ರಾಜ್ಯ
ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ HMPV ಪತ್ತೆ
ಚೀನಾದಲ್ಲಿ ಹೆಚ್ಚುತ್ತಿದೆ ಎನ್ನಲಾದ ಹ್ಯೂಮನ್ ಮೆಟಾನ್ಯೂಮೋ ವೈರಸ್(HMPV) ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ. ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿನಲ್ಲಿ ಪತ್ತೆಯಾಗಿದೆ. ಮಗುವಿಗೆ ಜ್ವರದ ಕಾರಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ ಹೆಚ್‌ಎಂವಿಪಿ ವೈರಸ್ ಇರುವುದು ದೃಢಪಟ್ಟಿದೆ. ರಾಜ್ಯದ ಉಳಿದ ಕಡೆ ಎಲ್ಲೆಲ್ಲಿ ಈ ರೀತಿಯ ಸೋಂಕು ಪತ್ತೆಯಾಗಿದೆ ಎಂಬುದರ ಮಾಹಿತಿ ಕಲೆ ಹಾಕಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ.
ರಾಜ್ಯದಲ್ಲಿ ಮೂರು ದಿನ ಕಾಡಲಿದೆ ಅತಿ ಶೀತಗಾಳಿ
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ತೀವ್ರವಾದ ಶೀತಗಾಳಿ ವ್ಯಾಪಿಸಲಿದ್ದು, ಉಷ್ಣಾಂಶ ಕುಸಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಬೀದರ್,
ನಮ್ಮ ಮಣ್ಣಿನ ಮಕ್ಕಳನ್ನು ಗುರುತಿಸುವಲ್ಲಿ ವಿಫಲರಾಗಿದ್ದೇವೆ: ಬೊಮ್ಮಾಯಿ
ನಮ್ಮ ಮಣ್ಣಿನ ಮಕ್ಕಳನ್ನು ಗುರುತಿಸಲು ನಾವು ವಿಫಲರಾಗಿದ್ದೇವೆ. ಧಾರವಾಡದ ಅಂತಸತ್ವ ಆತ್ಮೀಯತೆ, ಪ್ರೀತಿ, ವಿಶ್ವಾಸ. ಅಂತಕರಣ ಎಲ್ಲವನ್ನೂ ಮುಂದಿನ ಪೀಳಿಗೆಗೆ ಬಿಟ್ಟು ಹೋಗುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಧಾರವಾಡದ ಕರ್ನಾಟಕ
ಆರೋಪ ಮಾಡಿದರೆ ಸಾಲದು, ಸಾಬೀತು ಮಾಡಿ: ಸಿಎಂ ಸಿದ್ದರಾಮಯ್ಯ
ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆಯ ಎಂ. ಬಿ .ಎ ಗ್ರೌಂಡ್ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಬಡವರಿಗೆ ಮನೆ ಹಂಚಿಕೆಯಲ್ಲೂ ಲಂಚ: ಕುಮಾರಸ್ವಾಮಿ ಕಿಡಿ
ಕಾಂಗ್ರೆಸ್ ಸರಕಾರದಲ್ಲಿ ಬಡವರಿಗೆ ಮನೆ ಹಂಚಿಕೆಯಲ್ಲಿಯೂ ಲಂಚ ಪಡೆಯಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಲಂಚದ ಪ್ರಮಾಣ ಶೇ.60 ತಲುಪಿದೆ ಎಂದು ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು; ಕಾಂಗ್ರೆಸ್ ಸರಕಾರದಲ್ಲಿ ಶೇ.60
ಪ್ರಿಯಕರನೊಂದಿಗಿದ್ದ ಗರ್ಭಿಣಿ ಅನುಮಾನಾಸ್ಪದ ಸಾವು
ಚಿಕ್ಕಬಳ್ಳಾಪುರ ತಾಲೂಕಿನ ಗುಂತಪನಹಳ್ಳಿ ಗ್ರಾಮದಲ್ಲಿ ಪ್ರಿಯಕರನ ಜೊತೆ ವಾಸವಿದ್ದ 8 ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಅಂಬೇಡ್ಕರ್ ನಗರದ ನಿವಾಸಿ ಅನುಷಾ (28) ಮೃತ ಗರ್ಭಿಣಿ. ಹೊಸಕೋಟೆ ಮೂಲದ ವ್ಯಕ್ತಿಯೊಂದಿಗೆ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಒಂದು ಹೆಣ್ಣು ಮಗು ಇತ್ತು. ಗಂಡನ
ಬೆಂಗಳೂರಲ್ಲಿ ಆಟೊ ಪ್ರಯಾಣ ದರ ಏರಿಕೆಯ ಬಿಸಿ
ಆಟೋರಿಕ್ಷಾ ಪ್ರಯಾಣ ದರ ಏರಿಕೆ ಮಾಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಆಟೋ ಚಾಲಕ ಸಂಘಟನೆಗಳು ಮನವಿ ಮಾಡಿವೆ. ಒಂದು ಕಿಲೋಮೀಟರ್ಗೆ 5 ರೂಪಾಯಿ, ಎರಡು ಕಿಲೋಮೀಟರ್ಗೆ 10 ರೂಪಾಯಿ ಏರಿಕೆ ಮಾಡುವಂತೆ ಮಾಡಿವೆ. ಬಸ್ ಟಿಕೆಟ್ ದರ ಏರಿಕೆಯಿಂದ ಕಂಗೆಟ್ಟ ಜನರಿಗೆ
ಬಿಜೆಪಿಯವರು ಇಂಧನ ಬೆಲೆ ಇಳಿಸಿದ್ರೆ ಬಸ್ ಟಿಕೆಟ್ ದರ ಇಳಿಸೋಣವೆಂದ ಶರತ್ ಬಚ್ಚೇಗೌಡ
ಬಿಜೆಪಿಯವರು ಕೇಂದ್ರದಿಂದ ಇಂಧನದ ಬೆಲೆ ಕಡಿಮೆ ಮಾಡಿಸಿದರೆ ನಾವು ಬಸ್ ಟಿಕೆಟ್ ದರ ಇಳಿಸುತ್ತೇವೆ, ರಾಜ್ಯದಲ್ಲಿ ಕಾಲಕಾಲಕ್ಕೆ ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡುವುದು ವಾಡಿಕೆ. ವಿನಾಕಾರಣ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದ್ದಾರೆ. ರಾಜ್ಯದಲ್ಲಿ 132
ಪ್ರೊ.ಮುಜಾಫರ್ ಅಸ್ಸಾದಿ, ಜಿ.ಸಿ.ಬಯ್ಯಾರೆಡ್ಡಿಗೆ ಸಿಎಂ ಸಂತಾಪ
ಚಿಂತಕ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ (63) ಮತ್ತು ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಇಬ್ಬರು ಸಮಾಜಮುಖಿ ಗಣ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಮುಜಾಫರ್ ಅಸ್ಸಾದಿ
ಇಡಿ ಅಧಿಕಾರಿಗಳೆಂದು ನಂಬಿಸಿ 30 ಲಕ್ಷ ರೂ. ದೋಚಿದ ಖದೀಮರು
ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಜಾರಿ ನಿರ್ದೇಶನಾಲಯದ ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿ 30 ಲಕ್ಷ ರೂ. ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಸುಲೈಮಾನ್ ಹಾಜಿ ಎಂಬುವರು ಸಿಂಗಾರಿ ಬೀಡಿ ಉದ್ಯಮ ನಡೆಸುತ್ತಿದ್ದಾರೆ. ತಡರಾತ್ರಿ




