ರಾಜ್ಯ
ಆಕಾಶ-ಸಾಗರದಂತೆ ಕೊಪ್ಪಳ ಗವಿಮಠ ಜಾತ್ರೆ ಹೋಲಿಕೆ ಇರಲಾರದ್ದು: ಸಿದ್ಧಗಂಗಾಶ್ರೀ
ಕೊಪ್ಪಳ: ಕೊಪ್ಪಳದ ಗವಿಮಠ ಜಾತ್ರೆ ಬಗ್ಗೆ ಕೇಳಿದ್ದೆ, ಓದಿದ್ದೆ. ಇದೇ ಮೊದಲ ಸಲ ಕಣ್ತುಂಬಿಕೊಂಡೆ. ಆಕಾಶ ಸಾಗರಕ್ಕೆ ಹೇಗೆ ಹೋಲಿಕೆ ಇಲ್ಲವೋ, ಅದೇ ರೀತಿ ಕೊಪ್ಪಳದ ಗವಿಮಠದ ಜಾತ್ರೆಗೆ ಬೇರೆ ಯಾವ ಜಾತ್ರೆಯನ್ನೂ ಹೋಲಿಕೆ ಮಾಡಲಾಗಲ್ಲ ಎಂದು ತುಮಕೂರಿನ ಶ್ರೀ ಸಿದ್ಧಗಂಗಾಮಠದ ಶ್ರೀ ಸಿದ್ಧಲಿಂಗ ಶ್ರೀಗಳು ನುಡಿದರು. ಕೊಪ್ಪಳದ ಸಂಸ್ಥಾನ ಶ್ರೀ ಗವಿಸಿದ್ಧೇಶ್ವರ ಮಠದ ಈ ವರ್ಷದ ಜಾತ್ರಾಮಹೋತ್ಸವದ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು. ಗವಿಸಿದ್ದನ ರೂಪದ ಜನ
ಕೆಪಿಸಿಸಿ ಅಧ್ಯಕ್ಷತೆ ಬಗ್ಗೆ ಖರ್ಗೆಯವರನ್ನು ಕೇಳಿ ಅಂದ್ರು ಡಿಕೆಶಿ
ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರ ಸ್ಪಷ್ಟಪಡಿಸಬೇಕಾಗಿರುವುದು ನಾನಲ್ಲ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಿ, ಅವರ ನಿರ್ಧಾರವನ್ನು ಪ್ರಶ್ನೆ ಮಾಡಲಾಗುತ್ತಿದೆ. ಈ ರೀತಿ ಮಾಡಬಾರದು. ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು
ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂ. ಬಾಕಿ: ಆರ್. ಅಶೋಕ್ ಆಕ್ರೋಶ
ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ರೈತರ ಸಂಕಷ್ಟ ಕೇಳಲು ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಪರಿಸ್ಥಿತಿ ಎದುರಾಗಿರುವುದರಿಂದ ರೈತರು ಅನಾಥರಾಗಿದ್ದಾರೆ. ಕಬ್ಬು ಪೂರೈಸಿದ 14 ದಿನಗಳಲ್ಲಿ ಬಿಲ್ ಮೊತ್ತ ಪಾವತಿಸಬೇಕು ಎಂಬ ಕಾಯ್ದೆ
ಇಂದಿನಿಂದ ಲಾಲ್‌ಬಾಗ್ ನಲ್ಲಿ ವೈಭವದ ಫಲ ಪುಷ್ಪ ಪ್ರದರ್ಶನ
76ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ಲಾಲ್ಬಾಗ್ನ ಗಾಜಿನ ಮನೆಯಲ್ಲಿ ರಾಮಾಯಣ ಕರ್ತೃಆದಿಕವಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಸಕಲ ಸಿದ್ಧತೆ ನಡೆದಿದೆ. ಇದೇ ಮೊದಲ ಬಾರಿಗೆ ಕ್ಯೂಆರ್ ಕೋಡ್ನ ಮೂಲಕ ಟಿಕೆಟ್ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ. ಇಂದಿನಿಂದ (ಜ.16) ನಡೆಯುವ
ತನ್ನದೇ ಗನ್‌ನಿಂದ ಆಕಸ್ಮಿಕವಾಗಿ ಹಾರಿದ ಗುಂಡಿಗೆ ವ್ಯಕ್ತಿ ಬಲಿ
ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ತನ್ನದೇ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಪೊನ್ನಚೆಟ್ಟಿರ ಮಿತ್ರ ಚಂಗಪ್ಪ (49) ಎಂದು ಗುರುತಿಸಲಾಗಿದೆ. ಬಂದೂಕು ಕೆಳಕ್ಕೆ ಬಿದ್ದು ಗುಂಡು ಹಾರಿರುವ ಶಂಕೆ ವ್ಯಕ್ತವಾಗಿದೆ. ಚಂಗಪ್ಪ ಅವರು ಚೇರಂಬಾಣೆ ಪಟ್ಟಣದಲ್ಲಿ
ಕೈ ನಾಯಕರ “ಸಿಎಂ” ಬಹಿರಂಗ ಹೇಳಿಕೆ: ವರದಿ ಕೇಳಿದ ಹೈ ಕಮಾಂಡ್
ನೀಡಿರುವ ಎಚ್ಚರಿಕೆ ನಡುವೆಯೂ ಬಹಿರಂಗ ಹೇಳಿಕೆ ನೀಡುತ್ತಿರುವ ಕರ್ನಾಟಕದ ಕಾಂಗ್ರೆಸ್ ಸಚಿವರಿಗೆ ಸಂಬಂಧಿಸಿದಂತೆ ವರದಿಯನ್ನು ಹೈಕಮಾಂಡ್ ಕೇಳಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ತಿಳಿಸಿದ್ದು, ಸಚಿವ ಸತೀಶ್ ಜಾರಕಿಹೊಳಿ, ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಮಜಾಯಿಷಿ ನೀಡಿದ್ದಾರೆ. ಹೈಕಮಾಂಡ್
ಐತಿಹಾಸಿಕ ಕೊಪ್ಪಳದ ಗವಿಮಠದ ಜಾತ್ರಾ ಮಹೋತ್ಸವಕ್ಕೆ ಚಾಲನೆ
ದಕ್ಷಿಣ ಭಾರತದ ಕುಂಭ ಮೇಳ ಎಂದೇ ಖ್ಯಾತಿ ಪಡೆದ ಕೊಪ್ಪಳದ ಗವಿಮಠದ ಶ್ರೀ ಗವಿ ಸಿದ್ದೇಶ್ವರ ಜಾತ್ರೆಗೆ ಚಾಲನೆ ದೊರೆತಿದ್ದು, ಇಂದಿನಿಂದ 15 ದಿನಗಳ ಕಾಲ ಜಾತ್ರಾ ಮಹೋತ್ಸವ ಜರುಗಲಿದೆ. ದಾಸೋಹ, ಅನುಭವ, ಜ್ಞಾನ, ಜೀವನ ಚಿಂತನೆಯ ಪಾಠದ ಮೂಲಕ ಭಕ್ತಿ
ಜಾತಿಗಣತಿ ವರದಿ ಊಹಾಪೋಹದಿಂದ ವಿರೋಧಿಸುವುದು ಅನವಶ್ಯಕ: ಸಿಎಂ ಸಿದ್ದರಾಮಯ್ಯ
ನವದೆಹಲಿ: ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಕಂದಾಯ ಇಲಾಖೆಯ ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ: ಕೃಷ್ಣ ಭೈರೇಗೌಡ ವಿರುದ್ಧ ರಾಜ್ಯಪಾಲರಿಗೆ ದೂರು!
ಕಂದಾಯ ಇಲಾಖೆಯಲ್ಲಿ ಆಗಿರುವ ಭ್ರಷ್ಟಾಚಾರ ಹಾಗೂ ಅಶಿಸ್ತು ತೋರುತ್ತಿರುವ ಸಚಿವ ಕೃಷ್ಣ ಭೈರೇಗೌಡ ವಿರುದ್ಧ ತನಿಖೆ ನಡೆಸುವಂತೆ ಕೋರಿ ಆರ್ ಟಿಐ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಹಾಗೂ ಸಚಿವ ಜಮೀರ್
390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ
ಬೆಂಗಳೂರು: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಶಂಕುಸ್ಥಾಪನೆ




