Menu

ಕುಟುಂಬಗಳಿಗೆ ಹಳ್ಳಿಗಳಲ್ಲಿ ಉಳಿಯಲು ಘನತೆ, ಭದ್ರತೆ, ವಿಶ್ವಾಸ ನೀಡುವ ಭರವಸೆಯೇ “MGNREGA”

MGNREGA ಕೇವಲ ಕಲ್ಯಾಣ ಕಾರ್ಯಕ್ರಮವಲ್ಲ, ಬದಲಾಗಿ ಗ್ರಾಮೀಣ ಕುಟುಂಬಗಳಿಗೆ ತಮ್ಮ ಹಳ್ಳಿಗಳಲ್ಲಿ ಉಳಿಯಲು ಘನತೆ, ಭದ್ರತೆ ಮತ್ತು ವಿಶ್ವಾಸವನ್ನು ನೀಡುವ ಭರವಸೆ ಎಂದು ಕರ್ನಾಟಕದ ಐಟಿ, ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿ  ವಿಬಿ-ಗ್ರಾಮ್ ಜಿ ಮಸೂದೆ ವಿರುದ್ಧ  ನವದೆಹಲಿಯಲ್ಲಿ  ನಡೆದ ರಾಷ್ಟ್ರೀಯ ದುಂಡುಮೇಜಿನ ಸಭೆಯಲ್ಲಿ  ನಾಗರಿಕ ಹಕ್ಕುಗಳ ಗುಂಪುಗಳು, ಅರ್ಥಶಾಸ್ತ್ರಜ್ಞರು, ಹಿರಿಯ ವಕೀಲರು, ಶಿಕ್ಷಣ ತಜ್ಞರು, ಕಾರ್ಯಕರ್ತರು,

ಸುಸ್ಥಿರ ಬೆಂಗಳೂರನ್ನು ನಿರ್ಮಿಸುವ ಅಗತ್ಯ: ಪ್ರಿಯಾಂಕ್‌ ಖರ್ಗೆ ಪ್ರತಿಪಾದನೆ

ನಾವೀನ್ಯತೆ, ಬೆಳವಣಿಗೆ ಮತ್ತು ವಾಸಯೋಗ್ಯತೆಯನ್ನು ಸಮತೋಲನಗೊಳಿಸುವ ಸುಸ್ಥಿರ ಬೆಂಗಳೂರನ್ನು ನಿರ್ಮಿಸುವ ಅಗತ್ಯವಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಪಾದಿಸಿದ್ದಾರೆ. ನವದೆಹಲಿಯಲ್ಲಿ ಡೆಲಾಯ್ಟ್ ಸಂಸ್ಥೆ ಆಯೋಜಿಸಿದ್ದ ವಾರ್ಷಿಕ ಸಮಾವೇಶ ‘ಆರೋಹಣ: ಗ್ರೋತ್ ವಿತ್ ಇಂಪ್ಯಾಕ್ಟ್ ಗವರ್ನಮೆಂಟ್ ‘ಸಮ್ಮಿಟ್’ನಲ್ಲಿ ಭಾಗವಹಿಸಿ

ನದಿ ಜೋಡಣೆಯಲ್ಲಿ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರು ನಿಗದಿ: ಕೇಂದ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ

ನವದೆಹಲಿ: “ನದಿ ಜೋಡಣೆ ಯೋಜನೆಯಲ್ಲಿ ನಮ್ಮ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರನ್ನು ನೀಡಬೇಕು. ಗೋದಾವರಿ- ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ” ಎಂದು

ಫೆಬ್ರವರಿಯಲ್ಲಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ: ಕಂದಾಯ ಇಲಾಖೆ ದಾಖಲೆ

ಬೆಂಗಳೂರು: ಬಹುಕಾಲದಿಂದ ತಾಂಡ, ಹಟ್ಟಿ ಗೊಲ್ಲರಹಟ್ಟಿ ಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಅಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆ ಮಾಡಲು 2017ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದರ ಮುಖಾಂತರ ಕಾಲಾನುಕಾಲದಿಂದ ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳಿಗೆ ನೆಮ್ಮದಿ ನೀಡಲು

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ  ಸರ್ಕಾರ ಉತ್ತರ ನೀಡಿಲ್ಲ: ಆರ್‌ ಅಶೋಕ

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಆ ಭಾಗಕ್ಕೆ ಹೊಸದಾಗಿ ಏನೂ ನೀಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ನಾನು ಎರಡು ಗಂಟೆ,

ಮೋದಿ ಸರ್ಕಾರದ ನಿರ್ಧಾರದಿಂದ ಭವಿಷ್ಯದಲ್ಲಿ ನರೇಗಾ ಯೋಜನೆ ವಿಫಲ: ಡಿಕೆ ಶಿವಕುಮಾರ್‌ ಕಳವಳ

“ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರದ ನಿರ್ಧಾರದಿಂದ ಭವಿಷ್ಯದಲ್ಲಿ ನರೇಗಾ ಯೋಜನೆ ವಿಫಲವಾಗಲಿದೆ.  ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ, ಬೆಂಬಲ ಕೋರಿ ಕೇಂದ್ರ ಸಚಿವರಿಗೆ ಡಿಸಿಎಂ ಮನವಿ 

ಮೆಟ್ರೋ 2ನೇ ಹಂತದ ಪರಿಷ್ಕೃತ ದರಕ್ಕೆ ಒಪ್ಪಿಗೆ, ಮೆಟ್ರೋ 3ಎ ಹಂತಕ್ಕೆ ಅನುಮೋದನೆ, RRTS ಯೋಜನೆಗೆ ಬೆಂಬಲ, ಮಿಟ್ಟಗಾನಹಳ್ಳಿ ಕೆರೆ ಬಳಿ ವಿವಿಧಹಂತದ ತ್ಯಾಜ್ಯ ವಿಲೇವಾರಿ (Treatment  and Disposal of Legacy Leachate)ಗೆ ಅನುಮತಿ ಸೇರಿದಂತೆ ಬೆಂಗಳೂರಿನ ಅಭಿವೃದ್ಧಿಗೆ ಅಗತ್ಯವಾಗಿರುವ

5 ಹುಲಿಗಳ ಸೆರೆ ಕಾರ್ಯಾಚರಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾನಗರದ ನಂಜೆದೇವಪುರದಲ್ಲಿ ಕಾಣಿಸಿಕೊಂಡಿರುವ 5 ಹುಲಿಗಳನ್ನು ಸುರಕ್ಷಿತವಾಗಿ ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಮೊದಲಿಗೆ ಬೋನುಗಳನ್ನು ಅಳವಡಿಸಲು ಮತ್ತು ಅಗತ್ಯ ಬಿದ್ದರೆ ಅರವಳಿಕೆ ನೀಡಿ ಸೆರೆ ಹಿಡಿಯಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ

ಬಿಜೆಪಿ ಶಾಸಕ ಬೈರತಿ ಬಸವರಾಜು ಜಾಮೀನು ಅರ್ಜಿ ವಜಾ: ಬಂಧನ ಭೀತಿ

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಗಳಲ್ಲಿ ಒಬ್ಬರಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ಜಾಮೀನು ಅರ್ಜಿ ವಜಾಗೊಂಡಿದ್ದು, ಯಾವುದೇ ಕ್ಷಣದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಇದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ 8 ಆರೋಪಿಗಳ ಪೈಕಿ ಒಬ್ಬರಾಗಿ ಬೆಂಗಳೂರಿನ ಕೆಆರ್

ರೈತರಿಗೆ ವೃತ್ತಿ ಆಧಾರಿತ ಮೀಸಲಾತಿ ಅಗತ್ಯ: ಬಸವರಾಜ ಬೊಮ್ಮಾಯಿ

ಕಲಬುರ್ಗಿ: ರೈತರಿಗೆ ವೃತ್ತಿ ಆಧಾರಿತ ಮೀಸಲಾತಿಯನ್ನು ತರುವ ವ್ಯವಸ್ಥೆ ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಆಗಬೇಕು. ಆಗ ಮಾತ್ರ ರೈತರ ಮಕ್ಕಳಿಗೆ ಉದ್ಯೋಗ ಸಿಗುತ್ತದೆ. ಇಲ್ಲದಿದ್ದರೆ ರೈತರ ಸಂಖ್ಯೆ ಕಡಿಮೆ ಆಗುತ್ತದೆ. ದೇಶದಲ್ಲಿ ರೈತ ಕೇಂದ್ರಿತ ಯೋಜನೆಗಳು ಬೇಕಿವೆ. ರೈತ ಬಲಿಷ್ಠವಾಗಿದ್ದರೆ