ರಾಜ್ಯ
ಶಿವಮೊಗ್ಗ ಜೈಲಿನಲ್ಲಿ ಅನಾರೋಗ್ಯದಿಂದ ಕೈದಿ ಸಾವು
ಜೀವಾವಧಿ ಶಿಕ್ಷೆಗೆ ಗುರಿಯಾಗಿ ಶಿವಮೊಗ್ಗದ ಸೆಂಟ್ರಲ್ ಜೈಲಿನಲ್ಲಿದ್ದ ಕೈದಿಯೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಮೂಲದ ಬಾಬು ಕೆಪಿ ಮೃತಪಟ್ಟ ಕೈದಿ. ಚಿಕ್ಕಮಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಸಜಿ ಬಾಬು ಶಿಕ್ಷೆಗೆ ಗುರಿಯಾಗಿ 2025 ಆಗಸ್ಟ್ 22 ಕ್ಕೆ ಶಿವಮೊಗ್ಗ ಸೆಂಟ್ರಲ್ ಜೈಲಿಗೆ ಶಿಫ್ಟ್ ಆಗಿದ್ದ. ಹೃದಯ ಸಂಬಂಧಿ ಹಾಗೂ ಶುಗರ್ ಸಮಸ್ಯೆಯಿಂದ ಬಳಲುತ್ತಿದ್ದ ಆತ ಚಿಕ್ಕಮಗಳೂರು ಜೈಲಿನಲ್ಲಿದ್ದಾಗ ಆಂಜಿಯೊಪ್ಲಾಸ್ಟ್ ಮಾಡಿಸಿಕೊಂಡಿದ್ದ. ನ. 10 ರಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ
ಮಂಡ್ಯದಲ್ಲಿ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿದ ಸಚಿವ ಸಂತೋಷ್ ಲಾಡ್
ಅಸಂಘಟಿತ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾರ್ಮಿಕರಿಗೆ ಸೌಲಭ್ಯ, ಅನುಕೂಲತೆಗಳನ್ನು ತಿಳಿಸಲು ಪ್ರತಿ ಜಿಲ್ಲೆಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ. ರಾಜ್ಯದಲ್ಲಿನ ಪ್ರತಿಯೊಬ್ಬ ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ
ಅಶಾಂತಿ ಮೂಡಿಸುವ ಶಕ್ತಿಗಳ ದಮನಕ್ಕೆ ಕೇಂದ್ರ ಕ್ರಮ: ಬಸವರಾಜ ಬೊಮ್ಮಾಯಿ
ದೇಶದಲ್ಲಿ ಭಯೋತ್ಪಾದನೆ ಚಟುವಟಿಕೆ ಮಾಡಿ ಅಶಾಂತಿ ಮೂಡಿಸುವ ಈ ಶಕ್ತಿಗಳ ದಮನಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ಏರೋಸ್ಪೇಸ್ ಪಂಡಿತರ ಕರ್ಮಭೂಮಿ ಬೆಂಗಳೂರು : ಡಿಕೆ ಶಿವಕುಮಾರ್
“ಜ್ಞಾನ, ತಂತ್ರಜ್ಞಾನದ ನಗರವಾಗಿ ಬೆಂಗಳೂರು ಗುರುತಿಸಿಕೊಂಡಿದೆ. ಏರೋಸ್ಪೇಸ್ ತಂತ್ರಜ್ಞಾನದ ಹಲವಾರು ಪಂಡಿತರು ಬೆಂಗಳೂರನ್ನು ಕರ್ಮಭೂಮಿಯನ್ನಾಗಿ ಮಾಡಿಕೊಂಡಿದ್ದಾರೆ. ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ದೇವನಹಳ್ಳಿಯ ಕೆಐಎಡಿಬಿ ಏರೋಸ್ಪೇಸ್ ಪಾರ್ಕ್ ನಲ್ಲಿರುವ ಕಾಲಿನ್ಸ್ ಇಂಡಿಯಾ ಆಪರೇಶನ್ ಸೆಂಟರ್ ನ ಉದ್ಘಾಟನಾ ಸಮಾರಂಭದಲ್ಲಿ
ಕೆಪಿಎಸ್ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಣ, ಕೌಶಲ್ಯ ತರಗತಿ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಕೆಪಿಎಸ್ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಮತ್ತು 6ನೇ ತರಗತಿಯಿಂದ ಕೌಶಲ್ಯ ಅಭಿವೃದ್ಧಿ (ಸ್ಕಿಲ್) ತರಗತಿ ಪ್ರಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ದೇಶದ ಪ್ರಥಮ ಶಿಕ್ಷಣ ಸಚಿವರಾದ ಡಾ. ಮೌಲಾನಾ ಅಬುಲ್ ಕಲಾಂ ಆಜಾದ್
ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರು ಮೊಬೈಲ್ ಬಳಸಿದ ಪ್ರಕರಣ ಎನ್ಐಎ ತನಿಖೆಗೆ: ಆರ್.ಅಶೋಕ ಆಗ್ರಹ
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಯೋತ್ಪಾದಕ ಮೊಬೈಲ್ ಬಳಸಿದ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವದೆಹಲಿಯಲ್ಲಿ ನಡೆದ ಘಟನೆ ಭಯೋತ್ಪಾದನಾ ಕೃತ್ಯ ಎಂಬ ಅನುಮಾನವಿದೆ. ಇದೇ ಸಮಯದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆಗೆ ಸಿಎಂ ಚಾಲನೆ
ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ ಆಕರ್ಷಕ ಮತ್ತು ಸುಸಜ್ಜಿತ ಕಲಾಲೋಕ ಮಳಿಗೆಯನ್ನು
ಧರ್ಮ ಒಡೆದು ದುರ್ಬಲಗೊಳಿಸುವ ಪ್ರಯತ್ನ: ಬಸವರಾಜ ಬೊಮ್ಮಾಯಿ
ಹಾವೇರಿ (ರಾಣೆಬೆನ್ನೂರು) ಜಗತ್ತಿನಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರ ಇರುವುದು ಭಾರತದಲ್ಲಿ ಈ ಸಂಸ್ಕಾರ ಮತ್ತು ಸಂಸ್ಕೃತಿಯ ಮೇಲೆ ದಾಳಿ ನಡೆಯುತ್ತಲೇ ಇದೆ. ಇಲ್ಲಿರುವ ಸನಾತನ ಹಿಂದೂ ವಿಚಾರ ಜೀವಂತ ಇದ್ದರೆ ಒಂದಿಲ್ಲೊಂದು ದಿನ ಜಗತ್ತು ಸನಾತನವಾಗುತ್ತದೆ ಎನ್ನುವ ಆತಂಕ ಅವರಿಗೆ ಇದೆ.
ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್ : ಕೇಂದ್ರವೇ ತನಿಖೆ ಮಾಡಲಿ ಎಂದ ಸಿಎಂ
ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್ ಗಳ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ. ನಿನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ
ನಕಲಿ ವೈದ್ಯಕೀಯ ದಾಖಲೆ ಸಲ್ಲಿಸಿ ಸಿಎಂ ಪರಿಹಾರ ನಿಧಿ ಪಡೆಯುತ್ತಿದ್ದ ಆರೋಪಿ ಅರೆಸ್ಟ್
ನಕಲಿ ವೈದ್ಯಕೀಯ ದಾಖಲೆಗಳನ್ನು ಸೃಷ್ಟಿಸಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹಣ ಪಡೆಯುತ್ತಿದ್ದ ಆರೋಪಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲದ ಧನಂಜಯ (59) ಬಂಧಿತ ಆರೋಪಿಯಾಗಿದ್ದು, ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ನೀಡಲಾಗುವ ಆರ್ಥಿಕ ಸಹಾಯ ಪಡೆಯಲು ನಕಲಿ ಆಸ್ಪತ್ರೆ ಬಿಲ್‌ಗಳು ಮತ್ತು




