Saturday, October 10, 2026
Menu

ಟ್ಯೂಷನ್‌ ತಪ್ಪಿಸಲು ಕಿಡ್ನ್ಯಾಪ್‌ ಕಥೆ ಕಟ್ಟಿದ ಮಕ್ಕಳು

ಚಿತ್ರದುರ್ಗದ ಐಮಂಗಲ ಅಬ್ಬಿನ ಹೊಳೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಟ್ಯೂಷನ್‌ಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ಕಿಡ್ನ್ಯಾಪ್‌ ಕಥೆ ಕಟ್ಟಿ ಪೋಷಕರಲ್ಲಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿರುವ ಕಟ್ಟು ಕಥೆಯನ್ನು ಪೊಲೀಸರು ಬಯಲುಗೊಳಿಸಿದ್ದಾರೆ. ಟ್ಯೂಷನ್‌ಗೆ ಹೋದ ಮಕ್ಕಳು ತಡವಾಗಿ ಮನೆಗೆ ಬಂದವರು ತಾವು ಕಿಡ್ನ್ಯಾಪ್‌ ಆಗಿರುವುದಾಗಿ ಪೋಷಕರಲ್ಲಿ  ಹೇಳಿದ್ದಾರೆ. ಅಪಹರಣಕಾರರು ಹಿಂದಿಯಲ್ಲಿ ಮಾತನಾಡುತ್ತಿದ್ದರು, ನಾವು ಹೇಗೋ ತಪ್ಪಿಸಿಕೊಂಡು ಬಂದೆವು ಎಂದು ಹೇಳಿದ್ದಾರೆ. ಆದರೆ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್‌ ಸಿಕ್ಕಿದ್ದು, ಪೋಷಕರು ನಿರಾಳರಾಗಿದ್ದಾರೆ.

ಸಿಎಂ ತವರಲ್ಲೇ ದಲಿತ ಕುಟುಂಬಕ್ಕೆ ಬಹಿಷ್ಕಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ವರುಣಾ ವ್ಯಾಪ್ತಿಯಲ್ಲಿ ಬರುವ ಸಿದ್ದರಾಮಯ್ಯಹುಂಡಿ ಬಳಿಯ ಶ್ರೀನಿವಾಸಪುರ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಮಾಧ್ಯಮಗಳಲ್ಲಿ ವರದಿಯಾಗಿದೆ. ನೊಂದ ಕುಟುಂಬದವರು ಜಿಲ್ಲಾಧಿಕಾರಿ, ಪೊಲೀಸರು ಹಾಗೂ ತಹಶೀಲ್ದಾರ್​ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ.

ಸೆಲ್ಫಿ ಗೀಳಿಗೆ ಅಂಜನಾದ್ರಿ ಬೆಟ್ಟದ ಕಂದಕಕ್ಕೆ ಬಿದ್ದ ಯುವತಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟ ಹತ್ತಿದ್ದ ಯುವತಿಯೊಬ್ಬಳು ಬೆಟ್ಟದ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ. ಪೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ. ಬೆಟ್ಟದ ಹಿಂಬಾಗದಲ್ಲಿರುವ ಬಂಡೆಗಲ್ಲಿನ ಮೇಲೆ ನಿಂತು ಕೆಲವು ಪ್ರವಾಸಿಗರು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಾರೆ. ಆಂಜನೇಯನ

ಇನ್ಮುಂದೆ ಹುಬ್ಬಳ್ಳಿ, ಧಾರವಾಡ ಪ್ರತ್ಯೇಕ ಪಾಲಿಕೆ

ಹುಬ್ಬಳ್ಳಿ ಧಾರವಾಡ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ಮಾಡಲು ಗುರುವಾರ ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಧಾರವಾಡ ನಗರದ ಮಹಾನಗರ ಪಾಲಿಕೆಯಲ್ಲಿ 2,75,339 ಜನಸಂಖ್ಯೆ ಮತ್ತು ಒಟ್ಟಾರೆ

10 ವರ್ಷದ ನಂತರ ಜನತೆಗೆ ಬಸ್ ಪ್ರಯಾಣ ದರ ಏರಿಕೆ ಬಿಸಿ

10 ವರ್ಷಗಳ ಬಳಿಕ ರಾಜ್ಯದಲ್ಲಿ ಬಸ್ ಪ್ರಯಾಣದರವನ್ನು ರಾಜ್ಯ ಸರ್ಕಾರ​ ಹೆಚ್ಚಳ ಮಾಡಿದ್ದು ಜ.5‌ ರ ಭಾನುವಾರದಿಂದಲೇ ಹೆಚ್ಚಳವಾಗಿರುವ ಶೇ 15 ರಷ್ಟು ಟಿಕೆಟ್ ದರವು ಜಾರಿಗೆ ಬರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್

ಸ್ಮಾರ್ಟ್‌ ಸಿಟಿ ಅಭಿಯಾನದಡಿ ನಡೆದಿರುವ ಕಾಮಗಾರಿಗಳ ತನಿಖೆಗೆ ಸಚಿವ ಬೈರತಿ ಸುರೇಶ ಸೂಚನೆ

ಬೆಂಗಳೂರು: ಸ್ಮಾರ್ಟ್‌ ಸಿಟಿ ಅಭಿಯಾನದ ಅಡಿಯಲ್ಲಿ ರಾಜ್ಯದ 6 ಸ್ಮಾರ್ಟ್‌ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿಎಸ್.  ಸುರೇಶ (ಬೈರತಿ) ಸೂಚಿಸಿದ್ದಾರೆ. ಸ್ಮಾರ್ಟ್‌ ಸಿಟಿ

ಬಸ್ ಪ್ರಯಾಣ ದರ ಶೇ.15ರಷ್ಟು ಏರಿಕೆಗೆ ರಾಜ್ಯ ಸಚಿವ ಸಂಪುಟ ಅಸ್ತು

ಸಾರಿಗೆ ನಿಗಮಗಳ ಬಹುದಿನಗಳ ಬೇಡಿಕೆಯಾದ ಬಸ್ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಲು ರಾಜ್ಯ ಸಚಿವ ಸಂಪುಟ ಅನಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಶೇ.15ರಷ್ಟು ಬಸ್ ಪ್ರಯಾಣ ದರ ಏರಿಸಲು ತೀರ್ಮಾನಿಸಲಾಯಿತು. ಸಾರಿಗೆ

ಶರಣಾಗುವ ನಕ್ಸಲರಿಗೆ ರಾಜ್ಯ ಸರ್ಕಾರದಿಂದ 7.50 ಲಕ್ಷ ರೂ.: ವಿಕ್ರಮ್ ಅಮ್ಟೆ

ಶರಣಾಗುವ ನಕ್ಸಲರಿಗೆ ಜೀವನ ಕಟ್ಟಿಕೊಳ್ಳಲು 7.50 ಲಕ್ಷ ರೂ. ನೆರವು ನೀಡಲಾಗುವುದು ಎಂದು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮ್ಟೆ ಘೋಷಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಸ್ತ್ರಾಸ್ತ್ರ ಹಿಡಿದು ನಕ್ಸಲ್ ಹೋರಾಟ ಮಾಡುವವವರು ಸಮಾಜಮುಖಿ ಆಗಲು ರಾಜ್ಯ ಸರಕಾರ

ವಿಜಯಪುರ-ಮಂಗಳೂರು ರೈಲು ಯಲಿವಿಗಿಯಲ್ಲಿ ನಿಲುಗಡೆಗೆ ಅವಕಾಶ: ರೈಲ್ವೆ ಇಲಾಖೆಗೆ ಬೊಮ್ಮಾಯಿ ಧನ್ಯವಾದ

ಹಾವೇರಿ: ವಿಜಯಪುರ – ಮಂಗಳೂರು ನಡುವೆ ಸಂಚರಿಸುವ ಮಂಗಳೂರು ಎಕ್ಸ್ ಪ್ರೆಸ್ ರೈಲನ್ನು ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಿರುವ ಕೇಂದ್ರ ರೈಲ್ವೆ ಸಚಿವರು ಹಾಗೂ ಅಧಿಕಾರಿಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ.

ರಾಜ್ಯಾದ್ಯಂತ ಮೊದಲ ಬಾರಿಗೆ ಸುಗಮವಾಗಿ ಹೊಸ ವರ್ಷಾಚರಣೆ: ಜಿ ಪರಮೇಶ್ವರ್ ಹರ್ಷ

ಇದೇ ಮೊದಲ ಬಾರಿಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸುರಕ್ಷಿತವಾಗಿ ಹೊಸ ವರ್ಷಾಚರಣೆ ಮಾಡಿರುವುದಕ್ಕೆ ಗೃಹ ಸಚಿವ ಜಿ ಪರಮೇಶ್ವರ ಸಾರ್ವಜನಿಕರಿಗೆ ಮತ್ತು ಪೊಲೀಸ್ ಇಲಾಖೆಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ರಾತ್ರಿ ಲಕ್ಷಾಂತರ ಯುವಕರು,