Menu

ಮದ್ಯ ಸೇವಿಸಿ ಬಟ್ಟೆ ಬಿಚ್ಚಿ ರಸ್ತೆಯಲ್ಲೇ ಶ್ರೀ ಶಾಂತಲಿಂಗ ಶಿವಾಚಾರ್ಯರ ರಂಪಾಟ

ಅಫಜಲ್ಪುರ ತಾಲೂಕಿನ ಉಡಚಾಣ ಗ್ರಾಮದ ಶ್ರೀ ಶಾಂತಲಿಂಗ ಶಿವಾಚಾರ್ಯರು ಸಾರಾಯಿ ಕುಡಿದು ರಸ್ತೆಯಲ್ಲೇ ರಂಪಾಟ ಮಾಡಿದ್ದು, ಈ ನಡವಳಿಕೆಗಳಿಗೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡಚಾಣ ಗ್ರಾಮದ ಶ್ರೀ ಶಂಕರಲಿಂಗೇಶ್ವರ ಸಂಸ್ಥಾನ ಹಿರೇಮಠದ ಮಠಾಧಿಪತಿ ಶ್ರೀ ಶಾಂತಲಿಂಗ ಶಿವಾಚಾರ್ಯರು ಇತ್ತೀಚೆಗೆ ಇಂಡಿ ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ಕಂಠ ಪೂರ್ತಿ ಮದ್ಯ ಸೇವಿಸಿ ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ನಡೆಸಿದ್ದರು. ಸಾರ್ವಜನಿಕರು ನೋಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಅರ್ಧ ಬಟ್ಟೆ ಬಿಚ್ಚಿಕೊಂಡು ಅಲೆದಾಡುತ್ತಿದ್ದ

ಜ.17ರಿಂದ ಬೆಂಗಳೂರಲ್ಲಿ ಅಮೆರಿಕ ಕಾನ್ಸುಲೇಟ್ ಕಚೇರಿ

ಬೆಂಗಳೂರಿನ ಜೆಡಬ್ಲ್ಯು ಮ್ಯಾರಿಯೇಟ್ ಹೋಟೆಲ್‌ನಲ್ಲಿ ಅಮೆರಿಕದ ಕಾನ್ಸುಲೇಟ್ ಕಚೇರಿ ಜ.17ರಂದು ಕಾರ್ಯಾರಂಭಿಸಲಿದೆ. ಇದರಿಂದ ಕನ್ನಡಿಗರು ಇನ್ನು ಮುಂದೆ ಚೆನ್ನೈ ಸೇರಿ ನೆರೆಯ ರಾಜ್ಯಗಳಿಗೆ ಹೋಗುವ ಬದಲು ಬೆಂಗಳೂರಿನಲ್ಲೇ ಅಮೆರಿಕದ ವೀಸಾ ಮತ್ತು ಅದಕ್ಕೆ ಸಂಬಂಧಿಸಿದ ಸೇವೆ ಪಡೆಯಬಹುದು. ಈ ಹೋಟೆಲ್‌ನಲ್ಲಿ ಈಗಾಗಲೇ

ಬೆಂಗಳೂರಿನಲ್ಲಿ ಆರು ವರ್ಷದ ಬಾಲಕಿಯ ಅತ್ಯಾಚಾರವೆಸಗಿ ಕೊಲೆ

ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಕೃತ್ಯ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ ಘಟನೆ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತ: ಅಪಾಯದಿಂದ ಪಾರು

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಅಪಘಾತವಾಗಿದೆ. ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಈ ದುರ್ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬದ ದಿನವಾದ

ಡ್ರಗ್ಸ್ ಕೇಸ್​ನಲ್ಲಿ ನಟಿ ರಾಗಿಣಿ ಖುಲಾಸೆ

ಡ್ರಗ್ಸ್ ಕೇಸ್​ನಲ್ಲಿ 2020ರ ಸೆಪ್ಟೆಂಬರ್​ನಲ್ಲಿ ಬಂಧಿತರಾಗಿ ಹಲವು ದಿನ ಜೈಲಿನಲ್ಲಿದ್ದು ಹೊರ ಬಂದಿರುವ ನಟಿ ರಾಗಿಣಿ ಅವರಿಗೆ ನಾಲ್ಕು ವರ್ಷಗಳ ಬಳಿಕ ರಿಲೀಫ್‌ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳ ಬಳಿಕ ಡ್ರಗ್ಸ್​ ಕೇಸ್​ನಲ್ಲಿ ರಾಗಿಣಿ ನಿರಪರಾಧಿ ಎಂಬುದು ಸಾಬೀತಾಗಿದೆ.

ರಾಜ್ಯಕ್ಕೆ ಮತ್ತೆ ಮತ್ತೆ ತೆರಿಗೆ ಹಂಚಿಕೆ ಅನ್ಯಾಯ: ಬಿಜೆಪಿ ನಾಯಕರ ಮೌನಕ್ಕೆ ಸಿಎಂ ಆಕ್ರೋಶ

ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ. ಜನಪ್ರತಿನಿಧಿಗಳು ದಾರಿ ತಪ್ಪಿದಾಗ ಸರಿದಾರಿಗೆ ತರುವ ಹೊಣೆ ಜನರದ್ದಾಗಿದೆ.  ರಾಜ್ಯವನ್ನೇ ಪ್ರೀತಿಸದವರು ದೇಶವನ್ನು ಹೇಗೆ ಪ್ರೀತಿಸಲು ಸಾಧ‍್ಯ ಎನ್ನುವುದನ್ನು ಬಿಜೆಪಿಯವರು ಹೇಳಬೇಕು

ಸಂಕ್ರಾಂತಿ ಶುಭಾಶಯ ಕೋರಿದ ಮಾಜಿ ಪ್ರಧಾನಿ ದೇವೇಗೌಡ

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಸಮೃದ್ಧಿಯ ಸಂಕೇತವಾದ ಸುಗ್ಗಿ ಹಬ್ಬ ಎಲ್ಲರ ಬಾಳಿನಲ್ಲೂ ಸಂಭ್ರಮವನ್ನು ತರಲಿ. ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪಥ ಬದಲಿಸಿ ಬೆಳಗುತ್ತಿರುವ ಸೂರ್ಯ ದೇವ ಎಲ್ಲರಲ್ಲೂ ಉತ್ಸಾಹ,

ಕೃಷಿ ಸಚಿವರ ಮನವಿಗೆ ಸ್ಪಂದನೆ: ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ

ಬೆಂಗಳೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 50000 ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ನೀಡಲಾಗುತ್ತಿರುವ

ಜ. 21ರ ಬೆಳಗಾವಿಯ ಚಾರಿತ್ರಿಕ ಸಮಾವೇಶಕ್ಕೆ ಮುನ್ನಡೆಯಿರಿ: ಸಿಎಂ ಕರೆ

ಬೆಂಗಳೂರು: ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ ಯಶಸ್ವಿ ಮಾಡೋಣ. ಜ 21ರ ಬೆಳಗಾವಿಯ ಚಾರಿತ್ರಿಕ ಸಮಾವೇಷಕ್ಕೆ ಮುನ್ನಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜನತೆಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಬೆಳಗಾವಿಯಲ್ಲಿ ಇದೇ ಜನವರಿ 21

ಸಿದ್ದರಾಮಯ್ಯ ಬಳಿಕ ಡಿಕೆಶಿ ಸಿಎಂ ಅಂದ್ರು ಶಾಸಕ ಬಾಲಕೃಷ್ಣ

ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗ್ತಾರೆ.  ಸಿಎಂ ಅಭ್ಯರ್ಥಿ ಬೇರೆ ಯಾರಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಪ್ರಶ್ನಿಸಿದ್ದಾರೆ. ಶಾಸಕಾಂಗ ಪಕ್ಷದ ಸಭೆಯ ಹಿನ್ನೆಲೆಯಲ್ಲಿ ಪವರ್‌ ಶೇರಿಂಗ್‌ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರು