Monday, September 28, 2026
Menu

ಬಿಡದಿ ಯೋಜನೆ ಕುಮಾರಸ್ವಾಮಿ ಆರಂಭಿಸಿ ಯಡಿಯೂರಪ್ಪ ಮುಂದುವರಿಸಿದ್ದರು: ಸಿಎಂ 

ಬಿಡದಿಯಲ್ಲಿ ಕುಮಾರಸ್ವಾಮಿ  ನೋಟಿಫಿಕೇಷನ್ ಮಾಡಿದ್ದರು. ಯಡಿಯೂರಪ್ಪ ಯೋಜನೆ ಮುಂದುವರಿಸಿದ್ದರು. ಅದನ್ನು ನಾವು ಇನ್ನಷ್ಟು ಮುಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದೇವೆಯೇ ಹೊರತು ಹೊಸದಾಗಿ ನಾವೇನೂ ಮಾಡುತ್ತಿಲ್ಲ. ಬಿಡದಿ ಕೈಗಾರಿಕಾ ಪ್ರದೇಶಕ್ಕೆ ಭೂಸ್ವಾಧೀನ ಮಾಡಿದವರು ಯಾರು,  ಈಗಿರುವ 9 ಸಾವಿರ ಎಕರೆಯಲ್ಲಿ 1 ಸಾವಿರ ಎಕರೆಯನ್ನು ಬಿಜೆಪಿಯ ಮಾಜಿ ಸಿಎಂ ಜಗದೀಶ್ ಶೆಟ್ಟರ್  ಸ್ವಾಧೀನ ಮಾಡಿಕೊಡಲಿಲ್ಲವೇ ಎಂದು ಸಿಎಂ ಡಿಕೆ. ಶಿವಕುಮಾರ್‌ ಪ್ರಶ್ನಿಸಿದರು. ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಪ್ರತಿಕ್ರಿಯೆ

ಪ್ರಜಾಸೇವೆ ಇಲಾಖೆ ಅಸ್ತಿತ್ವಕ್ಕೆ, ರಾಜ್ಯದ ವಿದ್ಯಾರ್ಥಿಗಳಿಗೆ ದೆಹಲಿಯಲ್ಲಿ ಕರ್ನಾಟಕ ಭವನ: ಸಿಎಂ

ಸಾರ್ವಜನಿಕರ ಕುಂದುಕೊರತೆಗಳು, ಸಾರ್ವಜನಿಕ ಹೋರಾಟಗಳ ಅಹವಾಲುಗಳನ್ನು ಆಲಿಸಲು “ಪ್ರಜಾಸೇವೆ ಇಲಾಖೆ” ಯನ್ನು ಹೊಸದಾಗಿ ಪ್ರಾರಂಭ ಮಾಡಲಾಗುತ್ತಿದೆ. ಪ್ರತ್ಯೇಕ ಸಚಿವರಿಗೆ ಇದರ ಜವಾಬ್ದಾರಿ ವಹಿಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಶಿವಕುಮಾರ್‌ ಮಾಧ್ಯಮಗೋಷ್ಠಿಯಲ್ಲಿ

ಲೆಬನಾನ್‌ನಲ್ಲಿ ಮುಂದುವರಿದ ಇಸ್ರೇಲ್‌ ದಾಳಿ: ಐವರು ಬಲಿ

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ಡ್ರೋನ್ ಮತ್ತು ವಾಯು ದಾಳಿ ಮುಂದುವರಿಸಿದ್ದು, ಕನಿಷ್ಠ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದೆ. ಶನಿವಾರ ಬೆಳಗಿನ ಜಾವದವರೆಗೆ ಇಸ್ರೇಲ್‌ ಯುದ್ಧ ವಿಮಾನಗಳು ಮತ್ತು ಡ್ರೋನ್‌ಗಳು ಲೆಬನಾನ್‌ನ ನಬತಿಯೇಹ್ ವಸತಿ ಕಟ್ಟಡಗಳ ಮೇಲೆ

“ಅಡ್ಡಕಸುಬಿ ಕಾಂಗ್ರೆಸ್ ಸರ್ಕಾರದಲ್ಲಿ ಆಡಳಿತ ಸಂಪೂರ್ಣ ಮುಳುಗಿ ಹೋಗಿದೆ”

ವಿರೋಧ ಪಕ್ಷದ ಶಾಸಕರಿಗೆ ಆಮಿಷ ಒಡ್ಡಿ, ಅಡ್ಡಮತದಾನ ಮಾಡಿಸುವ ರಾಜಕೀಯ ಸರ್ಕಸ್‌ನಲ್ಲಿ ದಿನಪೂರ್ತಿ ಮುಳುಗಿರುವ ಮುಖ್ಯಮಂತ್ರಿ @DKShivakumar ಅವರೇ, ನಿಮ್ಮ ಈ ಅಡ್ಡಕಸುಬಿ ಆಡಳಿತದಿಂದಾಗಿ ರಾಜ್ಯದ ಶಾಲಾ ಮಕ್ಕಳ ಭವಿಷ್ಯ ಡೋಲಾಯಮಾನವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಕಿಡಿ ಕಾರಿದ್ದಾರೆ.

ಮೇಕೆದಾಟು ಯೋಜನೆ ವಿರುದ್ಧ ನಿಂತ ಟಿವಿಕೆ, ಕಾಂಗ್ರೆಸ್‌ ಬೆಂಬಲ ವಾಪಸ್‌ ಪಡೆಯಲಿ: ಆರ್‌ ಅಶೋಕ ಸವಾಲು

ತಮಿಳುನಾಡಲ್ಲಿ ಟಿವಿಕೆ ಪಕ್ಷದ ಸರ್ಕಾರ ಮೇಕೆದಾಟು ಯೋಜನೆಗೆ ವಿರುದ್ಧವಾಗಿ ನಿರ್ಣಯ ಕೈಗೊಂಡಿದೆ. ಈಗ ಕಾಂಗ್ರೆಸ್‌ ತನ್ನ ಬೆಂಬಲವನ್ನು ಹಿಂಪಡೆಯಲಿ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಸವಾಲು ಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಲ್ಲಿ ಡಿಎಂಕೆ ಬೆನ್ನಿಗೆ ಚೂರಿ ಹಾಕಿದ ಕಾಂಗ್ರೆಸ್‌,

ಪರಿಷತ್‌ ಚುನಾವಣೆ ಫಲಿತಾಂಶ: ಮೈತ್ರಿಬಣದಲ್ಲಿ ಎಲ್ಲವೂ ಸರಿಯಿಲ್ಲ

ಮೇಲ್ಮನೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿದ್ದ ಗೋವಿಂದರಾಜ್ ಸೋಲು ಸಾಮಾನ್ಯದ್ದಲ್ಲ. ಈ ಸೋಲಿನಿಂದ ರಾಜ್ಯದ ಮೈತ್ರಿ ಕೂಟದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದೀಗ ಬಹಿರಂಗಗೊಂಡಿದೆ. ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿ ಹಾಗೂ ದಳದ ಅಗ್ರ ನೇತಾರರು ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ರಣತಂತ್ರ ಹೂಡಬೇಕಿತ್ತು. ಆದರೆ

ರಾಜ್ಯದ ಹಲವು ಕೋರ್ಟ್‌ಗಳಿಗೆ ಹುಸಿ ಬಾಂಬ್‌ ಬೆದರಿಕೆ

ರಾಜ್ಯದ ಹಲವು ನ್ಯಾಯಾಲಯ ಕಟ್ಟಡಗಳಿಗೆ ಹುಸಿ ಬಾಂಬ್‌ ಬೆದರಿಕೆ ಕರೆ ಬಂದಿದೆ. ಬಾಗಲಕೋಟೆ, ದಾವಣಗೆರೆ, ಧಾರವಾಡ, ಕೋಲಾರ ಜಿಲ್ಲಾ ನ್ಯಾಯಾಲಯಗಳಿಗೆ ಅನುಮಾನಾಸ್ಪದ ಐಡಿಯಿಂದ ಬಾಂಬ್ ಬೆದರಿಕೆಯ ಇ-ಮೇಲ್​​​​ಗಳು ಬಂದಿವೆ. ಹೀಗಾಗಿ ಕೋರ್ಟ್‌ ಆವರಣಗಳಲ್ಲಿ ಆತಂಕ ಸೃಷ್ಟಿಯಾಗಿತ್ತು, ಪೊಲೀಸರು ತಪಾಸಣೆ ನಡೆಸಿದ್ದಾರೆ. ಬಾಗಲಕೋಟೆ

ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪಕ್ಷಾತೀತ ಬೆಂಬಲ: ಸಿಎಂ

ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಸರ್ಕಾರಕ್ಕೆ ಶಾಸಕರ ಬೆಂಬಲ ನೋಡಿ ನನಗೆ ಆಶ್ಚರ್ಯವಾಗಿದೆ. ಇದು ನಮ್ಮ ಸರ್ಕಾರಕ್ಕೆ ಮಾತ್ರ ನೀಡಿರುವ ಬೆಂಬಲವಲ್ಲ. ರಾಜ್ಯದ ಜನತೆಯ ಹಿತಕ್ಕಾಗಿ ನಿಮ್ಮ ಜೊತೆ ಇದ್ದೇವೆ ಎಂದು ನೀಡಿರುವ ಬೆಂಬಲ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು.

ವಿಪಕ್ಷಗಳ ಗ್ಯಾರಂಟಿ ವಿರೋಧಿ ನೀತಿಗೆ ಅವರ ಶಾಸಕರಿಂದಲೇ ಉತ್ತರ: ಸುರ್ಜೇವಾಲಾ

ಮೂರು ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ಮಾಡಿದ ಜನಪರ ಕೆಲಸಗಳಿಗೆ ಶಾಸಕರು ನೀಡಿರುವ ಬೆಂಬಲ ಈ ಪರಿಷತ್ ಚುನಾವಣೆ ಪಲಿತಾಂಶ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಗ್ಯಾರಂಟಿ ವಿರೋಧಿ ನಿಲುವನ್ನು ಅವರ ಪಕ್ಷದ ಶಾಸಕರೇ ವಿರೋಧಿಸಿ ಸಂದೇಶ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ

ಕಾರ್ಮಿಕ ವಿವಾದಗಳಲ್ಲಿ ಎಸ್‌ಸಿ ಎಸ್​ಟಿ ಕಾಯ್ದೆ ದುರ್ಬಳಕೆ ಸಲ್ಲದು: ಹೈಕೋರ್ಟ್​

ಕಾರ್ಮಿಕ ಮತ್ತು ಸಿವಿಲ್ ಪ್ರಕರಣಗಳಿಗೆ ಕ್ರಿಮಿನಲ್ ರೂಪ ನೀಡಿ, ಅದರಲ್ಲೂ ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್​ ಹೇಳಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್​ಐಆರ್ ಮತ್ತು ಅದಕ್ಕೆ ಸಂಬಂಧಿಸಿದ