ರಾಜ್ಯ
ದೇಶದ ಮೊದಲ ಸರ್ಕಾರಿ ಪ್ರಾಯೋಜಿತ AI ಯುನಿವರ್ಸಿಟಿ ಬೆಂಗಳೂರಿನಲ್ಲಿ : ಸಿಎಂ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಆರಂಭಿಸುವುದಾಗಿ ಸಿಎಂ ಡಿಕೆ ಶಿವಕುಮಾರ್ ಘೋಷಿಸಿದರು. ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಡೆದ ಗೂಗಲ್ ಐಓ ಕನೆಕ್ಟ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರ್ನಾಟಕವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವುದು ಮತ್ತು ಆಡಳಿತ ಹಾಗೂ ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಎಐ ತಂತ್ರಜ್ಞಾನವನ್ನು ಸಂಯೋಜಿಸುವುದು. ಎಐ ಪ್ರತಿಭೆಗಳನ್ನು ಅಭಿವೃದ್ಧಿಪಡಿಸಲು, ಸುಧಾರಿತ ಸಂಶೋಧನೆಯನ್ನು ಉತ್ತೇಜಿಸಲು ಮತ್ತು ಶಿಕ್ಷಣ ಸಂಸ್ಥೆಗಳು, ಉದ್ಯಮ ಹಾಗೂ
ಕೃಷಿ, ನೀರಾವರಿ ಯೋಜನೆಗಳಿಗೆ ಹೋರಾಟ ಮಾಡಿದ ನಾಯಕ ಹೆಚ್. ಹನುಮಂತಪ್ಪ: ಸಿಎಂ
ನಮ್ಮ ಹಿರಿಯ ನಾಯಕರಾದ ಹನುಮಂತಪ್ಪ ಅವರ ದೇಹ ನಮ್ಮ ಜೊತೆ ಇಲ್ಲದಿರಬಹುದು, ಆದರೆ ಅವರ ಕೆಲಸಗಳು, ಆಚಾರ ವಿಚಾರಗಳು ಶಾಶ್ವತವಾಗಿ ಉಳಿಯಲಿವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಚಿತ್ರದುರ್ಗದಲ್ಲಿ ರಾಜ್ಯಸಭೆ ಮಾಜಿ ಸದಸ್ಯ ಹೆಚ್. ಹನುಮಂತಪ್ಪ ಅವರ ಪಾರ್ಥಿವ ಶರೀರಕ್ಕೆ
ಬಿಡದಿ ರೈತರ ಒಪ್ಪಿಗೆಯಿದ್ದರೆ ಭೂಮಿ ತೆಗೆದುಕೊಳ್ಳಿ: ನಿಖಿಲ್ ಕುಮಾರಸ್ವಾಮಿ
ರೈತರ ಭಾವನೆಗಳ ವಿರುದ್ದ ಸರಕಾರ ಹೋಗುತ್ತಿದೆ, ಬಿಡದಿಯಲ್ಲಿ 9 ರೆವೆನ್ಯೂ ಗ್ರಾಮಗಳಿದ್ದು, 26 ಹಳ್ಳಿಗಳು ಬರುತ್ತವೆ. ಶೇ. 80 ರೈತರಿಂದ ಒಪ್ಪಿಗೆ ಪಡೆದಿದ್ದೇವೆಂದು ಸರಕಾರ ಹೇಳುತ್ತಿದೆ. ಆದರೆ ಇಲ್ಲಿನ ಶೇ. 90 ರಿಂದ 95 ಜನ ರೈತರು ಸರಕಾರಕ್ಕೆ ಭೂಮಿ ನೀಡಿಲ್ಲ.
ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮಂಡ್ಯದಲ್ಲಿ ಸಂಘಟನೆಗಳ ಪ್ರತಿಭಟನೆ
ಕೆಆರ್‌ಎಸ್ ಅಣೆಕಟ್ಟೆಯಿಂದ ಕಾವೇರಿ ನೀರನ್ನು ಜಿಲ್ಲೆಯ ಎಲ್ಲಾ ನಾಲೆಗಳಿಗೂ ಹರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ, ದಲಿತ ಸಂಘರ್ಷ ಸಮಿತಿ, ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕಾರ್ಮಿಕರ ಸಂಘ, ರೈತ ಸಂಘ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಪ್ರತ್ಯೇಕವಾಗಿ
ಬಿಡದಿ ಅಧಿಕಾರಿಗಳಿಗೆ ಪೊರಕೆ ಏಟು ಸಿಎಂ ಧೋರಣೆಗೆ ಹಿಡಿದ ಕೈಗನ್ನಡಿ: ಬಿವೈ ವಿಜಯೇಂದ್ರ
ಬಿಡದಿಯಲ್ಲಿ ಸರ್ವೆಗೆ ಹೋದ ಅಧಿಕಾರಿಗಳ ಕಾರು ತಡೆದು ಪೊರಕೆಯಲ್ಲಿ ಹೊಡೆದಿದ್ದಾರೆ. ರಾಜ್ಯದ ಸಿಎಂ ಧೋರಣೆಗೆ ಅಧಿಕಾರಿಗಳು ಬಿಸಿ ಅನುಭವಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈವಿಜಯೇಂದ್ರ ಹೇಳಿದರು. ಕಲಬುರಗಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಡಿಕೆಶಿ ಅವರಿಗೆ ರೈತರ
ಎಸ್‌ಐಆರ್ ಹೈಜಾಕ್, ದೇಶದ್ರೋಹಿಗಳಿಗೆ ಕಾಂಗ್ರೆಸ್ ಮಣೆ: ಆರ್ ಅಶೋಕ
ಶಾಶ್ವತ ನಿವಾಸಿ ಪ್ರಮಾಣಪತ್ರದ ಮೂಲಕ ಎಸ್‌ಐರ್ ಪ್ರಕ್ರಿಯೆಯನ್ನೇ ಕಾಂಗ್ರೆಸ್ ಹೈಜಾಕ್ ಮಾಡುತ್ತಿದೆ. ಇದರಿಂದ ದೇಶದ ಭದ್ರತೆಗೆ ಧಕ್ಕೆಯಾಗಿದ್ದು, ಕೂಡಲೇ ಈ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದರು. ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆಯ
ರೈತರ ಬದುಕಿಸಿ, ಕುಡಿಯಲು ನೀರು ಒದಗಿಸಿ ಕೋರ್ಟ್ ಆದೇಶ ಪಾಲನೆ- ಆ 6ರಿಂದ ಅಧಿವೇಶನ: ಸಿಎಂ
ಕಾವೇರಿ ವಿಚಾರದಲ್ಲಿ ನಾವು ರೈತರನ್ನು ಬದುಕಿಸಬೇಕು. ಕುಡಿಯುವ ನೀರನ್ನು ಪೂರೈಸಬೇಕು, ತಮಿಳುನಾಡು ಪಾಲಿನ ನೀರು ಹರಿಸುವ ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. 15ರಂದು ಕಾವೇರಿ ಮಂಡಳಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ನಮ್ಮ ರಾಜ್ಯದ ವಾದ ಮಂಡಿಸುತ್ತೇವೆ. ನಂತರ ತೀರ್ಮಾನವನ್ನು ತಿಳಿಸುತ್ತೇವೆ
ಹೈಕಮಾಂಡ್ ಅನುಮತಿ ಕೊಟ್ಟಾಗ ಸಚಿವ ಸಂಪುಟ ವಿಸ್ತರಣೆ ಮಾಡ್ತಾರೆ: ಸಚಿವ ಯತೀಂದ್ರ
ಸಚಿವ ಸಂಪುಟ ವಿಸ್ತರಣೆಗೆ ನಮ್ಮ ಹೈಕಮಾಂಡ್ ಅನುಮತಿ ಕೊಟ್ಟಾಗ ನಮ್ಮ ನಾಯಕರು ಹೋಗಿ ತೀರ್ಮಾನ ಮಾಡುತ್ತಾರೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ನಮ್ಮ ಹೈಕಮಾಂಡ್ ಗೆ ಬಿಟ್ಟಿದ್ದು, ಅವರು
ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್‌ಡಿ ರೇವಣ್ಣಗೆ ಸುಪ್ರೀಂ ನೋಟಿಸ್
ಮನೆ ಕೆಲಸದಾಕೆ ಮೇಲೆ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿರುವುದಾಗಿ ಹೇಳಲಾಗುತ್ತಿದೆ. ಹೆಚ್‌ಡಿ ರೇವಣ್ಣ ಮನೆಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆ ನೀಡಿದ ದೂರಿನ ಆಧಾರದಡಿ ಪ್ರಕರಣ ದಾಖಲಾಗಿತ್ತು. . 2025ರ ಡಿಸೆಂಬರ್ನಲ್ಲಿ ಆರೋಪದಿಂದ
ಪುತ್ರಿಯರ ಅಕ್ರಮ ನೇಮಕ ಆರೋಪ: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಸ್ಪೆಂಡ್
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ತಮ್ಮ ಇಬ್ಬರು ಪುತ್ರಿಯರನ್ನು ‘ಇಂಡಸ್ಟ್ರಿಯಲ್ ಎಕ್ಸ್‌ಟೆನ್ಶನ್ ಆಫೀಸರ್’ ಹುದ್ದೆಗೆ ಅಕ್ರಮವಾಗಿ ನೇಮಕ ಮಾಡಿಕೊಂಡ ಆರೋಪದಡಿ ಈ




