Monday, September 28, 2026
Menu

ವಿಧಾನ ಪರಿಷತ್​​ ನ ಏಳು ಸ್ಥಾನಗಳಲ್ಲಿ ಐದು ಕಾಂಗ್ರೆಸ್​​ ಪಾಲು

ಭಾರಿ ಕುತೂಹಲ ಮೂಡಿಸಿದ್ದ ವಿಧಾನಸಭೆಯಿಂದ ವಿಧಾನ ಪರಿಷತ್​​ ನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜೆಡಿಎಸ್​​ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಪರಾಭವಗೊಂಡಿದ್ದು, ಬಿಜೆಪಿ ಮತ್ತು ಜೆಡಿಎಸ್​​ನಿಂದ ಅಡ್ಡ ಮತದಾನ( ಕ್ರಾಸ್​​ ವೋಟಿಂಗ್​​) ಆಗಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಕಾಂಗ್ರೆಸ್​ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್​ಗೆ 32 ಮತಗಳು ಬಂದಿದ್ದರೆ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಪರ 14 ಮತಗಳು ಬಿದ್ದಿವೆ.  ಪರಿಷತ್

ಮೇಕೆದಾಟು ದಕ್ಷಿಣ ಭಾರತದ ಹೃದಯ, ತಮಿಳುನಾಡು ಜೊತೆ ಚರ್ಚೆಗೆ ಸಿದ್ಧ: ಸಿಎಂ

“ಮೇಕೆದಾಟು ಯೋಜನೆ ದಕ್ಷಿಣ ಭಾರತದ ಹೃದಯದಂತ ಯೋಜನೆ. ಈ ಯೋಜನೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಹಿತ ಅಡಗಿದೆ” ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ವಿಧಾನ ಪರಿಷತ್ ಚುನಾವಣೆ ಮತದಾನದ ಬಳಿಕ ಶಿವಕುಮಾರ್  ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ತಮಿಳುನಾಡು ಸರ್ಕಾರ

ಪರಿಷತ್‌ ಚುನಾವಣೆ: ಕಾಂಗ್ರೆಸ್‌ಗೆ ಮತ ಚಲಾಯಿಸಿದೆ ಎಂದ ಶಾಸಕ ಎಸ್‌.ಟಿ ಸೋಮಶೇಖರ್‌

ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆಯ ಮತದಾನದಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಮೈತ್ರಿಕೂಟವನ್ನು ಪರಿಗಣಿಸದೆ ಕಾಂಗ್ರೆಸ್ ಪರ ಮತ ಚಲಾಯಿಸಿದ್ದಾರೆ. ಮಾಧ್ಯಮವೊಂದರ ಜೊತೆ ಮಾತನಾಡಿದ ಎಸ್.ಟಿ. ಸೋಮಶೇಖರ್, ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿರುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

ಅರ್ಹತೆಗನುಸಾರ ಕಂದಾಯ ಅಧಿಕಾರಿಗಳಿಗೆ ಬಡ್ತಿ: ಸಚಿವ ಪರಮೇಶ್ವರ

ಗ್ರೇಡ್-2 ತಹಶೀಲ್ದಾರ್‌ ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಬೇಕೆಂಬ ಬಹುಕಾಲದ ಬೇಡಿಕೆ ಕಳೆದ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು. ಸರ್ಕಾರವು ಇದನ್ನು ಆದ್ಯತೆಯ ಮೇರೆಗೆ ಪರಿಗಣಿಸಿ, ಅರ್ಹತೆಗೆ ಅನುಸಾರವಾಗಿ ಬಡ್ತಿ ನೀಡಲಾಗಿದೆ ಎಂದು ಕಂದಾಯ ಸಚಿವ ಜಿ. ಪರಮೇಶ್ವರ್‌ ಪತ್ರಿಕಾ ಹೇಳಿಕೆಯಲ್ಲಿ 

ಯಡಿಯೂರಪ್ಪ, ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಬಿಡದಿ ಯೋಜನೆ ಕೈಬಿಡಲಿಲ್ಲ ಏಕೆ: ಶಾಸಕ ಬಾಲಕೃಷ್ಣ

ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಬಿಡದಿ  ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿತ್ತು. ಆಗಲೂ ಕೆಲವು ರೈತರು ವಿರೋಧ ವ್ಯಕ್ತಪಡಿಸುತ್ತಿದ್ದರು. ಆಗ ಕುಮಾರಸ್ವಾಮಿ, ಆರ್ ಅಶೋಕ್  ಯಾಕೆ ಈ ರೈತರ ಪರ ಹೋರಾಟಕ್ಕೆ ಬರಲಿಲ್ಲ? ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿರುವುದನ್ನು ಸಹಿಸಲಾಗದೇ ಅವರನ್ನು ರಾಜಕೀಯವಾಗಿ

ಅನುಮತಿಯಿಲ್ಲದೆ ಖಾಸಗಿ ವೀಡಿಯೊ-ಪೋಟೊ ಪ್ರಸಾರ ಪ್ರಕರಣ ಮಾರ್ಗಸೂಚಿ

ಅನುಮತಿಯಿಲ್ಲದೆ  ವ್ಯಕ್ತಿಗಳ ಖಾಸಗಿ ವೀಡಿಯೊ ಮತ್ತು ಫೋಟೊ ಪ್ರಕಟ ಅಥವಾ ಪ್ರಸಾರ ಮಾಡುವ ಪ್ರಕರಣಗಳಲ್ಲಿ ಪೊಲೀಸರು ಅನುಸರಿಸಬೇಕಾದ ಕ್ರಮಗಳ ಕುರಿತು ಸ್ಪಷ್ಟ ಮಾರ್ಗಸೂಚಿಗಳನ್ನು ಪಾಲಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಐಜಿಪಿ) ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೂರುಗಳನ್ನು ದಾಖಲಿಸುವಲ್ಲಿ

ರಾಜ್ಯದ 224 ಕ್ಷೇತ್ರ, ಬೆಂಗಳೂರಿನ 369 ವಾರ್ಡ್‌ಗಳಲ್ಲಿ ಕೆಂಪೇಗೌಡ ಜಯಂತಿ ಆಚರಣೆಗೆ ತಲಾ ಒಂದು ಲಕ್ಷ ರೂ.

224 ಕ್ಷೇತ್ರಗಳಲ್ಲಿ ಜಯಂತಿ ಆಚರಣೆಗೆ ತಲಾ ಒಂದು ಲಕ್ಷ ರೂ., ಬೆಂಗಳೂರಿನ 369 ವಾರ್ಡ್‌ಗಳಲ್ಲಿ ಕಾರ್ಯಕ್ರಮ ನಡೆಸಲು ತಲಾ ಒಂದು ಲಕ್ಷ ರೂ. ಅನುದಾನ ನೀಡಲಾಗುವುದು. ಬೆಂಗಳೂರು ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ ಆಚರಿಸಲಾಗುವುದು, ಬಿಡಿಎ ವತಿಯಿಂದ 15

ಬಿಡದಿ ಟೌನ್‌ಶಿಪ್‌ ಕೂಸು ಹುಟ್ಟಿದ್ದು ಕುಮಾರಸ್ವಾಮಿ ಅವಧಿಯಲ್ಲಿ, ಬೆಳೆದಿದ್ದು ಬಿಜೆಪಿ ಆಡಳಿತದಲ್ಲಿ: ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್

ಬಿಡದಿ ಟೌನ್‌ಶಿಪ್‌ ಯೋಜನೆ ಕೂಸು ಹುಟ್ಟಿದ್ದು  ಕುಮಾರ ಸ್ವಾಮಿ ಆಡಳಿತದ ಅವಧಿಯಲ್ಲಿ,  ಬೆಳೆದಿದ್ದು ಬಿಜೆಪಿ ಆಡಳಿತದಲ್ಲಿ.  ಈ ಅವಧಿಯಲ್ಲಿ ಬೆಂಗಳೂರು ಹಾಗೂ ಟೌನ್ ಶಿಪ್ ಯೋಜನೆಗೆ ಉಸ್ತುವಾರಿ ಸಚಿವರಾಗಿದ್ದವರು ಆರ್‌ ಅಶೋಕ, 2006ರಿಂದ ಅವರು ಇದರ ಜವಾಬ್ದಾರಿಯ ಭಾಗವಾಗಿದ್ದರು, ಕಂದಾಯ ಸಚಿವರೂ

ವೈದ್ಯರು ಜನರ ನಂಬಿಕೆ ಉಳಿಸಿಕೊಳ್ಳಿ: ಸಿಎಂ ಡಿಕೆ ಶಿವಕುಮಾರ್

ವೈದ್ಯರು ಕಣ್ಣಿಗೆ ಕಾಣುವ ದೇವರು. ಜನ ಎಷ್ಟೇ ಕಷ್ಟ ಇದ್ದರೂ ಬಹಳ ನಂಬಿಕೆ ಹಾಗೂ ವಿಶ್ವಾಸದಿಂದ ವೈದ್ಯರ ಬಳಿ ಹೋಗುತ್ತಾರೆ. ನೀವು ಅವರ ನಂಬಿಕೆ ಉಳಿಸಿಕೊಂಡು ಸೇವೆ ಮಾಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್  ವೈದ್ಯ ಪದವೀಧರರಿಗೆ ಕಿವಿಮಾತು ಹೇಳಿದರು. ಬೆಂಗಳೂರಿನ

ಬರಗಾಲ ಎದುರಿಸೋಕೆ, ರೈತರ ಕಷ್ಟ ಕೇಳೋಕೆ ರಾಜ್ಯದಲ್ಲಿ ಕೃಷಿ ಸಚಿವರೇ ಇಲ್ಲ: ಆರ್‌ ಅಶೋಕ

ಕಮಿಷನ್ ಮಾಸ್ಟರ್ (CM) @DKShivakumar ಅವರೇ, “ರಾಜ್ಯದಲ್ಲಿ ಬರಗಾಲ ಎದುರಿಸಲು ಸಜ್ಜಾಗಿ” ಎಂದು ಮಾಧ್ಯಮಗಳಿಗೆ ಪೋಸ್ ಕೊಟ್ಟರೆ ಏನೂ ಪ್ರಯೋಜನವಿಲ್ಲ. ಬರಗಾಲ ಎದುರಿಸೋಕೆ, ರೈತರ ಕಷ್ಟ ಕೇಳೋಕೆ ರಾಜ್ಯದಲ್ಲಿ ಕೃಷಿ ಸಚಿವರು ಎಲ್ಲಿದ್ದಾರೆ ಸ್ವಾಮಿ?, ನೀವೇ ಒಪ್ಪಿಕೊಂಡಿರುವಂತೆ ರಾಜ್ಯದಲ್ಲಿ ಇನ್ನು ಶೇ. 30