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸುಪ್ರೀಂ ಎಂದ ಸಿಎಂ ಡಿಕೆ ಶಿವಕುಮಾರ್
ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸುಪ್ರೀಂ. ನಮ್ಮ ಅಭಿಪ್ರಾಯ ಪಡೆದು ತೀರ್ಮಾನ ಮಾಡುತ್ತಾರೆ. ಹೊಸ ಮುಖ, ಜಿಲ್ಲೆ ಹಾಗೂ ಪ್ರಾಂತ್ಯವಾರು ಲೆಕ್ಕಾಚಾರ ಮಾಡಿ ತೀರ್ಮಾನ ಮಾಡುತ್ತಾರೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಸಚಿವ
ನೀಟ್ ಅಕ್ರಮ: ಸಚಿವರು ರಾಜೀನಾಮೆ ನೀಡಲಿ, ವಿದ್ಯಾರ್ಥಿಗಳಿಗೆ ಕೇಂದ್ರ ನ್ಯಾಯ ಒದಗಿಸಲಿ ಎಂದು ಸಿಎಂ ಆಗ್ರಹ
ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿ ಹೋರಾಟವನ್ನು ದಮನಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದನ್ನು ಇದೇ ದೇಶ ಖಂಡಿಸುತ್ತದೆ. ಕಾಂಗ್ರೆಸ್ ವಿದ್ಯಾರ್ಥಿಗಳ
ಪಾವಗಡ 2400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕ ದೇಶಕ್ಕೆ ಮಾದರಿ: ಸಿಎಂ
ಪಾವಗಡದ 2400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕ ದೇಶಕ್ಕೆ ಮಾದರಿಯಾಗಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ 57 ನೇ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನೆರೆದ ನಿಗಮದ ಎಲ್ಲರಿಗೂ 57 ನೇ ಸಂಸ್ಥಾಪನಾ
ಅಕ್ರಮ ಮರಳು ಗಣಿಗಾರಿಕೆ: ತನಿಖಾ ವರದಿ ಸಲ್ಲಿಸಿದ ಲೋಕಾಯುಕ್ತ ಪೊಲೀಸರು
ಬಾಗಲಕೋಟೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು, ತನಿಖೆ ನಡೆಸಿ ರಾಜ್ಯ ಲೋಕಾಯುಕ್ತರಿಗೆ ವರದಿ ಸಲ್ಲಿಸಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರು, ಬಾಗಲಕೋಟೆ ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ




