ರಾಜ್ಯ
ರಾಜ್ಯದ ಹಲವೆಡೆ ಅಧಿಕಾರಿಗಳ ನಿವಾಸ, ಕಚೇರಿಗಳಿಗೆ ಲೋಕಾಯುಕ್ತ ದಾಳಿ
ರಾಜ್ಯದ ಕಲಬುರಗಿ, ಚಿಕ್ಕಮಗಳೂರು, ಬೀದರ್ ಮತ್ತು ದಾವಣಗೆರೆ ಸೇರಿದಂತೆ ಹಲವೆಡೆ ಭ್ರಷ್ಟಾಚಾರ ಆರೋಪ ಹೊಂದಿರುವ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕಲಬುರಗಿಯಲ್ಲಿ ಪಂಚಾಯತ್ರಾಜ್ ನಿವೃತ್ತ ಸೂಪರಿಡೆಂಟ್ ಎಂಜಿನಿಯರ್ ಎಸ್.ಇ.ಮಾಣಿಕ್ ಕನಕಟ್ಟಿ ನಿವಾಸದ ಮೇಲೆ ದಾಳಿಯಾಗಿದೆ, ಗೋದುತಾಯಿ ನಗರದ ಮನೆ ಸೇರಿ ಐದು ಕಡೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಬೀದರ್ ಜಿಲ್ಲೆಯ ಹಳ್ಳಿಖೇಡ ಗ್ರಾಮದ ನಿವಾಸ, ತೋಟದ ಮನೆ, ಹುಮ್ನಾಬಾದ್ನ ಎರಡು ಕಾಂಪ್ಲೆಕ್ಸ್ ಮೇಲೆ
ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆ ಖಾತರಿಗೆ ಸಿಎಂ ಸೂಚನೆ
ಬರ ಪರಿಸ್ಥಿತಿ ಎದುರಿಸಲು ತುರ್ತು ಕ್ರಮಗಳ ಪೂರ್ವಸಿದ್ಧತೆ , ರೈತರಿಗೆ ಅಗತ್ಯ ಮಾಹಿತಿ ಪೂರೈಕೆ, ಅತಿವೃಷ್ಟಿ, ಅನಾವೃಷ್ಟಿ ಎದುರಿಸಲು ಸರ್ವ ಸಿದ್ಧತೆ ಸೇರಿದಂತೆ ಎಲ್ಲ ಅಗತ್ಯ ನೆರವು ಒದಗಿಸಿ, ಕೃಷಿಗೆ ಅನುಕೂಲ ಕಲ್ಪಿಸುವಂತೆ ಸಿಎಂ ಡಿಕೆ ಶಿವಕುಮಾರ್ ಅಧಿಖಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
ತ್ಯಾಗ, ಪ್ರಾಮಾಣಿಕತೆ, ಕರ್ತವ್ಯ ಪ್ರಜ್ಞೆಯೊಂದಿಗೆ ಪಕ್ಷದ ಕೆಲಸ ಮಾಡಿದ ಸೂರಜ್ ಹೆಗ್ಡೆ: ಸಿಎಂ ಡಿಕೆ ಶಿವಕುಮಾರ್ ಸ್ಮರಣೆ
ಪಕ್ಷ ನಿಷ್ಠೆ ಹಾಗೂ ತ್ಯಾಗ ಸೂರಜ್ ಅವರ ಸಾಧನೆ. ತಮ್ಮ ಸ್ನೇಹದ ಮೂಲಕ ಅವರು ನಮ್ಮೆಲ್ಲರ ಹೃದಯ ಗೆದ್ದವರು ಎಂದು ಸಿಎಂ ಡಿಕೆ ಶಿವಕುಮಾರ್ ಅವರು ದಿವಂಗತ ಸೂರಜ್ ಹೆಗ್ಡೆ ಅವರನ್ನು ಕೊಂಡಾಡಿದರು. ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ
ಬಿಡದಿ ಯೋಜನೆ ಅಧಿಸೂಚನೆ ಹೊರಡಿಸಿದ್ದು ಕುಮಾರಸ್ವಾಮಿ, ಬಿಜೆಪಿ ಸರ್ಕಾರವಿದ್ದಾಗ ಸಾವಿರ ಎಕರೆ ಸ್ವಾಧೀನ
“ನಾನು ಯಾರ್ಯಾರೋ ಮಾತಿಗೆ ಉತ್ತರ ನೀಡಲು ಆಗುವುದಿಲ್ಲ. ಮಹಾರಾಷ್ಟ್ರದಲ್ಲಿ 90 ಸಾವಿರ ಎಕರೆ, ತೆಲಂಗಾಣದಲ್ಲಿ 40 ಸಾವಿರ ಎಕರೆಯಲ್ಲಿ ಟೌನ್ ಶಿಪ್ ಮಾಡುತ್ತಿದ್ದಾರೆ. ಬಿಡದಿಯದು ನನ್ನ ಯೋಜನೆಯಲ್ಲ. ಕುಮಾರಸ್ವಾಮಿ ಅವರು ಈ ಯೋಜನೆಗೆ ಅಧಿಸೂಚನೆ ಹೊರಡಿಸಿದ್ದರು. ಹಿಂದಿನ ಬಿಜೆಪಿ ಸರ್ಕಾರ ಈ
ಗ್ಯಾರಂಟಿ ಯೋಜನೆಗಳು ನಿರಂತರ, ಲೋಪಗಳನ್ನು ಸರಿಪಡಿಸಲಾಗುತ್ತಿದೆ: ಮಾಜಿ ಸಿಎಂ ಸಿದ್ದರಾಮಯ್ಯ
ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ, ಮುಂದಿನ ಎರಡು ವರ್ಷಗಳ ಕಾಲ ಮಾತ್ರವಲ್ಲ, ಮುಂದಿನ ಚುನಾವಣೆಯಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರಲಿದ್ದೇವೆ, ಅದರ ನಂತರವೂ ಅದು ಮುಂದುವರಿಯಲಿದೆ. ಯೋಜನೆಗಳ ಅನುಷ್ಠಾನದಲ್ಲಿ ಕಂಡು ಬರುವ ದೋಷಗಳನ್ನು ಸರಿಪಡಿಸುವ ಕೆಲಸ ಪ್ರಾರಂಭದಿಂದಲೇ ನಡೆಯುತ್ತಾ
ಪ್ರತಿಪಕ್ಷಗಳ ವದಂತಿಗಳಿಗೆ ಕಿವಿಗೊಡಬೇಡಿ, ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ
ಕಾಂಗ್ರೆಸ್ ಸರಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ “ಗೃಹಲಕ್ಷ್ಮಿ” ಮತ್ತು “ಗೃಹಜ್ಯೋತಿ” ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲವರು ಸತ್ತವರ
ರೈತರ ಆಕ್ರೋಶಕ್ಕೆ ಕಾಂಗ್ರೆಸ್ ಸರ್ಕಾರ ಭಸ್ಮವಾಗಲಿದೆ: ಆರ್ ಅಶೋಕ
ರೈತರ ಜಮೀನಿನ ಮೇಲೆ ಬುಲ್ಡೋಜರ್ ಓಡಿಸಿ, ರಿಯಲ್ ಎಸ್ಟೇಟ್ ಸಾಮ್ರಾಜ್ಯ ಕಟ್ಟಲು ಹೊರಟಿರುವ Commission Minister @DKShivakumar ಅವರೇ, ಅನ್ನದಾತರ ಆಕ್ರೋಶದ ಜ್ವಾಲೆಯಲ್ಲಿ ಕಾಂಗ್ರೆಸ್ ಸರ್ಕಾರ ಭಸ್ಮವಾಗಬೇಕಾಗುತ್ತದೆ, ಎಚ್ಚರಿಕೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಜಮೀನಿನ
ನಿಪಾ ವೈರಸ್: ಕೇರಳ, ತಮಿಳುನಾಡು, ಕರ್ನಾಟಕ ಗಡಿಗಳಲ್ಲಿ ಅಲರ್ಟ್
ಕೇರಳದ ಕೋಝಿಕ್ಕೋಡ್‌ನಲ್ಲಿ ವ್ಯಕ್ತಿಗೆ ನಿಪಾ ವೈರಸ್ ತಗುಲಿರುವುದು ದೃಢಪಟ್ಟ ಬಳಿಕ ಕೇರಳ- ತಮಿಳುನಾಡು ಗಡಿಯಲ್ಲಿ ಆರೋಗ್ಯಾಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದು, ಕರ್ನಾಟಕದ ಗಡಿಯಲ್ಲೂ ಹೆಚ್ಚಿನ ಅಲರ್ಟ್ ಕೈಗೊಳ್ಳಲಾಗಿದೆ. ಕೇರಳದಿಂದ ಬರುವ ಜನರಿಗೆ ಪರೀಕ್ಷೆ ನಡೆಸಿದ ನಂತರವೇ ತಮಿಳುನಾಡಿಗೆ ಪ್ರವೇಶಿಸಲು ಅವಕಾಶ ನೀಡಲಾಗುತ್ತಿದೆ. ಕೇರಳದೊಂದಿಗೆ
ಉನ್ನತಾಧಿಕಾರಿಗಳಾದ ಸಿಂಧೂರಿ-ರೂಪಾ ಸಮರ: ಸಂಧಾನಕಾರರಾಗಿ ಜಸ್ಟಿಸ್ ಕುರಿಯನ್ ಜೋಸೆಫ್ ನೇಮಕ
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ನಡುವಿನ ಕಾನೂನು ಸಮರಕ್ಕೆ ಸಂಧಾನದ ಮೂಲಕ ಅಂತ್ಯ ಹಾಡಲು ಸುಪ್ರೀಂ ಕೋರ್ಟ್ ಸಲಹೆ ನೀಡಿದೆ. ಇಬ್ಬರೂ ಉನ್ನತ ಹುದ್ದೆಯಲ್ಲಿದ್ದು, ಸಾರ್ವಜನಿಕವಾಗಿ ಜಗಳ ಸರಿಯಲ್ಲ, ಮಾನನಷ್ಟ ಮೊಕದ್ದಮೆಯನ್ನು ಸಂಧಾನದ
ರಾಜ್ಯದ ಭದ್ರತಾ ಮೂಲಸೌಕರ್ಯ, ಪೊಲೀಸ್ ಸಾಮರ್ಥ್ಯ ಸುಧಾರಣೆ ನೆರವಿಗೆ ಸಿಎಂ ಮನವಿ
ರಾಜ್ಯಕ್ಕೆ ಎರಡು ಹೆಚ್ಚುವರಿ ಇಂಡಿಯಾ ರಿಸರ್ವ್ ಬೆಟಾಲಿಯನ್ಸ್ (IRBs) ಸೃಷ್ಟಿ, ಪೊಲೀಸ್ ಇಲಾಖೆ ಚಟುವಟಿಕೆಗಳಿಗೆ ಸಿಎಸ್ಆರ್ ನಿಧಿ ಬಳಕೆ, ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯ ಮೇಲ್ದರ್ಜೀಕರಣ, ಕಾರಾಗೃಹಗಳ (ಜೈಲುಗಳ) ಆಧುನೀಕರಣ ಸೇರಿದಂತೆ ಕರ್ನಾಟಕ ರಾಜ್ಯದ ಭದ್ರತಾ ಮೂಲಸೌಕರ್ಯ ಮತ್ತು ಪೊಲೀಸ್ ಸಾಮರ್ಥ್ಯ ಸುಧಾರಣೆಗೆ




