ರಾಜ್ಯ
ಆಲಮಟ್ಟಿ ಅಣೆಕಟ್ಟು ಎತ್ತರಿಸುವ ಬದ್ಧತೆ ನಮ್ಮ ಸರ್ಕಾರಕ್ಕೆ ಇದೆ: ಡಿಕೆ ಶಿವಕುಮಾರ್
ಆಲಮಟ್ಟಿ ಅಣೆಕಟ್ಟು ಎತ್ತರವನ್ನು 518 ಮೀ. ನಿಂದ 524 ಮೀ. ಎತ್ತರಿಸುವ ಬಗ್ಗೆ ಆದ್ಯತೆ ಮತ್ತು ಬದ್ಧತೆ ನಮ್ಮ ಸರ್ಕಾರಕ್ಕಿದೆ. ಮುಂದಿನ ಒಂದು ವಾರದೊಳಗೆ ಭೂಸ್ವಾಧೀನಕ್ಕೆ ನಿಗದಿ ಮಾಡಿರುವ ಬೆಲೆ ಘೋಷಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಆಲಮಟ್ಟಿ ಅಣೆಕಟ್ಟಿನಲ್ಲಿ ಕೃಷ್ಣಾ ನದಿಗೆ ಶನಿವಾರ ಬಾಗಿನ ಅರ್ಪಣೆ ನಂತರ ನಡೆದ ಮಾಧ್ಯಮಗೋಷ್ಟಿಯಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. “ಮುಖ್ಯಮಂತ್ರಿಯವರು ಹಾಗೂ ಯೋಜನೆ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆ
ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ: ಸಿಎಂ
ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.
ಕಾವೇರಿ ಪಾಲಾದ ಬೆಂಗಳೂರಿನ ಇಬ್ಬರು ಬಿಬಿಎಂ ವಿದ್ಯಾರ್ಥಿಗಳು!
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋದ ಇಬ್ಬರು ಬಿಬಿಎಂ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣದ ಬಲಮುರಿಯಲ್ಲಿ ಸಂಭವಿಸಿದೆ. ಬೆಂಗಳೂರಿನ ಕೆ.ಆರ್.ಪುರಂ ನಿವಾಸಿಗಳಾದ ವಿಲಿಯಂ ಸ್ಯಾಮ್ (21), ವೆಂಕಟೇಶ್ (21) ಮೃತ ದುರ್ದೈವಿಗಳು. ಇಬ್ಬರು ಅಂತಿಮ ವರ್ಷದ ಬಿಬಿಎಂ ವ್ಯಾಸಂಗ
ಪಂಚಾಯಿತಿ ಅಧ್ಯಕ್ಷನ ಹತ್ಯೆ: ಚಡಚಣ ಪಿಎಸ್ ಐ ಅಮಾನತು
ವಿಜಯಪುರ ಜಿಲ್ಲೆಯ ಭೀಮಾತೀರದ ಗ್ರಾಮ ಪಂಚಾಯಿತಿ ಅಧ್ಯಕ್ಷನ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಚಡಚಣ ಪಿಎಸ್‌ಐ ಪ್ರವೀಣ್ ಅವರನ್ನು ಅಮಾನತು ಮಾಡಲಾಗಿದೆ. ಗ್ರಾಪಂ ಅಧ್ಯಕ್ಷ ಭೀಮನಗೌಡ ಬಿರಾದಾರ್‌ನ ಬರ್ಬರವಾಗಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪದ
ನಮ್ಮ ಸರ್ಕಾರ 65 ಸಾವಿರ ಕೋಟಿ ರೂಪಾಯಿ ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ
ಶಿಕ್ಷಣ ನಮ್ಮ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಿದರೆ ಬಿಜೆಪಿಗೇಕೆ ಗಾಬರಿ: ಡಿಕೆ ಶಿವಕುಮಾರ್
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದರೆ, ಬಿಜೆಪಿ ಏಕೆ ಗಾಬರಿಯಾಗಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಮಾಡುವ ಸರ್ಕಾರದ
ರಾಜ್ಯದ ಶಾಲೆಗಳಲ್ಲೂ ‘ವಾಟರ್ ಬೆಲ್’ ?
ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯುವುದನ್ನು ಉತ್ತೇಜಿಸಲು ಕೇರಳ ರಾಜ್ಯದ ಶಾಲೆಗಳಲ್ಲಿ ದಿನಕ್ಕೆ ಎರಡು ಬಾರಿ ‘ವಾಟರ್ ಬೆಲ್’ ಜಾರಿಯಲ್ಲಿದೆ. ಕರ್ನಾಟಕದ ಶಾಲೆಗಳಲ್ಲೂ ಅನುಷ್ಠಾನಕ್ಕೆ ಚಿಂತನೆ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ವಾಟರ್ ಬೆಲ್ ಜಾರಿ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ. ಕೇರಳ
ಡಿಕೆ ಶಿವಕುಮಾರ್ ರೈತರ ಬಗ್ಗೆ ಮಾತನಾಡುವಾಗ ಸ್ವಲ್ಪ ಎಚ್ಚರ ಇರಲಿ: ಆರ್.ಅಶೋಕ
ಈ ಹಿಂದೆ ರೈತರ ಸರಣಿ ಆತ್ಮಹತ್ಯೆ ವಿಷಯ ಬಂದಾಗ “ಎಲ್ಲಿದೆ ಆತ್ಮಹತ್ಯೆ? ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲಾ ರೈತರು ಅನ್ನೋಕಾಗತ್ತಾ? ಸುಳ್ಳು ಅದೆಲ್ಲಾ.” ಎಂದು ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ್ದಿರಿ. ಈಗ “ರೈತರು ಧಿಕ್ಕಾರ ಕೂಗೋದು ಬಿಟ್ಟು ಬೇರೇನೂ ಮಾಡೋಕ್ಕಾಗಲ್ಲ” ಎಂದು ರೈತರ
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್: ಸಂಪುಟ ನಿರ್ಣಯ
ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ವ್ಯವಸ್ಥೆ ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್)ಬಳಕೆಗೆ ಶಿಫಾರಸ್ಸು ಮಾಡಲು ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಚುನಾವಣಾ ಪ್ರಕ್ರಿಯೆಯಲ್ಲಿ ಅಗತ್ಯವಾದ ಕೆಲವು ಕಾನೂನು ಹಾಗೂ
ಕೋಲಾರದ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಚಾಲನೆ
ಕೆ. ಸಿ ವ್ಯಾಲಿ 2 ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಲೋಕಾರ್ಪಣೆಗೊಳಿಸಿದರು. ನಂತರದ ಮಾತನಾಡಿದ ಅವರು, ಬೆಂಗಳೂರಿನ ಸುತ್ತಮುತ್ತಲಿನ




