ರಾಜ್ಯ
ಪರಿಷತ್ ಸದಸ್ಯತ್ವ ರದ್ದು ಪ್ರಶ್ನಿಸಿ ಪ್ರಾಣೇಶ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ
ವಿಧಾನಪರಿಷತ್ ಸದಸ್ಯತ್ವ ರದ್ದು ಪ್ರಶ್ನಿಸಿ ಉಪ ಸಭಾಪತಿ ಎಂಕೆ ಪ್ರಾಣೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರ ಸದಸ್ಯತ್ವ ರದ್ದುಪಡಿಸಲಾಗಿದೆ. ಇದನ್ನು ಪ್ರಶ್ನಿಸಿ ಪ್ರಾಣೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಪ್ರತಿಸ್ಪರ್ಧಿ ಗಾಯತ್ರಿ ಶಾಂತೇಗೌಡ ಮೇಲುಗೈ ಸಾಧಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ಪೀಠವು ಈ ತೀರ್ಪು ನೀಡಿದೆ.
ಬಿಡದಿ ಟೌನ್‌ಶಿಪ್: ಸಮಿತಿ ರಚನೆ ಕಾಂಗ್ರೆಸ್‌ನ ಹೊಸ ನಾಟಕವೆಂದು ಆರ್ ಅಶೋಕ ಟೀಕೆ
ಬಿಡದಿ ಟೌನ್‌ಶಿಪ್ ಯೋಜನೆ ಕೈ ಬಿಡದ ಕಾಂಗ್ರೆಸ್ ಸರ್ಕಾರ ಸಮಿತಿ ರಚಿಸುವ ಹೊಸ ನಾಟಕ ಮಾಡಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜನರ ಸಿಂಪತಿ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಎಂದಿಗೂ ಸ್ವಾಧೀನಕ್ಕೆ ಆದೇಶ ಹೊರಡಿಸಿರಲಿಲ್ಲ, ಕಾಂಗ್ರೆಸ್ ಕೂಡ ಯೋಜನೆಯನ್ನು
CWRC ಸಭೆಯಲ್ಲಿ ನೀರಿಗಾಗಿ ತಮಿಳ್ನಾಡು ಪಟ್ಟು: ಬಿಡಲು ಸಾಧ್ಯವೇ ಇಲ್ಲವೆಂದ ಕರ್ನಾಟಕ
ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡು ನೀರು ಹರಿಸಲೇಬೇಕು ಎಂದು ಪಟ್ಟು ಹಿಡಿದಿದ್ದು, ಬರಗಾಲ ಮತ್ತು ಕುಡಿಯುವ ನೀರಿನ ತೀವ್ರ ಅಭಾವದ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ಕರ್ನಾಟಕ ಖಡಾಖಂಡಿತವಾಗಿ ಹೇಳಿದೆ. ತಮಿಳುನಾಡಲ್ಲಿ ಮಳೆಯಾಗಲಿದೆ,
ನಾನು ಸಿಎಂ ಆಗಿದ್ದನ್ನು ಸಹಿಸಲಾಗದೆ ನನ್ನಣ್ಣ ಹೆಚ್‌ಡಿ ಕುಮಾರಸ್ವಾಮಿ ಎಚ್ಚರಗೊಂಡಿದ್ದಾರೆ: ಡಿಕೆ ಶಿವಕುಮಾರ್
ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ, ರೈತ ತಾಯಂದಿರ ಜಮೀನನ್ನೂ ಪಡೆದುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದಾಖಲೆಗಳ ಸಮೇತ ಸತ್ಯ ಸಂಗತಿಗಳನ್ನು ವಿವರಿಸಿದರು. ನಾನು ಸಿಎಂ ಅಗಿರುವುದು ಕೆಲವರಿಗೆ
ಶಾಶ್ವತ ನಿವಾಸ ಪ್ರಮಾಣಪತ್ರ ಪ್ರಸ್ತಾವನೆ ಹಿಂಪಡೆಯಲು ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ಮನವಿ
ರಾಜ್ಯದ ಸುರಕ್ಷತೆ ಮತ್ತು ಹಾಗೂ ಕನ್ನಡಿಗರ ಹಕ್ಕುಗಳಿಗೆ ಧಕ್ಕೆ ತರುವ ಕಾಂಗ್ರೆಸ್ ಸರ್ಕಾರದ ಸಂವಿಧಾನಬಾಹಿರ ‘ಶಾಶ್ವತ ನಿವಾಸ ಪ್ರಮಾಣಪತ್ರ’ (PRC) ಪ್ರಸ್ತಾವನೆಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ, ರಾಜ್ಯ ಬಿಜೆಪಿ ನಿಯೋಗದೊಂದಿಗೆ ರಾಜ್ಯಪಾಲ ಶ್ರೀ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಲೋಕಭವನದಲ್ಲಿ ಭೇಟಿ ಮಾಡಿ
ರಾಜ್ಯದಲ್ಲೂ ಕೋವಿಡ್ ಪಾಸಿಟಿವ್ ಹೆಚ್ಚಳ
ಆಂಧ್ರಪ್ರದೇಶದ ಬಳಿಕ ಕರ್ನಾಟಕದಲ್ಲೂ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಏರಿಕೆಯಾಗಿದೆ, ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯದ ಪರಿಸ್ಥಿತಿ ಸದ್ಯಕ್ಕೆ ನಿಯಂತ್ರಣದಲ್ಲಿದೆ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಕರ್ನಾಟಕದಲ್ಲಿ ಪತ್ತೆಯಾಗಿರುವ ಪ್ರಕರಣಗಳಲ್ಲಿ ಹೆಚ್ಚಿನವು ಗಂಭೀರ ಸ್ವರೂಪ ಹೊಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಬರ ಅಧ್ಯಯನಕ್ಕೆ ತಂಡ ನಿಯೋಜಿಸಲು ಪ್ರಧಾನಿಗೆ ಸಿಎಂ ಪತ್ರ
ಎಲ್ ನೀನೋ ಪರಿಣಾಮದಿಂದಾಗಿ ಕರ್ನಾಟಕ ರಾಜ್ಯದಲ್ಲಿ ಶೇ. 30ರಷ್ಟು (ಜು.11ರ ಮಾಹಿತಿ)ಮಳೆ ಕೊರತೆಯಾಗಿದ್ದು, ರಾಜ್ಯದಲ್ಲಿನ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರ ತಂಡ ನಿಯೋಜಿಸಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿನ
ಬಿಡದಿ ರೈತರ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಲು ಆರ್ ಅಶೋಕ ಆಗ್ರಹ
ಬಿಡದಿಯಲ್ಲಿ ರೈತರ ವಿರುದ್ಧ ಹಾಕಿರುವ ಎಫ್‌ಐಆರ್ ರದ್ದು ಮಾಡಬೇಕು ಹಾಗೂ ಭೂಮಿ ಸ್ವಾಧೀನ ಪ್ರಕ್ರಿಯೆ ಕೈ ಬಿಡಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಹಾಗೂ ಪೊಲೀಸರು, ಅಧಿಕಾರಿಗಳ ನಡುವೆ ಸಂಘರ್ಷ
ಆ.15ರೊಳಗೆ 5927 ಗ್ರಾ.ಪಂ.ಗಳಿಗೆ ಮಹಾತ್ಮಾಗಾಂಧಿ ಹೆಸರು: ಈಶ್ವರ ಖಂಡ್ರೆ
ಆಗಸ್ಟ್ 15ರ ಸ್ವಾತಂತ್ರ್ಯದಿನದೊಳಗೆ ರಾಜ್ಯದ ಎಲ್ಲ 5927 ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಾ ಗಾಂಧಿ ಗ್ರಾಮ ಪಂಚಾಯತಿ ಎಂದು ನಾಮಕರಣ ಮಾಡಲು ಗಡುವು ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಲಾಖೆಯ ಆಯುಕ್ತಾಲಯದ
ಮಾಜಿ ಸಚಿವ ರಾಮಚಂದ್ರಗೌಡ ನಿಧನ: ಮುಖ್ಯಮಂತ್ರಿ ಸಂತಾಪ
ಬಿಜೆಪಿ ಮುಖಂಡ ವಿಧಾನಪರಿಷತ್ತಿನ ಮಾಜಿ ಸದಸ್ಯ, ಮಾಜಿ ಸಚಿವ ರಾಮಚಂದ್ರ ಗೌಡ ಮಂಗಳವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಆರು ಬಾರಿ ವಿಧಾನಪರಿಷತ್ತಿಗೆ ಆಯ್ಕೆಯಾಗಿದ್ದರು, ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡಿದ್ದರು. ಆರೆಸ್ಸೆಸ್ ಹಿನ್ನೆಲೆಯಿದ್ದ ರಾಮಚಂದ್ರ ಗೌಡ ಅವರು ರಾಜ್ಯದಲ್ಲಿ ಯಡಿಯೂರಪ್ಪ




