Saturday, November 15, 2025
Menu

ಆಯುಧಪೂಜೆ ದಿನ ವಾಹನ ತೊಳೆಯಲು ಕಾವೇರಿ ನೀರು ಬಳಸುವಂತಿಲ್ಲ

ಆಯುಧ ಪೂಜೆ  ದಿನ ಕುಡಿಯಲು ಪೂರೈಕೆಯಾಗುವ ಕಾವೇರಿ ನೀರಲ್ಲಿ ಕಾರು, ಬೈಕ್ ಸೇರಿದಂತೆ ವಾಹನಗಳನ್ನು ತೊಳೆಯುವಂತಿಲ್ಲ. ದಸರಾ ಹಬ್ಬದ ಸಂಭ್ರಮಕ್ಕೆ ಕಾವೇರಿ ನೀರು ಪೋಲು ಮಾಡಿದರೆ ದಂಡ ಪಾವತಿಸಬೇಕಾಗಬಹುದು. ಕಾವೇರಿ ನೀರು ಕುಡಿಯುವುದಕ್ಕೆ ಬಳಕೆಗೆ ಸರಬರಾಜಾಗುವುದು. ಅನಗತ್ಯವಾಗಿ ನೀರು ಪೋಲು ಮಾಡುವುದು, ಕುಡಿಯುವ ನೀರನ್ನು ವಾಹನ ಸ್ವಚ್ಛತೆ, ಕಟ್ಟಡ ನಿರ್ಮಾಣಕ್ಕೆ ಬಳಸಿದರೆ ನಿಯಮಾನುಸಾರ ದಂಡ ಬೀಳುವುದು ಎಂದು ಜಲಮಂಡಳಿ ಎಚ್ಚರಿಕೆ ನೀಡಿದೆ. ನೀರು ಪೋಲು ಮಾಡುವರ ವಿರುದ್ಧ 1964 ರ

ಜನಗಣತಿ ಸಮೀಕ್ಷೆಯಲ್ಲಿ ಜನರು ವೈಯಕ್ತಿಕ ಮಾಹಿತಿ ನೀಡಬೇಡಿ: ಆರ್‌.ಅಶೋಕ

ಕಾಂಗ್ರೆಸ್‌ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ವೈಯಕ್ತಿಕ ಮಾಹಿತಿಗಳನ್ನು ನೀಡಲೇಬೇಕು ಎಂದೇನಿಲ್ಲ. ಸೂಕ್ತ ಎನಿಸಿದ ಪ್ರಶ್ನೆಗಳಿಗೆ ಮಾತ್ರ ಜನರು ಉತ್ತರ ನೀಡಬೇಕು. ಸಮೀಕ್ಷೆ ವಿಚಾರದಲ್ಲಿ ಜನರು ಎಚ್ಚರವಾಗಿರಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ

ರಾಜ್ಯದಲ್ಲಿ ಇಂದಿನಿಂದ ಭಾರಿ ಗಾಳಿ ಮಳೆ, ಕರಾವಳಿಯಲ್ಲಿ ಚಂಡಮಾರುತ ಸಾಧ್ಯತೆ

ಕರ್ನಾಟಕದಲ್ಲಿ ಇಂದಿನಿಂದ ಭಾರಿ ಪ್ರಮಾಣದ ಮಳೆಯೊಂದಿಗೆ ಬಿರುಸಾದ ಗಾಳಿ ಬೀಸಲಿದೆ. ಮಂಗಳೂರು, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಶಿವಮೊಗ್ಗ, ಉಡುಪಿ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ತೀವ್ರ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ

ಮಳೆಯಿಂದ ಭಾರಿ ಹಾನಿ ವಿಶೇಷ ಪ್ಯಾಕೇಜ್‌ಗಾಗಿ ಸಿಎಂ ಸಿದ್ದರಾಮಯ್ಯಗೆ ಈಶ್ವರ ಖಂಡ್ರೆ ಮನವಿ

ಬೀದರ್‌ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರಿ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲಸೌಕರ್ಯಕ್ಕೂ ಹಾನಿ ಆಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮನವಿ

ವಿಜಯಪುರ ಪ್ರವಾಹ ಪೀಡಿತ ಸ್ಥಳಗಳಿಗೆ ಎಂ ಬಿ ಪಾಟೀಲ ಭೇಟಿ, ತುರ್ತು ಕ್ರಮಕ್ಕೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ನಿರಂತರ ಮಳೆಯ ಪರಿಣಾಮವಾಗಿ ಹಲವು ಭಾಗಗಳು ಪ್ರವಾಹದ ಭೀತಿಯಲ್ಲಿದ್ದು, ಅಕ್ಷರಶಃ ಜನಜೀವನ ಅಸ್ತವ್ಯಸ್ತಗೊಂಡಿದೆ.  ಈ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು. ಭೀಮಾನದಿ

ರೈತರ ಒಂದಿಂಚೂ ಭೂಮಿಯನ್ನ ಕಸಿಯಲು ಬಿಡಲ್ಲ: ನಿಖಿಲ್ ಕುಮಾರಸ್ವಾಮಿ

ರಾಜ್ಯ ಕಾಂಗ್ರೆಸ್ ಸರ್ಕಾರ ಬಿಡದಿಯ ಟೌನ್ ಶಿಪ್ ಯೋಜನೆಯನ್ನು ಹಿಂಪಡೆಯದಿದ್ದರೇ ವಿಧಾನಸೌಧ ಹಾಗೂ ಮುಖ್ಯಮಂತ್ರಿಗಳ ನಿವಾಸ ಕೃಷ್ಣ ಕಛೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಸರ್ಕಾರಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು. ಬಿಡದಿಯಲ್ಲಿ ಟೌನ್ ಶಿಪ್

ಉರಿಯಮ್ಮ/ಉರಿಯಪ್ಪನವರಿಗೆ ಬಾನು ಮುಷ್ತಾಕ್ ಧನ್ಯವಾದ ಪತ್ರ

ಈ ವರ್ಷ ನಾಡಹಬ್ಬ ಮೈಸೂರು ದಸರಾವನ್ನು ಬುಕ್ಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಉದ್ಘಾಟಿಸಿದರು. ಹೂವು ಮುಡಿದು ಹಿಂದೂ ಸಂಪ್ರದಾಯ ಪಾಲಿಸಿ ನಡೆದುಕೊಂಡ ಅವರು ತಮ್ಮ ಉದ್ಘಾಟನಾ ಭಾಷಣದಲ್ಲೇ ವಿರೋಧಿಗಳಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದರು. ಉದ್ಘಾಟನೆಗೆ ವಿರೋಧ ವ್ಯಕ್ತಪಡಿಸಿದವರ ಕುರಿತಾಗಿ ಬಾನು

ರಾಜ್ಯದ ಹೆಮ್ಮೆಯ ಕೆಎಸ್‌ಆರ್‌ಟಿಸಿಗೆ 9 ವಿಭಾಗಗಳಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿ

ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ಆಯೋಜಿಸಿದ್ದ 15ನೇ ವಿಶ್ವ ಸಂವಹನ ಸಮಾವೇಶ ಮತ್ತು ಎಕ್ಸಲೆನ್ಸ್ ಅವಾರ್ಡ್ಸ್ 2025ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) 9 ವಿಭಾಗಗಳಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ಪಡೆದಿದೆ. ಈ ಸಾಧನೆಯ ಮೂಲಕ ಕೆಎಸ್‌ಆರ್‌ಟಿಸಿ ಆಧುನಿಕ

ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿ: ಡ್ಯಾಂಗಳಲ್ಲಿ ಎಷ್ಟಿದೆ ನೀರು?

ಸತತ ಮಳೆಯ ಪರಿಣಾಮವಾಗಿ ಕರ್ನಾಟಕದ ಹಲವು ಪ್ರಮುಖ ಜಲಾಶಯಗಳು ತುಂಬಿ ಹರಿಯುವ ಹಂತಕ್ಕೇರಿವೆ. ಕೆಲವೆಡೆ ನೀರಿನ ಮಟ್ಟ ಗರಿಷ್ಠ ಮಟ್ಟ ತಲುಪಿದ್ದು, ಇನ್ನೂ ಕೆಲವು ಜಲಾಶಯಗಳು ಭರ್ತಿಯ ಅಂಚಿನಲ್ಲಿ ನಿಂತಿವೆ. ಸೆಪ್ಟೆಂಬರ್ 28ರ ಪರಿಸ್ಥಿತಿಯಂತೆ ರಾಜ್ಯದ ಕೆ.ಆರ್.ಎಸ್, ಕಬಿನಿ, ಆಲಮಟ್ಟಿ, ತುಂಗಭದ್ರಾ

ಕಲ್ಯಾಣ ಕರ್ನಾಟಕದಲ್ಲಿ ವರುಣನ ಆರ್ಭಟ: ತುರ್ತು ಕ್ರಮಕ್ಕೆ ಸಿಎಂ ಸೂಚನೆ

ಕಳೆದ ಮೂರು ದಿನಗಳಿಂದ ಕಲ್ಯಾಣ ಕರ್ನಾಟಕದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದೆ. ಮಳೆ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಕಲಬುರಗಿ, ವಿಜಯಪುರ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಪ್ರವಾಹದ ಸಮಸ್ಯೆ ನಿರ್ವಹಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ