Menu

ಕುತೂಹಲಕ್ಕಾಗಿ ಚಿರತೆ ಬೋನಿನೊಳಗೆ ಹೋಗಿದ್ದ ರೈತ ಮೂರು ಗಂಟೆ ಲಾಕ್‌

ಚಾಮರಾಜನಗರ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ರೈತರೊಬ್ಬರು ಕುತೂಹಲದಿಂದ ಚಿರತೆ ಸೆರೆಗೆ ಇಟ್ಟಿದ್ದ ಬೋನಿನೊಳಗೆ ಹೋಗಿದ್ದು, ಮೂರು ಗಂಟೆ ಅದರೊಳಗೆ ಲಾಕ್‌ ಆಗಿದ್ದಾರೆ. ಗ್ರಾಮದ ಕಿಟ್ಟಿ ಎಂಬವರು ಯಾರೂ ಇಲ್ಲದ ವೇಳೆ ಕುತೂಹಲದಿಂದ ಬೋನಿನೊಳಗೆ ಹೋಗಿ ಸಿಕ್ಕಿಹಾಕಿಕೊಂಡು ಮೂರು ಗಂಟೆ ಅದರೊಳಗೆ ಪರದಾಡಿದ್ದಾರೆ. ಬಾಗಿಲು ತೆರೆಯಲು ಯತ್ನಿಸಿದರೂ ಸಾಧ್ಯವಾಗದೆ ಕಾಪಾಡಿ ಕಾಪಾಡಿ ಎಂದು ಕೂಗಿಕೊಂಡಿದ್ದು, ಕೂಗಾಟ ಕೇಳಿ ಸ್ಥಳಕ್ಕೆ ಬಂದ ರೈತರು ಬೋನಿನೊಳಗಿಂದ ಬಿಡಿಸಿದ್ದಾರೆ. ಗ್ರಾಮದಲ್ಲಿ ಮೂರು ಹಸುಗಳನ್ನು ಚಿರತೆ ಕೊಂದು

ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ಗೆ ಜೀವ ರಕ್ಷಕ ಪ್ರಶಸ್ತಿ

ಸಮಾಜದಲ್ಲಿ ಬದಲಾವಣೆ ಬೇಕಾದರೆ ಮೊದಲು ಸರಿಯಾದ ಜನಪ್ರತಿನಧಿಯನ್ನು ಆಯ್ಕೆ ಮಾಡಬೇಕು. ಈ ಆಯ್ಕೆ ಮಾಡುವುದು ಸವಾಲಿನ ಕೆಲಸ. ಇದು ಜವಾಬ್ದಾರಿಯುತವಾದ ಕೆಲಸ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಹೇಳಿದರು. ಚಿತ್ರದುರ್ಗದ ವಾಲ್ಮೀಕಿ ಭವನದಲ್ಲಿ

ಮಾರ್ಚ್‌ಗೆ ಕೋರಮಂಗಲ- ಸರ್ಜಾಪುರ ಬಫರ್ ರಸ್ತೆ ಕಾಮಗಾರಿ ಪೂರ್ಣ: ಡಿಸಿಎಂ

“ಮುಂದಿನ ವರ್ಷ ಮಾರ್ಚ್ ತಿಂಗಳ ವೇಳೆಗೆ ಕೋರಮಂಗಲದಿಂದ ಸರ್ಜಾಪುರವರೆಗಿನ 5.50 ಕಿ.ಮೀ ಉದ್ದದ ಬಫರ್ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ರಾಜಕಾಲುವೆ ಪಕ್ಕದಲ್ಲಿ ಸಂಚಾರಿಯುಕ್ತ ಬಫರ್ ರಸ್ತೆ ನಿರ್ಮಾಣ ಕಾಮಗಾರಿಗಳನ್ನು

ಬಾಡಿಗೆ ತಾಯ್ತನಕ್ಕೆ ವೃದ್ಧ ದಂಪತಿ ಕೋರಿಕೆ: ಸ್ಪಂದಿಸಲು ರಾಜ್ಯ, ಕೇಂದ್ರಕ್ಕೆ ಹೈಕೋರ್ಟ್‌ ನೋಟಿಸ್‌

ಇದ್ದ ಒಬ್ಬನೇ ಮಗನ ಕಳೆದುಕೊಂಡಿರುವ ವೃದ್ಧ ದಂಪತಿ ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯಲು ಕಾನೂನು ಅಡ್ಡಿಯಾಗುತ್ತಿರುವುದನ್ನು ಗಮನಿಸಿರುವ ಹೈಕೋರ್ಟ್,ಪ್ರಕರಣವನ್ನು ಕಾನೂನು ಅಡಿ ಅಲ್ಲ, ಮಾನವೀಯತೆಯಿಂದ ನೋಡಬೇಕಿದೆ, ಅರ್ಜಿದಾರರ ಮನವಿಗೆ ಸ್ಪಂದಿಸಲು ಸೂಚಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ.

ದ್ವೇಷ ಭಾಷಣ ತಡೆ ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯ, ಬಿಜೆಪಿಯವರಿಂದ ಏಕೆ ವಿರೋಧ?

ದ್ವೇಷ ಭಾಷಣ ತಡೆ ಮಸೂದೆಯನ್ನು ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಈ  ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯವಾಗುತ್ತದೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ . ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ

ಒಂದೇ ಕಡೆ 5 ಹುಲಿಗಳು ಪತ್ತೆ ಬೆನ್ನಲ್ಲೇ ಕಾರ್ಯಾಚರಣೆಗೆ ಬಂದ ಆನೆಗಳಿಗೆ ಗ್ರಾಮಸ್ಥರಿಂದ ಭರ್ಜರಿ ಸ್ವಾಗತ!

ಚಾಮರಾಜನಗರ ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳು ಒಂದೇ ಕಡೆ ಇರುವುದು ಪತ್ತೆಯಾಗಿ ಆತಂಕ ಮೂಡಿಸಿದ ಬೆನ್ನಲ್ಲೇ ಹುಲಿಗಳ ಸೆರೆಗೆ ಬಂದ ಎರಡು ಆನೆಗಳಿಗೆ ಗ್ರಾಮಸ್ಥರು ಭರ್ಜರಿ ಸ್ವಾಗತ ಕೋರಿದ್ದಾರೆ. ಹುಲಿಗಳ ಸೆರೆಗೆ ಕಾರ್ಯಾಚರಣೆ ನಡೆಸಲು ಆಗಮಿಸಿದ ಈಶ್ವರ

ಬಿಜೆಪಿ ಶಾಸಕ ಬೈರತಿ ಬಸವರಾಜು ವಿರುದ್ಧ ಲುಕೌಟ್ ನೋಟಿಸ್ ಜಾರಿ

ಬೆಂಗಳೂರು: ರೌಡ ಬಿಕ್ಕು ಶಿವು ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಶಾಸಕ ಬೈರತಿ ಬಸವರಾಜು ಪತ್ತೆಗಾಗಿ ಸಿಐಡಿ ಪೊಲೀಸರು ಲುಕ್‌ಔಟ್ ನೋಟಿಸ್ ಹೊರಡಿಸಲು ಮುಂದಾಗಿದ್ದಾರೆ. ಬೆಳಗಾವಿ ಅಧಿವೇಶನಕ್ಕೆ ಹೋಗಿದ್ದ ಶಾಸಕ ಬೈರತಿ ಬಸವರಾಜು ಅವರು ಅಲ್ಲಿಂದಲೇ ಮಹಾರಾಷ್ಟ್ರ ಅಥವಾ ಗೋವಾಕ್ಕೆ

ಖಜಾನೆ ತುಂಬಿಸಲು ಸರ್ಕಾರದಿಂದ 569 ಮದ್ಯ ಲೈಸೆನ್ಸ್‌ ಇ- ಹರಾಜು

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಹಿಳಾ ಆಯೋಗ ಇತ್ತೀಚೆಗೆ ಮನವಿ ಮಾಡಿದೆ, ಇದೀಗ ಸರ್ಕಾರ ರಾಜ್ಯದ 569 ವೈನ್‌ ಸ್ಟೋರ್‌ ಹಾಗೂ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳ ಲೈಸೆನ್ಸ್‌ ಇ-ಹರಾಜಿಗೆ ಮುಂದಾಗಿದೆ. ಮದ್ಯ ಮಾರಾಟ ಇಳಿಕೆಯಾಗಿದ್ದು, ಸಂಪನ್ಮೂಲ ಕ್ರೋಢೀಕರಣಕ್ಕೆ

25ರಂದು ಡಾ.ಗೋವಿಂದ ರಂಗರಾಜನ್, ಡಾ.ಚಂದ್ರಶೇಖರ ಶೆಟ್ಟಿ, ನಾಗರಾಜ್ ರಿಗೆ ಅಟಲ್ ಪುರಸ್ಕಾರ: ಡಾ.ಸಿ.ಎನ್. ಅಶ್ವತ್ಥನಾರಾಯಣ್

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನವು ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನವನ್ನು ಇದೇ 25ರಂದು ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಸಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಮಡಾ.ಸಿ.ಎನ್. ಅಶ್ವತ್ಥನಾರಾಯಣ್ ತಿಳಿಸಿದರು. ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯÀಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಅಟಲ್

ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಈ ಬಾರಿ ಫೆ. 24ರಿಂದ ಮಾ. 4ರವರೆಗೆ

ದಕ್ಷಿಣ ಭಾರತದ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಈ ಬಾರಿ ಫೆ. 24ರಿಂದ ಮಾ. 4ರವರೆಗೆ ಒಂಬತ್ತು ದಿನ ನಡೆಯಲಿದೆ. ಫೆ.24 ರಂದು ದೇವಿಯ ರಥದ ಕಲಶ ಪ್ರತಿಷ್ಠೆ ಮತ್ತು ಜಾತ್ರಾ ಕಲ್ಯಾಣ ಪ್ರತಿಷ್ಠೆ, ಫೆ.25 ರಂದು ಬೆಳಗ್ಗೆ 7.27ಕ್ಕೆ