Saturday, February 14, 2026
Menu

ಜಿಬಿಎ ಚುನಾವಣೆಗೆ ಈಗಿನಿಂದಲೇ ತಯಾರಿ: ಸಚಿವ ಬೈರತಿ ಸುರೇಶ್

ಬೆಂಗಳೂರು: ಮುಂಬರುವ ಜಿಬಿಎ ಚುನಾವಣೆಯಲ್ಲಿ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಎಲ್ಲಾ 11 ವಾರ್ಡ್ ಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಈಗಿನಿಂದಲೇ ಸಿದ್ಧತೆ ಆರಂಭವಾಗಿದೆ ಎಂದು ಕ್ಷೇತ್ರದ ಶಾಸಕರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಹೆಬ್ಬಾಳದ ಕೆ.ಟಿ.ಟ್ರಾನ್ಸ್ ಪೋರ್ಟ್ ರಸ್ತೆ, ವಿ.ನಾಗೇನಹಳ್ಳಿಯ 3 ನೇ ಅಡ್ಡರಸ್ತೆಯ ಕನಕನಗರ, ಮನೋರಾಯನಪಾಳ್ಯದ ಲಕ್ಷ್ಮಿ ಗೋಲ್ಡ್ ಪ್ಯಾಲೇಸ್ ಬಳಿ, ದಿನ್ನೂರಿನ ಚಾಮುಂಡಿನಗರದ ಅಂಬೇಡ್ಕರ್ ಸರ್ಕಲ್, ಮಠದಹಳ್ಳಿಯ ಮುನೇಶ್ವರ

ಕೋಗಿಲುನಲ್ಲಿ ಮನೆ ಕಳೆದುಕೊಂಡ ಕರ್ನಾಟಕದವರಿಗೆ ಮಾತ್ರ ಮನೆ: ಸಚಿವ ಜಮೀರ್ ಅಹ್ಮದ್

ಕೋಗಿಲು ಅಕ್ರಮ ಮನೆ ತೆರವು ಮತ್ತು ಪರ್ಯಾಯ ಮನೆ ಹಂಚಿಕೆ ವಿಚಾರವಾಗಿ ವಸತಿ ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ ನೀಡಿದ್ದು, ಕರ್ನಾಟಕದವರಿದ್ದರೆ ಮಾತ್ರ ಮನೆ ಕೊಡುತ್ತೇವೆ. ಹೊರಗಿನಿಂದ ಬಂದವರಿಗೆ ನಾವು ಮನೆ ಕೊಡುವುದಿಲ್ಲ ಎಂದು ಹೇಳಿದ್ದಾರೆ. ಕೋಗಿಲು ಅಕ್ರಮ ಮನೆ ತೆರವು

ರಾಜ್ಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ: ದೇವಸ್ಥಾನಗಳಿಗೆ ಹರಿದು ಬಂದ ಭಕ್ತಸಾಗರ

ಬೆಂಗಳೂರು: ರಾಜ್ಯದಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದೆ. ನಗರದ ಹಲವು ವಿಷ್ಣು, ವೆಂಕಟೇಶ್ವರ, ಗೊವಿಂದನ ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ದೇವಾಲಯಗಳಿಗೆ ಭಕ್ತರ ಸಾಗರ ಹರಿದು ಬರುತ್ತಿದೆ. ಅರಸೀಕೆರೆ

ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ 10ನೇ ವರದಿಯಲ್ಲಿ ಏನೇನಿದೆ 

ಮಾಜಿ ಸಚಿವರಾದ ಶಾಸಕ ಆರ್.ವಿ.ದೇಶಪಾಂಡೆ ಅವರ ಅಧ್ಯಕ್ಷತೆಯ “ಕರ್ನಾಟಕ ಆಡಳಿತಾ ಸುಧಾರಣಾ ಆಯೋಗ”ದ 10ನೇ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸದಲ್ಲಿ ಸಲ್ಲಿಸಲಾಯಿತು. ಸಚಿವರಾದ ಎಂ.ಬಿ.ಪಾಟೀಲ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು. ಆಯೋಗದ ಹಿನ್ನೆಲೆ ಮತ್ತು ರಚನೆ :

ಯೂನಿಟ್ ಗೆ 10 ಪೈಸೆ ವಿದ್ಯುತ್ ದರ ಏರಿಕೆಗೆ ಮುಂದಾದ ಆಯೋಗ

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಿಸಲಿದೆ. ಈ ಮೂಲಕ ಹೊಸ ವರ್ಷಕ್ಕೆ ಗ್ರಾಹಕರಿಗೆ ಬಿಗ್ ಶಾಕ್ ನೀಡಲು ಮುಂದಾಗಿದೆ. ಮುಂದಿನ ಹಣಕಾಸು ವರ್ಷದಲ್ಲಿ ರಾಜ್ಯದ ವಿದ್ಯುತ್ ಗ್ರಾಹಕರು ಬಳಸುವ ವಿದ್ಯುತ್‌ ನ ಪ್ರತಿ ಯೂನಿಟ್ ಗೆ

ಕೋಗಿಲು ಪ್ರಕರಣ: ಅಕ್ರಮ ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲವೆಂದ ಡಿಕೆ ಶಿವಕುಮಾರ್

“ಅಕ್ರಮವಾಗಿ ಒತ್ತುವರಿ ಯಾರೂ ಮಾಡಬಾರದು.  ಅಕ್ರಮವಾಗಿ ಸರ್ಕಾರಿ ಜಾಗ ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ. ಯಾವ ರೀತಿಯಲ್ಲೂ ಓಲೈಕೆ ರಾಜಕಾರಣ ಮಾಡುವಂತಹ ಪ್ರಶ್ನೆ ಬರುವುದಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ

ಕೃಷಿ ಸಚಿವರ ತವರಲ್ಲೇ ಆರಂಭವಾಗದ ಭತ್ತ ಖರೀದಿ ಕೇಂದ್ರ: ಆರ್‌ ಅಶೋಕ

ಸಿಎಂ @siddaramaiah ನವರೇ, ಡಿಸೆಂಬರ್ ಆರಂಭದಲ್ಲೇ ಆರಂಭವಾಗಬೇಕಿದ್ದ ಭತ್ತ ಖರೀದಿ ಕೇಂದ್ರ ಇನ್ನೂ ಯಾಕೆ ಆರಂಭ ಆಗಿಲ್ಲ? ನಿಮ್ಮ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ನಿದ್ದೆ ಮಾಡುತ್ತಿದ್ದಾರಾ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದ್ದಾರೆ. ಭತ್ತ ಖರೀದಿ

ಕೋಗಿಲು ಅಕ್ರಮ ಶೆಡ್‌ಗಳ ಧ್ವಂಸ: ವೇಣುಗೋಪಾಲ್ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಡಿಸಿಎಂ

ಕೆಸಿ ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ, ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್  ಸ್ಪಷ್ಟಪಡಿಸಿದ್ದಾರೆ. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ

ಕೋಗಿಲು ಅಕ್ರಮ ಶೆಡ್‌ಗಳ ಧ್ವಂಸ: ಬೈಯ್ಯಪ್ಪನಹಳ್ಳಿಯಲ್ಲಿ ಮನೆ ಹಂಚಿಕೆ, ಇದೊಂದು ಪ್ರಕರಣಕ್ಕೆ ಮಾತ್ರ ಅನ್ವಯ: ಸಿಎಂ

ಕೋಗಿಲು ಬಡಾವಣೆಯಲ್ಲಿ  ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ  ನಿರ್ಮಾಣ ಮಾಡಿದ್ದ  167 ಶೆಡ್‌ಗಳನ್ನು ತೆರವುಗೊಳಿಸಲಾಗಿತ್ತು. ಅವರೆಲ್ಲರಿಗೂ ನೋಟಿಸ್ ನೀಡಿ, ಸರ್ಕಾರದ ಜಾಗವಾಗಿದ್ದು ತೆರವು ಮಾಡುವಂತೆ ಅವರ ಗಮನಕ್ಕೂ ತರಲಾಗಿತ್ತು, ಆದರೂ  ಖಾಲಿ ಮಾಡಿರಲಿಲ್ಲ. ಅವರಿಗೆಲ್ಲ ಬೈಯ್ಯಪ್ಪನಹಳ್ಳಿಯಲ್ಲಿ ಮನೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ

ಹೊಸವರ್ಷದಂದು ನಂದಿ ಗಿರಿಧಾಮ ಸಾರ್ವಜನಿಕರಿಗೆ ಬಂದ್

ಬೆಂಗಳೂರು:ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶವನ್ನು ಡಿ.31ರ ಮಧ್ಯಾಹ್ನ 2ರಿಂದ ಜ.1ರ ಬೆಳಿಗ್ಗೆ 10 ಗಂಟೆಯವರೆಗೆ ಬಂದ್ ಮಾಡಲಾಗಿದೆ. ಅತಿಥಿಗೃಹ ಬುಕ್ ಮಾಡಿದವರನ್ನು ಹೊರತುಪಡಿಸಿ ಉಳಿದ ಪ್ರವಾಸಿಗರಿಗೆ ನಿಷೇಧ