ರಾಜ್ಯ
ಮಲ್ಲಿಕಾರ್ಜುನ ಖರ್ಗೆ ಬಳಿ ರಾಜಕೀಯ ಚರ್ಚೆ ಮಾಡಿಲ್ಲ: ಡಿಕೆ ಶಿವಕುಮಾರ್
“ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ರಾಜಕೀಯ ಚರ್ಚೆ ಮಾಡಿಲ್ಲ. ಪಕ್ಷದ ನೂತನ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಗೆ ಮನವಿ ಮಾಡಿರುವೆ ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ಪುನಾರಚನೆ ಕುರಿತು ಸಿಎಂ ಅವರು ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ, ಭಾನುವಾರ ನೀವು ಭೇಟಿ ಮಾಡಿದ್ದೀರಿ, ಈ ಬಗ್ಗೆ ಚರ್ಚೆ
ಪ್ರವಾಹ ಪರಿಹಾರ, ನೀರಾವರಿ ಯೋಜನೆಗೆ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಮನವಿ
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ, 2100 ಕೋಟಿ ಪ್ರವಾಹ ಪರಿಹಾರ ಹಾಗೂ ಪ್ರಮುಖ
ಮೃಗಾಲಯದಲ್ಲಿ 31ಕ್ಕೇರಿದ ಕೃಷ್ಣಮೃಗಗಳ ಸಾವಿನ ಸಂಖ್ಯೆ: ಬನ್ನೇರುಘಟ್ಟ ತಜ್ಞರಿಂದ ಪರಿಶೀಲನೆ
ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವಿನ ಸರಣಿ ಮುಂದುವರಿದಿದೆ. ಸೋಮವಾರ ಬೆಳಗಿನ ಜಾವ ಮತ್ತೊಂದು ಮೃತಪಟ್ಟಿದ್ದು, ಕೃಷ್ಣಮೃಗಗಳ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿರು ಮೃಗಾಲಯದಲ್ಲಿ ಕಳೆದ ಒಂದು ವಾರದಿಂದ
ಸಂಪುಟ ಪುನಾರಚನೆ, ಪವರ್ ಶೇರಿಂಗ್ ತೀರ್ಮಾನ ಪಕ್ಷದ ಹೈಕಮಾಂಡ್‌ನದು: ಡಿಕೆ ಸುರೇಶ್
ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಹೈಕಮಾಂಡ್. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ಎಂದು ಕಾದು ನೋಡೋಣ ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್
ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೇಕೆ ರಾಜೀನಾಮೆ ನೀಡಲಿ: ಡಿಕೆ ಶಿವಕುಮಾರ್
“ನಾನು ಪಕ್ಷದ ಶಿಸ್ತಿನ ಸಿಪಾಯಿ. ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನಲ್ಲ. ನಾನು ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ. ಮುಂದೆಯೂ ಕಟ್ಟುತ್ತೇನೆ” ಎಂದು ಡಿಸಿಎಂ ಡಿಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಕೆಪಿಸಿಸಿ ಅಧ್ಯಕ್ಷ
ಗಳಲೆ ರೋಗ: ಬೆಳಗಾವಿ ಮೃಗಾಲಯದಲ್ಲಿ ಕೃಷ್ಣಮೃಗಳ ಸಾವಿನ ಸಂಖ್ಯೆ 29ಕ್ಕೆ ಏರಿಕೆ
ಬೆಳಗಾವಿಯ ಭೂತರಾಮನಹಟ್ಟಿಯ ಕಿತ್ತೂರು ಚನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೇರಿದೆ. ಗಳಲೆ ರೋಗದಿಂದ ಕೃಷ್ಣ ಮೃಗಗಳು ಮೃತಪಟ್ಟಿರುವುದಾಗಿ ತಜ್ಞ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ. ಸಾವಿಗೆ ನಿಖರ ಕಾರಣ ಏನೆಂಬುದು ವರದಿ ಬಂದ ಬಳಿಕವೇ ತಿಳಿಯಲಿದೆ. ಮೃತ ಕೃಷ್ಣ ಮೃಗಗಳ ಕಿಡ್ನಿ,
ಕಾಡಸಿದ್ದೇಶ್ವರ ಶ್ರೀಗೆ ನಿರ್ಬಂಧ ಖಂಡಿಸಿ ಪ್ರತಿಭಟನೆ, ಶಾಸಕ ಸಿಸಿ ಪಾಟೀಲ್ ಭಾಗಿ
ಕನ್ಹೇರಿ ಮಠದ ಅದೃಶ್ಯ ಶ್ರೀ ಕಾಡಸಿದ್ದೇಶ್ವರ ಶ್ರೀಗಳಿಗೆ ವಿಜಯಪುರ, ಬಾಗಲಕೋಟಿ ಹಾಗೂ ಧಾರವಾಡ ಜಿಲ್ಲೆಗೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಗದಗದಲ್ಲಿ ಪಾದಯಾತ್ರೆ ಮೂಲಕ ಬೃಹತ್ ಪ್ರತಿಭಟನೆ ನಡೆಯಿತು. ಚೆನ್ನಮ್ಮ ಸರ್ಕಲ್ ನಿಂದ ಆರಂಭವಾದ ಪಾದಯಾತ್ರೆ ಮುಳಗುಂದ ನಾಕಾ
ಬೆಳಗಾವಿ ಅಧಿವೇಶನದಲ್ಲಿ ಉಕ ಸಮಸ್ಯೆ ಬಗ್ಗೆ ಚರ್ಚೆಯಾದ್ರೆ ಸಾಲದು, ಸರ್ಕಾರ ಕ್ರಮ ಕೈಗೊಳ್ಳಬೇಕು: ಆರ್ ಅಶೋಕ
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಕೇವಲ ಚರ್ಚೆಯಾದರೆ ಸಾಲದು, ಆ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಅಧಿವೇಶನದ ತಯಾರಿ ಬಗ್ಗೆ ನಡೆದ ಸಭೆ ಬಳಿಕ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅಧಿವೇಶನ
ಸಚಿವ ಸಂಪುಟ ವಿಸ್ತರಣೆ, ನಾಯಕತ್ವ ಬದಲಾವಣೆ ಬಗ್ಗೆ ಸಿಎಂ ಬಳಿ ಮಾತನಾಡಿ: ಡಿಕೆ ಶಿವಕುಮಾರ್
ನನಗೆ ಏನೂ ತಿಳಿದಿಲ್ಲ. ಸಚಿವ ಸಂಪುಟ ವಿಸ್ತರಣೆ, ನಾಯಕತ್ವ ಬದಲಾವಣೆ ಬಗ್ಗೆ ಏನಾದರೂ ಮಾಹಿತಿ ಬೇಕೆಂದರೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ. ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ
ಮಂಗಳೂರಿನಲ್ಲಿ 2 ಅಪಘಾತ, 6 ಮಂದಿ ದುರ್ಮರಣ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಮಂಗಳೂರಿನಲ್ಲಿ ಸಂಭವಿಸಿದ ಪ್ರತ್ಯೇಕ ಭೀಕರ ಅಪಘಾತಗಳಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಬಳಿ ಸರ್ಕಲ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಅಲ್ಲದೆ, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ




