Monday, September 28, 2026
Menu

ಮನೆ ಬಾಗಿಲಿಗೆ PRC ಆತಂಕಕಾರಿ ಬೆಳವಣಿಗೆ ಎಂದ ಆರ್‌ ಅಶೋಕ

ಮುಖ್ಯಮಂತ್ರಿ @DKShivakumar  ‘ಮನೆ ಬಾಗಿಲಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ (PRC)’ ವಿತರಣೆಗೆ ಚಾಲನೆ ನೀಡಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಸರ್ಕಾರ ಇದನ್ನು ಆಡಳಿತ ಸುಧಾರಣೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದೆಯಾದರೂ, ಇದು ಮೂಲತಃ ಸಂವಿಧಾನಬಾಹಿರ ಮತ್ತು ಕಾನೂನುಬಾಹಿರ ಕ್ರಮ ಎಂಬುದನ್ನು ರಾಜ್ಯದ ಜನರು ಅರಿಯಬೇಕು ಎಂದು ಪ್ರತಿಪಕ್ಷ ನಾಯಕ  ಆರ್‌ ಅಶೋಕ ಹೇಳಿದ್ದಾರೆ. ಇಷ್ಟಕ್ಕೂ ‘ಶಾಶ್ವತ ನಿವಾಸಿ ಪ್ರಮಾಣಪತ್ರ’ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಕೊಟ್ಟಿದ್ದು ಯಾರು, ಭಾರತದ ಸಂವಿಧಾನದ ಪ್ರಕಾರ ಪೌರತ್ವ,

ಬಿಡದಿ ಟೌನ್‌ಶಿಪ್‌ ಭೂಸ್ವಾಧೀನ ಪ್ರಶ್ನಿಸಿ ಪಿಐಎಲ್‌: ವಜಾಗೊಳಿಸಿದ ಹೈಕೋರ್ಟ್‌

ರಾಜ್ಯ ರಾಜಕಾರಣದಲ್ಲಿ ಬಹಳಷ್ಟು ಆರೋಪ-ಪ್ರತ್ಯಾರೋಪಗಳಿಗೆ ವೇದಿಕೆಯಾಗಿರುವ ಬಿಡದಿ ಟೌನ್‌ಶಿಪ್‌ ಯೋಜನೆಗೆ ಭೂಸ್ವಾಧೀನ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ವಾದಿಸಿರುವುದಕ್ಕೆ ಸೂಕ್ತ ಕಾನೂನಾತ್ಮಕ ಆಧಾರಗಳಿಲ್ಲ ಎಂದು ನ್ಯಾಯಾಲಯ ಹೇಳಿದೆ. 

ಹೋಂ ಸ್ಟೇ ನೋಂದಣಿ ಕಡ್ಡಾಯಗೊಳಿಸಿದ ಪ್ರವಾಸೋದ್ಯಮ ಇಲಾಖೆ 

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಂದು ಹೋಂ ಸ್ಟೇಗಳೂ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಇದುವರೆಗೂ 500ಕ್ಕೂ ಹೆಚ್ಚು ಹೋಂಸ್ಟೇ ಮಾಲೀಕರು ನೋಂದಣಿಗಾಗಿ ಅರ್ಜಿಸಲ್ಲಿಸಿದ್ದು, ನೋಂದಣಿ ಮಾಡಿಸದಿರುವ ಎಲ್ಲಾ ಅರ್ಹ ಹೋಂಸ್ಟೇ ಮಾಲೀಕರು ವಿಳಂಬ ಮಾಡದೆ ಶೀಘ್ರವೇ ಪ್ರವಾಸೋದ್ಯಮ ಇಲಾಖೆಯ ಮೂಲಕ ಅಧಿಕೃತವಾಗಿ

ಸರ್ಕಾರಿ ಗೌರವಗಳೊಂದಿಗೆ ಮಾವಿನಕೆರೆಯಲ್ಲಿ ಇಂದು ಚನ್ನಮ್ಮ ಅಂತ್ಯಕ್ರಿಯೆ

ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರ ಅಂತ್ಯ ಸಂಸ್ಕಾರ ಇಂದು ( ಸೋಮವಾರ) ಮಧ್ಯಾಹ್ನ ಹರದನಹಳ್ಳಿಯ ಮಾವಿನಕೆರೆಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಲಿದೆ. ಮಾವಿನಕೆರೆಯಲ್ಲಿ 4,000 ಆಸನಗಳ ವ್ಯವಸ್ಥೆ ಮಾಡಲಾಗಿದೆ. ಅಂತಿಮ ಸಂಸ್ಕಾರವು ಒಕ್ಕಲಿಗ ಸಂಪ್ರದಾಯದಂತೆ ನಡೆಯಲಿದ್ದು, ಹಲವು ಜನಪ್ರತಿನಿಧಿಗಳು

15 ದಿನದಲ್ಲಿ ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ

ರಾಜ್ಯದಲ್ಲಿ ಮಳೆ ಕೊರತೆ, ಬರ ಪರಿಸ್ಥಿತಿ ಕುರಿತು ಮುಂದಿನ 15 ದಿನಗಳಲ್ಲಿ ಕೇಂದ್ರಕ್ಕೆ ಸಲ್ಲಿಸಲು ಸಮರ್ಪಕ ವರದಿ ಸಿದ್ಧಪಡಿಸಿ. ಸ್ಥಳ ಪರಿಶೀಲನೆ ಮಾಡಿ ವರದಿ ರೂಪಿಸಬೇಕು, ಕಚೇರಿಯಲ್ಲಿ ಕೂತು ತಯಾರಿಸಬಾರದು ಎಂದು ಸಿಎಂ ಡಿಕೆ ಶಿವಕುಮಾರ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿಧಾನಸೌಧದಲ್ಲಿ

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿಕೆ ಶಿವಕುಮಾರ್

15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಯಿತು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.  ಬರ ಪರಿಸ್ಥಿತಿ ಕುರಿತ ಜಿಲ್ಲಾಧಿಕಾರಿ ಹಾಗೂ ಸಿಇಒ ಸಭೆಯ ಹಾಗೂ ವಿಶೇಷ ಸಚಿವ ಸಂಪುಟಸಭೆಯ ನಂತರ ವಿಧಾನಸೌಧದ ಸಮ್ಮೇಳನ

ನಾಳೆ ಹರದನಹಳ್ಳಿಯ ಮಾವಿನಕೆರೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಅಂತ್ಯಕ್ರಿಯೆ

ಪದ್ಮನಾಭ ನಗರದ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿರುವ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಅವರ ಪಾರ್ಥಿವ ಶರೀರವನ್ನು ಇಂದು ಭಾನುವಾರ ಮಧ್ಯಾಹ್ನದ ನಂತರ ಸ್ವಗ್ರಾಮ ಹಾಸನದ ಹರದನಳ್ಳಿಗೆ ಕೊಂಡೊಯ್ದು  ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಕುಟುಂಬ ತಿಳಿಸಿದೆ.

ಪ್ರಧಾನಿ ಮಡದಿಯಾಗಿದ್ದಾಗಲೂ ಹಮ್ಮು ಬಿಮ್ಮು ಇಲ್ಲದೆ ಎಲ್ಲರನ್ನೂ ಅಕ್ಕರೆಯಿಂದ ಕಾಣುತ್ತಿದ್ದ ಚನ್ನಮ್ಮ: ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿನೀಡಿ, ದೇವೇಗೌಡರ ಪತ್ನಿ ಚನ್ನಮ್ಮನವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿ ಬಳಿಕ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನದಿಂದ ದುಃಖಿತನಾಗಿದ್ದೇನೆ.

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಮಾತೃ ಸ್ವರೂಪಿಣಿ: ಸಿಎಂ ಡಿಕೆ ಶಿವಕುಮಾರ್‌ ಸಂತಾಪ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮನ್ನವರ ಪಾರ್ಥಿವ ಶರೀರಕ್ಕೆ ಪದ್ಮನಾಭನಗರ ನಿವಾಸದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಪತ್ನಿ ಉಷಾ  ಜತೆ ಶನಿವಾರ ರಾತ್ರಿ ಅಂತಿಮ ನಮನ ಸಲ್ಲಿಸಿದರು. ದೇವೇಗೌಡರು, ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ ರೇವಣ್ಣ ಸೇರಿದಂತೆ

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶರಾಗಿದ್ದು, ಅವರಿಗೆ 85 ವರ್ಷ ವಯಸ್ಸಾಗಿತ್ತು. ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಚೆನ್ನಮ್ಮ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಸಂಜೆ 5 ಗಂಟೆ ಸುಮಾರಿಗೆ ನಿಧನರಾದರು. ಕೇಂದ್ರ ಸಚಿವ