Menu

ಬೀದರ್‌ ವಿವಿಯಲ್ಲಿ ಅವ್ಯವಹಾರ: 67 ಕಡೆ ಲೋಕಾಯುಕ್ತ ದಾಳಿ

ಬೀದರ್‌ನ ಪಶು ಮತ್ತು ಮೀನುಗಾರಿಕಾ ವಿಶ್ವ ವಿದ್ಯಾಲಯದಲ್ಲಿ 2017-19ರವರೆಗೆ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ನಡೆಸಿದೆ. ಪಶು ಮತ್ತು ಮೀನುಗಾರಿಕಾ ವಿಶ್ವವಿದ್ಯಾಲಯದ ಸಿಬ್ಬಂದಿ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ ಮಾಡಿ ಪರಿಶೀಲನೆ ನಡೆಸಿದೆ ಎನ್ನಲಾಗಿದೆ. ಬೀದರ್‌ನಲ್ಲಿ ಒಟ್ಟು 25 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪ್ರೊಫೆಸರ್, ಇಂಜಿನಿಯರ್ಸ್ ಸೇರಿ ಸಿಬ್ಬಂದಿ ಮನೆ ಮೇಲೆ

ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಕರೆ ತರಲು ರಾಜ್ಯ ಸರ್ಕಾರ ಕ್ರಮ

ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ಅಲ್ಲಿ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ

ಮದ್ದೂರು ಗಲಭೆ: ಜಾತಿಧರ್ಮ ಪರಿಗಣಿಸದೆ ತಪ್ಪೆಸಗಿದವರ ವಿರುದ್ಧ ಕ್ರಮವೆಂದ ಸಿಎಂ

ಮದ್ದೂರಿನ ಗಲಭೆ  ಪ್ರಕರಣಕ್ಕೆ ಸಂಬಂಧಿಸಿದಂತೆ  21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೆ ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಮದ್ದೂರು ಗಲಭೆ ಗೆ ಸಂಬಂಧಪಟ್ಟಂತೆ

ಮುಜರಾಯಿ ಇಲಾಖೆಗೆ 27.70 ಕೋಟಿ ರೂ. ವೆಚ್ಚದಲ್ಲಿ ಐದು ಅಂತಸ್ತಿನ ಸ್ವಂತ ಕಟ್ಟಡ

ರಾಜ್ಯದ ದೇವಸ್ಥಾನಗಳಿಗೆ ಸೂರು ಕಲ್ಪಿಸುವ ಹಾಗೂ ದೇಗುಲಗಳ ನಿರ್ವಹಣೆ ಮಾಡುವ ಧಾರ್ಮಿಕ ದತ್ತಿ ಇಲಾಖೆಗೆ ಸ್ವಂತ ಸೂರಿಲ್ಲದ ಕಾರಣ 5 ಮಹಡಿಯ ಧಾರ್ಮಿಕ ಸೌಧ ನಿರ್ಮಾಣಕ್ಕೆ ರಾಮಲಿಂಗ ರೆಡ್ಡಿ ಪ್ಲ್ಯಾನ್ ಮಾಡಿದ್ದಾರೆ. ರಾಜ್ಯದಲ್ಲಿನ ಸಾವಿರಾರು ದೇವಸ್ಥಾನಗಳ ಸುಪರ್ದಿ, ಅವುಗಳ ನಿರ್ವಹಣೆಗೆ ಅನುದಾನ

ಪಂಚ ಗ್ಯಾರಂಟಿ ಯೋಜನೆಯಡಿ ರೂ. 97,813 ಕೋಟಿ ಅನುದಾನ ವೆಚ್ಚ

ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಕೃಷ್ಣಾದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ.  ಮುಖ್ಯಾಂಶಗಳು ಗೃಹಲಕ್ಷ್ಮಿ ಯೋಜನೆಯಡಿ 1.24ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005

ಬಹುತ್ವ ಸಂಸ್ಕೃತಿಯಲ್ಲಿ ಸರ್ಕಾರಕ್ಕೆ ಸ್ಪಷ್ಟ ಬದ್ಧತೆ ಇದೆ: ಸಿಎಂ ಸಿದ್ದರಾಮಯ್ಯ

ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಲು ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ

ಪತ್ರಕರ್ತರ ತರಬೇತಿಗಾಗಿ ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌ – ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ  ಸಮ್ಮುಖ  ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‌ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್‌ ಸಿಎಸ್‌ಆರ್‌ ಕಾರ್ಯಕ್ರಮದಡಿ ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರ ತರಬೇತಿಗಾಗಿ ಒಡಂಬಡಿಕೆ ಮಾಡಿಕೊಂಡಿದೆ. ಪತ್ರಕರ್ತರ ಸಾಫ್ಟ್‌ಸ್ಕಿಲ್‌ ತರಬೇತಿಯ ಉದ್ದೇಶಕ್ಕಾಗಿ ಮಾಡಿಕೊಳ್ಳುತ್ತಿರುವ ಈ

ತುಂಗಾಭದ್ರಾ ಡ್ಯಾಂನ  32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್, ಎಂಟು ಅಳವಡಿಕೆಗೆ ಸಿದ್ಧ

ಕ್ರೆಸ್ಟ್ ಗೇಟ್ ಗಳ ಬದಲಾವಣೆ, ನಿರ್ವಹಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ಕೇಂದ್ರ ಸರ್ಕಾರದ ಅಧೀನದ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಮಂಡಳಿಯ ಜವಾಬ್ದಾರಿ ಹೆಚ್ಚು. ಮೊದಲ ಬೆಳೆಗೆ ನೀರು ಹರಿಸುವ ಮುನ್ನ ಅಗತ್ಯ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ

ಹೆಸರಘಟ್ಟದಲ್ಲಿ ಕ್ಯೂ-ಸಿಟಿಗೆ 6.17 ಎಕರೆ ಜಾಗ ಮಂಜೂರು

ಅತ್ಯಾಧುನಿಕ ಪ್ರಯೋಗಾಲಯಗಳು, ಸ್ಟಾರ್ಟ್‌ಅಪ್‌ಗಳಿಗೆ ಇನ್ಕ್ಯೂಬೇಷನ್‌ ಸೌಲಭ್ಯಗಳು ಹಾಗೂ ಕೈಗಾರಿಕಾ-ಶೈಕ್ಷಣಿಕ ಸಹಭಾಗಿತ್ವಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಹೊಂದಿರುವ ಕ್ಯೂ-ಸಿಟಿ (ಕ್ವಾಂಟಮ್‌ ಸಿಟಿ) ಸ್ಥಾಪನೆಗೆ ರಾಜ್ಯ ಸರ್ಕಾರ ಹೆಸರುಘಟ್ಟದಲ್ಲಿ 6.17 ಎಕರೆ ಜಾಗವನ್ನು ಮಂಜೂರು ಮಾಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ

ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ: ಸಂಪುಟದಲ್ಲಿ ಚರ್ಚೆಯ ಭರವಸೆಯಿತ್ತ ಡಿಸಿಎಂ 

ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ ಎಂದು ಘೋಷಿಸಬೇಕು ಎಂಬ ನಿಮ್ಮ ಬೇಡಿಕೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್  ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ  ಏರ್ಪಡಿಸಿದ್ದ “ಅಷ್ಟೆಮಿದ ಐಸಿರಿ ತುಳುವ ತರ್ಲ್ ಸಾಸಿರಿ” ಕಾರ್ಯಕ್ರಮದಲ್ಲಿ ಶಿವಕುಮಾರ್‌