Saturday, October 10, 2026
Menu

ದರ್ಗಾ ಜಾಗದಲ್ಲಿ ಕಾಮಗಾರಿಯಿಂದ ಕಾವೇರಿದೆ ಚಿಕ್ಕಮಗಳೂರು

ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯಲ್ಲಿರುವ ದರ್ಗಾದಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಮತ್ತು ಖಾಲಿ ಜಾಗದಲ್ಲಿ ನೂತನ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕಾಮಗಾರಿಯನ್ನು ತಡೆದು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ದರ್ಗಾಕ್ಕೆ ದಾನ ನೀಡಿರುವ ಜಾಗದಲ್ಲಿ ನೂತನ ಕಾಮಗಾರಿ ನಡೆಸಬಾರದು ಎಂದು ಸ್ಥಳೀಯರು ಹೇಳಿದ್ದರು. ಆದರೂ ಕಾಮಗಾರಿ ನಡೆಸಲಾಗುತ್ತಿದೆ. ಕೆಲವು ತಿಂಗಳ ಹಿಂದೆ ಇದೇ ವಿಚಾರದಲ್ಲಿ ಕ್ರಮ ಕೈಗೊಳ್ಳುವುದಾಗಿ ಅಂದಿನ ನಗರಸಭೆ ಅಧ್ಯಕ್ಷರು ಹಾಗೂ ನಗರಸಭೆ ಅಧಿಕಾರಿಗಳು ಭರವಸೆ ನೀಡಿದ್ದರು.

ಚಾಲಕನ ತಪ್ಪಿಗೆ ಕ್ಷಮೆ ಕೇಳಿದ ‘ನಮ್ಮ ಯಾತ್ರಿ ಆ್ಯಪ್’

‘ನಮ್ಮ ಯಾತ್ರಿ ಆ್ಯಪ್’ ಆಟೋ ಚಾಲಕ ಪ್ರಯಾಣಿಕ ಮಹಿಳೆಯನ್ನು ನಿಗದಿತ ಜಾಗದ ಬದಲು ಬೇರೆ ಕಡೆ ಕರೆದೊಯುವಾಗ ಆಕೆ ಆಟೊದಿಂದ ಜಿಗಿದು ಅಪಾಯದಿಂದ ಪಾರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ‘ನಮ್ಮ ಯಾತ್ರಿ ಆ್ಯಪ್’ ಕ್ಷಮೆ ಯಾಚಿಸಿದೆ. ಗುರುವಾರ ರಾತ್ರಿ ಹೆಬ್ಬಾಳದ ವೀರಣ್ಣಪಾಳ್ಯ ಬಳಿ

ದೂರುದಾರೆ ಜೊತೆ ಅಸಭ್ಯವಾಗಿ ವರ್ತಿಸಿದ ಡಿವೈಎಸ್ಪಿ ಅರೆಸ್ಟ್‌

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪಿ, ತುಮಕೂರಿನ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿದ ಬಳಿಕ ಬಂಧಿಸಲಾಗಿದೆ. ಪ್ರಕರಣದ ವೀಡಿಯೊ ವೈರಲ್‌ ಆಗುತ್ತಿದ್ದಂತೆ ಆರೋಪಿ ರಾಮಚಂದ್ರ ತಲೆ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ: ಮಂಡ್ಯದಲ್ಲಿ ಭಾವನಾತ್ಮಕ ಶ್ರದ್ಧಾಂಜಲಿ ಕಾರ್ಯಕ್ರಮ

ಬೆಂಗಳೂರು: ರಾಜ್ಯದ ಧೀಮಂತ ನಾಯಕರು, ಮುತ್ಸುದ್ಧಿ ರಾಜಕಾರಣಿ, ಮಂಡ್ಯ ಜಿಲ್ಲೆಯ ಸುಪುತ್ರರಾದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರಿಗೆ ಜಿಲ್ಲೆಯ ಮತ್ತು ರಾಜ್ಯದ ಜನತೆ ಪರವಾಗಿ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲು ದಿವ್ಯಚೇತನ ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆ ಮುಂದಾಗಿದೆ. ಸರ್ಕಾರಿ ನಿವಾಸ 7 ಮಿನಿಸ್ಟರ್

ನಿಮ್ಹಾನ್ಸ್ ರೋಗಿಗಳಿಗೆ ಆಶ್ರಯತಾಣ, ಕುಟುಂಬಗಳಿಗೆ ಆಶಾಕಿರಣ: ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು, ಜನವರಿ. 3: ದೇಶದ ಅತ್ಯಂತ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ನಿಮ್ಹಾನ್ಸ್ ಆಸ್ಪತ್ರೆಗಿಂತಲೂ ಮಿಗಿಲಾಗಿದೆ. ಅತ್ಯಾಧುನಿಕ ಸಂಶೋಧನೆ, ಉನ್ನತ ಮಟ್ಟದ ಆರೈಕೆ, ಸಹಾನುಭೂತಿ, ಕಾಳಜಿಯನ್ನು ಒದಗಿಸುವ ಕೇಂದ್ರವಾಗಿದೆ. ಇದು ರೋಗಿಗಳಿಗೆ ಆಶ್ರಯತಾಣ, ಕುಟುಂಬಗಳಿಗೆ ಆಶಾಕಿರಣ. ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಅಕ್ಷಯಪಾತ್ರೆಯಂತಾಗಿದೆ

ರೋಗಿಗಳ ಆರೈಕೆಯಲ್ಲಿ ಅಸಾಮಾನ್ಯ ಸೇವೆ: ನಿಮ್ಹಾನ್ಸ್ ಕಾರ್ಯವೈಖರಿಗೆ ರಾಷ್ಟ್ರಪತಿ ಶ್ಲಾಘನೆ

ಅಸಾಮಾನ್ಯ ರೋಗಿಗಳ ಆರೈಕೆಯೊಂದಿಗೆ ನವೀನ ಸಂಶೋಧನೆ ಮತ್ತು ಕಠಿಣ ಶೈಕ್ಷಣಿಕ ಕಾರ್ಯಕ್ರಮವು ನಿಮ್ಹಾನ್ಸ್ ಅನ್ನು ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಕ್ಷೇತ್ರದಲ್ಲಿ ನಿರ್ವಿವಾದ ನಾಯಕನನ್ನಾಗಿ ಮಾಡಿದೆ ಎಂದು ರಾಷ್ಟ್ರಪತಿ ದ್ರೌಪದಿ ಮರ್ಮು ಶ್ಲಾಘಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಮಾನಸಿಕ ಆರೋಗ್ಯ

ಗಂಡಸರಿಗೆ ಬರೆ ಹಾಕುವ ಕಾಂಗ್ರೆಸ್ ಸರಕಾರ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಸರಕಾರಿ ಬಸ್ ಪ್ರಯಾಣ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಗರದ ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಜೆಪಿ ವತಿಯಿಂದ ವಿನೂತನ ಮಾದರಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೆಲವು ಕಾರ್ಯಕರ್ತರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರ

ಬಸ್ ಪ್ರಯಾಣ ಏರಿಕೆಗೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಳ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅಧಿಕಾರಕ್ಕೆ ಬಂದಾಗಿನಿಂದ ಈ ಸರಕಾರ ಜನರ ಮೇಲೆ ಬರೆ ಎಳೆಯುವುದು, ಅದನ್ನು ಜನರೂ ಭರಿಸಿಕೊಂಡು ಹೋಗುವುದು ಮಾಮೂಲಿ

ಗೃಹಸಚಿವರ ತವರಲ್ಲಿ ಮಹಿಳೆ ಜೊತೆ ಡಿವೈಎಸ್​​ಪಿ ಅಸಭ್ಯ ವರ್ತನೆ

ದೂರು ನೀಡಲು ಬಂದ ಮಹಿಳೆಯ ಜೊತೆ ಮಧುಗಿರಿ ಉಪವಿಭಾಗದ ಡಿವೈಎಸ್​​ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್​ ತವರು ಜಿಲ್ಲೆಯ ಡಿವೈಎಸ್​​ಪಿ ರಾಮಚಂದ್ರಪ್ಪ ಅವರ ಅಸಭ್ಯ ವರ್ತನೆಯ ವಿಡಿಯೋ

ಒದ್ದು ಅಧಿಕಾರ ಕಿತ್ತುಕೊಳ್ಳುವ ಸಮಯವಿದು ಡಿಕೆಶಿಗೆ ಅಶೋಕ್‌ ಟಾಂಗ್‌

ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ. ಡಿ.ಕೆ.ಶಿವಕುಮಾರ್ ಅವರೇ ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು